Homeಕರ್ನಾಟಕಪಠ್ಯಪುಸ್ತಕ ವಾಪಸಾತಿಗೆ ದೇವೇಗೌಡರ ಪಟ್ಟು; ಸಿಎಂಗೆ ಮಾಜಿ ಪ್ರಧಾನಿ ಪತ್ರ

ಪಠ್ಯಪುಸ್ತಕ ವಾಪಸಾತಿಗೆ ದೇವೇಗೌಡರ ಪಟ್ಟು; ಸಿಎಂಗೆ ಮಾಜಿ ಪ್ರಧಾನಿ ಪತ್ರ

- Advertisement -
- Advertisement -

ಮರು ಪರಿಷ್ಕರಣೆಗೊಂಡ ಪಠ್ಯಪುಸ್ತಕಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದಾರೆ.

ಪಠ್ಯಪುಸ್ತಕಗಳ ಮರು ಪರಿಷ್ಕರಣೆಯಲ್ಲಿ ಆಗಿರುವ ಅನ್ಯಾಯಗಳ ವಿರುದ್ಧ ದಿನಾಂಕ 18.06.2022ರಂದು ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ಸಮಾವೇಶದ ಮನವಿ ಪತ್ರವನ್ನೂ ದೇವೇಗೌಡರು ಲಗತ್ತಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪಠ್ಯಪುಸ್ತಕಗಳ ಮರು ಪರಿಷ್ಕರಣೆಗೆ ನೇಮಿಸಿದ ಸಮಿತಿಯ ಅಧ್ಯಕ್ಷರು ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ಅವಮಾನ ಮಾಡಿರುತ್ತಾರೆ. ನಾಡಗೀತೆಯನ್ನು ಅಸಭ್ಯವಾಗಿ ತಿರುಚಿದವರಿಗೆ ಬಹುಮಾನ ನೀಡುತ್ತೇನೆಂದು ಹೇಳಿದ್ದು ಕೂಡ ಅವರಿಗೆ ಮಾಡಿದ ದೊಡ್ಡ ಅವಮಾನವೇ ಆಗಿದೆ” ಎಂದು ತಿಳಿಸಿದ್ದಾರೆ.

“ನಾಡಧ್ವಜವನ್ನು ಒಳ ಉಡುಪಿಗೆ ಹೋಲಿಸಿದ್ದೂ ನಾಡ ಅಸ್ಮಿತೆಗೆ ಮಾಡಿದ ಅವಮಾನವಾಗಿದೆ. ಜೊತೆಗೆ ಡಾ.ಅಂಬೇಡ್ಕರ್ ಅವರನ್ನೂ ಹಂಗಿಸಿದ್ದಾರೆ. ಇಂಥ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ಮೊದಲ ತಪ್ಪು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮರು ಪರಿಷ್ಕರಣೆಯಲ್ಲಿ ಮಾಡಿರುವ ತಪ್ಪುಗಳಂತೂ ಅಸಂಖ್ಯಾತ, ಸಮಾಜ ವಿಜ್ಞಾನ ಪಠ್ಯಪುಸ್ತಕದ ಏಕೀಕರಣ ಪಾಠದಿಂದ ಕುವೆಂಪು ಅವರ ಭಾವಚಿತ್ರವನ್ನು ತೆಗೆದು ಹಾಕಲಾಗಿದೆ. ಬಸವಣ್ಣನವರ ಚಳವಳಿಯ ಆಶಯವುಳ್ಳ ಭಾಗಗಳನ್ನು ಕೈಬಿಡಲಾಗಿದೆ. ಸಿದ್ಧಗಂಗೆ ಮತ್ತು ಆದಿಚುಂಚನಗಿರಿ ಶ್ರೀಗಳ ಸೇವೆಯ ವಿವರಗಳನ್ನು ತೆಗೆಯಲಾಗಿದೆ ಎಂದು ವಿಷಾದಿಸಿದ್ದಾರೆ.

ಅಂಬೇಡ್ಕರ್ ಅವರಿಗೆ ‘ಸಂವಿಧಾನ ಶಿಲ್ಪಿ’ ಎಂದಿದ್ದ ವಿಶೇಷಣವನ್ನು ತೆಗೆಯಲಾಗಿದೆ. ಅಕ್ಕ, ಕನಕ, ಪುರಂದರ, ಶರೀಫರಂತಹ ಮಹಾನ್ ದಾರ್ಶನಿಕ ಸಂತರ ಪಠ್ಯಗಳನ್ನೇ ತೆಗೆಯಲಾಗಿದೆ. ಕೆಂಪೇಗೌಡ, ಸುರಪುರ ನಾಯಕರ ವಿಷಯಗಳನ್ನು ಕಡಿತಗೊಳಿಸಲಾಗಿದೆ. ಡಾ.ಅಂಬೇಡ್ಕರ್ ಮತ್ತು ಕುವೆಂಪು ಅವರು ಸಾರಿದ ಸಾಮಾಜಿಕ ನ್ಯಾಯ, ಸಮಾನತೆ, ಜಾತ್ಯತೀತತೆ ಮತ್ತು ವಿಶ್ವಮಾನವತ್ವದ ಪರಿಕಲ್ಪನೆಗಳನ್ನು ಕಡೆಗಣಿಸಿರುವುದು ಪರಿಷ್ಕರಣೆಯಲ್ಲಿ ಎದ್ದು ಕಾಣುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಘೋಷಣೆ

ಪಠ್ಯಪುಸ್ತಕಗಳಲ್ಲಿನ ಅಸಂಖ್ಯಾತ ದೋಷ ಮತ್ತು ಅನ್ಯಾಯಗಳನ್ನು ಕೇವಲ ತಪ್ಪೋಲೆ ಅಥವಾ ಪ್ರತ್ಯೇಕ ಪುಟಗಳ ಮುದ್ರಣದಿಂದ ಸರಿಪಡಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಪುನರ್ ಪರಿಷ್ಕರಣೆಯ ಪಠ್ಯಪುಸ್ತಕಗಳನ್ನು ವಾಪಸ್ ಪಡೆದು, ಹಿಂದೆ ಇದ್ದ ಬರಗೂರು ರಾಮಚಂದ್ರಪ್ಪರವರ ನೇತೃತ್ವದ 27, ಸಮಿತಿಗಳು ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನೇ ಈ ವರ್ಷ ಮುಂದುವರೆಸುವುದು ಸೂಕ್ತವೆಂದು ನಾನು ಕೂಡ ಅಭಿಪ್ರಾಯ ಪಡುತ್ತೇನೆ ಎಂದಿದ್ದಾರೆ.

ಈಗ ತಮಗೆ ಕಳುಹಿಸುತ್ತಿರುವ ‘ವಿಶ್ವಮಾನವ ಕುವೆಂಪು ಹೋರಾಟ ಸಮಿತಿ’ಯ ಹಕ್ಕೊತ್ತಾಯ ಪತ್ರದ ಅಂಶಗಳನ್ನು ನಾನು ಕೂಡ ಬೆಂಬಲಿಸುತ್ತಾ, ಈ ವಿಷಯವಾಗಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಶಿಸುತ್ತೇನೆ ಎಂದು ಒತ್ತಾಯಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಾರಾಷ್ಟ್ರ ಸರ್ಕಾರ

50ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ, ಬಹುಮತ ಸಾಬೀತುಪಡಿಸುತ್ತೇನೆ: ಬಂಡಾಯ ನಾಯಕ ಏಕನಾಥ್ ಶಿಂಧೆ

0
ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್‌ ಕೋಶ್ಯಾರಿ ಅವರು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಗೆ ಬಹುಮತ ಸಾಬೀತು ಪಡಿಸುವಂತೆ ಸೂಚಿಸಿದ ಬೆನ್ನಲ್ಲೇ, ಬಂಡಾಯ ಶಿವಸೇನೆ ನಾಯಕ ಏಕನಾಥ್ ಶಿಂಧೆ ಇಂದು ತಮ್ಮದೇ ಪಕ್ಷದ 50 ಶಾಸಕರು...