Homeಕರ್ನಾಟಕದೇವನಹಳ್ಳಿ ಭೂ ಸತ್ಯಾಗ್ರಹ 4ನೇ ದಿನ: ಸರ್ಕಾರ ಪಾಂಡವರ ಬದಲು ಕೌರವರ ಪರ ಇದೆ -...

ದೇವನಹಳ್ಳಿ ಭೂ ಸತ್ಯಾಗ್ರಹ 4ನೇ ದಿನ: ಸರ್ಕಾರ ಪಾಂಡವರ ಬದಲು ಕೌರವರ ಪರ ಇದೆ – ಸಿಪಿಎಂ ರಾಜ್ಯ ಕಾರ್ಯದರ್ಶಿ ಕೆ.ಪ್ರಕಾಶ್ ಆಕ್ರೋಶ

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ರೈತರ ಭೂ ಸತ್ಯಾಗ್ರಹ ಹೋರಾಟ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ಮಹತ್ವದ ಹೋರಾಟಕ್ಕೆ ನಾಡಿನ ಪ್ರಮುಖ ಚಿಂತಕರು, ಹೋರಾಟಗಾರರು ಮತ್ತು ವಿವಿಧ ಸಂಘಟನೆಗಳ ನಾಯಕರು ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಭೂ ಸತ್ಯಾಗ್ರಹದ ಕಾಂ. ಬಯ್ಯಾರೆಡ್ಡಿ ವೇದಿಕೆಯಲ್ಲಿ ಮಾತನಾಡಿದ ಸಿಪಿಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಕೆ.ಪ್ರಕಾಶ್, ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಈ ಹೋರಾಟ ಮಹಾಭಾರತದ ಕುರುಕ್ಷೇತ್ರ ಯುದ್ಧದಂತಿದೆ. ಹಾಗಾದರೆ, ಸರ್ಕಾರ ಯಾರ ಪರ ನಿಲ್ಲಬೇಕು? ಪಾಂಡವರ ಪರವೋ, ಕೌರವರ ಪರವೋ? ದುರದೃಷ್ಟವಶಾತ್, ಸರ್ಕಾರ ಪಾಂಡವರ ಪರವಾಗಿ ಕಾಣಿಸುತ್ತಿಲ್ಲ, ಅದು ಕೌರವರ ವೇಷ ತೊಟ್ಟುಕೊಂಡು ಆಟವಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫ್ಯಾಕ್ಟರಿ ಉಳಿಯಬೇಕು ಎನ್ನುತ್ತಿದ್ದಾರೆ” ಎಂದು ನೇರವಾಗಿ ಕುಟುಕಿದರು.

ದೇವನಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಫಾಕ್ಸ್‌ಕಾನ್ (Foxconn) ಕಂಪೆನಿ ಮೊಬೈಲ್ ಫೋನ್ ತಯಾರಿಕಾ ಘಟಕವನ್ನು ಸ್ಥಾಪಿಸುತ್ತಿದೆ. ಇಂತಹ ಕೈಗಾರಿಕೆಗಳಿಗೆ 6,000 ಕೋಟಿ ರೂ. ಸಬ್ಸಿಡಿ ನೀಡುವ ಸರ್ಕಾರದ ಘೋಷಣೆಯನ್ನು ಪ್ರಕಾಶ್ ಬಲವಾಗಿ ವಿರೋಧಿಸಿದರು. “ಸಾಮಾನ್ಯ ಜನರಿಗೆ ಒಂದು ಹೊತ್ತಿನ ಊಟಕ್ಕೂ ಸಂಕಷ್ಟವಿದೆ. ರೈತರು ತಮ್ಮ ಭೂಮಿಯನ್ನು ಉಳಿಸಿಕೊಡಿ ಎಂದು ಆಗ್ರಹಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ವಿದೇಶಿ ಕಂಪನಿಗಳಿಗೆ ಸಾವಿರಾರು ಕೋಟಿ ಸಬ್ಸಿಡಿ ನೀಡುವುದು ಯಾವ ರೀತಿಯ ಕೈಗಾರಿಕಾ ನೀತಿ? ರಾಜ್ಯದ ಜನರ ತೆರಿಗೆ ಹಣವನ್ನು ಬಂಡವಾಳಗಾರರಿಗೆ ಉಚಿತವಾಗಿ ನೀಡಲು ಫ್ಯಾಕ್ಟರಿಗಳು ಬೇಕೆ?” ಎಂದು ಕಿಡಿಕಾರಿದರು. “ಸಿದ್ದರಾಮಯ್ಯನವರೇ, ನೀವು ಮಾಡುತ್ತಿರುವ ಕೆಲಸವನ್ನು ರಾಜ್ಯದ ಜನತೆ ಕಣ್ಣುಮುಚ್ಚಿಕೊಂಡು ನೋಡುತ್ತಿಲ್ಲ. ಇಂತಹ ಫ್ಯಾಕ್ಟರಿಗಳು ನಮಗೆ ಬೇಕಾಗಿಲ್ಲ” ಎಂದು ಎಚ್ಚರಿಕೆ ನೀಡಿದರು.

ಕೋಲಾರದ ನರಸಾಪುರ ಬಳಿ ಇರುವ ವಿಸ್ಟ್ರಾನ್ ಕಂಪನಿಯು ಈಗ ಟಾಟಾ ಎಲೆಕ್ಟ್ರಾನಿಕ್ಸ್  ಒಡೆತನದಲ್ಲಿದೆ. ಈ ಘಟಕವನ್ನು ಉದಾಹರಿಸಿದ ಪ್ರಕಾಶ್, “ಅಲ್ಲಿ 30 ಸಾವಿರಕ್ಕೂ ಹೆಚ್ಚು ರೈತಾಪಿ ವರ್ಗದ ಯುವಕ-ಯುವತಿಯರು ಕೆಲಸ ಮಾಡುತ್ತಿದ್ದಾರೆ. ಆದರೆ, ಅದರಲ್ಲಿ ಕೇವಲ ಒಂದು ಸಾವಿರ ಮಂದಿಗೆ ಮಾತ್ರ ಖಾಯಂ ಉದ್ಯೋಗವಿದೆ. ಕೋಲಾರ, ಮಾಲೂರು, ಹೊಸಕೋಟೆ ಸುತ್ತಮುತ್ತಲಿನ ಮಕ್ಕಳಿಗೆ ಅರೆಕಾಲಿಕ, ಅಶ್ಲೀಲ ಕೆಲಸ, ಪುಕ್ಕಟೆ ಸಂಬಳಕ್ಕೆ ದುಡಿಸಿಕೊಳ್ಳುವ ನೀತಿಯನ್ನು ಸಿದ್ದರಾಮಯ್ಯ ಮತ್ತು ಎಂ.ಬಿ. ಪಾಟೀಲ್ ನೇತೃತ್ವದ ಸರ್ಕಾರ ಜಾರಿಗೆ ತಂದಿದೆ. ಸರ್ಕಾರವೇ 6-7 ಸಾವಿರ ಕೋಟಿ ರೂ. ಸಬ್ಸಿಡಿ ಕೊಟ್ಟು ಇಂತಹ ಕಂಪನಿಗಳಿಗೆ ಮತ್ತಷ್ಟು ಲೂಟಿ ಮಾಡಲು ಉತ್ತೇಜನ ನೀಡುತ್ತಿದೆ. ಇದನ್ನೇ ನಾವು ನಿಮ್ಮಿಂದ, ಕಾಂಗ್ರೆಸ್ ಸರ್ಕಾರದಿಂದ ನಿರೀಕ್ಷಿಸಿದ್ದು? ನೀವು ಯಾರ ಪರವಾಗಿ ಇದ್ದೀರಿ?” ಎಂದು ತೀವ್ರವಾಗಿ ಪ್ರಶ್ನಿಸಿದರು.

ಈ ಭೂ ಸತ್ಯಾಗ್ರಹ ವೇದಿಕೆಗೆ ಹಿರಿಯ ವಕೀಲರಾದ ಪ್ರೊ. ರವಿವರ್ಮಕುಮಾರ್, ಚಿಂತಕರಾದ ಡಾ.‌ಜಿ‌. ರಾಮಕೃಷ್ಣ, ಪ್ರೊ.‌ಮರುಳಸಿದ್ಧಪ್ಪ, ಜಾನಪದ ಅಕಾಡೆಮಿಯ ಅಧ್ಯಕ್ಷರೂ ಆಗಿದ್ದ ಹಿರಿಯ ಕಲಾವಿದ ಪಿಚ್ಚಳ್ಳಿ ಶ್ರೀನಿವಾಸ್, ಹಿರಿಯ ಚಿಂತಕ ಸುಬ್ಬು ಹೊಲೆಯಾರ್ ಮುಂತಾದ ಅನೇಕರು ಭೇಟಿ ನೀಡಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ರಾಜಕಾರಣಿಗಳಾದ ಮಹಿಮಾ ಪಟೇಲ್ ಮತ್ತು ಬಿ.ಆರ್. ಪಾಟೀಲ್ ಅವರೂ ಸಹ ರಾಜಕಾರಣಿಗಳಾಗಿರದೆ, ಹೋರಾಟಗಾರರಾಗಿ ರೈತರಿಗೆ ಬೆಂಬಲ ನೀಡಲು ಬಂದಿರುವುದಾಗಿ ಹೇಳಿದ್ದಾರೆ. ವಿವಿಧ ಚಳುವಳಿಗಳ ಮುಖಂಡರಾದ ಸಿದ್ಧನಗೌಡ ಪಾಟೀಲ್, ಮಾವಳ್ಳಿ ಶಂಕರ್, ಸಾತಿ ಸುಂದರೇಶ್, ಮೀನಾಕ್ಷಿ ಸುಂದರಂ, ಬಡಗಲಪುರ ನಾಗೇಂದ್ರ, ವರಲಕ್ಷ್ಮಿ, ಚುಕ್ಕಿ ನಂಜುಂಡಸ್ವಾಮಿ, ಕ್ಲಿಫ್ಟನ್ ರೊಜಾರಿಯೋ, ನಿರ್ಮಲ, ಕೆಜೆಎಸ್ ಮರಿಯಪ್ಪ ಮೊದಲಾದವರು ಹೋರಾಟದಲ್ಲಿ ಭಾಗವಹಿಸಿದ್ದರು.

ಜುಲೈ 4ಕ್ಕೆ ‘ನಾಡ ಉಳಿಸಿ ಸಮಾವೇಶ’: ದೇವನಹಳ್ಳಿ ಭೂಸ್ವಾಧೀನ ಕೈಬಿಡುವಂತೆ ರೈತರಿಂದ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...