Homeಕರ್ನಾಟಕನಾಳೆ ಕಾರ್ಯಕ್ರಮವಿದ್ದಾಗ ದೇವೇಗೌಡರಿಗೆ ಪತ್ರ ಬಂದಿದ್ದು ಮಧ್ಯರಾತ್ರಿ 12.30ಕ್ಕೆ: ಜೆಡಿಎಸ್‌ ಆಕ್ರೋಶ

ನಾಳೆ ಕಾರ್ಯಕ್ರಮವಿದ್ದಾಗ ದೇವೇಗೌಡರಿಗೆ ಪತ್ರ ಬಂದಿದ್ದು ಮಧ್ಯರಾತ್ರಿ 12.30ಕ್ಕೆ: ಜೆಡಿಎಸ್‌ ಆಕ್ರೋಶ

ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ದೇವೇಗೌಡರನ್ನು ಕರೆಯಲಾಗಿತ್ತು ಎಂದಿರುವ ಬಿಜೆಪಿಗೆ ಜೆಡಿಎಸ್‌ ತಿರುಗೇಟು ನೀಡಿದೆ.

- Advertisement -
- Advertisement -

“ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ! ಆದರೆ; ಮುಖ್ಯಮಂತ್ರಿಗಳೇ ಪತ್ರ ಬರೆದು ಎಚ್‌.ಡಿ.ದೇವೇಗೌಡ ಅವರನ್ನು ಅವರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ ಬಿಜೆಪಿ ಸರಕಾರ, ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ” ಎಂದು ಜೆಡಿಎಸ್‌ ಆಕ್ರೋಶ ವ್ಯಕ್ತಪಡಿಸಿದೆ.

“ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಎಚ್‌.ಡಿ.ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ” ಎಂದು ಶುಕ್ರವಾರ ಜೆಡಿಎಸ್‌ ಸರಣಿ ಟ್ವೀಟ್ ಮಾಡಿತ್ತು. ಅದರ ಬೆನ್ನಲ್ಲೇ, ದೇವೇಗೌಡರಿಗೆ ಮುಖ್ಯಮಂತ್ರಿಯವರು ಬರೆದಿರುವ ಪತ್ರವನ್ನು ಬಿಜೆಪಿಯವರು ಪ್ರಸ್ತಾಪಿಸಿದ್ದರು. ಆದರೆ ಜೆಡಿಎಸ್‌- ಈ ವಾದವನ್ನು ನಿರಾಕರಿಸಿದೆ. ಕಾರ್ಯಕ್ರಮ ಒಂದು ದಿನ ಇರುವಾಗ ಮಾತ್ರ ಆಹ್ವಾನ ನೀಡಲಾಗಿತ್ತು ಎಂದು ಸ್ಪಷ್ಟಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟಿಸಿದೆ. ಸರಿ; ನವೆಂಬರ್‌ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ?” ಎಂದು ಪ್ರಶ್ನಿಸಿದೆ.

“ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ, ಹೇಗೆ? ಘನವೇತ್ತ ಮಾನ್ಯ ಮುಖ್ಯಮಂತ್ರಿಗಳು ಬರೆದ ʼಘನವೇತ್ತʼ ಪತ್ರವನ್ನೊಮ್ಮೆ ʼಸಂಘಸಂಸ್ಕಾರʼದ ಬಿಜೆಪಿಗರು ಗಮನಿಸಬೇಕು. ಪತ್ರದಲ್ಲಿ ಮಾಜಿ ಪ್ರಧಾನಿಗಳ ಹೆಸರೆಲ್ಲಿ ಬರೆಯಲ್ಪಟ್ಟಿದೆ? (ಕೊನೆಯಲ್ಲಿ) ಕನ್ನಡ ನೆಲದ ಏಕೈಕ ಪ್ರಧಾನಿಯಾಗಿದ್ದ ಮೇರು ನಾಯಕರಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ?” ಎಂದು ಹರಿಹಾಯ್ದಿದೆ.

“ಮರುದಿನ 12.50ರ ಸಮಾರಂಭಕ್ಕೆ ರಾತ್ರಿ 9 ಗಂಟೆಗೆ ಮಾಜಿ ಪ್ರಧಾನಿಗಳಿಗೆ ಕಾಟಾಚಾರದ ಕರೆ ಮಾಡಿದ ಮುಖ್ಯಮಂತ್ರಿಗಳು, ತಾವು ಬರೆದ ಪತ್ರವನ್ನು ತಲುಪಿಸಿದ್ದು ಮಧ್ಯರಾತ್ರಿ 12.30 ಗಂಟೆಗೆ! ಹಾಗಾದರೆ, ಅವರ ಮೊದಲ ಪತ್ರ ಹೋಗಿದ್ದು ಯಾರಿಗೆ? ಇಂಥ ಹಿರಿಯರ ವಿಷಯದಲ್ಲಿ ಜಬಾಬ್ದಾರಿ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ವರ್ತಿಸುವ ರೀತಿ ಹೀಗೇನಾ?” ಎಂದು ಕೇಳಿದೆ.

“ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ. ಸತ್ಯ ಹೇಳುವ ದಮ್ಮು, ತಾಕತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ” ಎಂದು ಪತ್ರವನ್ನು ಲಗತ್ತಿಸಿರುವ ಜೆಡಿಎಸ್‌, ಪತ್ರ ಬರೆಯಲಾಗಿರುವ ದಿನಾಂಕವನ್ನು ಗುರುತುಹಾಕಿ ಟ್ವೀಟ್ ಮಾಡಿದೆ.

“ಇನ್ನು ಕನ್ನಡದ ಆಸ್ಮಿತೆ ಪ್ರಶ್ನೆ. ಬಿಜೆಪಿಗೆ ನಾಚಿಕೆಯಾಗಬೇಕು, ಹಿಂದಿ ಹೇರಿಕೆ ವಾಕರಿಕೆ ಬರುವಷ್ಟಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಪಂಗನಾಮ, ಈ ನೆಲದ ಸಂಸ್ಕೃತಿ, ಭಾಷೆ, ಆಚಾರ-ವಿಚಾರಗಳನ್ನು ಹತ್ತಿಕ್ಕಿ,ಇಡೀ ದಕ್ಷಿಣ ಭಾರತೀಯರನ್ನು ದೆಹಲಿ ಗುಲಾಮರನ್ನಾಗಿ ಮಾಡಲು ಹೊರಟಿರುವ ಬಿಜೆಪಿಗರಾ ಕನ್ನಡದ ಮಣ್ಣಿನ ಮಕ್ಕಳನ್ನು ಗುರುತಿಸಿದ್ದು?” ಎಂದು ಕೇಳಿದೆ.

ಇದನ್ನೂ ಓದಿರಿ: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದೆ ಅವಮಾನಿಸಿದ ಬಿಜೆಪಿ: ಜೆಡಿಎಸ್ ಆಕ್ರೋಶ

‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’; ಇದು ಭಾರತ ಕಂಡ ಪರಮ ಢೋಂಗೀ ಘೋಷಣೆ. ಇದಕ್ಕೆ ʼಸಬ್ ಕಾ ಸರ್ವನಾಶ್ʼ ಎಂದು ಸೇರಿದರೆ ಪರಿಪೂರ್ಣ. ಕರ್ನಾಟಕದಲ್ಲಿ ಶಿಕ್ಷಣ, ಧರ್ಮ, ಜಾತಿ, ಆಚಾರ, ವಿಚಾರ, ಆಹಾರ, ಉಡುಪುಗಳ ವಿಷಯದಲ್ಲೂ ಬಿಜೆಪಿ ಮಾಡಿದ್ದು ಸಾಕ್ಷಾತ್ ಸರ್ವನಾಶವೇ ಎಂದು ಅಭಿಪ್ರಾಯಪಟ್ಟಿದೆ.

“ಕುಟುಂಬ ರಾಜಕಾರಣ ಅಂತೀರಾ? ಗುಜರಾತಿನಿಂದ ಶುರುವಾಗಿ ದೆಹಲಿವರೆಗೂ ಹಬ್ಬಿ, ಬಿಸಿಸಿಐ ಒಳಹೊಕ್ಕಿ ಕೂತಿದ್ದು ಯಾರ ಕುಟುಂಬ? ಕರ್ನಾಟಕದಲ್ಲಿ ಬೆಳೆದು ನಿಂತ ಬಿಜೆಪಿ ವಂಶವೃಕ್ಷಗಳೆಷ್ಟು? ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಗುಜರಾತ್ ನಿಂದ ಒಡಿಶಾವರೆಗೆ ವ್ಯಾಪಿಸಿರುವ ಬಿಜೆಪಿ ವಂಶವೃಕ್ಷಗಳ ಕೊಂಬೆಗಳ ಲೆಕ್ಕ ಬಿಚ್ಚಿಡಬೇಕೆ?” ಎಂದು ಟೀಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...