Homeಕರ್ನಾಟಕಜು.2ಕ್ಕೆ ನಾಡಕಚೇರಿ ಎದುರು ದೇವನಹಳ್ಳಿ ರೈತರ ಉಪವಾಸ: ಬೆಂಗಳೂರಿನಲ್ಲಿ ಪ್ರಕಾಶ್ ರಾಜ್ ಬೆಂಬಲಿಸಿ ಉಪವಾಸ –...

ಜು.2ಕ್ಕೆ ನಾಡಕಚೇರಿ ಎದುರು ದೇವನಹಳ್ಳಿ ರೈತರ ಉಪವಾಸ: ಬೆಂಗಳೂರಿನಲ್ಲಿ ಪ್ರಕಾಶ್ ರಾಜ್ ಬೆಂಬಲಿಸಿ ಉಪವಾಸ – ವಿಡಿಯೋ

- Advertisement -
- Advertisement -

ಬೆಂಗಳೂರು: ದೇವನಹಳ್ಳಿಯ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ, ಚನ್ನರಾಯಪಟ್ಟಣದ ರೈತರು ಹಾಗೂ ಸಂಯುಕ್ತ ಹೋರಾಟ-ಕರ್ನಾಟಕ ಮತ್ತು ಸಮಾನ ಮನಸ್ಕ ಸಂಘಟನೆಗಳು ಜಂಟಿಯಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ತಮ್ಮ ನಿರಂತರ ಹೋರಾಟ ನಿರ್ಣಾಯಕ ಹಂತ ತಲುಪಿದೆ ಎಂದು ಘೋಷಿಸಿವೆ. ಜುಲೈ 4ರಂದು ಸರ್ಕಾರ ರೈತ ಮುಖಂಡರು ಮತ್ತು ಹೋರಾಟಗಾರರೊಂದಿಗೆ ಕರೆದಿರುವ ಸಭೆಯು 1190 ದಿನಗಳ ಹೋರಾಟಕ್ಕೆ ಮಹತ್ವದ ತಿರುವು ನೀಡಲಿದೆ ಎಂದು ಸಮಿತಿ ಹೇಳಿದೆ.

ಜುಲೈ 2ರಂದು ದೇವನಹಳ್ಳಿಯಲ್ಲಿ ರೈತರಿಂದ, ಬೆಂಗಳೂರಿನಲ್ಲಿ ಗಣ್ಯರಿಂದ ಉಪವಾಸ ಸತ್ಯಾಗ್ರಹ

ಪ್ರಕಟಣೆಯ ಪ್ರಕಾರ, ಜುಲೈ 2ರಂದು (ಗುರುವಾರ) ಎರಡು ಪ್ರಮುಖ ಪ್ರತಿಭಟನೆಗಳು ನಡೆಯಲಿವೆ. ಚನ್ನರಾಯಪಟ್ಟಣದ 13 ಹಳ್ಳಿಗಳ ಸಂತ್ರಸ್ತ ರೈತರು “ನಮ್ಮ ಬದುಕು ಈ ಮಣ್ಣಿನಲ್ಲಿದೆ, ಈ ಮಣ್ಣಿನ ಮಕ್ಕಳ ಭವಿಷ್ಯ ನಿಮ್ಮ ಕೈಯಲ್ಲಿದೆ” ಎಂಬ ಘೋಷವಾಕ್ಯದೊಂದಿಗೆ ದೇವನಹಳ್ಳಿಯ ನಾಡ ಕಚೇರಿ ಮುಂಭಾಗದಲ್ಲಿರುವ ಧರಣಿ ಸ್ಥಳದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ರೈತರ ಈ ಹೋರಾಟಕ್ಕೆ ನೈತಿಕ ಬೆಂಬಲ ತುಂಬಲು ಹಿರಿಯ ಗಾಂಧಿವಾದಿ ಸಂತೋಷ್ ಕೌಲಗಿಯವರು ಕೂಡ ಉಪವಾಸದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅದೇ ದಿನ, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯುತ್ತಿರುವ ‘ಭೂಮಿ ಸತ್ಯಾಗ್ರಹ’ದಲ್ಲಿ ಖ್ಯಾತ ನಟ ಪ್ರಕಾಶ್ ರೈ ಆದಿಯಾಗಿ ನಾಡಿನ ಅನೇಕ ಸಂವೇದನಾಶೀಲ ಕಲಾವಿದರು, ರಂಗಕರ್ಮಿಗಳು ಉಪವಾಸ ನಿರತ ರೈತರನ್ನು ಬೆಂಬಲಿಸಿ ‘ಬೆಂಬಲ ಉಪವಾಸ ಸತ್ಯಾಗ್ರಹ’ ಕೂರಲಿದ್ದಾರೆ.

ಸಾಹಿತಿಗಳು, ಕಲಾವಿದರು, ಚಿಂತಕರಿಂದ ಕ್ಯಾಬಿನೆಟ್‌ಗೆ ಆಗ್ರಹ

ದೇವನಹಳ್ಳಿ ರೈತ ಹೋರಾಟದ ಪರವಾಗಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯುತ್ತಿರುವ ‘ಭೂಮಿ ಸತ್ಯಾಗ್ರಹ’ ಇಂದು 5ನೇ ದಿನಕ್ಕೆ ಕಾಲಿಟ್ಟಿದ್ದು, ಹಲವು ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಡಾ. ಜಿ. ರಾಮಕೃಷ್ಣ, ಜಾಣಗೆರೆ ವೆಂಕಟರಾಮಯ್ಯ, ಡಾ. ಬಂಜಗೆರೆ ಜಯಪ್ರಕಾಶ್, ಇಂದೂಧರ ಹೊನ್ನಾಪುರ, ಆರ್.ಜಿ. ಹಳ್ಳಿ ನಾಗರಾಜ್ ಮೊದಲಾದ ಹಲವು ಸಾಹಿತಿಗಳು, ಚಿಂತಕರು ಮತ್ತು ಬರಹಗಾರರು ಮುಖ್ಯಮಂತ್ರಿಗಳು ಹಾಗೂ ಕ್ಯಾಬಿನೆಟ್‌ನ ಎಲ್ಲ ಸಚಿವರಿಗೆ ಜಂಟಿಯಾಗಿ ಆಗ್ರಹಿಸಿದ್ದಾರೆ. ಜುಲೈ 2ರಂದು ನಡೆಯುವ ಕ್ಯಾಬಿನೆಟ್ ವಿಶೇಷ ಸಭೆಯಲ್ಲಿ ದೇವನಹಳ್ಳಿಯ ಚನ್ನರಾಯಪಟ್ಟಣದ 13 ಹಳ್ಳಿಗಳ 1777 ಎಕರೆ ಜಮೀನನ್ನು ಭೂಸ್ವಾಧೀನ ಮಾಡುವ ಪ್ರಕ್ರಿಯೆಯನ್ನು ಸಂಪೂರ್ಣ ರದ್ದುಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಹಿರಿಯ ಭಾಷಾ ಹೋರಾಟಗಾರರೂ, ಪತ್ರಕರ್ತರೂ ಆದ ಜಾಣಗೆರೆ ವೆಂಕಟರಾಮಯ್ಯ ಅವರು ಮಾತನಾಡಿ, “ಜುಲೈ 2ರಂದು ಕ್ಯಾಬಿನೆಟ್ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಕ್ಯಾಬಿನೆಟ್‌ನ ಎಲ್ಲ ಸಚಿವರೂ ರೈತರ ಪರವಾದ ನಿರ್ಣಯಕ್ಕೆ ಬರಲೇಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒಳಗೊಂಡಂತೆ, ಕ್ಯಾಬಿನೆಟ್‌ನ ಎಲ್ಲ ಸಚಿವರೂ ಚಳವಳಿಗಳ ಮಹತ್ವವೇನು ಎಂಬುದನ್ನು ಅರಿತವರೇ ಆಗಿದ್ದಾರೆ. ಒಂದು ವೇಳೆ ಸರ್ಕಾರದ ನಿರ್ಧಾರ ರೈತರ ವಿರುದ್ಧ ಬಂದರೆ, ಈ ಚಳವಳಿ ಇನ್ನಷ್ಟು ತೀವ್ರವಾಗಿ ಮುಂದುವರೆಯಲಿದೆ. ರೈತರ ಈ ಹೋರಾಟಕ್ಕೆ ಕರ್ನಾಟಕದ ಸಾಹಿತಿಗಳು, ಬರಹಗಾರರು, ಚಿಂತಕರು ಮತ್ತು ಕಲಾವಿದರ ಸಂಪೂರ್ಣ ಬೆಂಬಲವಿದೆ” ಎಂದು ಹೇಳಿದರು.

ಜುಲೈ 3ರಂದು ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕರಾದ ರಾಕೇಶ್ ಟಿಕಾಯತ್, ದರ್ಶನ್ ಪಾಲ್ ಆಗಮನ

ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಸಮಾನ ಮನಸ್ಕ ಸಂಘಟನೆಗಳ ಪರವಾಗಿ ಬಡಗಲಪುರ ನಾಗೇಂದ್ರ, ಯಶವಂತ್, ನೂರ್ ಶ್ರೀಧರ್, ವರಲಕ್ಷ್ಮಿ ಮೊದಲಾದವರು ಮಾತನಾಡಿ, “ಜುಲೈ 2 ರಿಂದ ಫ್ರೀಡಂ ಪಾರ್ಕ್ ನಿರಂತರ ಚಟುವಟಿಕೆಯ ತಾಣವಾಗಲಿದೆ. ಜುಲೈ 3ರಂದು ದೆಹಲಿಯ ರೈತ ಆಂದೋಲನವನ್ನು ಯಶಸ್ವಿಯಾಗಿ ಮುನ್ನಡೆಸಿದ ಸಂಯುಕ್ತ ಕಿಸಾನ್ ಮೋರ್ಚಾದ ಹಿರಿಯ ರೈತ ನಾಯಕರಾದ ರಾಕೇಶ್ ಟಿಕಾಯತ್, ದರ್ಶನ್ ಪಾಲ್ ಮೊದಲಾದವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅವರು ದೇವನಹಳ್ಳಿಗೂ ಭೇಟಿ ನೀಡಿ, ಹಳ್ಳಿಗಳಿಗೆ ತೆರಳಿ ರೈತರಿಗೆ ಭರವಸೆ ತುಂಬಲಿದ್ದಾರೆ” ಎಂದು ಮಾಹಿತಿ ನೀಡಿದರು.

ರೈತರ ಸಭೆ ಬಹಿಷ್ಕರಿಸಿದ ಬಿಜೆಪಿ ಸಂಸದರ ನಡೆಗೆ ಖಂಡನೆ; ಪ್ರಕಾಶ್ ರಾಜ್‌ರಿಂದ ಮಲ್ಲಿಕಾರ್ಜುನ ಖರ್ಗೆ ಭೇಟಿ

ಇದೇ ವೇಳೆ, ದೆಹಲಿಯಲ್ಲಿ ಇಂದು ಭೂಸ್ವಾಧೀನದ ಕುರಿತ ಜಂಟಿ ಸಂಸದೀಯ ಸಭೆಗೆ ಆಹ್ವಾನದ ಮೇರೆಗೆ ರೈತರ ಈ ಭೂಸ್ವಾಧೀನ ವಿಷಯ ಕುರಿತು ಮಾತನಾಡಲು ತೆರಳಿದ್ದ ಮೇಧಾ ಪಾಟ್ಕರ್ ಮತ್ತು ಪ್ರಕಾಶ್ ರೈ ಅವರನ್ನು ಕಂಡ ನಂತರ ಸಭೆಯನ್ನು ಬಹಿಷ್ಕರಿಸಿ ತೆರಳಿದ ಬಿಜೆಪಿ ಸಂಸದರ ವರ್ತನೆಯನ್ನು ಹೋರಾಟ ಸಮಿತಿ ತೀವ್ರವಾಗಿ ಖಂಡಿಸಿತು. ಅಲ್ಲದೆ, ಕೋರಂ ಇದ್ದರೂ ಸಭೆ ನಡೆಸದೆ ರೈತರ ವಿರುದ್ಧವಾದ ನಿಲುವು ತಾಳಿದ ಸಂಸದೀಯ ಸಮಿತಿಯ ಸಂಚಾಲಕರ ನಡೆಯನ್ನೂ ಖಂಡಿಸಲಾಯಿತು. ಈ ಘಟನೆಗಳ ನಂತರ, ಪ್ರಕಾಶ್ ರೈ ಅವರು ವಿರೋಧ ಪಕ್ಷದ ನಾಯಕರೂ, ಎಐಸಿಸಿ ಅಧ್ಯಕ್ಷರೂ ಆದ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಅವರಿಗೆ ವಿಚಾರ ತಿಳಿಸಿದ್ದಾರೆ. ಅಲ್ಲದೆ, ರೈತರ ಹೋರಾಟಕ್ಕೆ ಬೆಂಬಲಿಸಿ ರಾಜ್ಯಕ್ಕೆ ಬಂದು ಹೋರಾಟ ನಿರತರನ್ನು ಭೇಟಿಯಾಗುವಂತೆ ಮನವಿ ಮಾಡಿದ್ದಾರೆ ಎಂಬ ಮಾಹಿತಿಯನ್ನೂ ಸಮಿತಿ ನೀಡಿತು.

ಜುಲೈ 4ರಂದು “ನಾಡ ಉಳಿಸಿ ಸಮಾವೇಶ”

ಜುಲೈ 4ರಂದು ಮುಖ್ಯಮಂತ್ರಿಗಳು ರೈತರು ಮತ್ತು ಹೋರಾಟಗಾರರೊಂದಿಗೆ ಕರೆದಿರುವ ಸಭೆಯ ವೇಳೆ, ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಬೃಹತ್ “ನಾಡ ಉಳಿಸಿ ಸಮಾವೇಶ” ನಡೆಯಲಿದೆ. ಇದರಲ್ಲಿ ನಾಡಿನ ಎಲ್ಲ ಭಾಗಗಳಿಂದ ಸಂಘಟನೆಗಳ ಕಾರ್ಯಕರ್ತರು, ಪ್ರಜಾಪ್ರಭುತ್ವದ ಪರ ಇರುವ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಮಿತಿ ಮಾಹಿತಿ ನೀಡಿದೆ. “ದೇವನಹಳ್ಳಿ ಹೋರಾಟ ಕೇವಲ ಸ್ಥಳೀಯ ಸಮಸ್ಯೆಯಲ್ಲ, ಇದು ರಾಜ್ಯದ ರೈತರ ಅಸ್ಮಿತೆ ಮತ್ತು ಕೃಷಿ ಸಂಸ್ಕೃತಿಯ ರಕ್ಷಣೆಯ ಹೋರಾಟ” ಎಂದು ಸಮಿತಿ ಮುಖಂಡರು ಪುನರುಚ್ಚರಿಸಿದರು.

ಸಭೆಯಲ್ಲಿ ಡಾ. ಜಿ. ರಾಮಕೃಷ್ಣ, ಜಾಣಗೆರೆ ವೆಂಕಟರಾಮಯ್ಯ, ಡಾ. ಬಂಜಗೆರೆ ಜಯಪ್ರಕಾಶ್, ಇಂದೂಧರ ಹೊನ್ನಾಪುರ, ಆರ್.ಜಿ. ಹಳ್ಳಿ ನಾಗರಾಜ್, ಗುರುಪ್ರಸಾದ್ ಕೆರಗೋಡು, ವಿ. ನಾಗರಾಜ್, ಜೆ.ಎಂ. ವೀರಸಂಗಯ್ಯ, ಚುಕ್ಕಿ ನಂಜುಂಡಸ್ವಾಮಿ, ಮೀನಾಕ್ಷಿ ಸುಂದರಂ, ಲಕ್ಷ್ಮಿ, ದೇವಿ, ಶ್ರೀನಿವಾಸ್ ಕಾರಹಳ್ಳಿ, ಡಿ.ಎಚ್. ಪೂಜಾರ್, ಪ್ರಭಾ ಬೆಳವಂಗಲ, ಕೆ.ವಿ. ಭಟ್, ಮಲ್ಲಿಗೆ ಸಿರಿಮನೆ, ನಾಗರಾಜ್ ಪೂಜಾರ್, ಶ್ರೀಮತಿ ವೀರಸಂಗಯ್ಯ ಮೊದಲಾದವರು ಇದ್ದರು.

ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟ:  ಜು.2ಕ್ಕೆ ಸಂತ್ರಸ್ತ ರೈತರಿಂದ  ಉಪವಾಸ ಸತ್ಯಾಗ್ರಹ-ವೀಡಿಯೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...