Homeಮುಖಪುಟಕೇರಳ: ದಲಿತ ವ್ಯಕ್ತಿಯನ್ನು ಅರ್ಚಕರಾಗಿ ನೇಮಿಸುತ್ತಿರುವ ದೇವಸ್ವಂ ಬೋರ್ಡ್!

ಕೇರಳ: ದಲಿತ ವ್ಯಕ್ತಿಯನ್ನು ಅರ್ಚಕರಾಗಿ ನೇಮಿಸುತ್ತಿರುವ ದೇವಸ್ವಂ ಬೋರ್ಡ್!

- Advertisement -
- Advertisement -

ಇತಿಹಾಸದಲ್ಲೇ ಇದೇ ಮೊದಲನೆ ಬಾರಿಗೆ ಕೇರಳದ ತಿರುವಾಂಕೂರು ದೇವಸ್ವಂ ಬೋರ್ಡ್(TDB)ನ ಅಡಿಯಲ್ಲಿ ನಿರ್ವಹಣೆಯಾಗುತ್ತಿರುವ ದೇವಾಲಯವೊಂದಕ್ಕೆ ಪರಿಶಿಷ್ಟ ಪಂಗಡದ ವ್ಯಕ್ತಿ ಅರ್ಚಕರಾಗಿ ನೇಮಕವಾಗಲಿದ್ದಾರೆ.

TDB ಯೂ ಸ್ವಾಯತ್ತ ಸಂಸ್ಥೆಯಾಗಿದ್ದು, ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನ ಸೇರಿದಂತೆ ಕೇರಳದ ದಕ್ಷಿಣದಲ್ಲಿ 1,200 ದೇವಾಲಯಗಳನ್ನು ನಿರ್ವಹಿಸುತ್ತಿದೆ. ಈ ದೇವಾಲಯಗಳಲ್ಲಿ 18 ಪರಿಶಿಷ್ಟ ಜಾತಿ ಹಾಗೂ 1 ಪರಿಶಿಷ್ಟ ಪಂಗಡದ ಅರ್ಚಕರು ಸೇರಿ ಒಟ್ಟು 19 ಜನರನ್ನು ನೇಮಿಸಲು TDB ನಿರ್ಧರಿಸಿದೆ.

ಇದನ್ನೂ ಓದಿ: ‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

”TDB ಅಡಿಯಲ್ಲಿ ಬರುವ ದೇವಾಲಯದಲ್ಲಿ ಪರಿಶಿಷ್ಟ ಪಂಗಡದ ವ್ಯಕ್ತಿಯನ್ನು ಅರ್ಚಕನನ್ನಾಗಿ ನೇಮಕ ಮಾಡುತ್ತಿರುವುದು TDB ಯ ಇತಿಹಾಸದಲ್ಲೇ ಮೊದಲು” ಎಂದು ರಾಜ್ಯ ದೇವಸ್ವಂ ಸಚಿವ ಕಡಕಂಪಲ್ಲಿ ಸುರೇಂದ್ರನ್ ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಅರ್ಚಕರನ್ನು ವಿಶೇಷ ನೇಮಕಾತಿ ಮೂಲಕ ನಿಯೋಜಿಸಲಾಗಿದೆ ಎಂದಿರುವ ಅವರು, 2017 ರಲ್ಲಿ ಪ್ರಕಟಿಸಲಾದ ರ್‍ಯಾಂಕ್ ಲಿಸ್ಟ್‌ನಲ್ಲಿ ತಿರುವಾಂಕೂರು ದೇವಸ್ವಂ ಮಂಡಳಿಯ ಅರೆ ಕಾಲಿಕ ಅರ್ಚಕರ ಹುದ್ದೆಗೆ ಇದುವರೆಗೆ 310 ಜನರು ಆಯ್ಕೆಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

“ಆ ಸಮಯದಲ್ಲಿ ಪರೀಕ್ಷೆಗೆ ಸಾಕಷ್ಟು ಅರ್ಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಇಲ್ಲದೇ ಇದ್ದುದರಿಂದ, ವಿಶೇಷ ಅಧಿಸೂಚನಗೆ ಅನುಗುಣವಾಗಿ ಈ ಪ್ರತ್ಯೇಕ ರ್‍ಯಾಂಕ್ ಲಿಸ್ಟ್‌ ಅನ್ನು ಸಿದ್ಧಪಡಿಸಲಾಗಿತ್ತು. ಇದನ್ನು ನವೆಂಬರ್ 5 ರಂದು ಪ್ರಕಟಿಸಲಾಗಿತ್ತು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ ಅತ್ಯುತ್ತಮ ಆಡಳಿತ ರಾಜ್ಯ: ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಯಲ್ಲಿ ಬೆಂಬಲಿಸಿಲ್ಲ ಎಂದು ದಲಿತರ ಮೇಲೆ ಹಲ್ಲೆ ಪ್ರಕರಣ: YSRCP ಮುಖಂಡನಿಗೆ ಜೈಲು

0
1996ರಲ್ಲಿ ನಡೆದಿದ್ದ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖಂಡ ತೋಟ ತ್ರಿಮೂರ್ತಿಲು ಸೇರಿದಂತೆ ಒಂಬತ್ತು ಮಂದಿಯನ್ನು ವಿಶಾಖಪಟ್ಟಣ ನ್ಯಾಯಾಲಯವು ದೋಷಿ ಎಂದು ಘೋಷಿಸಿ...