Homeಕರ್ನಾಟಕದೇವನಹಳ್ಳಿ ಭೂ ಸ್ವಾಧೀನ| ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಸಿಎಂ ಸಿದ್ದರಾಮಯ್ಯ

ದೇವನಹಳ್ಳಿ ಭೂ ಸ್ವಾಧೀನ| ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಈ ಸಂಬಂಧ ಕಾನೂನು ಸಮಸ್ಯೆ ನಿವಾರಿಸಲು ಸರ್ಕಾರಕ್ಕೆ ಹತ್ತು ದಿನಗಳ ಕಾಲಾವಾಕಾಶ ಬೇಕಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡು ಜುಲೈ 15 ರಂದು ರೈತ ಹೋರಾಟಗಾರರೊಂದಿಗೆ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಪೊಲೀಸ್ ಕ್ರಮ

ಎಂ ಎಲ್ ಸಿ ರವಿಕುಮಾರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಸೂಕ್ತ ಪೊಲೀಸ್ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ನಾಡ ಉಳಿಸಿ ಸಮಾವೇಶ: ‘ಕಾಂಗ್ರೆಸ್ ಕಾರ್ಪೊರೇಟ್ ತಾಳಕ್ಕೆ ಕುಣಿದರೆ ರೈತರ ಕಪ್ಪು ಚುಕ್ಕೆ’ – ಸುನಿಲಂ ನೇರ ಎಚ್ಚರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -