Homeಕರ್ನಾಟಕಡಿಜಿಪಿ ರಾಮಚಂದ್ರ ರಾವ್ ವಿಡಿಯೊ ಪ್ರಕರಣ: ‘ಯಾವುದೇ ಇಲಾಖೆಯೂ ಇಂತಹ ಘಟನೆಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ’: ಡಾ....

ಡಿಜಿಪಿ ರಾಮಚಂದ್ರ ರಾವ್ ವಿಡಿಯೊ ಪ್ರಕರಣ: ‘ಯಾವುದೇ ಇಲಾಖೆಯೂ ಇಂತಹ ಘಟನೆಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ’: ಡಾ. ಜಿ. ಪರಮೇಶ್ವರ್

- Advertisement -
- Advertisement -

ಬೆಂಗಳೂರು: ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯೊಂದಿಗೆ ಅಸಭ್ಯ ವರ್ತನೆ ನಡೆಸಿದ ವಿಡಿಯೊ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದೇವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. 

2026 ಜನವರಿ 20, ಮಂಗಳವಾರ ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ತಕ್ಷಣ ಕ್ರಮ ಕೈಗೊಂಡಿದ್ದೇವೆ. ತನಿಖೆಯ ನಂತರ ಏನು ಬೇಕಾದರೂ ಆಗಬಹುದು. ಅವರನ್ನು ವಜಾಗೊಳಿಸಬಹುದು. ತಕ್ಷಣ ಕ್ರಮ ಕೈಗೊಳ್ಳಬೇಕಾಗಿದ್ದರಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಅವರು ಹಿರಿಯ ಅಧಿಕಾರಿ ಎಂಬ ಅಂಶವನ್ನು ನೋಡದೆ, ಯಾವುದೇ ಹಿಂಜರಿಕೆಯಿಲ್ಲದೆ ಕ್ರಮ ಕೈಗೊಂಡಿದ್ದೇವೆ. ತನಿಖೆಯಲ್ಲಿ ಏನಾಗುತ್ತದೆ ಎಂಬುದನ್ನು ನೋಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಪೊಲೀಸ್ ಇಲಾಖೆ ಮಾತ್ರವಲ್ಲ, ಯಾವುದೇ ಇಲಾಖೆಯೂ ಇಂತಹ ಘಟನೆಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಮತ್ತು ಅದಕ್ಕಾಗಿಯೇ ನಾವು ತಕ್ಷಣ ಕ್ರಮ ಕೈಗೊಂಡಿದ್ದೇವೆ. 

ಮುಖ್ಯಮಂತ್ರಿ ಕೂಡ ಅಸಮಾಧಾನಗೊಂಡಿದ್ದಾರೆ, ನನಗೂ ಅಸಮಾಧಾನವಿದೆ. ಇದು ಪೊಲೀಸ್ ಇಲಾಖೆಯಾಗಿರುವುದರಿಂದ ಖಂಡಿತಾ ಇಂತಹ ಕ್ರಮ ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ. 

ನಿನ್ನೆ ವಿಡಿಯೊ ವೈರಲ್ ಆದ ಬೆನ್ನಲ್ಲೇ ತಮ್ಮನ್ನು ಭೇಟಿ ಮಾಡಲು ರಾಮಚಂದ್ರ ರಾವ್ ಬಂದಿದ್ದರು ಎಂದು ಆಮೇಲೆ ಗೊತ್ತಾಯಿತು. ಆದರೆ ಇಂತಹ ಪರಿಸ್ಥಿತಿಯಲ್ಲಿ ನಾನು ಖಂಡಿತಾ ಅವರನ್ನು ಭೇಟಿ ಮಾಡುತ್ತಿರಲಿಲ್ಲ. ಸರ್ಕಾರದ ಉನ್ನತ ಹುದ್ದೆಯಲ್ಲಿರುವ ಪೊಲೀಸ್ ಅಧಿಕಾರಿ ಇಂತಹ ನೀಚ ಕೆಲಸ ಮಾಡಿದ್ದರೆ ಅದನ್ನು ಖಂಡಿತಾ ಕ್ಷಮಿಸಲು ಸಾಧ್ಯವಿಲ್ಲ ಎಂದರು.

ಡಿಜಿಪಿ ರಾಮಚಂದ್ರ ರಾವ್ ಅವರು ಇದೇ ವರ್ಷ ಮೇ ತಿಂಗಳಲ್ಲಿ ಸೇವೆಯಿಂದ ನಿವೃತ್ತರಾಗುವವರಿದ್ದರು. ವೈರಲ್ ವಿಡಿಯೊದಲ್ಲಿ ರಾಮಚಂದ್ರ ರಾವ್ ಅವರ ಸಂಪರ್ಕದಲ್ಲಿದ್ದ ಮಹಿಳೆಯರು ಯಾರು ಎಂದು ಇದುವರೆಗೆ ಗೊತ್ತಾಗಿಲ್ಲ, ಯಾರೂ ಇದುವರೆಗೆ ದೂರು ನೀಡಿಲ್ಲ. ಆ ಬಗ್ಗೆ ಕೂಡ ತನಿಖೆ ಮಾಡುತ್ತಿದ್ದೇವೆ ಎಂದು ಗೃಹ ಸಚಿವರು ಹೇಳಿದ್ದಾರೆ. 

ಕೃತಕ ವಿಡಿಯೊ ಎಂದ ಡಿಜಿಪಿ

ಸೋಮವಾರ ಮಧ್ಯಾಹ್ನ ವಿಡಿಯೊ ವೈರಲ್‌ ಆಗುತ್ತಿದ್ದಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (DCRE) ತಮ್ಮ ಕಚೇರಿಯನ್ನು ದಿಢೀರ್‌ ತೊರೆದ ರಾಮಚಂದ್ರರಾವ್‌, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರನ್ನು ಭೇಟಿಯಾಗಲು ಪ್ರಯತ್ನಿಸಿದರು. ಆದರೆ, ಗೃಹ ಸಚಿವರು ಅನಾರೋಗ್ಯದ ಕಾರಣ ಹೇಳಿ ಭೇಟಿಗೆ ಅವಕಾಶ ನೀಡಿಲ್ಲ. ಈ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಡಿಜಿಪಿ ರಾಮಚಂದ್ರರಾವ್‌, ‘ವಿಡಿಯೊ ಕಂಡು ಆಘಾತ­ವಾಗಿದೆ. ವೈರಲ್‌ ಆದ ವಿಡಿಯೊ ಕೃತಕವಾಗಿ ಸೃಷ್ಟಿಸ­ಲಾಗಿದೆ. ಈ ಬಗ್ಗೆ ತನಿಖೆಯಾಗಬೇಕಿದೆ ಎಂದರು.

‘ಷಡ್ಯಂತ್ರ ರೂಪಿಸಿ ನಕಲಿ ವಿಡಿಯೊ ಹರಿಬಿಡಲಾಗಿದೆ. ಈ ಬಗ್ಗೆ ವಕೀಲರ ಜತೆ ಚರ್ಚೆ ನಡೆಸಿ ಕಾನೂನು ಹೋರಾಟ ನಡೆಸುತ್ತೇನೆ,’ ‘ಇದು ಹಳೆಯ ವಿಡಿಯೊ,’ ಎಂದ ರಾಮಚಂದ್ರ ರಾವ್‌, ‘ಎಂಟು ವರ್ಷಗಳ ಹಿಂದೆ ಬೆಳಗಾವಿಯಲ್ಲಿ ಕೆಲಸ ಮಾಡಿದ್ದೆ,’ ಎಂದಷ್ಟೇ ಹೇಳಿ ಘಟನೆ ಬಗ್ಗೆ ಹೆಚ್ಚಿನ ವಿವರ ನೀಡಲು ನಿರಾಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಿತಿನ್ ನಬಿನ್ ನನ್ನ ಬಾಸ್, ನಾನು ಕೆಲಸಗಾರ..’; ಬಿಜೆಪಿ ನೂತನ ಮುಖ್ಯಸ್ಥರನ್ನು ಸ್ವಾಗತಿಸಿದ ಪ್ರಧಾನಿ ಮೋದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಅತ್ಯಂತ ಕಿರಿಯ ವಯಸ್ಸಿನ ನಿತಿನ್ ನಬಿನ್ ಅವರನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು. ಪಕ್ಷದ ಪರಂಪರೆಯನ್ನು ಮುಂದುವರಿಸುವ 'ಸಹಸ್ರಮಾನದ' ವ್ಯಕ್ತಿ ಎಂದು ಕರೆದರು. "ಪಕ್ಷದ...

ವಿಧಾನಸಭೆ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಸಾಲುಗಳು ಕೈಬಿಟ್ಟ ಕೇರಳ ರಾಜ್ಯಪಾಲ : ಸಿಎಂ ಪಿಣರಾಯಿ ವಿಜಯನ್ ಆರೋಪ

ತಮಿಳುನಾಡಿನ ಬಳಿಕ ಕೇರಳ ವಿಧಾನಸಭೆಯಲ್ಲೂ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಮಂಗಳವಾರ (ಜ.20) ಜಟಾಪಟಿ ನಡೆದಿದೆ. ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣದಲ್ಲಿನ ಕೇಂದ್ರ ಸರ್ಕಾರವನ್ನು ಟೀಕಿಸುವ ಕೆಲ ಸಾಲುಗಳನ್ನು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್...

ಶಬರಿಮಲೆ ಚಿನ್ನ ಕಳವು ಪ್ರಕರಣ: ಕೇರಳ, ಕರ್ನಾಟಕ, ತಮಿಳುನಾಡಿನ 21 ಸ್ಥಳಗಳಲ್ಲಿ ಇಡಿ ದಾಳಿ

ಶಬರಿಮಲೆ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ED) ಮಂಗಳವಾರ ಮೂರು ರಾಜ್ಯಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ...

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ, ಪಕ್ಷ ಮುನ್ನಡೆಸುವ ಜವಾಬ್ದಾರಿ ವಹಿಸಿಕೊಂಡ ಅತ್ಯಂತ ಕಿರಿಯ ನಾಯಕ 

ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷರಾಗಿ 45 ವರ್ಷದ ನಿತಿನ್ ನಬಿನ್ 2026 ಜನವರಿ 20ರ, ಮಂಗಳವಾರ ಔಪಚಾರಿಕವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಸ್ತುತ ಕೇಂದ್ರ ಸಚಿವರಾಗಿರುವ ಜೆ.ಪಿ. ನಡ್ಡಾ ಅವರ ಸ್ಥಾನದಲ್ಲಿ...

ವಿಡಿಯೋ ವೈರಲ್ ಬಳಿಕ ವ್ಯಕ್ತಿ ಆತ್ಮಹತ್ಯೆ ಪ್ರಕರಣ : ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು, ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

ಬಸ್‌ ಪ್ರಯಾಣದ ವೇಳೆ ಲೈಂಗಿಕ ಕಿರುಕುಳ ಆಗಿದೆ ಎಂದು ಆರೋಪಿಸಿ ವಿಡಿಯೋ ಪೋಸ್ಟ್ ಮಾಡಿದ ಬಳಿಕ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ಕೇರಳದ ಮಹಿಳೆ ವಿರುದ್ದ ಪೊಲೀಸರು 'ಆತ್ಮಹತ್ಯೆಗೆ ಪ್ರಚೋದನೆ' ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಡಿಯೋ...

‘ಜಾತಿ ಪ್ರಾತಿನಿಧ್ಯ’ ವಿಚಾರದಿಂದ ಪಂಜಾಬ್ ಕಾಂಗ್ರೆಸ್‌ನಲ್ಲಿ ಬಿರುಕು?; ಭಾರೀ ಚರ್ಚೆಗೆ ಗ್ರಾಸವಾದ ಚನ್ನಿ ಹೇಳಿಕೆ

ಪಂಜಾಬ್ ಕಾಂಗ್ರೆಸ್‌ನಲ್ಲಿ ಜಾತಿ ಪ್ರಾತಿನಿಧ್ಯದ ಬಗ್ಗೆ ಸಂಘರ್ಷ ಭುಗಿಲೆದ್ದಿದೆ. ದಲಿತ ಮತ್ತು ಜಾಟ್ ಸಿಖ್ ಪ್ರಭಾವದ ನಡುವಿನ ಅಸಮತೋಲನದ ಮೇಲೆ ಕೇಂದ್ರೀಕೃತವಾಗಿರುವ ಈ ಘರ್ಷಣೆಯು ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಲೋಕಸಭಾ ಸಂಸದ...

ತಮಿಳುನಾಡು ವಿಧಾನಸಭೆಯಲ್ಲಿ ಮತ್ತೆ ಗದ್ದಲ : ಸತತ 3ನೇ ಬಾರಿಗೆ ಭಾಷಣ ಮಾಡದೇ ಹೊರನಡೆದ ರಾಜ್ಯಪಾಲ ಆರ್‌.ಎನ್‌.ರವಿ

ತಮಿಳುನಾಡು ವಿಧಾನಸಭೆಯಲ್ಲಿ ಮತ್ತೊಮ್ಮೆ ರಾಜ್ಯಪಾಲ ಆರ್‌.ಎನ್‌ ರವಿ ಮತ್ತು ಸರ್ಕಾರದ ನಡುವೆ ಜಟಾಪಟಿ ನಡೆದಿದೆ. ಸತತ 3ನೇ ಬಾರಿಗೆ ರಾಜ್ಯಪಾಲರು ಅಧಿವೇಶನದ ಆರಂಭದಲ್ಲಿ ಮಾಡಬೇಕಾದ ಸಾಂಪ್ರದಾಯಿಕ ಭಾಷಣ ಮಾಡದೆ ಮಂಗಳವಾರ (ಜ.20) ವಿಧಾನಸಭೆಯಿಂದ...

ವಿಡಿಯೋ ವೈರಲ್ : ಡಿಜಿಪಿ ರಾಮಚಂದ್ರ ರಾವ್ ಅಮಾನತು

ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಬೆನ್ನಲ್ಲೇ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಡಿಜಿಪಿ ಕೆ.ರಾಮಚಂದ್ರ ರಾವ್ ಅವರನ್ನು ಕರ್ತವ್ಯದಿಂದ ಅಮಾತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Download ಈಗಾಗಲೇ ಈ...

ಡಿಜಿಪಿ ರಾಮಚಂದ್ರ ರಾವ್ ವಿಡಿಯೋ ಪ್ರಕರಣ | ವಿಚಾರಣೆ ನಡೆಸಿ ಶಿಸ್ತು ಕ್ರಮ : ಸಿಎಂ ಸಿದ್ದರಾಮಯ್ಯ

ಡಿಜಿಪಿ ರಾಮಚಂದ್ರರಾವ್ ಅವರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋಗಳು ವೈರಲ್ ಆಗಿದ್ದು, ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಣೆ ನಡೆಸಿ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು. ಬೆಳಗಾವಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ...

ಕರ್ನಲ್ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ‘ವಿಜಯ್ ಶಾ ವಿರುದ್ಧ 2 ವಾರಗಳಲ್ಲಿ ವಿಚಾರಣೆಗೆ ಅನುಮತಿ ನೀಡುವ ಬಗ್ಗೆ ನಿರ್ಧರಿಸಿ’: ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಆಪರೇಷನ್ ಸಿಂಧೂರ್ ನಂತರ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ರಾಜ್ಯ ಸಚಿವ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಮೊಕದ್ದಮೆ ಹೂಡಲು ಅನುಮತಿ...