Homeಮುಖಪುಟಕೋಮು ಗಲಭೆಯಲ್ಲಿ ತಂದೆಯನ್ನು ಕಳೆದುಕೊಂಡರೂ ಜಾತ್ಯಾತೀತ ಮೌಲ್ಯಗಳನ್ನು ಉಳಿಸಿಕೊಂಡಿದ್ದ ದೇವೇಂದ್ರ ಸಿಂಗ್ ಯಾದವ್

ಕೋಮು ಗಲಭೆಯಲ್ಲಿ ತಂದೆಯನ್ನು ಕಳೆದುಕೊಂಡರೂ ಜಾತ್ಯಾತೀತ ಮೌಲ್ಯಗಳನ್ನು ಉಳಿಸಿಕೊಂಡಿದ್ದ ದೇವೇಂದ್ರ ಸಿಂಗ್ ಯಾದವ್

"ತನ್ನ ಕಣ್ಣೆದುರಿಗೆ ಆದ ತನ್ನ ತಂದೆಯ ಕೊಲೆಯಿಂದ ಆ ಬಾಲಕನ ಮೇಲೆ ಏನೆಲ್ಲ ಪರಿಣಾಮ ಬೀರಿತೋ ಏನೋ. ತಂದೆಯನ್ನು ತನ್ನ ಕಣ್ಣೆದುರಿಗೇ ಕೊಂದ ಮುಸಲ್ಮಾನರನ್ನು ದ್ವೇಷಿಸಲು ಅವರಿಗೆ ಸಾಕಷ್ಟು ಕಾರಣಗಳಿದ್ದವು"

- Advertisement -
- Advertisement -

ಸ್ವರಾಜ್ ಇಂಡಿಯಾ ಪಕ್ಷದ ಮುಖ್ಯಸ್ಥ ಯೋಗೇಂದ್ರ ಯಾದವ್ ಅವರ ತಂದೆ ಪ್ರೊ.ದೇವೇಂದ್ರ ಸಿಂಗ್ ಯಾದವ್ (1930-2020) ಬುಧವಾರ ನಿಧನರಾಗಿದ್ದು, ಅವರ ಕುರಿತ ಪರಿಚಯ ಮಾಡಿಕೊಳ್ಳುತ್ತಾ ಅವರಿಗೆ ಈ ನುಡಿ ನಮನ.

ದೇವೇಂದ್ರ ಎಂಟು ವರ್ಷದ ಬಾಲಕನಾಗಿದ್ದಾಗ ಕಣ್ಣೆದುರೇ ತನ್ನ ತಂದೆಯ ಕೊಲೆಗೆ ಸಾಕ್ಷಿಯಾದ. 1936 ರ ಸಮಯ. ಈಗಿನ ಹರಿಯಾಣಾದ ಹಿಸಾರ್ ಎನ್ನುವ ಪಟ್ಟಣದಲ್ಲಿ ರಾಮ್ ಸಿಂಗ್ ಒಂದು ಶಾಲೆಯ ಶಿಕ್ಷಕರಾಗಿದ್ದರು. ಸ್ವಾತಂತ್ರಪೂರ್ವದ ಸಮಯ. ಅಲ್ಲಲ್ಲಿ ಕೋಮು ದಳ್ಳುರಿಗಳು ನಡೆಯುತ್ತಿದ್ದವು. ರಾಮ್‌ಸಿಂಗ್ ಅವರು ಶಿಕ್ಷಕರಾಗಿದ್ದ ಶಾಲೆಗೆ ಕೋಮು ಗಲಭೆಯನ್ನೆಬ್ಬಿಸುತ್ತ ಮುಸಲ್ಮಾನರ ಗುಂಪೊಂದು ಬಂದು ಅಲ್ಲಿದ್ದ ಮಕ್ಕಳನ್ನು ತಮ್ಮ ವಶಕ್ಕೆ ನೀಡಬೇಕೆಂದು ಆದೇಶಿಸಿದರು. ಮಕ್ಕಳನ್ನು ಮುಟ್ಟುವುದಕ್ಕಿಂತ ಮುಂಚೆ ಮೊದಲು ನನ್ನನ್ನು ನೋಡಿಕೊಳ್ಳಿ ಎಂದು ತಮ್ಮ ಕರ್ತವ್ಯ ಪಾಲಿಸಿದರು ರಾಮ್‌ಸಿಂಗ್. ಆಗ ಅವರ ಕುತ್ತಿಗೆಯನ್ನು ಆ ಗಲಭೆಕೋರರು ಕುಡಗೋಲಿನಿಂದ ಸೀಳಿದರು. ಈ ಘಟನೆಯನ್ನು ನೋಡುತ್ತ ನಿಂತವರಲ್ಲಿದ್ದ ಏಳು ವರ್ಷದ ಬಾಲಕನೇ ಈ ದೇವೇಂದ್ರ ಸಿಂಗ್, ಕೊಲೆಗೀಡಾದ ಶಿಕ್ಷಕ ರಾಮ್‌ಸಿಂಗ್ ಅವರ ಪುತ್ರ.

ಇದನ್ನೂ ಓದಿ: ಕರ್ತವ್ಯದ ನಡುವೆ ಮದ್ಯ ಸೇವಿಸಿದ್ದ ಪೊಲೀಸರ ವೀಡಿಯೋ ವೈರಲ್: ಅಮಾನತು

ತನ್ನ ಕಣ್ಣೆದುರಿಗೆ ಆದ ತನ್ನ ತಂದೆಯ ಕೊಲೆಯಿಂದ ಆ ಬಾಲಕನ ಮೇಲೆ ಏನೆಲ್ಲ ಪರಿಣಾಮ ಬೀರಿತೋ ಏನೋ. ತಂದೆಯನ್ನು ತನ್ನ ಕಣ್ಣೆದುರಿಗೇ ಕೊಂದ ಮುಸಲ್ಮಾನರನ್ನು ದ್ವೇಷಿಸಲು ಅವರಿಗೆ ಸಾಕಷ್ಟು ಕಾರಣಗಳಿದ್ದವು. ಆದರೆ ಆ ಬಾಲಕ ಬೆಳೆಯುತ್ತಿರುವ ಸಮಯ ಸ್ವಾತಂತ್ರ ಸಂಗ್ರಾಮದ ಸಮಯ. ಗಾಂಧೀಜಿಯವರ ಸತ್ಯಾಗ್ರಹಗಳ, ಹಿಂದು ಮುಸ್ಲಿಂ ಏಕತೆಗಾಗಿ ಜೀವ ತೇಯುತ್ತಿದ್ದ ಸಮಯ. ನಾನೊಬ್ಬ ಹಿಂದು ಆಗಲಿ, ಮುಸಲ್ಮಾನನಾಗಲಿ ಆಗುವುದಿಲ್ಲ, ನಾನು ಆಗುವುದು ಒಬ್ಬ ಮನುಷ್ಯ ಎನ್ನುವ ಮಾತುಗಳನ್ನು ಕೇಳಿದ ದೇವೇಂದ್ರ ಸಿಂಗ್, ತಮ್ಮ ಜೀವನವನ್ನು ದ್ವೇಷ ಆಕ್ರಮಿಸಿಕೊಳ್ಳಲು ಅವಕಾಶ ನೀಡಲಿಲ್ಲ.

ಬೆಳೆದು ಅರ್ಥಶಾಸ್ತ್ರದ ಪ್ರಾಧ್ಯಾಪಕರಾದ ದೇವೇಂದ್ರ ಸಿಂಗ್, ತಮ್ಮ ಮಕ್ಕಳಿಗೆ ಮುಸ್ಲಿಂ ಹೆಸರುಗಳನ್ನಿಡಲು ನಿರ್ಧರಿಸಿದರು. ತನ್ನ ತಂದೆಯನ್ನು ತನ್ನೆದುರಿಗೆ ಕೊಂದ ಸಮುದಾಯದವರ ಹೆಸರನ್ನು ನೀಡಲು ನಿರ್ಧರಿಸಿದರು. ಮೊದಲ ಮಗುವಿಗೆ ನಜ್ಮಾ ಎಂದು ಹೆಸರಿಡುವಾಗ ಅವರ ಹೆಂಡತಿ, ಮಗಳಿಗೆ ಬೇಡ, ಮುಂದೆ ಗಂಡು ಮಗುವಾದಾಗ ಈ ಪ್ರಯೋಗವನ್ನು ಮಾಡುವ, ಹೆಣ್ಣು ಮಗಳ ಮೇಲೆ ಬೇಡ, ಮುಂದೆ ಮದುವೆಗೆ ಸಮಸ್ಯೆಯಾಗುತ್ತೆ ಎಂದರು. ಹಾಗಾಗಿ ಆ ಹೆಣ್ಣು ಮಗುವಿಗೆ ನೀಲಂ ಎಂದು ನಾಮಕರಣ ಮಾಡಲಾಯಿತು. ನಂತರ ಗಂಡು ಮಗುವಾದಾಗ ಸಲೀಂ ಎನ್ನುವ ಹೆಸರನ್ನಿಟ್ಟರು.

ಇದನ್ನೂ ಓದಿ: ರೂಪಾಂತರಿ ಕೊರೊನಾ ವೈರಸ್ ಭೀತಿ: ರಾತ್ರಿ ಕರ್ಫ್ಯೂ ದಿನಾಂಕ ಬದಲಿಸಿದ ಮುಖ್ಯಮಂತ್ರಿ!

ರಾಜಸ್ಥಾನದ ಒಂದು ಹಳ್ಳಿಯಲ್ಲಿ ಶಾಲೆಗೆ ಹೋಗುತ್ತಿದ್ದ ಆ ಬಾಲಕನ ಶಾಲೆಯಲ್ಲಿ ಯಾವ ಮುಸಲ್ಮಾನ ಮಕ್ಕಳೂ ಇರಲಿಲ್ಲ. ಹಾಗಾಗಿ, ಎಲ್ಲ ಮಕ್ಕಳಿಗೂ ಇವನ ಬಗ್ಗೆ ಕುತೂಹಲ. ನೀನ್ಯಾರು, ನಿನ್ನನ್ನು ದತ್ತು ತೆಗೆದುಕೊಂಡಿದ್ದಾರಾ? ಮುಸಲ್ಮಾನರು ಹೇಗಿರುತ್ತಾರೆ? ಎಂದೆಲ್ಲಾ ಪೀಡಿಸಲಾರಂಭಿಸಿದರು. ದೇವೇಂದ್ರ ಅವರು ಜಾತ್ಯತೀತತೆಯ ಬಗ್ಗೆ, ಆ ಪುಟ್ಟ ಮಗು ಸಲೀಂನಿಗೆ ಏನೆಲ್ಲಾ ಹೇಳಿದರೂ ಅವನಿಗೆ ತಲೆಬುಡ ಅರ್ಥವಾಗಲಿಲ್ಲ. ಒಂದು ದಿನ ಮನೆಗೆ ಬಂದು, ಇಲ್ಲ ನನ್ನ ಹೆಸರನ್ನು ಬದಲಾಯಿಸಿ, ಇಲ್ಲವಾದರೆ ಇನ್ನು ಮುಂದೆ ನಾನು ಶಾಲೆಗೆ ಹೋಗೂದಿಲ್ಲ ಎಂದು ಘೋಷಿಸಿದರು. ಆಗ ಸಲೀಂ ಅಂತ ಇದ್ದ ಹೆಸರು ಯೋಗೇಂದ್ರ ಎಂದಾಯಿತು.

ನುಡಿ ನಮನ: ಕೋಮುಗಲಭೆಯಲ್ಲಿ ತಂದೆಯನ್ನು ಕಳೆದುಕೊಂಡರೂ ಜಾತ್ಯಾತೀತ ಮೌಲ್ಯಗಳನ್ನು ಉಳಿಸಿಕೊಂಡಿದ್ದ ದೇವೇಂದ್ರ ಸಿಂಗ್ ಯಾದವ್

 

ನಿನ್ನೆ ದೇವೇಂದ್ರ ಸಿಂಗ್ ತಮ್ಮ ಹಳ್ಳಿ ಸಹಾರನವಾಸ್‌ನಲ್ಲಿ ಕೊನೆಯುಸಿರೆಳೆದರು. ಇದೇ ಹಳ್ಳಿಯಲ್ಲಿ ಹುಟ್ಟಿದ ದೇವೇಂದ್ರ ಮೊದಲ ಕೆಲ ವರ್ಷ ಹಿಸಾರ್‌ನಲ್ಲಿದ್ದು, ತಂದೆಯ ಕೊಲೆಯ ನಂತರ ಹಳ್ಳಿಗೆ ಮರಳಿ, ಹೊಸ ಜೀವನ ಶುರು ಮಾಡಿದರು. 5ನೇ ತರಗತಿಯ ತನಕ ಹಳ್ಳಿಯಲ್ಲಿ ಓದಿ, ನಂತರ ರೇವಾಡಿಯಲ್ಲಿ, ತದನಂತರ ಜಲಂಧರ್‌ನಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಮಾಡಿ, ಗಂಗಾನಗರದ ಖಾಲ್ಸಾ ಕಾಲೇಜಿನಲ್ಲಿ ಅಧ್ಯಾಪಕರಾಗಿ ದುಡಿದು, ನಿವೃತ್ತಿಯ ನಂತರ 1987 ರಲ್ಲಿ ಮತ್ತೆ ತನ್ನ ಹುಟ್ಟೂರಾದ ಸಹಾರನವಾಸ್‌ಗೆ ಮರಳಿ, ಕೊನೆಯ ತನಕ ಅಲ್ಲಿಯೇ ಉಳಿದರು.

ಅಲ್ಲಿ ಬಂದು ಒಂದು ಗ್ರಂಥಾಲಯವನ್ನು ಸ್ಥಾಪಿಸಿದರು. ತದನಂತರ ಅದೇ ಗ್ರಾಮದಲ್ಲಿ ಪ್ರಾರಂಭವಾದ ಅಂಬೇಡ್ಕರ್ ಗ್ರಂಥಾಲಯವನ್ನು ಮುನ್ನಡೆಸಿದರು. ಅದರೊಂದಿಗೆ ‘ಸಂಪೂರ್ಣ ಕ್ರಾಂತಿ ಮಂಚ್’ ಎಂಬ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಚಳವಳಿಗಳಲ್ಲಿ ನಂಬಿಕೆಯಿಟ್ಟಿದ್ದ ದೇವೇಂದ್ರ ಯಾದವ್ ಅವರು ತಮ್ಮ ಪಿಂಚಣಿಯಲ್ಲಿ ಒಂದು ಭಾಗವನ್ನು ಸಾಮಾಜಿಕ ಕಾರ್ಯಕರ್ತರಿಗೆ ಕೊಡುತ್ತಿದ್ದರು.

ಇದನ್ನೂ ಓದಿ: ಜಲ್ಲಿಕಟ್ಟು ಕ್ರೀಡೆಗೆ ಒಪ್ಪಿಗೆ: ಕೊರೊನಾ ಮಾರ್ಗಸೂಚಿ ಪಾಲಿಸಿ ಎಂದ ತಮಿಳುನಾಡು ಸರ್ಕಾರ

ಮಿತಭಾಷಿಯಾಗಿದ್ದ ದೇವೇಂದ್ರ ಅವರು ತಮ್ಮ ಭಾವನೆಗಳನ್ನು ಅತ್ಯಂತ ವಿರಳವಾಗಿ ವ್ಯಕ್ತಪಡಿಸುತ್ತಿದ್ದರು ಎಂದು ಅವರ ಪುತ್ರ ಚುನಾವಣಾ ಶಾಸ್ತ್ರಜ್ಞ, ರಾಜಕೀಯ ಮುಖಂಡ ಯೋಗೇಂದ್ರ ಯಾದವ್ ಅವರು ನೆನಪಿಸಿಕೊಳ್ಳುತ್ತಾರೆ. ಯೋಗೇಂದ್ರ ಅವರು ಹತ್ತನೇ ತರಗತಿಯಲ್ಲಿ ಒಳ್ಳೆಯ ಅಂಕಗಳನ್ನು ಪಡೆದಾಗ, ಐಐಟಿಗೆ ಸೇರಿಸಿ, ಐಎಎಸ್ ಮಾಡಿಸಿ ಎಂದು ಎಲ್ಲರೂ ಸಲಹೆ ನೀಡಿದರಂತೆ. ಆದರೆ ಇವೆಲ್ಲವುಗಳಿಗಿಂತ ಸಮಾಜಕ್ಕಾಗಿ ದುಡಿಯುವುದು ಮುಖ್ಯ ಎಂದು ಕಲಾ ವಿಭಾಗಗಕ್ಕೆ (ಹ್ಯುಮಾನಿಟಿಸ್) ಸೇರಲು ಮಗನಿಗೆ ಪ್ರೋತ್ಸಾಹಿದರಂತೆ. ತನ್ನ ಹುಟ್ಟಿನ ಸಂಯೋಗದಿಂದ ವಿಚಾರಧಾರೆಯನ್ನು ಬೆಳೆಸಿಕೊಳ್ಳಬಾರದು ಹಾಗೂ ತನ್ನ ವಿರೋಧಿಗಳ ಮಾತನ್ನು ಆಲಿಸಬೇಕು ಎಂಬ ಎರಡು ಪಾಠಗಳನ್ನು ನನಗೆ ಕಲಿಸಿದರು ಹಾಗೂ ಈ ಎರಡು ಪಾಠಗಳು ಈಗಲೂ ನನ್ನನ್ನು ಪ್ರಭಾವಿಸುತ್ತವೆ ಎಂದು ಯೋಗೇಂದ್ರ ಯಾದವ್ ಅವರು ತನ್ನ ತಂದೆಯ ಅಂತ್ಯ ಸಂಸ್ಕಾರವನ್ನು ನಿರ್ವಹಿಸಿ ಹೇಳಿದರು.

ತನ್ನ ಕೊನೆಗಾಲದ ತನಕ ತಾನು ನಂಬಿದ ಆದರ್ಶಗಳ ಮೇಲೆ ಸರಳ ಜೀವನ ನಡೆಸಿ, ತನ್ನ ಗ್ರಾಮದ ಮನೆಯಲ್ಲೇ ಕೊನೆಯುಸಿರೆಳೆದ ದೇವೇಂದ್ರ ಸಿಂಗ್ ಯಾದವ್ ಅವರ ಜೀವನ ದೇಶಕ್ಕೆ ಜಾತ್ಯತೀತತೆಯ ಪಾಠವನ್ನು ಇನ್ನೊಮ್ಮೆ ನೆನಪಿಸಲಿ ಎಂದು ಆಶಿಸುವ.


ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ: FIR ರದ್ದತಿ ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...