Homeಅಂತರಾಷ್ಟ್ರೀಯಭಾರತವನ್ನು ಅಸ್ಥಿರಗೊಳಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅಮೆರಿಕ

ಭಾರತವನ್ನು ಅಸ್ಥಿರಗೊಳಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅಮೆರಿಕ

- Advertisement -
- Advertisement -

ಅಮೆರಿಕದ ಸ್ಟೇಟ್ ಡಿಪಾರ್ಟ್ಮೆಂಟ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಧ್ಯಮ ವರದಿಗಳನ್ನು ದುರ್ಬಳಕೆ ಮಾಡಿದೆ ಎಂಬ ಬಿಜೆಪಿ ಪ್ರತಿಪಾದನೆಯನ್ನು ಅಮೆರಿಕದ ರಾಯಭಾರ ಕಚೇರಿಯು  ಶನಿವಾರ ಹೇಳಿದೆ. ಬಿಜೆಪಿ ಆರೋಪವನ್ನು “ನಿರಾಶಾದಾಯಕ” ಎಂದು ತಳ್ಳಿಹಾಕಿರುವ ಅಮೆರಿಕ, ಪತ್ರಕರ್ತರಿಗೆ ಸಾಮರ್ಥ್ಯ-ವರ್ಧನೆಯ ತರಬೇತಿಯ ಮೂಲಕ ಸ್ವತಂತ್ರ ಮಾಧ್ಯಮವನ್ನು ಬೆಂಬಲಿಸುತ್ತದೆ ಮತ್ತು ಸ್ವತಂತ್ರ ಮಾಧ್ಯಮ ಸಂಸ್ಥೆಗಳ ಸಂಪಾದಕೀಯ ನಿರ್ಧಾರಗಳ ಮೇಲೆ ತಾವು ಪ್ರಭಾವ ಬೀರುವುದಿಲ್ಲ ಎಂದು ಪ್ರತಿಪಾದಿಸಿದೆ. ಭಾರತವನ್ನು ಅಸ್ಥಿರಗೊಳಿಸುತ್ತಿದೆ

ಡಿಸೆಂಬರ್ 5 ರಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತನ್ನ ಅಧಿಕೃತ ಖಾತೆಯಿಂದ ಸರಣಿ ಪೋಸ್ಟ್‌ಗಳ ಮೂಲಕ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಆಡಳಿತ ಪಕ್ಷದ ಮೇಲೆ ಉದ್ದೇಶಿತ ದಾಳಿಗಳನ್ನು ಅಮೆರಿಕ ನಡೆಸುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. “ಭಾರತವನ್ನು ಅಸ್ಥಿರಗೊಳಿಸುವ” ಪ್ರಯತ್ನಗಳ ಹಿಂದೆ ಅಮೆರಿಕದ ರಾಜ್ಯ ಇಲಾಖೆ ಇದೆ ಎಂದು ಬಿಜೆಪಿ ಅಂದು ಆರೋಪಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಯೋಜನೆ(OCCRP)ಯು ಅಮೆರಿಕದ ಸ್ಟೇಟ್ ಡಿಪಾರ್ಟ್‌ಮೆಂಟ್‌ನ ಯುಎಸ್‌ ಎಡ್(USAID) ನಿಂದ ಗಣನೀಯ ಪ್ರಮಾಣದ ಹಣವನ್ನು ಪಡೆದಿದೆ ಎಂದು ಹೇಳಿಕೊಂಡ ಫ್ರೆಂಚ್ ತನಿಖಾ ಮಾಧ್ಯಮ ಔಟ್‌ಲೆಟ್‌ನ ಮೀಡಿಯಾಪಾರ್ಟ್‌ನ ವರದಿಯನ್ನು ಬಿಜೆಪಿ ಉಲ್ಲೇಖಿಸಿತ್ತು. ಭಾರತವನ್ನು ಅಸ್ಥಿರಗೊಳಿಸುತ್ತಿದೆ

ಇದಕ್ಕೂ ಮುನ್ನ ಗುರುವಾರ (ಡಿಸೆಂಬರ್ 5) ಸಂಸತ್ತಿನ ಬಿಜೆಪಿ ಸದಸ್ಯರು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಲು ಮೀಡಿಯಾಪಾರ್ಟ್ ವರದಿಯನ್ನು ಬಳಸಿದ್ದರು. ರಾಹುಲ್ ಗಾಂಧಿ ಅವರು ಒಸಿಸಿಆರ್‌ಪಿ ಮತ್ತು ಅಮೆರಿಕದ ಬಿಲಿಯನೇರ್ ಜಾರ್ಜ್ ಸೊರೊಸ್ ಅವರೊಂದಿಗೆ ಶಾಮೀಲಾಗಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು.

ಅದಾಗ್ಯೂ, ಮೀಡಿಯಾಪಾರ್ಟ್ ಲೇಖನವು ಅಮೆರಿಕ ಸರ್ಕಾರವು “ರಷ್ಯಾ ಮತ್ತು ವೆನೆಜುವೆಲಾವನ್ನು ಕೇಂದ್ರೀಕರಿಸುವ ತನಿಖೆಗಳಿಗೆ ಹಣ ನೀಡುತ್ತದೆ” ಎಂದು ಮಾತ್ರ ಆರೋಪಿಸಿದೆ.

‘‘ಭಾರತದಲ್ಲಿ ಆಡಳಿತಾರೂಢ ಪಕ್ಷ ಇಂತಹ ಆರೋಪಗಳನ್ನು ಮಾಡಿರುವುದು ನಿರಾಶೆ ಮೂಡಿಸಿದೆ. ಯುಎಸ್ ಸರ್ಕಾರವು ವೃತ್ತಿಪರ ಅಭಿವೃದ್ಧಿ ಮತ್ತು ಪತ್ರಕರ್ತರಿಗೆ ಸಾಮರ್ಥ್ಯ ವೃದ್ಧಿ ತರಬೇತಿಯನ್ನು ಬೆಂಬಲಿಸುವ ಪ್ರೋಗ್ರಾಮಿಂಗ್‌ನಲ್ಲಿ ಸ್ವತಂತ್ರ ಸಂಸ್ಥೆಗಳೊಂದಿಗೆ ಕೆಲಸ ಮಾಡುತ್ತದೆ. ಈ ಪ್ರೋಗ್ರಾಮಿಂಗ್ ಮಾಧ್ಯಮ ಸಂಸ್ಥೆಗಳ ಸಂಪಾದಕೀಯ ನಿರ್ಧಾರಗಳು ಅಥವಾ ನಿರ್ದೇಶನದ ಮೇಲೆ ಪ್ರಭಾವ ಬೀರುವುದಿಲ್ಲ’’ ಎಂದು ಅಮೆರಿಕದ ರಾಯಭಾರ ಕಚೇರಿಯ ವಕ್ತಾರರು ಶನಿವಾರ (ಡಿಸೆಂಬರ್ 7) ಹೇಳಿದ್ದಾರೆ.

ಅಮೆರಿಕವು ವಿಶ್ವದಾದ್ಯಂತ ಮಾಧ್ಯಮ ಸ್ವಾತಂತ್ರ್ಯದ ಚಾಂಪಿಯನ್ ಆಗಿದೆ ಎಂದು ರಾಯಭಾರ ಕಚೇರಿ ಪ್ರತಿಪಾದಿಸಿದೆ. ‘‘ಮುಕ್ತ ಮತ್ತು ಸ್ವತಂತ್ರ ಮಾಧ್ಯಮವು ಯಾವುದೇ ಪ್ರಜಾಪ್ರಭುತ್ವದ ಅತ್ಯಗತ್ಯ ಅಂಶವಾಗಿದೆ. ಇದು ತಿಳುವಳಿಕೆಯುಳ್ಳ ಮತ್ತು ರಚನಾತ್ಮಕ ಚರ್ಚೆಯನ್ನು ಸಕ್ರಿಯಗೊಳಿಸುತ್ತದೆ ಮತ್ತು ಅಧಿಕಾರದಲ್ಲಿರುವವರನ್ನು ಹೊಣೆಗಾರರನ್ನಾಗಿ ಮಾಡುತ್ತದೆ’’ ಎಂದು ರಾಯಬಾರ ಕಚೇರಿ ಹೇಳಿದೆ.

“OCCRP ಯ 50% ನಿಧಿಯು US ಸ್ಟೇಟ್ ಡಿಪಾರ್ಟ್‌ಮೆಂಟ್‌ನಿಂದ ನೇರವಾಗಿ ಬರುತ್ತದೆ” ಎಂದು ಬಿಜೆಪಿ X ನಲ್ಲಿ ಪೋಸ್ಟ್ ಮಾಡಿತ್ತು. “ಒಸಿಆರ್‌ಪಿ ಡೀಪ್ ಸ್ಟೇಟ್ ಕಾರ್ಯಸೂಚಿಯನ್ನು ಕೈಗೊಳ್ಳಲು ಮಾಧ್ಯಮ ಸಾಧನವಾಗಿ ಕಾರ್ಯನಿರ್ವಹಿಸಿದೆ. ಪ್ರಧಾನಿ ಮೋದಿಯನ್ನು ಗುರಿಯಾಗಿಸುವ ಮೂಲಕ ಭಾರತವನ್ನು ಅಸ್ಥಿರಗೊಳಿಸುವ ಸ್ಪಷ್ಟ ಉದ್ದೇಶವನ್ನು ಡೀಪ್ ಸ್ಟೇಟ್ ಹೊಂದಿದೆ” ಎಂದು ಬಿಜೆಪಿ ಹೇಳಿತ್ತು. ಅದಾಗ್ಯೂ, ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: ಡಿಸೆಂಬರ್ 12ರಂದು ಪೂಜಾ ಸ್ಥಳಗಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

ಡಿಸೆಂಬರ್ 12ರಂದು ಪೂಜಾ ಸ್ಥಳಗಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...