Homeಕರ್ನಾಟಕ‘ಸಮಾಜ ಘಾತಕ ಶಕ್ತಿಗಳ ಕಾರ್ಯಕ್ರಮದಲ್ಲಿ ಪೊಲೀಸರು’: ಸುತ್ತೋಲೆ ಹೊರಡಿಸಿದ ಡಿಜಿ & ಐಜಿಪಿ ಪ್ರವೀಣ್ ಸೂದ್‌

‘ಸಮಾಜ ಘಾತಕ ಶಕ್ತಿಗಳ ಕಾರ್ಯಕ್ರಮದಲ್ಲಿ ಪೊಲೀಸರು’: ಸುತ್ತೋಲೆ ಹೊರಡಿಸಿದ ಡಿಜಿ & ಐಜಿಪಿ ಪ್ರವೀಣ್ ಸೂದ್‌

- Advertisement -
- Advertisement -

ಕೆಲವು ಪೊಲೀಸ್ ಅಧಿಕಾರಿಗಳು ಅಪರಾಧ ಹಿನ್ನಲೆಯ ಮತ್ತು ಸಮಾಜ ಘಾತಕ ಶಕ್ತಿಗಳ ಜೊತೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಘಟನೆಯನ್ನು ಉಲ್ಲೇಖಿಸಿ, ಪೊಲೀಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್‌ ಅವರು ಶುಕ್ರವಾರ ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ. ಸುತ್ತೋಲೆಯಂತೆ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಸ್ವಾಗತ, ಬೀಳ್ಕೊಡುಗೆ ಸಂದರ್ಭದಲ್ಲಿ ಶಿಸ್ತು ಮತ್ತು ಶಿಷ್ಟಾಚಾರವನ್ನು ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ.

ಯಾವುದೆ ಪೊಲೀಸ್ ಅಧಿಕಾರಿಗಳು ಅಪರಾಧ ಹಿನ್ನಲೆಯ, ಸಮಾಜ ಘಾತಕ ಶಕ್ತಿಗಳ ಹಾಗೂ ರೌಡಿ ಶೀಟರ್‌ಗಳೊಂದಿಗೆ ಯಾವುದೆ ಸಂಬಂಧ ಹೊಂದುವಂತಿಲ್ಲ ಎಂಬುವುದನ್ನು ನೆನಪಿಸಿರುವ ಸುತ್ತೋಲೆ, “ಪೊಲೀಸ್ ಕಚೇರಿಗಳು ಸಾರ್ವಜನಿಕ ಕಚೇರಿಗಳಾಗಿರುವುದರಿಂದ ಅಲ್ಲಿ ಹುಟ್ಟು ಹಬ್ಬ, ಮದುವೆ ವಾರ್ಷಿಕೋತ್ಸವದಂತಹ ಖಾಸಗಿ ಕಾರ್ಯಕ್ರಮಗಳನ್ನು ನಡೆಯದಂತೆ ಎಚ್ಚರಿಕೆ ವಹಿಸಬೇಕು” ಎಂದು ಹೇಳಿದೆ.

ಇದನ್ನೂ ಓದಿ: ಕೊಲೆ ಆರೋಪಿಯ ಮದುವೆಯಲ್ಲಿ ಪೊಲೀಸರು ಭಾಗಿ: ತೀವ್ರ ಖಂಡನೆ – ಕಡ್ಡಾಯ ರಜೆ ಶಿಕ್ಷೆ

“ಅಪರಾಧ ಹಿನ್ನಲೆಯ ಹಾಗೂ ಸಮಾಜ ಘಾತಕ ಶಕ್ತಿಗಳು ನಡೆಸುವ ಕಾರ್ಯಕ್ರಮದಲ್ಲಿ ಪೊಲೀಸರು ಭಾಗವಹಿಸಬಾರದು. ಯಾವುದೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವಾಗ ಕಾರ್ಯಕ್ರಮ ಹಮ್ಮಿಕೊಂಡಿರುವ ವ್ಯಕ್ತಿ ಮತ್ತು ಸಂಘ ಸಂಸ್ಥೆಯ ಪೂರ್ವಾಪರ ಪರಿಶೀಲನೆ ಮಾಡಿ ಅದರಲ್ಲಿ ಭಾಗವಹಸುವುದು ಸರಿಯೆ ಎಂದು ನಿರ್ಧರಿಸಬೇಕು” ಎಂದು ಅದು ಹೇಳಿದೆ.

ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆಯಾಗುವುದಿಲ್ಲ ಎಂದು ತಿಳಿದ ನಂತರ, ಅಪರಾಧ ತಡೆ, ಸಂಚಾರ ನಿಯಂತ್ರಣ ಮುಂತಾದ ಉದ್ದೇಶ ಸಾಧಿಸಲಷ್ಟೇ ಭಾಗಿಯಾಗಬೇಕು ಎಂದು ಸುತ್ತೋಲೆ ಹೇಳಿದ್ದು, “ಮುಂಬಡ್ತಿ, ಬೀಳ್ಕೊಡುಗೆ ಕಾರ್ಯಕ್ರಮಗಳಿಂದ ಸಾಧ್ಯವಾದಷ್ಟು ದೂರವಿರುವುದು ಮತ್ತು ಅದನ್ನು ತಡೆಯುವುದೇ ಸೂಕ್ತ” ಎಂದು ಹೇಳಿದೆ.

ಅಲ್ಲದೆ ಸ್ವಾಗತ ಮತ್ತು ಬೀಳ್ಕೊಡುಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಾಗ ಪೊಲೀಸರನ್ನು ಹೊರತು ಪಡಿಸಿ ಇತರೆ ಯಾವುದೇ ಖಾಸಗಿ ವ್ಯಕ್ತಿಗಳು ಇರಬಾರದು ಎಂದು ಮಹಾನಿರ್ಧೇಶಕರು ಸುತ್ತೋಲೆಯಲ್ಲಿ ಆದೇಶ ನೀಡಿದ್ದಾರೆ.

ಇದನ್ನೂ ಓದಿ: Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...