Homeಮುಖಪುಟಪತ್ರಕರ್ತರನ್ನು ವಶಕ್ಕೆ ಪಡೆದು ‘ಜನಸಂದಣಿ ನಿಯಂತ್ರಣ’ ಎಂದು ಸಮರ್ಥಿಸಿಕೊಳ್ಳಲಾಗದು: ದೆಹಲಿ ಪೊಲೀಸರ ಕ್ರಮಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ...

ಪತ್ರಕರ್ತರನ್ನು ವಶಕ್ಕೆ ಪಡೆದು ‘ಜನಸಂದಣಿ ನಿಯಂತ್ರಣ’ ಎಂದು ಸಮರ್ಥಿಸಿಕೊಳ್ಳಲಾಗದು: ದೆಹಲಿ ಪೊಲೀಸರ ಕ್ರಮಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹಿಳಾ ಪತ್ರಕರ್ತರ ಸಂಘದ ಆಕ್ಷೇಪ

- Advertisement -
- Advertisement -

ನವದೆಹಲಿ: ಪ್ರತಿಭಟನೆಗಳನ್ನು ವರದಿ ಮಾಡಲು ತೆರಳಿದ ಪತ್ರಕರ್ತರನ್ನು ಬಲವಂತವಾಗಿ ಸ್ಥಳದಿಂದ ಹೊರಗೆಳೆದು ಪೊಲೀಸ್ ವಾಹನಗಳಿಗೆ ತಳ್ಳುವುದು, ಅವರ ಚಲನವಲನಗಳಿಗೆ ನಿರ್ಬಂಧ ಹೇರುವುದು ಸೇರಿದಂತೆ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಕ್ರಮಗಳನ್ನು ಕೇವಲ ‘ಜನಸಂದಣಿ ನಿಯಂತ್ರಣ’ ಅಥವಾ ‘ಪರಿಶೀಲನೆಗಾಗಿ ಸ್ಥಳದಿಂದ ತೆರವುಗೊಳಿಸುವುದು’ ಎಂದು ಕರೆದು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಭಾರತದ ಮಹಿಳಾ ಮಾಧ್ಯಮ ಜಾಲ (NWMI) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಪತ್ರಕರ್ತರನ್ನು ಬಂಧನಕ್ಕೆ ಒಳಪಡಿಸಿದರೂ ಅದನ್ನು ಬಂಧನ ಎಂದು ಕರೆಯದಿರುವುದರಿಂದ ಪೊಲೀಸರ ಕ್ರಮ ಕಾನೂನುಬದ್ಧವಾಗುವುದಿಲ್ಲ. ಇಂತಹ ಹೆಸರಿನ ಬದಲಾವಣೆಗಳ ಮೂಲಕ ಪೊಲೀಸರು ತಮ್ಮ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ಸಂಘಟನೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಕುರಿತು ಲೈವ್ ಲಾ ವರದಿ ಮಾಡಿದೆ.

ಕಳೆದ ಅಕ್ಟೋಬರ್‌ನಲ್ಲಿ ದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ಪತ್ರಕರ್ತರ ಮೇಲೆ ಪೊಲೀಸರು ನಡೆಸಿದ ಕ್ರಮಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಯ ಭಾಗವಾಗಿ NWMI ಶನಿವಾರ ತನ್ನ ಪ್ರತಿವಾದವನ್ನು ಸಲ್ಲಿಸಿದೆ. ಪ್ರತಿಭಟನಾ ಸ್ಥಳಗಳಲ್ಲಿ ವರದಿ ಮಾಡುತ್ತಿದ್ದ ಪತ್ರಕರ್ತರನ್ನು ಪೊಲೀಸರು ಬಲವಂತವಾಗಿ ಹೊರಗೆ ಕರೆದೊಯ್ದು ಪೊಲೀಸ್ ವಾಹನಗಳಲ್ಲಿ ಕೂರಿಸಿದ್ದರು. ಅವರ ವರದಿ ಮಾಡುವ ಮತ್ತು ಸಂಚರಿಸುವ ಸ್ವಾತಂತ್ರ್ಯಕ್ಕೂ ಅಡ್ಡಿಪಡಿಸಲಾಗಿತ್ತು ಎಂಬ ಆರೋಪಗಳು ಕೇಳಿಬಂದಿದ್ದವು.

ಆದರೆ, ಕಳೆದ ವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ದೆಹಲಿ ಪೊಲೀಸರು ತಮ್ಮ ಕ್ರಮಗಳನ್ನು ಸಮರ್ಥಿಸಿಕೊಂಡಿದ್ದರು. ಪ್ರತಿಭಟನಾಕಾರರನ್ನು ಚದುರಿಸಿ ಸಾರ್ವಜನಿಕ ಸುವ್ಯವಸ್ಥೆಯನ್ನು ಪುನಃಸ್ಥಾಪಿಸುವುದು ಪೊಲೀಸರ ಉದ್ದೇಶವಾಗಿತ್ತೇ ಹೊರತು ಪತ್ರಕರ್ತರು ತಮ್ಮ ವೃತ್ತಿಪರ ಕರ್ತವ್ಯ ನಿರ್ವಹಿಸುವುದನ್ನು ತಡೆಯುವುದಾಗಿರಲಿಲ್ಲ ಎಂದು ಹೇಳಿದ್ದರು. ಪತ್ರಕರ್ತರನ್ನು ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿಲ್ಲ ಎಂದೂ ವಾದಿಸಿದ್ದರು. ಅಲ್ಲದೆ, ಪತ್ರಕರ್ತರು, ವಕೀಲರು ಸೇರಿದಂತೆ ವಿವಿಧ ವೃತ್ತಿಪರರು ತಮ್ಮ ಕರ್ತವ್ಯ ನಿರ್ವಹಿಸುವಾಗ ಅಡ್ಡಿಪಡಿಸಬಾರದು ಎಂದು ಸುಪ್ರೀಂ ಕೋರ್ಟ್ ಅಕ್ಟೋಬರ್ 11ರಂದು ನೀಡಿದ್ದ ನಿರ್ದೇಶನವು ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಮತ್ತು ರೀಲ್‌ಗಳನ್ನು ಮಾಡುವವರನ್ನು ಒಳಗೊಂಡಿಲ್ಲ ಎಂಬ ವಾದವನ್ನೂ ಪೊಲೀಸರು ಮುಂದಿಟ್ಟಿದ್ದರು.

ದೆಹಲಿ ಪೊಲೀಸರ ಈ ಸಮರ್ಥನೆಯನ್ನು NWMI ಸಂಪೂರ್ಣವಾಗಿ ತಿರಸ್ಕರಿಸಿದೆ. ವ್ಯಕ್ತಿಯ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸುವ ಕ್ರಮವನ್ನು ಅದರ ಹೆಸರನ್ನು ಬದಲಾಯಿಸುವ ಮೂಲಕ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸಂಘಟನೆ ಹೇಳಿದೆ. ಪೊಲೀಸರು ಪತ್ರಕರ್ತರನ್ನು ಬಂಧನಕ್ಕೆ ಒಳಪಡಿಸಿಲ್ಲ, ಕೇವಲ ಜನಸಂದಣಿ ನಿಯಂತ್ರಣಕ್ಕಾಗಿ ಸ್ಥಳದಿಂದ ತೆರವುಗೊಳಿಸಿದ್ದಾರೆ ಎಂಬ ವಾದವು ವೈಯಕ್ತಿಕ ಸ್ವಾತಂತ್ರ್ಯದ ಮೇಲಿನ ಹಸ್ತಕ್ಷೇಪವನ್ನು ಸಮರ್ಥಿಸುವುದಿಲ್ಲ ಎಂದು ಪ್ರತಿವಾದದಲ್ಲಿ ತಿಳಿಸಿದೆ.

ಇದೇ ವೇಳೆ, ಪತ್ರಕರ್ತರು ಸುದ್ದಿ ಸಂಗ್ರಹಿಸಲು ಮತ್ತು ವರದಿ ಮಾಡಲು ಹೊಂದಿರುವ ಹಕ್ಕು ಕೇವಲ ಮಾನ್ಯತೆ ಪಡೆದ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡುವವರಿಗೆ ಮಾತ್ರ ಸೀಮಿತವಲ್ಲ ಎಂದು NWMI ಸ್ಪಷ್ಟಪಡಿಸಿದೆ. ಪತ್ರಿಕಾ ಸಂಸ್ಥೆಯ ಉದ್ಯೋಗದ ಗುರುತಿನ ಚೀಟಿ ಅಥವಾ ಅಧಿಕೃತ ಮಾನ್ಯತೆ ಹೊಂದಿರುವುದನ್ನೇ ಪತ್ರಿಕೋದ್ಯಮದ ಅರ್ಹತೆಯ ಮಾನದಂಡವನ್ನಾಗಿ ಮಾಡಲಾಗದು. ಸ್ವತಂತ್ರ ಪತ್ರಕರ್ತರು, ಫ್ರೀಲಾನ್ಸ್ ವರದಿಗಾರರು ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ಕೆಲಸ ಮಾಡುವವರಿಗೂ ಸಾರ್ವಜನಿಕ ಸ್ಥಳಗಳಲ್ಲಿ ಕಾನೂನುಬದ್ಧವಾಗಿ ಸುದ್ದಿ ಸಂಗ್ರಹಿಸುವ ಮತ್ತು ವರದಿ ಮಾಡುವ ಸಮಾನ ಹಕ್ಕಿದೆ ಎಂದು ಸಂಘಟನೆ ಪ್ರತಿಪಾದಿಸಿದೆ.

ಸಾರ್ವಜನಿಕ ಪ್ರತಿಭಟನೆಗಳ ಸಂದರ್ಭದಲ್ಲಿ ಪೊಲೀಸರು ಕೈಗೊಳ್ಳುವ ಕ್ರಮಗಳನ್ನು ದಾಖಲಿಸಿ, ಅವುಗಳನ್ನು ಜನರಿಗೆ ತಿಳಿಸುವುದು ಪತ್ರಕರ್ತರ ಮೂಲಭೂತ ವೃತ್ತಿಪರ ಕರ್ತವ್ಯವಾಗಿದೆ. ಇಂತಹ ವರದಿಗಾರಿಕೆಯನ್ನು ಯಾವ ಮಾಧ್ಯಮ ವೇದಿಕೆಯಲ್ಲಿ ಪ್ರಕಟಿಸಲಾಗುತ್ತದೆ, ಅದರ ಸ್ವರೂಪ ಅಥವಾ ಅವಧಿ ಎಷ್ಟಿದೆ ಎಂಬುದನ್ನು ಆಧರಿಸಿ ಸುದ್ದಿ ಸಂಗ್ರಹಣೆಯ ಹಕ್ಕನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂದು NWMI ವಾದಿಸಿದೆ. ಪೊಲೀಸರ ಕ್ರಮಗಳನ್ನು ದಾಖಲಿಸುವುದೂ ಸುದ್ದಿ ಸಂಗ್ರಹಣೆ ಮತ್ತು ಪ್ರಸಾರದ ಭಾಗವೇ ಹೊರತು ಅದನ್ನು ಬೇರೆ ರೀತಿಯಲ್ಲಿ ವ್ಯಾಖ್ಯಾನಿಸಲು ಸಾಧ್ಯವಿಲ್ಲ ಎಂಬುದು ಸಂಘಟನೆಯ ನಿಲುವಾಗಿದೆ.

ಪ್ರತಿಭಟನೆಯ ಸಂದರ್ಭದಲ್ಲಿ ಮೂವರು ಮಹಿಳಾ ಪತ್ರಕರ್ತರು ಪೊಲೀಸ್ ಸಿಬ್ಬಂದಿಯಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಮಾಡಿದ್ದ ಆರೋಪಗಳ ತನಿಖೆಯ ಬಗ್ಗೆಯೂ NWMI ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಈ ಆರೋಪಗಳನ್ನು ದೃಢಪಡಿಸಲು ಸಾಧ್ಯವಾಗಿಲ್ಲ ಮತ್ತು ದೂರುಗಳನ್ನು ಮುಕ್ತಾಯಗೊಳಿಸಲಾಗಿದೆ ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು. ಇಬ್ಬರು ಮಹಿಳಾ ಪತ್ರಕರ್ತರು ತಮ್ಮ ದೂರುಗಳನ್ನು ಮುಂದುವರಿಸಲು ಆಸಕ್ತಿ ತೋರಿಲ್ಲ ಹಾಗೂ ಮೂರನೇ ಪತ್ರಕರ್ತೆ ವಿಚಾರಣೆಗೆ ಹಾಜರಾಗಿಲ್ಲ ಎಂದು ಪೊಲೀಸರು ಹೇಳಿದ್ದರು. 

ಅಲ್ಲದೆ, ಲಭ್ಯವಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಲೈಂಗಿಕ ದೌರ್ಜನ್ಯದ ಯಾವುದೇ ಘಟನೆ ಕಂಡುಬಂದಿಲ್ಲ ಎಂದೂ ಸಮರ್ಥಿಸಿಕೊಂಡಿದ್ದರು.

ಆದರೆ, ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಪೊಲೀಸ್ ಸಿಬ್ಬಂದಿಯ ವಿರುದ್ಧದ ದೂರುಗಳನ್ನೂ ಅದೇ ಪೊಲೀಸ್ ಪಡೆ ತನಿಖೆ ನಡೆಸಿ ಮುಕ್ತಾಯಗೊಳಿಸಿರುವುದು ನ್ಯಾಯಸಮ್ಮತ ತನಿಖೆಯ ಬಗ್ಗೆ ಗಂಭೀರ ಅನುಮಾನಗಳನ್ನು ಹುಟ್ಟುಹಾಕುತ್ತದೆ ಎಂದು NWMI ಆಕ್ಷೇಪಿಸಿದೆ. ಆರೋಪಕ್ಕೆ ಒಳಗಾಗಿರುವ ಪೊಲೀಸ್ ವ್ಯವಸ್ಥೆಯೇ ತನ್ನ ವಿರುದ್ಧದ ದೂರುಗಳನ್ನು ಪರಿಶೀಲಿಸಿ ಮುಕ್ತಾಯಗೊಳಿಸುವುದು ಸ್ವತಂತ್ರ ತನಿಖೆಗೆ ಪರ್ಯಾಯವಾಗಲು ಸಾಧ್ಯವಿಲ್ಲ ಎಂದು ಹೇಳಿರುವ ಸಂಘಟನೆ, ಈ ಪ್ರಕರಣಗಳ ಕುರಿತು ಸ್ವತಂತ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. ದೂರುದಾರರು ತನಿಖೆಯನ್ನು ಮುಂದುವರಿಸಲು ನಿರಾಕರಿಸಿರುವುದರಿಂದ ಅಥವಾ ವಿಚಾರಣೆಗೆ ಹಾಜರಾಗದಿರುವುದರಿಂದ ಘಟನೆ ನಡೆದೇ ಇಲ್ಲ ಎಂಬ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ ಎಂದೂ ಪ್ರತಿವಾದದಲ್ಲಿ ಸ್ಪಷ್ಟಪಡಿಸಿದೆ.

ಪೊಲೀಸರ ಕ್ರಮಗಳನ್ನು ಪ್ರಶ್ನಿಸುವ ಪತ್ರಕರ್ತರ ಹಕ್ಕು, ಸಾರ್ವಜನಿಕ ಪ್ರತಿಭಟನೆಗಳನ್ನು ವರದಿ ಮಾಡುವ ಸ್ವಾತಂತ್ರ್ಯ ಮತ್ತು ಮಹಿಳಾ ಪತ್ರಕರ್ತರ ಮೇಲಿನ ಕಿರುಕುಳದ ಆರೋಪಗಳ ತನಿಖೆಯಲ್ಲಿನ ಪಾರದರ್ಶಕತೆ ಈ ಪ್ರಕರಣದಲ್ಲಿ ಪ್ರಮುಖ ಪ್ರಶ್ನೆಗಳಾಗಿ ಎದುರಾಗಿವೆ. 

ಪತ್ರಕರ್ತರ ವೃತ್ತಿಪರ ಸ್ವಾತಂತ್ರ್ಯವನ್ನು ಕೇವಲ ಮಾನ್ಯತೆ ಅಥವಾ ಸಂಸ್ಥೆಯ ಗುರುತಿನ ಚೀಟಿಯ ಮಾನದಂಡಗಳಿಗೆ ಸೀಮಿತಗೊಳಿಸುವುದು ಮತ್ತು ಪೊಲೀಸ್ ಕ್ರಮಗಳನ್ನು ಪ್ರಶ್ನಿಸುವವರನ್ನೇ ನಿಯಂತ್ರಿಸುವುದು ಪ್ರಜಾಪ್ರಭುತ್ವದಲ್ಲಿ ಮಾಧ್ಯಮ ಸ್ವಾತಂತ್ರ್ಯದ ಮೇಲಿನ ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು ಎಂಬ ಆತಂಕವೂ ಈ ಬೆಳವಣಿಗೆಯ ಹಿಂದೆ ಅಡಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

560 ದಿನಗಳ ಜೈಲುವಾಸದ ಬಳಿಕ ಪತ್ರಕರ್ತನ ವಿರುದ್ಧದ ಯುಎಪಿಎ ಆರೋಪ ಕೈಬಿಟ್ಟ ನ್ಯಾಯಾಲಯ

ಕೇರಳ ಮೂಲದ ಪತ್ರಕರ್ತ ರೆಜಾಜ್ ಎಂ. ಶೀಬಾ ಸಿದ್ದೀಕ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ದಾಖಲಿಸಲಾಗಿದ್ದ ಎರಡು ಆರೋಪಗಳಿಂದ ನಾಗಪುರದ ಸೆಷನ್ಸ್ ನ್ಯಾಯಾಲಯ ಅವರನ್ನು ಬಿಡುಗಡೆಗೊಳಿಸಿದೆ. ಈ ಪ್ರಕರಣದಲ್ಲಿ...

‘BJP Ka Beta, BJPberg’ : ಮೆಟಾ ವಿರುದ್ಧ ಯುವ ಕಾಂಗ್ರೆಸ್ ರಾಷ್ಟ್ರವ್ಯಾಪಿ ಅಭಿಯಾನ; ನಿರ್ಬಂಧಿತ ಖಾತೆ, ಪೋಸ್ಟ್‌ಗಳ ಮರುಸ್ಥಾಪನೆಗೆ 7 ದಿನಗಳ ಗಡುವು 

ವಿರೋಧ ಪಕ್ಷದ ನಾಯಕರು (ವಿಶೇಷವಾಗಿ ಕಾಂಗ್ರೆಸ್ ನಾಯಕರು), ಪತ್ರಕರ್ತರು ಮತ್ತು ಸಾಮಾಜಿಕ ಜಾಲತಾಣದ ಪ್ರಭಾವಿಗಳ (Influencers) ಖಾತೆಗಳನ್ನು ನಿರ್ಬಂಧಿಸಲಾಗುತ್ತಿದೆ ಎಂದು ಆರೋಪಿಸಿ, ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಟೆಕ್ ದೈತ್ಯ ‘ಮೆಟಾ’ (Meta)...

ಕಾಡುಗೊಲ್ಲರ ಎಸ್‌ಟಿ ಹಕ್ಕಿನ ಹೋರಾಟ: ಮೂರು ತಿಂಗಳ ಅಧ್ಯಯನದ ಬಳಿಕ ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಪ್ರಸ್ತಾವನೆ; ಹಿರಿಯೂರು ಉಪಚುನಾವಣೆ ಸಿದ್ಧತೆಯೂ ಜೋರು

ಸಮುದಾಯದ ಬಹುದಿನಗಳ ಬೇಡಿಕೆಯ ಹಿನ್ನೆಲೆಯಲ್ಲಿ, ಕಾಡುಗೊಲ್ಲ ಮತ್ತು ಹಟ್ಟಿಗೊಲ್ಲ ಸಮುದಾಯಗಳಿಗೆ ಪರಿಶಿಷ್ಟ ಪಂಗಡ (ಎಸ್‌ಟಿ) ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ಮೂರು ತಿಂಗಳೊಳಗೆ ಜನಾಂಗೀಯ ಅಧ್ಯಯನ ಪೂರ್ಣಗೊಳಿಸಿ ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಲಾಗುವುದು...

ಕೇರಳ: ಇ20 ಪರೀಕ್ಷೆಗೆ ಶುದ್ಧ ಪೆಟ್ರೋಲ್ ನೀಡಲು ತೈಲ ಕಂಪನಿಗಳ ಹಿಂದೇಟು

ಪೆಟ್ರೋಲ್‌ನಲ್ಲಿರುವ ಎಥನಾಲ್ ಪ್ರಮಾಣವನ್ನು ಪರಿಶೀಲಿಸುವ ಕೇರಳ ಸರ್ಕಾರದ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ಇ20 ಪೆಟ್ರೋಲ್‌ನಲ್ಲಿನ ಎಥನಾಲ್ ಪ್ರಮಾಣವನ್ನು ಹೋಲಿಕೆ ಮಾಡಿ ಪರೀಕ್ಷಿಸಲು ಅಗತ್ಯವಿರುವ ಎಥನಾಲ್ ಮಿಶ್ರಣವಿಲ್ಲದ ಶುದ್ಧ ಪೆಟ್ರೋಲ್ ಮಾದರಿಗಳನ್ನು ಒದಗಿಸಲು ತೈಲ ಕಂಪನಿಗಳು...

ಜಮ್ಮು-ಕಾಶ್ಮೀರ: ನೇಮಕಾತಿ ಅಕ್ರಮದ ವಿರುದ್ಧ  ಕೊರೆಯುವ ಚಳಿಯಲ್ಲೂ ಧರಣಿ: ವಿದ್ಯಾರ್ಥಿಗಳ ಜೊತೆ ರಾತ್ರಿ ಕಳೆದ ಮಾಜಿ ಸಂಸದ ಅಗಾ ರುಹುಲ್ಲಾ

ಶ್ರೀನಗರ: ಸರ್ಕಾರಿ ಉದ್ಯೋಗ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮಗಳು, ಪರೀಕ್ಷಾ ವಂಚನೆ ಮತ್ತು ನೇಮಕಾತಿ ವ್ಯವಸ್ಥೆಯಲ್ಲಿನ ಪಾರದರ್ಶಕತೆಯ ಕೊರತೆಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಯುವ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆ...

ತಿರುಪರಂಕುಂದ್ರಂ ವಿವಾದ : ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ ತಮಿಳುನಾಡು ಸರ್ಕಾರದಿಂದ ಮರುಪರಿಶೀಲನಾ ಅರ್ಜಿ

ಮಧುರೈನ ತಿರುಪರಂಕುಂದ್ರಂ ಬೆಟ್ಟದ ಮೇಲಿರುವ ದರ್ಗಾದ ಸಮೀಪದ 'ದೀಪತ್ತೂನ್' (ಕಲ್ಲಿನ ಸ್ತಂಭ) ಮೇಲೆ ಕಾರ್ತಿಕ ದೀಪ ಬೆಳಗಲು ಅನುಮತಿ ನೀಡಿರುವ ಇತ್ತೀಚಿನ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ....

ಅಗ್ನಿವೀರರ ಮಾಹಿತಿ ಡಾರ್ಕ್ ವೆಬ್‌ನಲ್ಲಿ ಮಾರಾಟ ಮಾಡಲು ಯತ್ನ: 14 ವರ್ಷದ ಬಾಲಕನ ವಶಕ್ಕೆ ಪಡೆದ ದೆಹಲಿ ಪೊಲೀಸರು

ಸುಮಾರು 4,000 ಅಗ್ನಿವೀರ ಸಿಬ್ಬಂದಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಹ್ಯಾಕ್ ಮಾಡಿ, ಅದನ್ನು ಡಾರ್ಕ್ ವೆಬ್‌ನಲ್ಲಿ 500 ಡಾಲರ್‌ಗೆ ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ಹರಿಯಾಣದ ಬಲ್ಲಭಗಢದ 14 ವರ್ಷದ ಬಾಲಕನನ್ನು...

ರೋಹಿಂಗ್ಯಾ ಮುಸ್ಲಿಮರ ನರಮೇಧಕ್ಕೆ ಇಸ್ರೇಲ್‌ ಶಸ್ತ್ರಾಸ್ತ್ರ ಪೂರೈಕೆ ಹಾಗೂ ತರಬೇತಿ ನೀಡಿದೆ: ಮ್ಯಾನ್ಮಾರ್ ಹೋರಾಟಗಾರ ಮೌಂಗ್ ಝರ್ನಿ ಗಂಭೀರ ಆರೋಪ

ರೋಹಿಂಗ್ಯಾ ಮುಸ್ಲಿಮರ ವಿರುದ್ಧ ಮ್ಯಾನ್ಮಾರ್ ಸೇನೆ ನರಮೇಧ ನಡೆಸುತ್ತಿದ್ದ ಸಂದರ್ಭದಲ್ಲಿ ಇಸ್ರೇಲ್ ದೇಶವು ಮ್ಯಾನ್ಮಾರ್ ಸೇನೆಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿ, ತರಬೇತಿಯನ್ನೂ ನೀಡಿತ್ತು ಎಂದು ಮ್ಯಾನ್ಮಾರ್‌ನ ಖ್ಯಾತ ಹೋರಾಟಗಾರ ಮತ್ತು ಶಿಕ್ಷಣತಜ್ಞ ಮೌಂಗ್ ಝರ್ನಿ...

ಉತ್ತರ ಪ್ರದೇಶ ಚುನಾವಣೆ: ಒಬಿಸಿ ಮತಗಳ ‘ಕ್ರೋಢೀಕರಣಕ್ಕೆ’ ಅಖಿಲೇಶ್ ಯಾದವ್ ಯತ್ನ; ಸಣ್ಣ ಜಾತಿ ಆಧಾರಿತ ಪಕ್ಷಗಳೊಂದಿಗೆ ಮೈತ್ರಿಗೆ ಚಿಂತನೆ

ಲಖನೌ: ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳ (ಒಬಿಸಿ) ಮತಗಳನ್ನು ಕ್ರೋಢೀಕರಿಸಿ ಚುನಾವಣಾ ಲಾಭ ಪಡೆಯುವ ಉದ್ದೇಶದಿಂದ ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್...

IDBI ಬ್ಯಾಂಕ್ ಮಾರಾಟ ‘ಭಾರತದ ಅತಿದೊಡ್ಡ ಹಗರಣ’: ಮಾಜಿ ಹಣಕಾಸು ಕಾರ್ಯದರ್ಶಿ ಸುಭಾಷ್ ಚಂದ್ರ ಗಾರ್ಗ್ ಗಂಭೀರ ಆರೋಪ; ಸಂಸತ್ ಚರ್ಚೆಗೆ ಇ.ಎ.ಎಸ್. ಶರ್ಮಾ ಒತ್ತಾಯ!

ಲಾಭದ ಹಳಿಗೆ ಮರಳಿರುವ IDBI ಬ್ಯಾಂಕ್‌ನ ಶೇ. 60.72ರಷ್ಟು ಷೇರುಗಳನ್ನು ಕೆನಡಾದ ಫೇರ್‌ಫ್ಯಾಕ್ಸ್ ಫೈನಾನ್ಷಿಯಲ್ ಹೋಲ್ಡಿಂಗ್ಸ್ ಸಂಸ್ಥೆಗೆ 52,878 ಕೋಟಿ ರೂಪಾಯಿಗೆ ಮಾರಾಟ ಮಾಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿರುವುದು ಈಗ...