Homeಮುಖಪುಟಗಾಂಧೀಜಿಗೆ ಅವಹೇಳನ ಪ್ರಕರಣ: 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಾಳಿಚರಣ್‌

ಗಾಂಧೀಜಿಗೆ ಅವಹೇಳನ ಪ್ರಕರಣ: 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಾಳಿಚರಣ್‌

- Advertisement -
- Advertisement -

ಥಾಣೆ: ಮಹಾತ್ಮಾ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದ ಆರೋಪದ ಮೇಲೆ ಬಂಧಿತರಾಗಿರುವ ಹಿಂದುತ್ವದ ಮುಖಂಡ ಕಾಳಿಚರಣ್ ಮಹಾರಾಜ್‌ಗೆ ಮಹಾರಾಷ್ಟ್ರದ ಥಾಣೆಯ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಥಾಣೆ ನಗರದ ನೌಪದ ಪೊಲೀಸ್ ಠಾಣೆಯ ಪೊಲೀಸರು ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಕಾಳಿಚರಣ್‌ರನ್ನು ಬುಧವಾರ ಬಂಧಿಸಿದ್ದರು. ಶುಕ್ರವಾರ ಬೆಳಿಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಥಾಣೆಯ ಜೆಎಂಎಫ್‌ಸಿ ಎಸ್.ವಿ.ಮೆಟಿಲ್ ಪಾಟೀಲ್ ಅವರು ವಿವಾದಿತ ವ್ಯಕ್ತಿ ಕಾಳಿಚರಣ್‌ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ. ನ್ಯಾಯಾಲಯದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಕಾಳಿಚರಣ್‌‌ ಹೇಳಿಕೆಗಳಿಗೆ ಸಂಬಂಧಿಸಿದಂತೆ ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಸಚಿವ ಜಿತೇಂದ್ರ ಅವ್ಹಾದ್ ಅವರು ನೀಡಿದ ದೂರಿನ ಆಧಾರದ ಮೇಲೆ ಕಾಳಿಚರಣ್ ಮಹಾರಾಜ್ ವಿರುದ್ಧ ಪ್ರಕರಣ ದಾಖಲಿಸಿದ ನಂತರ ನೌಪಾದ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಕಳೆದ ಡಿಸೆಂಬರ್ 26 ರಂದು ಛತ್ತೀಸ್‌ಗಢದ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿಯಾಗಿ ಕಾಳಿಚರಣ್ ಮಾತನಾಡಿದ್ದರು. ಕಾಳಿಚರಣ್‌ ವಿರುದ್ಧ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಪ್ರಕರಣ ದಾಖಲಾಗಿವೆ.

ರಾಷ್ಟ್ರಪಿತ ಗಾಂಧೀಜಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ರಾಯ್‌ಪುರ ಪೊಲೀಸರು ಅವರನ್ನು ಬಂಧಿಸಿದ್ದರು. ಜನವರಿ 12ರಂದು ಮಹಾರಾಷ್ಟ್ರದ ವಾರ್ಧಾ ಪೊಲೀಸರು ಕಾಳಿ ಚರಣ್‌‌ ಅವರನ್ನು ಬಂಧಿಸಿದ್ದರು. ರಾಜ್ಯದ ಅಕೋಲಾ ಜಿಲ್ಲೆಯಲ್ಲಿಯೂ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ದ್ವೇಷ ಭಾಷಣ ಪ್ರಕರಣ: ಆರೋಪಿ ಯತಿ ನರಸಿಂಗಾನಂದ ಜಾಮೀನು ಅರ್ಜಿ ವಜಾ

ನರಸಿಂಗಾನಂದ ವಿರುದ್ಧ ವಿಚಾರಣೆಗೆ ಸಮ್ಮತಿ

ಹರಿದ್ವಾರದಲ್ಲಿ ದ್ವೇಷ ಭಾಷಣದ ‘ಧರ್ಮ ಸಂಸದ್’ ಆಯೋಜಿಸಿದ್ದ ನರಸಿಂಗಾನಂದ ಅವರು ಸುಪ್ರೀಂಕೋರ್ಟ್ ಮತ್ತು ಸಂವಿಧಾನದ ವಿರುದ್ದ ಇತ್ತೀಚೆಗೆ ನೀಡಿದ್ದ ಅವಹೇಳನಕಾರಿ ಹೇಳಿಕೆಗಳ ವಿರುದ್ದ ನಿಂದನೆ  ಪ್ರಕರಣ ಪ್ರಕ್ರಿಯೆ ಆರಂಭಿಸಲು ಭಾರತದ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಶುಕ್ರವಾರ ಸಮ್ಮತಿ ನೀಡಿದ್ದಾರೆ.

ಜನವರಿ 14ರಂದು ಟ್ವಿಟ್ಟರ್‌ನಲ್ಲಿ ವೈರಲ್ ಆಗಿದ್ದ ಸಂದರ್ಶನದಲ್ಲಿ ನೀಡಿದ್ದ ಅವಹೇಳನಕಾರಿ ಹೇಳಿಕೆಗಳಿಗಾಗಿ ನರಸಿಂಗಾನಂದ ವಿರುದ್ಧ ಸಾಮಾಜಿಕ ಕಾರ್ಯಕರ್ತ ಶಚಿ ನೆಲ್ಲಿ ಬರೆದ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಅಟಾರ್ನಿ ಜನರಲ್‌ ಒಪ್ಪಿಗೆ ನೀಡಿದ್ದಾರೆ.

“ನರಸಿಂಗಾನಂದ ನೀಡಿದ್ದ ಹೇಳಿಕೆಗಳು ಖಂಡಿತವಾಗಿಯೂ ಭಾರತದ ಸರ್ವೋಚ್ಚ ನ್ಯಾಯಾಲಯದ ಅವಹೇಳನಕ್ಕೆ ಸಮಾನವಾಗಿರುತ್ತದೆ” ಎಂದು ಅಟಾರ್ನಿ ಜನರಲ್‌ ಹೇಳಿದ್ದಾರೆ.

“ಈ ವ್ಯವಸ್ಥೆಯನ್ನು ನಂಬುವವರು, ರಾಜಕಾರಣಿಗಳು, ಸುಪ್ರೀಂ ಕೋರ್ಟ್ ಮತ್ತು ಸೈನ್ಯದ ಎಲ್ಲರೂ ನಾಯಿ ಸತ್ತಂತೆ ಸಾಯುತ್ತಾರೆ” ಎಂದು ನರಸಿಂಗಾನಂದ ಹೇಳಿದ್ದರು. ಈ ಮಾತನ್ನು ಉಲ್ಲೇಖಿಸಿರುವ ಅಟಾರ್ನಿ ಜನರಲ್‌, “ಇದು ಸಾಮಾನ್ಯ ಜನರ ಮನಸ್ಸಿನಲ್ಲಿ ಸುಪ್ರೀಂ ಕೋರ್ಟ್‌ನ ಅಧಿಕಾರವನ್ನು ತುಚ್ಛವಾಗಿ ಕಾಣುವಂತೆ ಮಾಡುವ ನೇರ ಪ್ರಯತ್ನ” ಎಂದು ಭಾರತದ ಸರ್ವೋಚ್ಚ ನ್ಯಾಯಾಲಯದ ಕ್ರಿಮಿನಲ್ ನಿಂದನೆಯ ವಿಚಾರಣೆಯನ್ನು ಪ್ರಾರಂಭಿಸಲು ಸಮ್ಮತಿಯನ್ನು ನೀಡಿದ್ದಾರೆ.

 

ಹರಿದ್ವಾರದ ಧರ್ಮ ಸಂಸದ್‌ನಲ್ಲಿ ಮುಸ್ಲಿಂ ವಿರೋಧಿ ದ್ವೇಷದ ಭಾಷಣ ಮಾಡಿದ್ದಕ್ಕಾಗಿ ಉತ್ತರಾಖಂಡ್ ಪೊಲೀಸರು ಅವರನ್ನು ಬಂಧಿಸಿದ್ದು, ಪ್ರಸ್ತುತ ಬಂಧನದಲ್ಲಿದ್ದಾರೆ.

ಹರಿದ್ವಾರ ದ್ವೇಷದ ಭಾಷಣದ ಪ್ರಕರಣದಲ್ಲಿ ನ್ಯಾಯಾಲಯದ ಪ್ರಕ್ರಿಯೆಗಳ ಬಗ್ಗೆ ಮಾತನಾಡಿದ್ದ ನರಸಿಂಗಾನಂದ, “ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ನಮಗೆ ನಂಬಿಕೆ ಇಲ್ಲ. ಸಂವಿಧಾನ ಈ ದೇಶದ 100 ಕೋಟಿ ಹಿಂದೂಗಳನ್ನು ಕಬಳಿಸುತ್ತದೆ. ಈ ಸಂವಿಧಾನವನ್ನು ನಂಬುವವರು, ರಾಜಕಾರಣಿಗಳು, ಸುಪ್ರೀಂ ಕೋರ್ಟ್ ಮತ್ತು ಸೈನ್ಯದ ಎಲ್ಲರೂ ನಾಯಿ ಸತ್ತಂತೆ ಸಾಯುತ್ತಾರೆ” ಎಂದು ಹೇಳಿದ್ದರು. ಇದನ್ನು ಅಟಾರ್ನಿ ಜನರಲ್‌ಗೆ ಬರೆದಿದ್ದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:ಮುಸ್ಲಿಮರ ಹತ್ಯೆಗೆ ಕರೆ: ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ ಅರೆಸ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಣದುಬ್ಬರ, ಉದ್ಯೋಗಗಳ ಬಗ್ಗೆ ಮಾತನಾಡುವ ಬದಲು ಬಿಜೆಪಿ ದೇವರ ಹೆಸರಿನಲ್ಲಿ ಮತ ಕೇಳುತ್ತಿದೆ: ಪ್ರಿಯಾಂಕಾ...

0
'ಆಡಳಿತಾರೂಢ ಬಿಜೆಪಿ ಹಣದುಬ್ಬರವನ್ನು ಹೇಗೆ ನಿಯಂತ್ರಿಸುತ್ತದೆ ಅಥವಾ ಜನರಿಗೆ ಉದ್ಯೋಗವನ್ನು ನೀಡುತ್ತದೆ ಎಂಬುದರ ಕುರಿತು ಮಾತನಾಡುವ ಬದಲು ದೇವರ ಹೆಸರಿನಲ್ಲಿ ಮತ ಕೇಳುತ್ತಿದೆ' ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ...