Homeಕರ್ನಾಟಕದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ಅಸಂಘಟಿತ ವಲಯದ ಕಾರ್ಮಿಕರು ಎಂದು ಪರಿಗಣಿಸಿ, ಕಾರ್ಮಿಕ ಇಲಾಖೆ ಅಡಿಯಲ್ಲಿ ತಂದು, ಕಟ್ಟಡ ಕಾರ್ಮಿಕರಿಗೆ ಇರುವಂತೆಯೇ ನಮಗೂ ಕಲ್ಯಾಣ ಮಂಡಳಿ ಸ್ಥಾಪಿಸಿ ಎಂಬುದು ನೇಕಾರರ ಒತ್ತಾಯ.

- Advertisement -
- Advertisement -

ರಾಜ್ಯದ ಬೆಳಗಾವಿ, ಹಾವೇರಿ, ಚಿತ್ರದುರ್ಗ ಸೇರಿದಂತೆ ಎಂಟು-ಹತ್ತು ಜಿಲ್ಲೆಗಳಲ್ಲಿ ಜವಳಿ ಉದ್ದಿಮೆಯು ಅತ್ಯಾಧುನಿಕಗೊಂಡು ಬೃಹದಾಕಾರವಾಗಿ ಬೆಳೆದು ನಿಂತಿದೆ. ಆದರೆ ಮಗ್ಗಗಳಲ್ಲಿ ದುಡಿಯುವ ಕೂಲಿ ನೇಕಾರ ಕಾರ್ಮಿಕರ ಪರಿಸ್ಥಿತಿ ಮಾತ್ರ ಶೋಚನೀಯವಾಗಿದೆ. ದಶಕಗಳಿಂದ ದುಡಿದರೂ ಯಾವುದೇ ಸಾಮಾಜಿಕ ಭದ್ರತೆ ಇಲ್ಲದ ಈ ಜನರಿಗಾಗಿ ಕೂಲಿ ನೇಕಾರ ಕಾರ್ಮಿಕರ ಬಳಗ ಸತತ ದನಿಯೆತ್ತುತ್ತಲೇ ಬಂದಿದೆ.

ರಾಜ್ಯದಲ್ಲಿ ಸರ್ಕಾರದ ಮಾಹಿತಿ ಪ್ರಕಾರ ಒಂದು ಲಕ್ಷದ ಐವತ್ತು ಸಾವಿರ ಮಗ್ಗಗಳು ಕಾರ್ಯನಿರ್ವಹಿಸುತ್ತಿವೆ. ಅಂದರೆ ಎರಡೂವರೆ ಲಕ್ಷ ಕೂಲಿ ನೇಕಾರ ಕಾರ್ಮಿಕಕರು ಕೆಲಸ ಮಾಡುತ್ತಿದ್ದಾರೆ. ಇವರಿಗೆ ಇಲ್ಲಿಯವರೆಗೂ ಒಂದು ಕಲ್ಯಾಣ ಮಂಡಳಿ ಇಲ್ಲ. ಸರ್ಕಾರ ಯಾವುದೇ ಕಾರ್ಮಿಕ ಯೋಜನೆಗಳು ಇವರಿಗೆ ತಲುಪುತ್ತಿಲ್ಲ. ಏಕೆಂದರೆ ಇವರನ್ನು ಕಾರ್ಮಿಕರು ಎಂದು ಪರಿಗಣಿಸಲು ಯಾವುದೇ ಆಧಾರವಿಲ್ಲ!

ಕೂಲಿ ನೇಕಾರ ಕಾರ್ಮಿಕರನ್ನು ಕಾರ್ಮಿಕ ಇಲಾಖೆ ವ್ಯಾಪ್ತಿಗೆ ತಂದು, ಕಲ್ಯಾಣ ಮಂಡಳಿ ಸ್ಥಾಪಿಸಲು ಒತ್ತಾಯ

ಕೂಲಿ ನೇಕಾರ ಕಾರ್ಮಿಕ ಎಂದು ಗುರುತಿಸಲು ಬೇಕಾದ ಒಂದು ಗುರುತಿನ ಚೀಟಿ ಕೂಡ ಈ ಇವರಿಗೆ ದೊರೆತಿಲ್ಲ. ಕೆಲಸ ನಿರ್ವಹಿಸುವ ಮಗ್ಗಗಳಲ್ಲಿ ಕೆಲಸ ಮಾಡಿದ್ದಾರೆ ಎಂದು ತೋರಿಸಲು ಹಾಜರಿ ಪುಸ್ತಕ ಕೂಡ ಇಲ್ಲ. ಇನ್ನೂ ಸರ್ಕಾರದ ಪಿಎಫ್‌ ಯೋಜನೆ ಇವರಿಗೆ ಸಿಗುವುದು ಕನಸಿನ ಮಾತು. ಇಂತಹ ಸಂಕಷ್ಟದಲ್ಲಿ ರಾಜ್ಯದ ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ ಕಾರ್ಮಿಕರು ಯಾವುದೇ ಸರ್ಕಾರಿ ಸೌಲಭ್ಯಗಳಿಲ್ಲದೆ ಬದುಕುತ್ತಿರುವುದು ದುರಂತ.

ಲಾಕ್‌ಡೌನ್‌ ಸಮಯದಲ್ಲಿ ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಸಹ ದನಿಯೆತ್ತಿದ್ದರು. “ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಬೆಳಗಾವಿ, ದೊಡ್ಡಬಳ್ಳಾಪುರ, ಧಾರವಾಡ ಮೊದಲಾದ ಜಿಲ್ಲೆಗಳ 6 ಜನ ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರೆ ಹೊಣೆ. ನೇಕಾರರ ಬದುಕು ಸಂಕಷ್ಟದಲ್ಲಿದೆ. ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರದ ಪ್ಯಾಕೇಜ್ ಇನ್ನೂ ಬಿಡುಗಡೆಯಾಗಿಲ್ಲ. ಆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳಿಗೆ ಮುಖ್ಯಮಂತ್ರಿಗಳು ಕೂಡಲೇ ಸ್ಪಂದಿಸಬೇಕು” ಎಂದು ಅವರು ಆಗ್ರಹಿಸಿದ್ದರು.

ಇದನ್ನೂ ಓದಿ: 6 ಜನ ನೇಕಾರರ ಆತ್ಮಹತ್ಯೆಗೆ ಮುಖ್ಯಮಂತ್ರಿಗಳೆ ಹೊಣೆ: ಸಿದ್ದರಾಮಯ್ಯ

“ನಮ್ಮನ್ನು ಅಸಂಘಟಿತ ವಲಯದ ಕಾರ್ಮಿಕರು ಎಂದು ಪರಿಗಣಿಸಿ, ಕಾರ್ಮಿಕ ಇಲಾಖೆ ಅಡಿಯಲ್ಲಿ ತಂದು, ಕಟ್ಟಡ ಕೂಲಿ ಕಾರ್ಮಿಕರಿಗೆ ಇರುವಂತೆಯೇ ನಮಗೂ ಒಂದು ಕಲ್ಯಾಣ ಮಂಡಳಿ ಸ್ಥಾಪಿಸಿ ಎಂಬುದು ನಮ್ಮ 6-7 ದಶಕಗಳ ಒತ್ತಾಯ ಎನ್ನುತ್ತಾರೆ ಕೂಲಿ ನೇಕಾರ ಕಾರ್ಮಿಕರ ಬಳಗ ಸಂಚಾಲಕ ರವಿ ಪಾಟೀಲ್.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, ’ಮಗ್ಗ ಎಂದರೇ ಮಾಲಿಕ ಒಬ್ಬನೇ ಅಲ್ಲ. ಅಲ್ಲಿ ಕಾರ್ಮಿಕರು ಮುಖ್ಯವಾಗಿರುತ್ತಾರೆ. ಒಂದು ಸೀರೆ ತಯಾರಿಸಲು ಸುಮಾರು 10 ಮಂದಿ ಕಾರ್ಮಿಕರ ಶ್ರಮ ಇರುತ್ತದೆ. ಸೀರೆಗಳ ವಿನ್ಯಾಸದ ಆಧಾರದ ಮೇಲೆ ಕೂಲಿ ನೀಡಲಾಗುತ್ತದೆ. ಆದರೆ ನೀಡುವ ಕೂಲಿ ಮಾತ್ರ ಯಾವುದಕ್ಕೂ ಸಾಲದು. ಕಾರ್ಮಿಕರ ಕಲ್ಯಾಣಕ್ಕೆ ಇರುವ ಸರ್ಕಾರಿ ಯೋಜನೆಗಳಾದರೂ ನಮಗೆ ಸಿಗಲಿ ಎನ್ನುವುದಕ್ಕಾಗಿ ನಮ್ಮ ಪ್ರತಿಭಟನೆ’ ಎನ್ನುತ್ತಾರೆ.

’ಈ ನೇಕಾರ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕೆಂದು ಕಾನೂನು ಬದ್ಧ ಕಾರ್ಮಿಕ  ಹಕ್ಕುಗಳು ಸಿಗಬೇಕೆಂದು, 5-6 ದಶಕಗಳಿಂದ ರಾಜ್ಯದ ಕಾರ್ಮಿಕ ಸಂಘಟನೆಗಳು, ಕಾರ್ಮಿಕ ಪರ ವ್ಯಕ್ತಿಗಳು, ಕೂಲಿ ನೇಕಾರ ಕಾರ್ಮಿಕರ ಬಳಗ ಒಳಗೊಂಡಂತೆ ಹಲವು ಸಂಘಟನೆಗಳು ಇಂದಿನವರೆಗೂ ಹೋರಾಡುತ್ತಿವೆ’ ಎಂದರು.

’ನೇಕಾರ ಸಮ್ಮಾನ್ ಯೋಜನೆಯನ್ನು ವಿದ್ಯುತ್ ಚಾಲಿತ ಮಗ್ಗಗಳಲ್ಲೂ ಕೆಲಸ ಮಾಡುವ ಕಾರ್ಮಿಕರಿಗೆ ವಿಸ್ತರಿಸಬೇಕು. ತಿಂಗಳಿಗೆ 5,000 ರೂಪಾಯಿ ನೀಡುವ ಈ ಯೋಜನೆಯನ್ನು ಇವರಿಗೂ ವಿಸ್ತರಿಸಬೇಕು. ಲಾಕ್‌ಡೌನ್ ವೇಳೆ 2,000 ರೂಪಾಯಿ ನೀಡಲಾಯಿತು. ಆದರೆ ಎಷ್ಟೋ ಕಾರ್ಮಿಕರಿಗೆ ಅದು ಸಿಗಲಿಲ್ಲ. ಕಾರ್ಮಿಕರ ಹೆಸರಿನಲ್ಲಿ ಮಾಲೀಕರು ಅದನ್ನು ಪಡೆದುಕೊಂಡರು. ಏಕೆಂದರೆ ನಾನು ಕೂಲಿ ನೇಕಾರ ಕಾರ್ಮಿಕ ಎಂದು ಹೇಳಲು ಕಾರ್ಮಿಕರ ಬಳಿ ಗುರುತಿನ ಚೀಟಿ ಕೂಡ ಇಲ್ಲ’ ಎಂದು ರವಿ ಪಾಟೀಲ್ ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮ್ಯಾನ್ಯುವೆಲ್ ಸ್ಕ್ಯಾವೆಂಜಿಂಗ್ ಜಾರಿಯಲ್ಲಿರುವುದು ನಾಚಿಕೆಗೇಡಿನ ವಿಷಯ: ಜಯಾಬಚ್ಚನ್

ನೇಕಾರರು ಎಂದರೆ ಎರಡು ವರ್ಗಳಿವೆ. ಒಂದು ಮಾಲೀಕ ವರ್ಗ ಮತ್ತೊಂದು ಕಾರ್ಮಿಕ ವರ್ಗ. ಆದರೆ ಸರ್ಕಾರ ನೀಡುವ ಯೋಜನೆಗಳ ಪಾಲು ಹೋಗುತ್ತಿರುವುದು ಮಾಲೀಕ ವರ್ಗಕ್ಕೆ. ಸಾಲ ಮನ್ನಾ, ಸಬ್ಸಿಡಿ, ಯಂತ್ರಗಳ ಖರೀದಿಗೆ ಧನಸಹಾಯ ಎಲ್ಲವೂ ಮಾಲೀಕರ ಪರವಾಗಿವೆ. ಕಾರ್ಮಿಕ ವರ್ಗ ಎಂಬ ಒಂದು ವರ್ಗವಿದೆ. ಅವರಿಗೂ ಸರ್ಕಾರಿ ಸೌಲಭ್ಯಗಳು ಬೇಕು ಎಂದು ತಿಳಿಸುವ ಪ್ರಯತ್ನ ನಾವು ಮಾಡುತ್ತಿದ್ದೆವೆ ಎಂದು ಹೇಳುತ್ತಾರೆ ರವಿ ಪಾಟೀಲ್.

’ಕಾರ್ಮಿಕರಿಗೆ ದಿನೇ ದಿನೇ ಕೂಲಿ ಹೆಚ್ಚು ಮಾಡುವ ಬದಲು ಕಡಿಮೆ ಮಾಡುತ್ತಿದ್ದಾರೆ. ಉದ್ಯಮ ಚೆನ್ನಾಗಿ ನಡೆಯುತ್ತಿದ್ದರೂ, ಸೀರೆ ವ್ಯಾಪಾರವಾಗುತ್ತಿಲ್ಲ ಎಂದು ನೆಪ ಹೇಳುತ್ತಾ ಕೂಲಿ ಕಡಿಮೆ ನೀಡುತ್ತಾರೆ. ಲಾಕ್‌ಡೌನ್‌ ಸಮಯದಲ್ಲಿ ಹಲವಾರು ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಸರ್ಕಾರ ಮಾತ್ರ ನಮ್ಮತ್ತ ತಿರುಗಿ ನೋಡುತ್ತಿಲ್ಲ, ನಾವು ಹೇಗೆ ಬದುಕಬೇಕು? ಎಂಬುದು ಕಾರ್ಮಿಕರ ಅಳಲು.

ಕೂಲಿ ನೇಕಾರರ ಕಾರ್ಮಿಕ ಬಳಗದ ಬೇಡಿಕೆಗಳ ಮನವಿ ಪತ್ರ ಇಲ್ಲಿದೆ.

’ಈ ಬೇಡಿಕೆಗಳ ಮೇಲೆ ಪ್ರತಿಭಟನೆ ಮಾಡಿ, ಸದನದಲ್ಲಿ ಈ ಬಗ್ಗೆ ಮಾತನಾಡಲು ಮನವಿ ಪತ್ರಗಳನ್ನು ಜಿಲ್ಲಾಡಳಿತ, ಜವಳಿ ಸಚಿವರು, ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಎಲ್ಲರಿಗೂ ಮನವಿ ಕೊಟ್ಟಿದ್ದೇವು. ಬೆಳಗಾವಿ ದಕ್ಷಿಣದ ಶಾಸಕ ಅಭಯ ಪಾಟೀಲರು ಮಾತ್ರ ಮಾತನಾಡಿದರು. ಆದರೂ ನಾವು ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ’ ಎನ್ನುತ್ತಾರೆ ರವಿ ಪಾಟೀಲ್.

ದಶಕಗಳಿಂದ ದುಡಿಯುತ್ತಾ ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡಿ, ಕಷ್ಟದಲ್ಲಿರುವ ನೇಕಾರರ ಕಲ್ಯಾಣಕ್ಕಾಗಿ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕಿದೆ. ಅವರಿಗೆ ಸಾಮಾಜಿಕ ಭದ್ರತೆ ಒದಗಿಸುವ ಮೂಲಕ ಮಾನವೀಯತೆ ಮೆರೆಯಬೇಕಿದೆ.


ಇದನ್ನೂ ಓದಿ: ತಮಿಳುನಾಡು: ಚುನಾವಣಾ ಪ್ರಚಾರದ ವೇಳೆ ಜನರ ಬಟ್ಟೆ ಒಗೆದ ಎಐಎಡಿಎಂಕೆ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...