ಅಂತರರಾಷ್ಟ್ರೀಯ ಪ್ರಯಾಣಿಕರ ವಿಮಾನ ಸಂಚಾರ ನಿರ್ಬಂಧವನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಪ್ರಕಟಣೆಯಲ್ಲಿ ತಿಳಿಸಿದೆ.
” ಪರಿಷ್ಕೃತ ಸುತ್ತೋಲೆಯ ಅವಧಿಯನ್ನು ವಿಸ್ತರಿಸಲಾಗಿದ್ದು, ಅಂತಾರಾಷ್ಟ್ರೀಯ ವಾಣಿಜ್ಯಕ್ಕೆ ಸಂಬಂಧಿಸಿದಂತೆ ಭಾರತದಿಂದ ಹೊರಡುವ ಮತ್ತು ಆಗಮಿಸುವ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ವಿಮಾನಸೇವೆಯನ್ನು ಪ್ರಾಧಿಕಾರವು 2021ರ ಮಾರ್ಚ್ 31ವರೆಗೆ ನಿಷೇಧಿಸಲಾಗಿದೆ” ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಆದರೆ, ಆಯ್ದ ಮಾರ್ಗಗಳಲ್ಲಿ ನಿಗದಿತ ಅಂತರರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಜೊತೆಗೆ ಅಂತಾರಾಷ್ಟ್ರೀಯ ಸರಕು ಸಾಗಣೆ ವಿಮಾನಗಳಿಗೆ ನಿರ್ಬಂಧಗಳು ಅನ್ವಯಿಸುವುದಿಲ್ಲ ಎಂದು ಡಿಜಿಸಿಎ ತಿಳಿಸಿದೆ.
ಇದನ್ನೂ ಓದಿ: ಸಂಸದರು, ಸಚಿವರ ಕಾರು ಖರೀದಿಯ ಹಣ ಹೆಚ್ಚಿಸಿದ ಯಡಿಯೂರಪ್ಪ ಸರ್ಕಾರ!
— DGCA (@DGCAIndia) February 26, 2021
ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣ ದೇಶದಲ್ಲಿ ಅಂತರರಾಷ್ಟ್ರೀಯ ವಿಮಾನಗಳ ಮೇಲಿನ ನಿರ್ಬಂಧಗಳನ್ನು ಕಳೆದ ಮಾರ್ಚ್‌ನಲ್ಲಿ ಘೋಷಿಸಲಾಗಿತ್ತು. ಅದಾದ ಕೆಲವು ತಿಂಗಳುಗಳಲ್ಲಿ ಕೇಂದ್ರವು ಆರ್ಥಿಕತೆಯ ಹೆಚ್ಚಿನ ಹಲವು ಕ್ಷೇತ್ರಗಳಲ್ಲಿ ನಿರ್ಬಂಧಗಳನ್ನು ಸಡಿಲಗೊಳಿಸಿದೆ ಆದರೆ ಅಂತರರಾಷ್ಟ್ರೀಯ ವಿಮಾನಯಾನ ಕಾರ್ಯಾಚರಣೆಯನ್ನು ನಿರ್ಬಂಧಿಸಿದೆ.
ಕೇಂದ್ರಸರ್ಕಾರವು ಕಳೆದ ವರ್ಷದ ಕೊನೆಯಲ್ಲಿ ದೇಶೀಯ ವಿಮಾನ ಕಾರ್ಯಾಚರಣೆಗೆ ಅವಕಾಶ ನೀಡಿತು.
ಇದರ ಜೊತೆಗೆ ಕಳೆದ ಡಿಸೆಂಬರ್‌ನಲ್ಲಿ, ಯುರೋಪಿಯನ್ ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ರೂಪಾಂತರ ಪತ್ತೆಯಾದ ಮೇಲೆ ಅಧಿಕಾರಿಗಳು ಬ್ರಿಟನ್ ಮತ್ತು ಹೊರಗಿನ ವಿಮಾನಗಳ ಮೇಲೆ ನಿಷೇಧ ಹೇರಿದ್ದರು. ನಂತರ ನಿಷೇಧವನ್ನು ರದ್ದುಪಡಿಸಲಾಯಿತು.
ನಿಷೇಧದ ನಡುವೆಯು ಕಳೆದ ವರ್ಷ ಮೇ ತಿಂಗಳಿನಿಂದ ‘ವಂದೇ ಭಾರತ್ ಮಿಷನ್’ ಅಡಿ ವಿಶೇಷ ವಿಮಾನಗಳ ಸಂಚಾರಕ್ಕೆ ಅನುಮಮತಿ ನೀಡಲಾಗಿದೆ.
ಇದನ್ನೂ ಓದಿ: ಪ.ಬಂಗಾಳ, ಕೇರಳ, ಅಸ್ಸಾಂ, ತ.ನಾಡು, ಪುದುಚೇರಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ


