Homeಮುಖಪುಟ'ವೈಕಂ ಪ್ರಶಸ್ತಿ' ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

‘ವೈಕಂ ಪ್ರಶಸ್ತಿ’ ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

- Advertisement -
- Advertisement -

ಕೇರಳದ ದೇವಸ್ಥಾನ ಪ್ರವೇಶದ ‘ವೈಕಂ’ ಹೋರಾಟದ ನೆನಪಿಗೆ ತಮಿಳುನಾಡು ಸರ್ಕಾರ ಕೊಡಮಾಡುವ 2024ನೇ ಸಾಲಿನ ಚೊಚ್ಚಲ ‘ವೈಕಂ ಪ್ರಶಸ್ತಿ’ಯನ್ನು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಇಂದು ಸ್ವೀಕರಿಸಿದರು.

ಕೇರಳದ ವೈಕಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಪೆರಿಯಾರ್ ಸ್ಮಾರಕ ಮತ್ತು ಗ್ರಂಥಾಲಯವನ್ನು’ ಉದ್ಘಾಟಿಸಿದ ಬಳಿಕ, ದೇವನೂರ ಮಹಾದೇವ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಶಸ್ತಿ ಪ್ರದಾನ ಮಾಡಿದರು.

ಪೆರಿಯಾರ್‌ ರಾಮಸ್ವಾಮಿ ಅವರ ನೇತೃತ್ವದಲ್ಲಿ ಕೇರಳದ ವೈಕಂನಲ್ಲಿ ನಡೆದಿದ್ದ ವೈಕಂ ಹೋರಾಟಕ್ಕೆ ಇದೀಗ ನೂರು ವರ್ಷ ತುಂಬಿದೆ. ಆದ್ದರಿಂದ, ಶತಮಾನ ಸಮಾರಂಭ ಮತ್ತು ಪೆರಿಯಾರ್‌ ಸ್ಮಾರಕ ಉದ್ಘಾಟನಾ ಕಾರ್ಯಕ್ರವನ್ನು ಕೇರಳದ ವೈಕಂದಲ್ಲಿ ತಮಿಳುನಾಡು ಸರ್ಕಾರದಿಂದ ಗುರುವಾರ ಹಮ್ಮಿಕೊಳ್ಳಲಾಗಿತ್ತು. ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌, ಕೇರಳ ಸಿಎಂ ಪಿಣರಾಯ್‌ ವಿಜಯನ್‌ ಪಾಲ್ಗೊಂಡಿದ್ದರು. ಇದೇ ವೇದಿಕೆ ಕಾರ್ಯಕ್ರಮದಲ್ಲಿ ದೇವನೂರ ಮಹದೇವ ಅವರಿಗೆ ವೈಕಂ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಸ್ವೀಕರಿಸಿದ ದೇವನೂರ ಮಹಾದೇವ, ತಾವು ಬರೆದಿರುವ ʻಆರ್‌ಎಸ್‌ಎಸ್‌ ಆಳ ಅಗಲʼ ಪುಸ್ತಕದ ಕನ್ನಡ, ಇಂಗ್ಲಿಷ್‌ ಮತ್ತು ಮಲೆಯಾಳಂ ಅವತರಣಿಯನ್ನು ಕೇರಳ ಸಿಎಂ ವಿಜಯನ್‌ ಅವರಿಗೆ, ಕನ್ನಡ, ಇಂಗ್ಲಿಷ್‌, ತಮಿಳು ಅವತರಣಿಯನ್ನು ತಮಿಳುನಾಡು ಸಿಎಂ ಸ್ಟಾಲಿನ್‌ ಅವರಿಗೆ ನೀಡಿದರು.

“ತಂಥೈ ಪೆರಿಯಾರ್ ಅವರ ವಿಚಾರವಾದಿ ತತ್ವಗಳ ಅನುಯಾಯಿಯಾಗಿ, ಖ್ಯಾತ ಸಾಹಿತಿ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ದಣಿವರಿಯದ ಪ್ರತಿಪಾದಕರಾದ ದೇವನೂರು ಮಹಾದೇವ ಅವರಿಗೆ ಚೊಚ್ಚಲ ‘ವೈಕಂ ಪ್ರಶಸ್ತಿ’ ಪ್ರದಾನ ಮಾಡಲು ನಾನು ಹೆಮ್ಮೆಪಡುತ್ತೇನೆ. ಅವರ ಕೃತಿಗಳು ಅಸಮಾನತೆಗಳನ್ನು ಎದುರಿಸಲು ಮತ್ತು ಸಮಾನ ಸಮಾಜವನ್ನು ಮುನ್ನಡೆಸಲು ಸಹಕಾರಿಯಾಗಿದೆ” ಎಂದು ಪ್ರಶಸ್ತಿ ಪ್ರದಾನದ ಬಳಿಕ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

“ವೈಕಮ್‌ನಲ್ಲಿ ಈ ಪ್ರಶಸ್ತಿಯನ್ನು ನೀಡುವುದು ಆಳವಾದ ಮಹತ್ವವನ್ನು ಹೊಂದಿದೆ. ಏಕೆಂದರೆ, ಇಲ್ಲಿಯೇ ಪೆರಿಯಾರ್ ಅಸ್ಪೃಶ್ಯತೆ ವಿರುದ್ಧ ಐತಿಹಾಸಿಕ ಚಳುವಳಿಯನ್ನು ಮುನ್ನಡೆಸಿದರು. ಸಾಮಾಜಿಕ ಸಮಾನತೆ ಮತ್ತು ನ್ಯಾಯದ ಅನ್ವೇಷಣೆಯಲ್ಲಿ ದೇವನೂರು ಮಹಾದೇವ ಅವರ ಕಾರ್ಯವು ನಮಗೆ ಮತ್ತು ಭವಿಷ್ಯದ ಪೀಳಿಗೆಗೆ ಸ್ಫೂರ್ತಿಯಾಗಲಿ” ಎಂದು ಸ್ಟಾಲಿನ್ ಹೇಳಿದ್ದಾರೆ.

ವೈಕಂ ಪ್ರಶಸ್ತಿಯು ₹5 ಲಕ್ಷ ನಗದು ಮತ್ತು ಸ್ವರ್ಣಲೇಪಿತ ಪದಕವನ್ನು ಒಳಗೊಂಡಿದೆ. ಸಮಾಜದಲ್ಲಿ ತುಳಿತಕ್ಕೊಳಗಾದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ಗಣ್ಯ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ವೈಕಂ ಪ್ರಶಸ್ತಿ ನೀಡಲಾಗುತ್ತದೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.

ಇದನ್ನೂ ಓದಿ; ಗುಜರಾತ್‌ನಲ್ಲಿ ಲಾರಿ ಅಪಘಾತ; ಕೆಆರ್‌ಎಸ್‌ ಪಕ್ಷದ ಕಾರ್ಯಾಧ್ಯಕ್ಷ ಲಿಂಗೇಗೌಡ ಸೇರಿದಂತೆ ಇಬ್ಬರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...