Homeಮುಖಪುಟಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

- Advertisement -
- Advertisement -

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ ಗ್ರಾಸವಾಗಿದೆ.

ಈ ಘಟನೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮ ಬಳಕೆದಾರರು ಅಂತಹ ಆಚರಣೆಯ ಅಗತ್ಯವನ್ನು ಪ್ರಶ್ನಿಸಿದ್ದಾರೆ.

ಶ್ರೀ ದಾದಾಜಿ ದರ್ಬಾರ್ ಪಾತಾಳೇಶ್ವರ ಮಹಾದೇವ ದೇವಸ್ಥಾನವು ಚೈತ್ರ ನವರಾತ್ರಿಯ ಭಾಗವಾಗಿ ದೊಡ್ಡ ಪ್ರಮಾಣದ ಅಭಿಷೇಕ ಆಚರಣೆಯನ್ನು ನಡೆಸಿತು. ಈ ಕಾರ್ಯಕ್ರಮವು ಮಾರ್ಚ್ 18 ರಿಂದ ಏಪ್ರಿಲ್ 7 ರವರೆಗೆ ನಡೆಯಿತು, ಇದರಲ್ಲಿ 41 ಟನ್ ತುಪ್ಪವನ್ನು ಬಳಸಿದ ಬೃಹತ್ ಮಹಾಯಜ್ಞ ನಡೆಸಲಾಗಿದೆ. ಪ್ರತಿನಿತ್ಯ ನೂರಾರು ಲೀಟರ್ ಹಾಲು ಬಳಸಲಾಗಿದೆ ಎಂದು ಭಕ್ರೊಬ್ಬರು ತಿಳಿಸಿದ್ದಾರೆ.

“ಈ ಕಾರ್ಯಕ್ರಮಕ್ಕಾಗಿ ಸುಮಾರು 5 ಎಕರೆ ಪ್ರದೇಶದಲ್ಲಿ ಬೃಹತ್ ಪೆಂಡಾಲ್ ಅನ್ನು ಸಿದ್ಧಪಡಿಸಲಾಗಿತ್ತು. ಪ್ರತಿದಿನ ಸಾವಿರಾರು ಭಕ್ತರು ಕುಳಿತು ಈ ಭವ್ಯ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಮಹಾಯಜ್ಞದಲ್ಲಿ, ಚಿನ್ನ, ಬೆಳ್ಳಿ ಮತ್ತು ಔಷಧೀಯ ಗಿಡಮೂಲಿಕೆಗಳು ಸೇರಿದಂತೆ ಒಟ್ಟು 41 ಟನ್ ವಸ್ತುಗಳನ್ನು ಬಳಸಲಾಗುತ್ತಿತ್ತು” ಎಂದು ಸಂಘಟಕರು ಹೇಳಿದರು.

“ಪ್ರತಿದಿನ, 151 ಲೀಟರ್ ಹಾಲನ್ನು ನೈವೇದ್ಯವಾಗಿ ಬಳಸಲಾಗುತ್ತಿತ್ತು. ಒಂದು ನಿರ್ದಿಷ್ಟ ದಿನದಂದು, 1,100 ಲೀಟರ್ ಬಳಸಲಾಗುತ್ತಿತ್ತು. ಬುಧವಾರ, 11,000 ಲೀಟರ್ ಹಾಲನ್ನು ಬಳಸಲಾಗುತ್ತಿತ್ತು. ಬಾಬಾ ವರಿಗೆ ನರ್ಮದಾಜಿ ತಾಯಿಯಂತೆ” ಎಂದು ಭಕ್ತರೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆದರೆ, ಧಾರ್ಮಿಕ ಆಚರಣೆ ಹೆಸರಿನಲ್ಲಿ ನದಿಗೆ ಹಾಲು ಸುರಿದು ಮಲಿನ ಮಾಡಲಾಗಿದೆ ಎಂದು ಹಲವರು ಪ್ರಶ್ನಿಸಿದ್ದಾರೆ. ನದಿಗೆ ಟ್ಯಾಂಕರ್‌ನಿಂದ ಹಾಲು ಹರಿಸುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ಭಾರಿ ವೈರಲ್ ಆಗಿದೆ. ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಆಹಾರ ನೀಡಲು ಇಷ್ಟು ದೊಡ್ಡ ಪ್ರಮಾಣದ ಹಾಲನ್ನು ಬಳಸಬಹುದಿತ್ತು ಎಂದು ಹಲವಾರು ಬಳಕೆದಾರರು ಗಮನಸೆಳೆದರು. ಇನ್ನು ಕೆಲವರು ಕಳವಳ ವ್ಯಕ್ತಪಡಿಸಿ, ನದಿಗೆ ಹಾಲನ್ನು ಸುರಿಯುವುದರಿಂದ ಜೀವರಾಸಾಯನಿಕ ಆಮ್ಲಜನಕದ ಬೇಡಿಕೆ (ಬಿಒಡಿ) ಹೆಚ್ಚಾಗುತ್ತದೆ, ಜಲಚರಗಳಿಗೆ ಅಪಾಯವಾಗುತ್ತದೆ. ಆಮ್ಲಜನಕದ ಮಟ್ಟವನ್ನು ಕಡಿಮೆ ಮಾಡುತ್ತದೆ ಎಂದು ಎಚ್ಚರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...