Homeಕರ್ನಾಟಕದೇವನಹಳ್ಳಿ ಭೂಸ್ವಾಧೀನ ವಿರೋಧಿ ಉಪವಾಸ ಸತ್ಯಾಗ್ರಹ: "ಫ್ಯಾಕ್ಟರಿಗಳಿಂದ ಅನ್ನ ಬೆಳೆಯಲು ಸಾಧ್ಯವೇ?" ನಟ ಕಿಶೋರ್ ಕುಮಾರ್...

ದೇವನಹಳ್ಳಿ ಭೂಸ್ವಾಧೀನ ವಿರೋಧಿ ಉಪವಾಸ ಸತ್ಯಾಗ್ರಹ: “ಫ್ಯಾಕ್ಟರಿಗಳಿಂದ ಅನ್ನ ಬೆಳೆಯಲು ಸಾಧ್ಯವೇ?” ನಟ ಕಿಶೋರ್ ಕುಮಾರ್ ಆಕ್ರೋಶ

- Advertisement -
- Advertisement -

ಬೆಂಗಳೂರು: ಅಭಿವೃದ್ಧಿಯ ಹೆಸರಿನಲ್ಲಿ ದೇವನಹಳ್ಳಿ ಭಾಗದಲ್ಲಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಗಳ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದೆ. ಇಂದು, ಜುಲೈ 2ರಂದು, ರೈತರು ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದ ನಾಡಕಚೇರಿ ಎದುರು ಬೃಹತ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೆ, ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆಲ ಹೋರಾಟಗಾರರು ಸಹ ಉಪವಾಸದಲ್ಲಿ ತೊಡಗಿದ್ದಾರೆ. ಒಂದು ಕಡೆ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದ್ದರೆ, ಇನ್ನೊಂದೆಡೆ ತೀವ್ರಗೊಂಡಿರುವ ರೈತರ ಭೂ ವಿರೋಧಿ ಹೋರಾಟವು ಸರ್ಕಾರಕ್ಕೆ ನೇರ ಸವಾಲೊಡ್ಡಿದೆ. ಈ ಹೋರಾಟಕ್ಕೆ ನಟ ಕಿಶೋರ್ ಕುಮಾರ್ ಧ್ವನಿಗೂಡಿಸಿದ್ದು, ರೈತರ ಭವಿಷ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

“ರೈತರು ತಮ್ಮ ಹೊಲ, ಗದ್ದೆಗಳಲ್ಲಿ ಮಾಡುವ ಕೌಶಲ್ಯಪೂರ್ಣ ಕೆಲಸಗಳನ್ನು ಫ್ಯಾಕ್ಟರಿಗಳಿಂದ ಕೊಡಲು ಸಾಧ್ಯವೇ? ಫ್ಯಾಕ್ಟರಿಗಳಿಂದ ಅನ್ನ ಬೆಳೆಯಲು ಸಾಧ್ಯವೇ?” ಎಂದು ಪ್ರಶ್ನಿಸಿರುವ ನಟ ಕಿಶೋರ್, ಆಧುನಿಕ ಕೈಗಾರಿಕೀಕರಣದ ಭ್ರಮೆಯಲ್ಲಿ ರೈತರ ಮೂಲ ಬದುಕು ಕಸಿದುಕೊಳ್ಳಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ದೇವನಹಳ್ಳಿ ರೈತರು ಭೂಸ್ವಾಧೀನದಿಂದಾಗಿ ತಮ್ಮ ಬದುಕಿನ ಮೂಲಾಧಾರವಾದ ಭೂಮಿಯನ್ನು ಕಳೆದುಕೊಂಡು ನಿರುದ್ಯೋಗಿಗಳಾಗುತ್ತಾರೆ ಎಂಬ ಆತಂಕವನ್ನು ನಟ ಕಿಶೋರ್ ಮತ್ತಷ್ಟು ಸ್ಪಷ್ಟಪಡಿಸಿದ್ದಾರೆ. “ಈ ರೈತರನ್ನೆಲ್ಲಾ ನಗರಕ್ಕೆ ವಲಸೆ ಬರುವಂತೆ ಮಾಡುತ್ತಾರೆ. ಇಲ್ಲಿ ಯಾವುದೋ ಒಂದು ಸೆಕ್ಯೂರಿಟಿ ಕೆಲಸ, ಕಸ ಗುಡಿಸುವ ಕೆಲಸವನ್ನು ಅವರು ಮಾಡಬೇಕಾಗುತ್ತದೆ. ಒಟ್ಟಿನಲ್ಲಿ ತನ್ನ ಮನಸ್ಸಿಗೆ ಬೇಕಾದಂತೆ ಸ್ವಾಭಿಮಾನದಿಂದ ಬದುಕಿದ್ದ ರೈತರನ್ನು ನಗರದಲ್ಲಿ ಕೂಲಿ ಕೆಲಸಕ್ಕೆ ಹಚ್ಚಲಾಗುತ್ತದೆ” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಹಳ್ಳಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದವರು ಸಹ ಒಂದು ರೀತಿಯ ನೆಮ್ಮದಿಯ ಜೀವನ ನಡೆಸುತ್ತಿದ್ದರು ಎಂಬುದನ್ನು ಸ್ಮರಿಸಿದ ಅವರು, ಭೂಮಿ ಇಲ್ಲದವರು ಸಹ ಹಳ್ಳಿಯಲ್ಲೇ ಕೂಲಿ ಮಾಡುತ್ತಿದ್ದರೂ ಬದುಕು ನೆಮ್ಮದಿಯಿಂದಿತ್ತು ಎಂದಿದ್ದಾರೆ. “ಒಟ್ಟಾರೆ, ರೈತರ ಈಗಿನ ನೆಮ್ಮದಿಯ ಜೀವನವನ್ನು ಕೆಡಿಸಿ, ಸರ್ಕಾರ ಅಥವಾ ಕಾರ್ಪೊರೇಟ್‌ಗಳು ಕೊಟ್ಟ ಸಂಬಳಕ್ಕೆ ಜೀವನಪೂರ್ತಿ ದುಡಿಯಬೇಕಾಗುತ್ತದೆ. ಅಲ್ಲಿಗೆ ಅವರ ಜೀವನ ಮುಗಿದು ಹೋಗುತ್ತದೆ” ಎಂದು ಭೂಸ್ವಾಧೀನದಿಂದ ರೈತರ ಬದುಕಿನ ಮೇಲೆ ಆಗುವ ತೀವ್ರ, ದೀರ್ಘಕಾಲೀನ ಪರಿಣಾಮವನ್ನು ಕಟುವಾಗಿ ವಿವರಿಸಿದ್ದಾರೆ.

ಅಭಿವೃದ್ಧಿಯ ಹೆಸರಿನಲ್ಲಿ ಈಗಾಗಲೇ ರಾಜ್ಯದ ಹಲವು ಕಡೆಗಳಲ್ಲಿ ಭೂ ಕಬಳಿಕೆಯಿಂದಾಗಿ ಸಾವಿರಾರು ರೈತರು ಏನೆಲ್ಲಾ ಅನುಭವಿಸುತ್ತಿದ್ದಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು, “ಮುಖ್ಯವಾಗಿ ನಮ್ಮ ನಾಡಿನ ಜನತೆ ಇದನ್ನು ನಮ್ಮ ಹೋರಾಟ ಎಂದು ತಿಳಿದುಕೊಂಡು, ಅರ್ಥಮಾಡಿಕೊಂಡು ಇಲ್ಲಿಗೆ ಬಂದು ರೈತರನ್ನು, ಇಲ್ಲಿಯ ಹೋರಾಟಗಾರರನ್ನು ಬೆಂಬಲಿಸಬೇಕು” ಎಂದು ನಟ ಕಿಶೋರ್ ಕುಮಾರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ದೇವನಹಳ್ಳಿ ರೈತರ ಭೂ ವಿರೋಧಿ ಹೋರಾಟದ ಕುರಿತು ನಾಡಿನೆಲ್ಲೆಡೆ ಸಾಕಷ್ಟು ಚರ್ಚೆ ನಡೆಯುತ್ತಿದ್ದು, ರಾಜ್ಯದಲ್ಲಿ ಇದು ಒಂದು ಪ್ರಮುಖ ವಿಷಯವಾಗಿ ಮಾರ್ಪಟ್ಟಿದೆ. ರೈತರ ಈ ಹೋರಾಟಕ್ಕೆ ನಂದಿಬೆಟ್ಟದಲ್ಲಿ ಸಭೆ ಸೇರಿರುವ ರಾಜ್ಯ ಸರ್ಕಾರ ಯಾವ ರೀತಿ ಸ್ಪಂದಿಸುತ್ತದೆ, ಯಾವ ನಿರ್ಧಾರಗಳನ್ನು ಕೈಗೊಳ್ಳುತ್ತದೆ ಎಂಬುದನ್ನು ಎಲ್ಲರೂ ಕಾದು ನೋಡುತ್ತಿದ್ದಾರೆ.

ಫ್ರೀಡಂ ಪಾರ್ಕ್‌ನಲ್ಲಿ ಹೋರಾಟಗಾರರಾದ ಡಿ.ಎಚ್ ಪೂಜಾರಿ, ಯಶವಂತ, ಎಸ್‌. ವರಲಕ್ಷ್ಮಿ, ದೇವಿ, ಲಕ್ಷ್ಮಣ ಮಂಡಲಗೇರಾ, ಮಲ್ಲಿಗೆ ಸಿರಿಮನೆ ಮತ್ತು ಪ್ರಭಾ ಬೆಳವಂಗಲ ಉಪವಾಸ ಕುಳಿತಿದ್ದಾರೆ. ಉಳಿದವರು ಅವರಿಗೆ ಸಾಥ್ ನೀಡಿದ್ದಾರೆ.

ಆರನೇ ದಿನಕ್ಕೆ ಕಾಲಿಟ್ಟ ‘ಭೂಮಿ ಸತ್ಯಾಗ್ರಹ’: ಫ್ರೀಡಂ ಪಾರ್ಕ್‌, ಚನ್ನರಾಯಪಟ್ಟಣದಲ್ಲಿ ನಿರಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಲಿಗಢ ಮುಸ್ಲಿಂ ವಿವಿ ಆವರಣದಲ್ಲಿ ಗುಂಡಿಕ್ಕಿ ಶಿಕ್ಷಕನ ಹತ್ಯೆ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ (ಎಎಂಯು)ದ ಶಿಕ್ಷಕರೊಬ್ಬರನ್ನು ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ (ಡಿ.24) ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಲ್ಲಿ ಭೀತಿ ಮೂಡಿಸಿದೆ. ಮೃತರನ್ನು ಎಎಂಯುನ ಎಬಿಕೆ ಯೂನಿಯನ್ ಹೈಸ್ಕೂಲ್‌ನ ಶಿಕ್ಷಕ...

ಮತ್ತೊಬ್ಬ ವಲಸೆ ಕಾರ್ಮಿಕನ ಗುಂಪು ಹತ್ಯೆ : ಆರು ಜನರ ಬಂಧನ

ಬುಧವಾರ (ಡಿ.24) ಒಡಿಶಾದ ಸಂಬಾಲ್‌ಪುರದಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ 30 ವರ್ಷದ ವಲಸೆ ಕಾರ್ಮಿಕರೊಬ್ಬರನ್ನು ಗುಂಪು ಹತ್ಯೆ ಮಾಡಲಾಗಿದೆ. ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...

ಉನ್ನಾವೋ ಅತ್ಯಾಚಾರ ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಇಬ್ಬರು ಮಹಿಳಾ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪಹಾಸ್ಯ : ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ನಕ್ಕ ಯುಪಿ ಸಚಿವ

ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟಿಸಿದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಓಂ ಪ್ರಕಾಶ್ ರಾಜ್‌ಭರ್ ಅಪಹಾಸ್ಯ ಮಾಡಿದ್ದು, "ಆಕೆಯ ಮನೆ ಉನ್ನಾವೋದಲ್ಲಿರುವಾಗ ದೆಹಲಿಯಲ್ಲಿ ಏಕಿದ್ದಾಳೆ?"...

ಹತ್ಯೆಯ ಕೆಲವೇ ಗಂಟೆಗಳ ಮೊದಲು ನಾನು ಹಮಾಸ್ ಮುಖ್ಯಸ್ಥರನ್ನು ಭೇಟಿಯಾಗಿದ್ದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹತ್ಯೆಯಾಗುವ ಕೆಲವೇ ಗಂಟೆಗಳ ಮೊದಲು ಟೆಹ್ರಾನ್‌ನಲ್ಲಿ ಹಮಾಸ್‌ನ ಮಾಜಿ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಅವರನ್ನು ಭೇಟಿಯಾಗಿದ್ದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಬಹಿರಂಗಪಡಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ, ಅಧ್ಯಕ್ಷ...

ಕರ್ನಾಟಕ ಜನಶಕ್ತಿ ಸಕ್ರಿಯ ಕಾರ್ಯಕರ್ತೆ, ಹೋರಾಟದ ಒಡನಾಡಿ ಕೆ.ಪದ್ಮಾ ಇನ್ನಿಲ್ಲ

ಹಿರಿಯ ಹೋರಾಟಗಾರ್ತಿ, ಕರ್ನಾಟಕ ಜನಶಕ್ತಿ ಸಂಘಟನೆಯ ಸಕ್ರಿಯ ಕಾರ್ಯಕರ್ತೆ ಕೆ ಪದ್ಮಾ ಅವರು ಹೋರಾಟದ ಬದುಕನ್ನು ಮುಗಿಸಿದ್ದಾರೆ. ಬುಧವಾರ ರಾತ್ರಿ, ಬೆಂಗಳೂರಿನಲ್ಲಿ ಕೊನೆಯುಸಿಳೆದಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು, ತಮ್ಮನ್ನು ಬಾಧಿಸುತ್ತಿದ್ದ...

ದೇಶದ ಹಲವೆಡೆ ಕ್ರೈಸ್ತರ ಮೇಲೆ ಮತಾಂಧ ಕೋಮುವಾದಿಗಳ ದಾಳಿ : ಕ್ರಿಸ್‌ಮಸ್ ಆಚರಣೆಗೆ ಅಡ್ಡಿ

ಪ್ರತಿ ವರ್ಷದಂತೆ ಈ ವರ್ಷವೂ ಡಿಸೆಂಬರ್ ತಿಂಗಳಲ್ಲಿ, ವಿಶೇಷವಾಗಿ ಡಿಸೆಂಬರ್ 25ರಂದು ಇಡೀ ಜಗತ್ತು ಕ್ರಿಸ್‌ಮಸ್ ಹಬ್ಬದ ಸಂಭ್ರಮದಲ್ಲಿದೆ. ಏಸು ಕ್ರಿಸ್ತನ ಜನ್ಮದಿನದ ಪ್ರಯುಕ್ತ ಜನರು ಗಡಿಗಳನ್ನು ಮೀರಿ ಪರಸ್ಪರ ಸಂತಸ ಹಂಚಿಕೊಳ್ಳುತ್ತಿದ್ದಾರೆ. ಈ...

ಹರಿಯಾಣ| ಕಳ್ಳತನ ಆರೋಪದ ಮೇಲೆ 12 ವರ್ಷದ ದಲಿತ ಬಾಲಕನಿಗೆ ಚಿತ್ರಹಿಂಸೆ; ಕಟ್ಟಿಹಾಕಿ ದೌರ್ಜನ್ಯ

12 ವರ್ಷದ ದಲಿತ ಬಾಲಕನ ಮೇಲೆ ಕಳ್ಳತನದ ಶಂಕೆಯಿಂದ ಹಲವಾರು ಗಂಟೆಗಳ ಕಾಲ ಚಿತ್ರಹಿಂಸೆ ನೀಡಿ ಅಕ್ರಮ ಬಂಧನದಲ್ಲಿಟ್ಟ ಆರೋಪದ ಮೇಲೆ ಕುಟುಂಬವೊಂದರ 10 ಸದಸ್ಯರ ವಿರುದ್ಧ ಹರಿಯಾಣದ ಪಲ್ವಾಲ್‌ನಲ್ಲಿ ಪೊಲೀಸರು ಪ್ರಕರಣ...

ಉನ್ನಾವೋ ಅತ್ಯಾಚಾರಿಯ ಶಿಕ್ಷೆ ಅಮಾನತು : ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಮೊರೆ ಹೋಗಲು ಮುಂದಾದ ಸಿಬಿಐ

ಉನ್ನಾವೋ ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತಿನಲ್ಲಿಟ್ಟ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಕೇಂದ್ರ ತನಿಖಾ ದಳ (ಸಿಬಿಐ) ಮುಂದಾಗಿದೆ ಎಂದು ಬುಧವಾರ (ಡಿ.24) ವರದಿಯಾಗಿದೆ. ಸಿಬಿಐ ಈ ಪ್ರಕರಣದ ತನಿಖೆ...

ಚಿತ್ರದುರ್ಗ | ಹೊತ್ತಿ ಉರಿದ ಖಾಸಗಿ ಬಸ್​​​​ : 10ಕ್ಕೂ ಹೆಚ್ಚು ಜನರು ಸಜೀವ ದಹನ, ಹಲವರಿಗೆ ಗಾಯ

ಖಾಸಗಿ ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದ ಪರಿಣಾಮ 10ಕ್ಕೂ ಹೆಚ್ಚು ಜನರು ಸಜೀವ ದಹನವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಗುರುವಾರ (ಡಿ.25) ನಡೆದಿದೆ. ರಾಷ್ಟ್ರೀಯ ಹೆದ್ದಾರಿ...