Homeಮುಖಪುಟ2027ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗುವ ಇಚ್ಛೆ: ಕೊಲೆ ಅಪರಾಧಿಯ ಶಿಕ್ಷೆಗೆ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್!

2027ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗುವ ಇಚ್ಛೆ: ಕೊಲೆ ಅಪರಾಧಿಯ ಶಿಕ್ಷೆಗೆ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್!

- Advertisement -
- Advertisement -

ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಸಾಧ್ಯವಾದರೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಟಿಕೆಟ್‌ನಲ್ಲಿ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿರುವ ಕೊಲೆ ಪ್ರಕರಣದ ಅಪರಾಧಿಯ ಜೀವಾವಧಿ ಜೈಲು ಶಿಕ್ಷೆ ಮತ್ತು ದಂಡನೆಗೆ ಅಲಹಾಬಾದ್ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ‘ಬಾರ್ & ಬೆಂಚ್’ ವರದಿ ಮಾಡಿದೆ.

ರಾಮಜನ್ಮಭೂಮಿ ಚಳವಳಿಯ ಸಕ್ರಿಯ ಕಾರ್ಯಕರ್ತ ಪ್ರಮೋದ್ ಕುಮಾರ್ ನಿಗಮ್ ಅವರ ಹತ್ಯೆ ಪ್ರಕರಣದಲ್ಲಿ ವಾರಣಾಸಿ ನ್ಯಾಯಾಲಯವು 2025ರ ಏಪ್ರಿಲ್‌ನಲ್ಲಿ ನಂದನ್‌ಲಾಲ್ ರೈ ಅಲಿಯಾಸ್ ಬಬ್ಲೂ ರೈ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಶಿಕ್ಷೆಯನ್ನು ಪ್ರಶ್ನಿಸಿ ನಂದನ್‌ಲಾಲ್ ರೈ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿದಾರರ ಪರ ವಾದ ಮಂಡಿಸಿರುವ ವಕೀಲರು, ನಂದನ್‌ಲಾಲ್ ರೈ ಅವರು ಶಿಕ್ಷೆಯಾಗುವ ಮುನ್ನ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು ಹಾಗೂ ಅವರು 2027ರ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಸಾಧ್ಯವಾದರೆ ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಸಿದ್ಧಾರ್ಥ್ ಹಾಗೂ ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ ಅವರನ್ನೊಳಗೊಂಡ ಪೀಠವು, ಕಳೆದ ಅಕ್ಟೋಬರ್ 5 ರಂದು ನಂದನ್‌ಲಾಲ್ ರೈ ಅವರ ಶಿಕ್ಷೆ ಹಾಗೂ ದಂಡನೆಗೆ ತಡೆ ನೀಡಿ ಜಾಮೀನು ಮಂಜೂರು ಮಾಡಿದೆ. “ಸಾರ್ವಜನಿಕ ಪ್ರತಿನಿಧಿಗಳು ತಮ್ಮ ಮತದಾರರಿಗೆ ವಿಶೇಷ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಶಿಕ್ಷೆಗೆ ತಡೆ ನೀಡದಿದ್ದರೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶವನ್ನೇ ಅವರು ಕಳೆದುಕೊಳ್ಳಬೇಕಾಗುತ್ತದೆ” ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿರುವ ವಿವಿಧ ಆದೇಶಗಳನ್ನು ಹೈಕೋರ್ಟ್ ಪೀಠ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕೊಲೆ ಪ್ರಕರಣದ ತನಿಖೆಯಲ್ಲಿ ರೈ ಅವರ ಹೆಸರು ತಡವಾಗಿ ಸೇರ್ಪಡೆಯಾಗಿದೆ, ಪ್ರತ್ಯಕ್ಷದರ್ಶಿಗಳ ಸಾಕ್ಷ್ಯಗಳು ಮತ್ತು ಆಯುಧ ವಶಪಡಿಸಿಕೊಂಡ ಪ್ರಕ್ರಿಯೆಗಳು ಸಂಶಯಾಸ್ಪದವಾಗಿವೆ ಹಾಗೂ ಕೇವಲ ಅನುಮಾನಗಳ ಆಧಾರದ ಮೇಲೆ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ವಾದಿಸಿದ್ದಾರೆ. ಇನ್ನು ನಂದನ್‌ಲಾಲ್ ರೈ ಅವರು ಈ ಹಿಂದೆ ದಿವಂಗತ ಗ್ಯಾಂಗ್‌ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರೊಂದಿಗೆ ನಂಟು ಹೊಂದಿದ್ದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು ಎಂಬುದನ್ನು ವರದಿಗಳು ಉಲ್ಲೇಖಿಸಿವೆ.

“ಸಾಮಾನ್ಯ ವ್ಯಕ್ತಿಯ ಜೀವನೋಪಾಯದ ಹಕ್ಕು ರಾಜಕಾರಣಿಯೊಬ್ಬನ ಚುನಾವಣೆಯಲ್ಲಿ ಸ್ಪರ್ಧಿಸುವ ಹಕ್ಕಿಗಿಂತ ಕಡಿಮೆಯೇನಲ್ಲ. ಆದ್ದರಿಂದ, ಮೇಲ್ಮನವಿಯ ಅಂತಿಮ ತೀರ್ಪು ಬರುವವರೆಗೆ ಅರ್ಜಿದಾರರು ಸಮಾಜದಲ್ಲಿ ಸಾಮಾನ್ಯ ಜೀವನ ನಡೆಸಲು ಸಾಧ್ಯವಾಗುವಂತೆ ಅವರ ಶಿಕ್ಷೆಗೆ ತಡೆ ನೀಡುವುದು ಸೂಕ್ತವಾಗಿದೆ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಆದಾಗ್ಯೂ, ಇದು ಕೇವಲ ಮೇಲ್ಮನವಿ ವಿಚಾರಣೆಯ ಅಂತಿಮ ಹಂತದವರೆಗೆ ಮಾತ್ರ ಅನ್ವಯಿಸುವ ಮಧ್ಯಂತರ ತಡೆಯಾಗಿದ್ದು, ಈ ಆದೇಶವು ಯಾವುದೇ ರೀತಿಯ ಖುಲಾಸೆಯಲ್ಲ ಮತ್ತು ಮೇಲ್ಮನವಿಯ ಅಂತಿಮ ಫಲಿತಾಂಶ ಬಾಕಿ ಇದೆ ಎಂದು ಕಾನೂನು ತಜ್ಞರು ವಿಶ್ಲೇಷಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅನ್ಯಧರ್ಮೀಯರು ಹೊರಹೋಗಿ’: ಗುಜರಾತ್ ಗರ್ಬಾ ಉತ್ಸವಗಳಲ್ಲಿ ಹಿಂದುತ್ವ ಸಂಘಟನೆಗಳಿಂದ ಕಿರುಕುಳ, ಬೆದರಿಕೆ!

ಗುಜರಾತ್‌ನಾದ್ಯಂತ ನಡೆಯುತ್ತಿರುವ ನವರಾತ್ರಿ ಗರ್ಬಾ ಉತ್ಸವಗಳಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸೇರಿದಂತೆ ಬಲಪಂಥೀಯ ಹಿಂದುತ್ವ ಸಂಘಟನೆಗಳು ಮುಸ್ಲಿಮರು ಹಾಗೂ ಮುಸ್ಲಿಮೇತರರನ್ನು ಪ್ರವೇಶಿಸದಂತೆ ತಡೆಯಲು ಹೊಸ ನಿಯಮಗಳನ್ನು ಜಾರಿಗೆ ತರುತ್ತಿವೆ ಎಂದು...

ಮಣಿಪುರ ಹಿಂಸಾಚಾರ: ಉರುವಲು ಸಂಗ್ರಹಿಸುತ್ತಿದ್ದ ಮೂವರನ್ನು ಕೊಂದ ಉಗ್ರರು; ಸಿಎಂ ನಿವಾಸದ ಮುಂದೆ ಶವಗಳನ್ನಿಟ್ಟು ಸ್ಥಳೀಯರ ಪ್ರತಿಭಟನೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕಾಡಿನಲ್ಲಿ ಉರುವಲು ಸಂಗ್ರಹಿಸಲು ತೆರಳಿದ್ದ ಮೂವರನ್ನು ಉಗ್ರಗಾಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಇಂಫಾಲ್ ಪೂರ್ವ ಮತ್ತು ಕಾಂಗ್ಪೋಕ್ಪಿ ಜಿಲ್ಲೆಗಳ ಗಡಿಯಲ್ಲಿರುವ ಬೆಟ್ಟ ಪ್ರದೇಶದಲ್ಲಿ ಸೋಮವಾರ ಈ ದಾಳಿ ನಡೆದಿದೆ....

ಆಂಧ್ರ ಪ್ರದೇಶ | ಹಿಂಸಾಚಾರದಿಂದ ಮುನ್ಸಿಪಲ್ ಚುನಾವಣೆ ನಾಮಪತ್ರ ಸಲ್ಲಿಕೆಗೆ ಅಡ್ಡಿ ಆರೋಪ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈಎಸ್‌ಆರ್‌ ಕಾಂಗ್ರೆಸ್

ಆಂಧ್ರ ಪ್ರದೇಶದಲ್ಲಿ ನಡೆದ ವ್ಯಾಪಕ ಹಿಂಸಾಚಾರದಿಂದಾಗಿ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷ ಸೋಮವಾರ (ಅಕ್ಟೋಬರ್ 19) ಸುಪ್ರೀಂ ಕೋರ್ಟ್‌ನ...

ಮೂಲಭೂತ ಸೌಕರ್ಯ- ವಿದ್ಯಾರ್ಥಿ ಸಂಘಕ್ಕಾಗಿ ಉಪವಾಸ ಸತ್ಯಾಗ್ರಹ; ಸಮಸ್ಯೆಗಳ ಪರಿಹಾರಕ್ಕೆ ಮುಂದಾದ ಜಾಮಿಯಾ ಆಡಳಿತ ಮಂಡಳಿ

ದೆಹಲಿಯಲ್ಲಿರುವ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಒಂದು ವಾರ ತುಂಬಿದ ಹಿನ್ನೆಲೆಯಲ್ಲಿ, ಸೋಮವಾರ (ಅ.19) ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಏಳು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ವಿದ್ಯಾರ್ಥಿಗಳು...

SIR ವಿರೋಧಿ ಹೋರಾಟಕ್ಕೆ ಧುಮುಕಿದ ರೈತ, ದಲಿತ ಸಂಘಟನೆಗಳು : ಅ.23ರಂದು ರಾಜ್ಯದಾದ್ಯಂತ ಪ್ರತಿಭಟನೆ

ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಉಳಿವಿಗಾಗಿ ಹಾಗೂ ಚುನಾವಣಾ ಆಯೋಗದ ಏಕಪಕ್ಷೀಯ ತೀರ್ಮಾನಗಳನ್ನು ವಿರೋಧಿಸಿ ಅಕ್ಟೋಬರ್ 23ರಂದು ರಾಜ್ಯದಾದ್ಯಂತ ಬೃಹತ್ ಜನತಾ ಮೆರವಣಿಗೆ ಮತ್ತು 'ಜಂತರ್ ಮಂತರ್' ಮಾದರಿಯ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವುದಾಗಿ ಎಸ್ಐಆರ್ ವಿರೋಧಿ...

ಸೌರವ್ ದಾಸ್ – ಆಶುತೋಶ್ ರಾಂಕಾ ಬಿಡುಗಡೆ ಕುರಿತು ಸಿಗದ ಸ್ಪಷ್ಟತೆ

ದೇಶದ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರನ್ನು ಸೋಮವಾರ ಮಧ್ಯಾಹ್ನ ಹೊಸ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ಮುಂದೆ ಹಾಜರುಪಡಿಸಬೇಕಿತ್ತು....

ಅಸ್ಸಾಂನಲ್ಲಿ ಎರಡು ದಿನಗಳಲ್ಲಿ 1,100ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳ ಒಕ್ಕಲೆಬ್ಬಿಸಲಾಗಿದೆ: 10ಕ್ಕೂ ಹೆಚ್ಚು ಮಸೀದಿಗಳ ಧ್ವಂಸ

ಅಸ್ಸಾಂ: ಅಸ್ಸಾಂನ ಬಿಜೆಪಿ ನೇತೃತ್ವದ ಸರ್ಕಾರ ಎರಡು ದಿನಗಳ ಅತಿಕ್ರಮಣ ವಿರೋಧಿ ತೆರವು ಕಾರ್ಯಾಚರಣೆಯಲ್ಲಿ 1,100ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳನ್ನು ಒಕ್ಕಲೆಬ್ಬಿಸಿದ್ದು, 10ಕ್ಕೂ ಹೆಚ್ಚು ಮಸೀದಿಗಳನ್ನು ಧ್ವಂಸಗೊಳಿಸಿದೆ. ನಾಗಾಂವ್, ಗೋಲಾಘಾಟ್ ಮತ್ತು ಹೊಜೈ...

ಸುಳ್ಳು ಅಫಿಡವಿಟ್‌ ಸಲ್ಲಿಸಿದ ಅಭ್ಯರ್ಥಿಗಳ ವಿರುದ್ಧ ಮತದಾರರು ಖಾಸಗಿ ದೂರು ದಾಖಲಿಸಬಹುದು : ಸುಪ್ರೀಂ ಕೋರ್ಟ್

'ಜನತಾ ಪ್ರಾತಿನಿಧ್ಯ ಕಾಯ್ದೆ 1951'ರ ಸೆಕ್ಷನ್ 125A ಅಡಿಯಲ್ಲಿ ಬರುವ ಅಪರಾಧಗಳಿಗೆ ಸಂಬಂಧಿಸಿದಂತೆ, ಚುನಾಯಿತ ಅಭ್ಯರ್ಥಿಗಳು ತಮ್ಮ ಚುನಾವಣಾ ಅಫಿಡವಿಟ್‌ಗಳಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಅಥವಾ ಮಾಹಿತಿಯನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ, ಖಾಸಗಿ...

ಉತ್ತರ ಪ್ರದೇಶ| ಜಾಹೀರಾತು ವಿವಾದ; ಹಿಟ್ಟಿನ ಗಿರಣಿಯಲ್ಲಿ ಹಲ್ಲೆಗೊಳಗಾಗಿದ್ದ ಹಿರಿಯ ಪತ್ರಕರ್ತ ಸಾವು

ಉತ್ತರ ಪ್ರದೇಶದ ಹಪುರ್‌ನಲ್ಲಿರುವ ಹಿಂದಿ ದಿನಪತ್ರಿಕೆ 'ದೈನಿಕ್ ಜನ್ವಾಣಿ'ಯ ಪತ್ರಕರ್ತರೊಬ್ಬರು ಹಿಟ್ಟಿನ ಗಿರಣಿಯಲ್ಲಿ ಭಾಣುವಾರ ನಡೆದ ಹಲ್ಲೆಯಿಂದಾಗಿ ಮೃತಪಟ್ಟಿದ್ದಾರೆ. ಜಾಹೀರಾತು ಕೇಳಲು ತೆರಳಿದ್ದ ವೇಳೆ ಅವರನ್ನು ನಕಲಿ ಪತ್ರಕರ್ತ ಎಂದು ಆರೋಪಿಸಿ ಹಲ್ಲೆ...

ಗ್ಯಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ : ಬಾಂಡ್ ಸಲ್ಲಿಸುವಂತೆ ಪೊಲೀಸರಿಂದ ನೋಟಿಸ್; ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ವಿಚಾರಣೆಯ ಅವಧಿಯಲ್ಲಿ ಶಾಂತಿ ಕಾಪಾಡುವ ಸಲುವಾಗಿ ಒಬ್ಬರ ಜಾಮೀನಿನೊಂದಿಗೆ (ಶ್ಯೂರಿಟಿ) 10,000 ರೂ. ಮೌಲ್ಯದ ಬಾಂಡ್ (ಮುಚ್ಚಳಿಕೆ ಪತ್ರ) ಸಲ್ಲಿಸುವಂತೆ ದೆಹಲಿ ಪೊಲೀಸರು ತಮಗೆ ನೀಡಿದ್ದ ನೋಟಿಸ್ ಅನ್ನು ಪ್ರಶ್ನಿಸಿ ವಿದ್ಯಾರ್ಥಿ ಸಂಘಟನೆ...