Homeಕರ್ನಾಟಕದೇವನಹಳ್ಳಿ: ಸಂಘರ್ಷದ ಹಂತ ತಲುಪಿದ ಭೂಸ್ವಾಧೀನ ವಿರೋಧಿ ಚಳವಳಿ; 'ಸಂಯುಕ್ತ ಹೋರಾಟ'ದಿಂದ 'ದೇವನಹಳ್ಳಿ ಚಲೋ'ಗೆ ಕರೆ

ದೇವನಹಳ್ಳಿ: ಸಂಘರ್ಷದ ಹಂತ ತಲುಪಿದ ಭೂಸ್ವಾಧೀನ ವಿರೋಧಿ ಚಳವಳಿ; ‘ಸಂಯುಕ್ತ ಹೋರಾಟ’ದಿಂದ ‘ದೇವನಹಳ್ಳಿ ಚಲೋ’ಗೆ ಕರೆ

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯ ರೈತರು ಕಳೆದ 1180 ದಿನಗಳಿಂದ (ಸುಮಾರು ನಾಲ್ಕು ವರ್ಷ) ಕೆಐಎಡಿಬಿ ಭೂಸ್ವಾಧೀನ ವಿರೋಧಿ ಹೋರಾಟ ಸಂಘರ್ಷದ ಸ್ಥಿತಿಗೆ ತಲುಪಿದೆ. ಬಲವಂತದ ಹಾಗೂ ಅನ್ಯಾಯದ ಭೂಸ್ವಾಧೀನ ವಿರೋಧಿಸಿ, ಸಂಯುಕ್ತ ಹೋರಾಟ-ಕರ್ನಾಟಕ ಸಂಘಟನೆಯಿಂದ ಜೂನ್‌ 25 ರಂದು ‘ದೇವನಹಳ್ಳಿ ಚಲೋ’ ಹೋರಾಟಕ್ಕೆ ಕರೆ ನೀಡಲಾಗಿದೆ.

ಈ ಬಗ್ಗೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಯುಕ್ತ ಹೋರಾಟದ ಮುಖಂಡರು, “13 ಗ್ರಾಮಗಳ ರೈತರು ನಾಡ ಕಚೇರಿ ಮುಂದೆ ಅನಿರ್ದಿಷ್ಟ ಪ್ರತಿಭಟನೆ ನಡೆಸುತ್ತಿದ್ದಾರೆ. ಶೇಕಡಾ 80 ರಷ್ಟು ರೈತರು ಲಿಖಿತವಾಗಿ ಭೂಸ್ವಾಧೀನಕ್ಕೆ ತಮ್ಮ ಅಸಮೃತಿ ಹಾಗೂ ವಿರೋಧ ಸ್ಪಷ್ಟವಾಗಿ ವ್ಯಕ್ತಪಡಿಸಿದ್ದರೂ, ಬಲವಂತದ ಭೂಸ್ವಾಧೀನಕ್ಕೆ ಕ್ರಮವಹಿಸಿರುವುದು, ಭೂ ಸ್ವಾಧೀನ ಕಾಯ್ದೆ-2013 ರ ಸ್ಪಷ್ಠ ಉಲ್ಲಂಘನೆಯಾಗಿದೆ” ಎಂದು ಹೇಳಿದರು.

ಭೂ ಸ್ವಾಧೀನ ಕೈಬಿಡುವಂತೆ ಬೆಂಗಳೂರಿನ ಫ್ರೀಂಡಂ ಪಾರ್ಕಿಲ್ಲಿ ರೈತರು ನಡೆಸಿದ ಪ್ರತಿಭಟನಾ ಸ್ಥಳಗಳಿಗೆ ಈಗಿನ ಮುಖ್ಯಮಂತ್ರಿ, ಹಿಂದಿನ ವಿರೋಧ ಪಕ್ಷದ ನಾಯಕರಾಗಿ ಭೇಟಿ ನೀಡಿದ್ದ ಸಿದ್ದರಾಮಯ್ಯ ಅವರು, ತಾವು ಅಧಿಕಾರಕ್ಕೆ ಬಂದರೆ ಅನ್ಯಾಯ ಹಾಗೂ ಬಲವಂತದ ಭೂ ಸ್ವಾಧೀನವನ್ನು ರದ್ದುಪಡಿಸುವುದಾಗಿ ಸಾರ್ವಜನಿಕ ಘೋಷಣೆ ಮಾಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಈಗ ಉಸ್ತುವಾರಿ ಸಚಿವರಾಗಿರುವ ಕೆ.ಎಚ್‌. ಮುನಿಯಪ್ಪ ಕೂಡ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಬಲವಂತವಾಗಿ ಭೂ ಸ್ವಾಧೀನಕ್ಕೆ ಅವಕಾಶ ನೀಡುವುದಿಲ್ಲ ಎಂದು ಈ ರೈತರ ಮತ ಕೇಳಿದ್ದರು. ಆದರೆ, ಈ ಇಬ್ಬರೂ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾದರೂ ತಮ್ಮ ವಚನಕ್ಕೆ ವಿರುದ್ಧವಾಗಿ ವರ್ತಿಸುವ ಮೂಲಕ ವಚನಭ್ರಷ್ಟರು ಎಂದು ಸಾಬೀತು ಮಾಡಿಕೊಂಡಿದ್ದಾರೆ, ಇದು ಸಾರ್ವಜನಿಕ ಹುದ್ದೆಗೆ ಮತ್ತು ನಡವಳಿಕೆಗೆ ಯೋಗ್ಯವಲ್ಲದ್ದು ಎಂದು ಸಂಘಟನೆ ಆಕ್ರೋಶ ಹೊರಹಾಕಿದೆ.

ಇತ್ತೀಚಿಗಿನ ಸಭೆಯೂ ಸೇರಿದಂತೆ ಕಳೆದ ನಾಲ್ಕು ವರ್ಷಗಳಲ್ಲಿ ರೈತರ ಪ್ರತಿಭಟನಾ ಒತ್ತಡ ಹೆಚ್ಚಿದ ಸಂದರ್ಭದಲ್ಲೆಲ್ಲಾ ಮುಖ್ಯಮಂತ್ರಿ ನೇತೃತ್ವದಲ್ಲಿ ನಾಲ್ಕಾರು ಸಭೆಗಳು, ಉಸ್ತುವಾರಿ ಮಂತ್ರಿಗಳ ನೇತೃತ್ವದಲ್ಲಿ ಹತ್ತಾರು ಸಭೆಗಳು ಅಲ್ಲದೇ, ಸ್ವತಃ ಉಸ್ತುವಾರಿ ಮಂತ್ರಿ ಹತ್ತಾರು ಬಾರಿ ಧರಣಿ ಸ್ಥಳಕ್ಕೆ ಭೇಟಿ ಕೊಟ್ಟು ರೈತರ ಪರವಾಗಿ ತೀರ್ಮಾನ ಮಾಡುವುದಾಗಿ ಹೇಳಿ ಚಪ್ಪಾಳೆ ಗಿಟ್ಟಿಸಿಕೊ೦ಡಿದ್ದಾರೆ. ಯಾವುದೇ ಕಾರಣಕ್ಕೂ ರೈತರ ಒಪ್ಪಿಗೆ ಇಲ್ಲದೇ ಭೂಸ್ವಾಧೀನ ಮುಂದುವರೆಸುವುದಿಲ್ಲ ಎಂದು ಸಾರ್ವಜನಿಕವಾಗಿ ಹಲವಾರು ಬಾರಿ ಸ್ಪಷ್ಟಪಡಿಸಿದ್ದಾರೆ. ಈ ರೀತಿ ಭರವಸೆ ನೀಡಿ ಒಳಗೊಳಗೆ ಭೂಸ್ವಾಧೀನದ ಪ್ರಕ್ರಿಯೆ ಮುಂದುವರೆಸಿ ಅಂತಿಮ ಅಧಿಸೂಚನೆ ಹೊರಡಿಸಿರುವುದು ರೈತರಲ್ಲಿ ಹತಾಶೆ-ನಿರಾಶೆ ಉ೦ಟು ಮಾಡಿ, ಒಡಕು ಉ೦ಟು ಮಾಡುವ ಹೀನ ಕುತಂತ್ರವಲ್ಲದೇ ಬೇರೇನೂ ಅಲ್ಲ ಎಂದು ಹೋರಾಟಗಾರರು ಕಿಡಿಕಾರಿದ್ದಾರೆ.

ಸಾರ್ವಜನಿಕವಾಗಿ ಒಂದು ಮುಖ ತೋರಿ, ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಇನ್ನೊಂದು ರೀತಿಯಲ್ಲಿ ಆದೇಶ ನೀಡುವ ಮೂಲಕ ರೈತ ಸಮುದಾಯವನ್ನು ಹಾಗೂ ರೈತ ಹೋರಾಟವನ್ನು ಸಿದ್ದರಾಮಯ್ಯರವರ ನೇತೃತ್ವದ ರಾಜ್ಯ ಸರ್ಕಾರ ಅಪಮಾನಿಸಿದೆ. ಚನ್ನರಾಯಪಟ್ಟಣ ಹೋಬಳಿ ರೈತರ ಧರಣಿ ಸ್ಥಳಕ್ಕೆ ಈ ನಾಲ್ಕು ವರ್ಷಗಳಲ್ಲಿ ಅಖಿಲ ಭಾರತ ಕಿಸಾನ್‌ ಸಭಾ ಅಧ್ಯಕ್ಷರು, ಸಂಯುಕ್ತ ಕಿಸಾನ್‌ ಮೋರ್ಚಾ ನಾಯಕರೂ ಆಗಿರುವ ಡಾ.ಅಶೋಕ್‌ ಧವಳೆ, ಅಖಿಲ ಭಾರತ ಕಿಸಾನ್‌ ಸಭಾದ ಅಖಿಲ ಭಾರತ ಹಣಕಾಸು ಕಾರ್ಯದರ್ಶಿ ಮಾಜಿ ಶಾಸಕ ಕೃಷ್ಣಪ್ರಸಾದ್‌, ಭಾರತೀಯ ಕಿಸಾನ್‌ ಯೂನಿಯನ್‌ನ ರಾಕೇಶ್‌ ಟಿಕಾಯತ್‌ ಸೇರಿದಂತೆ ರಾಷ್ಟ್ರೀಯ ರೈತ ನೇತಾರರು ಭೇಟಿ ಕೊಟ್ಟು ಹೋರಾಟಕ್ಕೆ ಬೆ೦ಬಲ ವ್ಯಕ್ತಪಡಿಸಿದ್ದಾರೆ. ಇಡೀ ರಾಜ್ಯದ ಎಲ್ಲ ರೈತ ಚಳವಳಿಗಳ ಹಾಗೂ ಬುದ್ಧಿಜೀವಿ, ಸಾಹಿತಿಗಳ ಬೆ೦ಬಲ ಮತ್ತು ಅನುಕಂಪ ಈ ಭೂ ಸ್ವಾಧೀನ ವಿರೋಧಿ ರೈತರ ಮೇಲೆ ಇದೆ ಎಂದು ವಿವರಿಸಿದರು.

ತಮ್ಮ ತೀವ್ರ ಅನಾರೋಗ್ಯದ ನಡುವೆಯೂ ಈ ರೈತರ ಹೋರಾಟಕ್ಕೆ ನೇತೃತ್ವ ನೀಡುತ್ತಿದ್ದ ಜಿ.ಸಿ. ಬಯ್ಯಾರೆಡ್ಡಿರವರು ಈ ಹೋರಾಟದ ಬೇಡಿಕೆಯನ್ನು ಪುನರುಚರಿಸುತ್ತಾ ಮರಣವನ್ನಪ್ಪಿದ್ದಾರೆ. ಇಷ್ಟೆಲ್ಲಾ ಇದ್ದರೂ ಬಹುರಾಷ್ಟ್ರೀಯ ಸಂಸ್ಥೆಗಳು, ರಿಯಲ್‌ ಎಸ್ಟೇಟ್‌ ಮಾಫಿಯಾಗಳ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಬಲವಂತದ ಹಾಗೂ ಅನ್ಯಾಯದ ಭೂಸ್ವಾಧೀನ ಮಾಡೇತೀರುವ ಹಠ ಸರ್ವಾಧಿಕಾರಿ ಮನೋಭಾವದ್ದು. ಇಂತಹ ಭೂಸ್ವಾಧೀನ ವಿರೋಧಿ ಹೋರಾಟವನ್ನು ರಾಜ್ಯಾದ್ಯಂತ ಸಂಪೂರ್ಣ ಮಟ್ಟ ಹಾಕುವ ಫ್ಯಾಸಿಸ್ಟ್‌ ದುರುದ್ದೇಶದ್ದು. ಈ ದುರುದ್ದೇಶ ಈಡೇರುವುದಕ್ಕೆ ರಾಜ್ಯದ ರೈತ ಸಮುದಾಯ ಅವಕಾಶ ನೀಡುವುದಿಲ್ಲ. ಚನ್ನರಾಯಪಟ್ಟಣ ರೈತರ ಹೋರಾಟಕ್ಕೆ ಬೆ೦ಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯದ ಎಲ್ಲಾ ಭೂಸ್ವಾಧೀನದ ಭೀತಿ ಎದುರಿಸುತ್ತಿರುವ ರೈತರನ್ನು ಒಗ್ಗೂಡಿಸಿ ಚನ್ನರಾಯಪಟ್ಟಣ ಭೂ ಸ್ವಾಧೀನಕ್ಕೆ ಪ್ರಬಲ ವಿರೋಧವನ್ನು ಇನ್ನೂ ಹೆಚ್ಚಿನ ಹೋರಾಟದ ಶಕ್ತಿಯೊಂದಿಗೆ ಮುಂದುವರೆಸಿ, ರೈತ ಹೋರಾಟ ಜಯಗಳಿಸುವಂತೆ ಮಾಡಲು ಜೂನ್‌ 25, 2025 ರಂದು ದೇವನಹಳ್ಳಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಮುಖಂಡರಾದ ಕಾರಳ್ಳಿ ಶ್ರೀನಿವಾಸ್, ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ದಸಂಸ ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್, ರೈತ ಸಂಘದ ಮುಖಂಡರಾದ ವೀರಸಂಗಯ್ಯ, ಪ್ರಾಂತ ರೈತ ಸಂಘದ ಯಶವಂತ್ ಸೇರಿದಂತೆ ಸಂಯುಕ್ತ ಹೋರಾಟದ ಹಲವರು ಇದ್ದರು.

ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಆಡಳಿತದಲ್ಲಿ ವಿಪರೀತ ಭ್ರಷ್ಟಾಚಾರ, ಶಾಸಕ ರಾಜೇಗೌಡ ವಿರುದ್ಧ ಪ್ರತಿಭಟನೆ; ಕೆ.ಎಲ್.ಅಶೋಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...