Homeಮುಖಪುಟಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿ: ಚರಣಜಿತ್ ಸಿಂಗ್ ಚನ್ನಿ ಕುರಿತ ವಿವರಗಳು

ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿ: ಚರಣಜಿತ್ ಸಿಂಗ್ ಚನ್ನಿ ಕುರಿತ ವಿವರಗಳು

- Advertisement -
- Advertisement -

ಕಳೆದ ಮೂರು ದಿನಗಳಿಂದ ಹಲವು ನಾಟಕೀಯ ಬೆಳವಣಿಗೆಗಳಿಗೆ ಪಂಜಾಬ್ ರಾಜಕೀಯ ಸಾಕ್ಷಿಯಾಗಿತ್ತು. ಕ್ಯಾಪ್ಟನ್ ಅಮರಿಂದರ್ ಬದಲಿಗೆ ಕಾಂಗ್ರೆಸ್ ಪಕ್ಷವು ಚರಣಜಿತ್ ಸಿಂಗ್ ಚನ್ನಿಯನ್ನು ಆಯ್ಕೆ ಮಾಡುವ ಮೂಲಕ ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿ ನೇಮಿಸಿದ ಖ್ಯಾತಿ ಪಡೆದುಕೊಂಡಿದೆ.

ಭಾರತದಲ್ಲಿಯೇ ಶೇಕಡಾವರು ಅತಿ ಹೆಚ್ಚು (ಪಂಜಾಬ್‌ನ ಶೇ.35) ದಲಿತರನ್ನು ಹೊಂದಿರುವ ಪಂಜಾಬ್ ರಾಜ್ಯದಲ್ಲಿ ಸ್ವತಂತ್ರಗೊಂಡ 75ನೇ ವರ್ಷದಲ್ಲಿ ಅದು ಮೊದಲ ದಲಿತ ಸಿಎಂ ಪಡೆದಿದೆ.

ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿಯಾಗಿರುವ 58 ವರ್ಷದ ಚರಣಜಿತ್ ಸಿಂಗ್ ಚನ್ನಿ ಅಮರಿಂದರ್ ಸಿಂಗ್ ಸಂಪುಟದಲ್ಲಿ ತಾಂತ್ರಿಕ ಶಿಕ್ಷಣ ಸಚಿವರಾಗಿದ್ದರು. ಅವರು ಚಮಕೌರ್ ಸಾಹಿಬ್ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದಾರೆ.

2015 ರಿಂದ 2016 ರವರೆಗೆ ಪಂಜಾಬ್ ವಿಧಾನಸಭೆಯಲ್ಲಿ ಚನ್ನಿ ವಿರೋಧ ಪಕ್ಷದ ನಾಯಕರಾಗಿದ್ದರು. ಅವರನ್ನು ಮಾರ್ಚ್ 2017 ರಲ್ಲಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸರ್ಕಾರದಲ್ಲಿ ಮಂತ್ರಿಯನ್ನಾಗಿ ಮಾಡಲಾಯಿತು.

“ಪಂಜಾಬಿನ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಚರಣಜಿತ್ ಸಿಂಗ್ ಚನ್ನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲು ನನಗೆ ತುಂಬಾ ಸಂತೋಷವಾಗಿದೆ” ಎಂದು ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಟ್ವೀಟ್ ಮಾಡಿದ್ದಾರೆ.

“ಇದು ಹೈಕಮಾಂಡ್ ನಿರ್ಧಾರ…, ನಾನು ಅದನ್ನು ಸ್ವಾಗತಿಸುತ್ತೇನೆ. ಚನ್ನಿ ನನ್ನ ಕಿರಿಯ ಸಹೋದರನಂತೆ … ನನಗೆ ಯಾವುದೇ ನಿರಾಶೆ ಇಲ್ಲ… ಎಂದು ಕಾಂಗ್ರೆಸ್ ನಾಯಕ ಸುಖಜಿಂದರ್ ಸಿಂಗ್ ರಾಂಧವಾ ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ಚರಣಜಿತ್ ಸಿಂಗ್ ಚನ್ನಿ ನೂತನ ಪಂಜಾಬ್ ಮುಖ್ಯಮಂತ್ರಿ: ಕಾಂಗ್ರೆಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ ವೀಕ್ಷಿಸುತ್ತಾ ಬೀದಿಯಲ್ಲಿ ತಿರುಗಾಡುವ ಯುವಕರ ಖಾತೆಗಳಿಗೆ ಹಣ...

0
"ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ಗಳನ್ನು ಬಳಸಿಕೊಂಡು ಬೀದಿಗಳಲ್ಲಿ ತಿರುಗುತ್ತಿರುವ ನಮ್ಮ ಯುವಕರ ಬ್ಯಾಂಕ್ ಖಾತೆಗಳಿಗೆ ವಾರ್ಷಿಕ ಒಂದು ಲಕ್ಷ ರೂಪಾಯಿ ಮತ್ತು ತಿಂಗಳಿಗೆ 8,500 ರೂಪಾಯಿಗಳನ್ನು ಜಮಾ ಮಾಡಲಾಗುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ"...