Homeಚಳವಳಿದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟ:  ಜು.2ಕ್ಕೆ ಸಂತ್ರಸ್ತ ರೈತರಿಂದ  ಉಪವಾಸ ಸತ್ಯಾಗ್ರಹ-ವೀಡಿಯೋ

ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟ:  ಜು.2ಕ್ಕೆ ಸಂತ್ರಸ್ತ ರೈತರಿಂದ  ಉಪವಾಸ ಸತ್ಯಾಗ್ರಹ-ವೀಡಿಯೋ

- Advertisement -
- Advertisement -

ದೇವನಹಳ್ಳಿ: ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯು ಮಂಗಳವಾರ (ಜೂನ್ 30, 2025) ಪತ್ರಿಕಾಗೋಷ್ಠಿ ನಡೆಸಿ, ರಾಜ್ಯ ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆಯ ವಿರುದ್ಧ ತಮ್ಮ ನಿರಂತರ ಹೋರಾಟದ ಮುಂದಿನ ಹಂತಗಳನ್ನು ಘೋಷಿಸಿದೆ. ಜುಲೈ 4ರಂದು ಸರ್ಕಾರವು ರೈತ ಮುಖಂಡರು ಮತ್ತು ಹೋರಾಟಗಾರರೊಂದಿಗೆ ಕರೆದಿರುವ ಸಭೆಯು 1190 ದಿನಗಳಿಂದ ನಡೆಯುತ್ತಿರುವ ಈ ಹೋರಾಟಕ್ಕೆ ನಿರ್ಣಾಯಕ ಘಟ್ಟವಾಗಲಿದೆ ಎಂದು ಸಮಿತಿ ಸ್ಪಷ್ಟಪಡಿಸಿದೆ.

ಜುಲೈ 2ರಂದು ಉಪವಾಸ ಸತ್ಯಾಗ್ರಹ

ಸಮಿತಿಯು ನೀಡಿರುವ ಹೇಳಿಕೆಯ ಪ್ರಕಾರ, ಜುಲೈ 2ರಂದು ಚನ್ನರಾಯಪಟ್ಟಣದ 13 ಹಳ್ಳಿಗಳ ಸಂತ್ರಸ್ತ ರೈತರು “ನಮ್ಮ ಬದುಕು ಈ ಮಣ್ಣಿನಲ್ಲಿದೆ, ಈ ಮಣ್ಣಿನ ಮಕ್ಕಳ ಭವಿಷ್ಯ ನಿಮ್ಮ ಕೈಯಲ್ಲಿದೆ” ಎಂಬ ಘೋಷವಾಕ್ಯದೊಂದಿಗೆ ನಾಡ ಕಚೇರಿ ಮುಂಭಾಗದಲ್ಲಿರುವ ಧರಣಿ ಸ್ಥಳದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ರೈತರ ಈ ಶಾಂತಿಯುತ ಪ್ರತಿಭಟನೆಗೆ ಬೆಂಬಲವಾಗಿ, ಹಿರಿಯ ಗಾಂಧಿವಾದಿ ಸಂತೋಷ್ ಕೌಲಗಿಯವರು ಕೂಡ ಉಪವಾಸದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದು ರಾಜ್ಯದ ಜನರ ಒಗ್ಗಟ್ಟಿನ ಪ್ರತೀಕವಾಗಲಿದೆ ಎಂದು ಸಮಿತಿ ಹೇಳಿದೆ.

ದೇವನಹಳ್ಳಿ ಚಲೋಗೆ ಅದ್ಭುತ ಸ್ಪಂದನೆ: ಜನಸಮುದಾಯಕ್ಕೆ ಕೃತಜ್ಞತೆ

ಇತ್ತೀಚೆಗೆ ನಡೆದ ‘ದೇವನಹಳ್ಳಿ ಚಲೋ’ ಚಳುವಳಿಗೆ ರಾಜ್ಯದ ಜನತೆ ಅಭೂತಪೂರ್ವವಾಗಿ ಸ್ಪಂದಿಸಿದ್ದು, ಇದು ನಾಗರಿಕ ಸಮಾಜದಲ್ಲಿ ‘ತಾಯ್ತನದ ಪ್ರೀತಿ’ ಮತ್ತು ಮಾನವೀಯ ಸಂಬಂಧಗಳು ಇನ್ನೂ ಜೀವಂತವಾಗಿವೆ ಎಂಬುದಕ್ಕೆ ದೊಡ್ಡ ನಿದರ್ಶನವಾಗಿದೆ ಎಂದು ಸಮಿತಿ ಪ್ರಶಂಸಿಸಿದೆ. “ಭೂಮಿ ತಾಯಿಯ ಕರುಳಬಳ್ಳಿಯ ಸಂಬಂಧದಲ್ಲಿ ಬೆಸೆದ ರೈತ, ಕಾರ್ಮಿಕ, ದಲಿತ, ಮಹಿಳಾ ಸೇರಿದಂತೆ ಎಲ್ಲಾ ಸಂಘಟನೆಗಳು ರೈತರ ಉಳಿವಿಗಾಗಿ ಒಗ್ಗೂಡಿ ನಿಂತಿದ್ದು, ಇದು ಸ್ಮರಣೀಯವಾಗಿದೆ” ಎಂದು ಸಮಿತಿಯ ನಾಯಕರು ತಿಳಿಸಿದ್ದಾರೆ.

ಸರ್ಕಾರದ ಮೇಲೆ ರಾಜ್ಯದಾದ್ಯಂತ ಒತ್ತಡ: ಸಭೆಗೆ ಕರೆ

‘ದೇವನಹಳ್ಳಿ ಚಲೋ’ ನಂತರ ಸರ್ಕಾರವು ರೈತರು ಮತ್ತು ಹೋರಾಟಗಾರರೊಂದಿಗೆ ಅತ್ಯಂತ ದಾರುಣವಾಗಿ ವರ್ತಿಸಿತು. ಇದರ ಪರಿಣಾಮವಾಗಿ, ಇಡೀ ರಾಜ್ಯವೇ “ನಿಮ್ಮ ಜೊತೆಗೆ ನಾವಿದ್ದೇವೆ” ಎಂಬ ಸಂದೇಶದೊಂದಿಗೆ ದೇವನಹಳ್ಳಿ ಹೋರಾಟಕ್ಕೆ ಬೆಂಬಲವಾಗಿ ನಿಂತಿದೆ. ಪ್ರಗತಿಪರ ಚಿಂತಕರು, ನಟರು, ಸಾಹಿತಿಗಳು, ಕಲಾವಿದರು ಸೇರಿದಂತೆ ಸಮಾಜದ ವಿವಿಧ ಸ್ತರಗಳ ಗಣ್ಯರು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ್ದಾರೆ. ಈ ಒತ್ತಡದ ಫಲವಾಗಿ, ಜುಲೈ 4ರಂದು ಸರ್ಕಾರವು ರೈತ ಮುಖಂಡರು ಮತ್ತು ಹೋರಾಟಗಾರರೊಂದಿಗೆ ಸಭೆ ಕರೆದಿದೆ.

ಸಚಿವ ಸಂಪುಟಕ್ಕೆ ಮನವಿ ಮತ್ತು ಜುಲೈ 4ರ ಬೃಹತ್ ಸಮಾವೇಶ

ಜುಲೈ 2ರಂದು ನಂದಿಬೆಟ್ಟದಲ್ಲಿ ನಡೆಯಲಿರುವ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ “ದೇವನಹಳ್ಳಿ ಭೂಸ್ವಾಧೀನದ ಸಮಸ್ಯೆ”ಯನ್ನು ವಿಶೇಷ ಅಜೆಂಡಾ ಆಗಿ ಪರಿಗಣಿಸಬೇಕು ಎಂದು ಹೋರಾಟ ಸಮಿತಿ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ. “ದೇವನಹಳ್ಳಿ ಮೂಲಕವೇ ಬೆಟ್ಟಕ್ಕೆ ತೆರಳಿದ ಸಚಿವರು, ಭೂಸ್ವಾಧೀನ ಮಾಡುವುದಿಲ್ಲ ಎಂಬ ನಿರ್ಣಯ ಕೈಗೊಂಡು ವಾಪಸ್ಸಾಗಬೇಕು. ದೇವನಹಳ್ಳಿ ರೈತರ ಸಂಕಷ್ಟಕ್ಕೆ ಸ್ಪಂದಿಸಿದ ರಾಜ್ಯದ ಜನರ ಆಶಯದಂತೆ, ಸರ್ಕಾರವೂ ನಮ್ಮ ಪರವಾದ ನಿರ್ಣಯಕ್ಕೆ ಬರುತ್ತದೆ ಎಂದು ದೇವನಹಳ್ಳಿಯ ಜನತೆ ಮತ್ತು ರೈತಪರ ಮನಸ್ಸುಗಳು ಆಶಾವಾದದಿಂದ ಕಾಯುತ್ತಿವೆ” ಎಂದು ಸಮಿತಿ ಆಶಾಭಾವ ವ್ಯಕ್ತಪಡಿಸಿದೆ.

ಜುಲೈ 4ರಂದು ನಡೆಯಲಿರುವ ಸಭೆಯ ಹಿನ್ನೆಲೆಯಲ್ಲಿ, ರೈತರನ್ನು ಬೆಂಬಲಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ “ನಾಡ ಉಳಿಸಿ ಸಮಾವೇಶ”ವನ್ನು ಸಂಘಟಿಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಸಮಾನ ಮನಸ್ಕರು ಮತ್ತು ರಾಜ್ಯದ ಜನಪರ ಸಂಘಟನೆಗಳು ಈ ಸಮಾವೇಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹೋರಾಟ ಸಮಿತಿ ಮನವಿ ಮಾಡಿದೆ. “ಇದು ಕೇವಲ ದೇವನಹಳ್ಳಿಯ ಸಮಸ್ಯೆಯಲ್ಲ, ಇದು ರಾಜ್ಯದ ರೈತರ ಅಸ್ಮಿತೆ ಮತ್ತು ಕೃಷಿ ಸಂಸ್ಕೃತಿಯ ರಕ್ಷಣೆಯ ಹೋರಾಟ” ಎಂದು ಸಮಿತಿ ಮುಖಂಡರು ಒತ್ತಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಚಂದ್ರ ತೇಜಸ್ವಿ, ಕಾರಳ್ಳಿ ಶ್ರೀನಿವಾಸ್, ಮಾರೇಗೌಡ, ನಂಜಪ್ಪ, ಸಂಜೀವ ನಾಯಕ್, ಅಶ್ವತ್ಥಪ್ಪ, ಸುಬ್ರಮಣಿಗೌಡ, ನರಸಪ್ಪ, ತಿಮ್ಮರಾಯಪ್ಪ, ಗೌರಮ್ಮ, ಅನಸೂಯಮ್ಮ ಮುಂತಾದವರು ಭಾಗವಹಿಸಿದ್ದರು.

ದೇವನಹಳ್ಳಿ ಭೂಸ್ವಾಧೀನ ಮಾಡಿದರೆ ಸರಕಾರಕ್ಕೆ ಎಚ್ಚರಿಕೆ: ಸಂಯುಕ್ತ ಹೋರಾಟದ ನಾಯಕರೊಂದಿಗೆ ವಿಶೇಷ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...