HomeಅಂಕಣಗಳುKarnataka against SIRನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

- Advertisement -
- Advertisement -

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ ಪತ್ರಕರ್ತರಾದ ಚಂದ್ರು ತರಹುಣಿಸೆ ಮಾತನಾಡಿಸಿ SIR ಎಂಬುದು ಜನರ ಮೇಲೆ ತೂಗುಗತ್ತಿ ತರುತ್ತಿದೆ. ಇದು ಯಾವುದೂ ಒಂದು ಸಮುದಾಯಕ್ಕೆ ಆಗುವ ಸಮಸ್ಯೆಯಲ್ಲ, ಇದು ಎಲ್ಲಾ ಜನರನ್ನು ದ್ವಿತೀಯ ದರ್ಜೆಯ ನಾಗರಿಕರನ್ನಾಗಿ ಮಾಡುವ ಇಂದು ದೊಡ್ಡ ಜನವಿರೋಧಿ ಕೃತ್ಯ ಎಂದು ವಿವರಿಸಿದರು.

ಮನುಜ ಮತ ಬಳಗದ ಅಧ್ಯಕ್ಷರಾದ ಡಿ.ಹೆಚ್. ಕಂಬಳಿ ಮಾತನಾಡುತ್ತಾ, ನಾವು ಸಂವಿಧಾನವನ್ನು ಉಳಿಸಿಕೊಳ್ಳಲು ಹೋರಾಡುತ್ತಿದ್ದೇವೆ ಇಡೀ ಸಮಯದಲ್ಲಿ SIR ಎಂದು ನಮ್ಮನ್ನು ನೀವು ಈ ದೇಶದ ಪ್ರಜೆಗಳೇ ಅಲ್ಲ ಹಾಗಾಗಿ ನೀವು ಸಂವಿಧಾನದ ಕುರಿತು ಮಾತನಾಡಬೇಡಿ ಎಂದು ಹೇಳುತ್ತಿದ್ದಾರೆ.

ಇದು ಬಿಜೆಪಿ ಹಾಗೂ ಆರೆಸ್ಸೆಸ್ ನ ದ್ವೇಷ ಸಿದ್ಧಾಂತದ ಭಾಗವೇ ಆಗಿದೆ. ಈ ಜನವಿರೋಧಿ ಸಿದ್ಧಾಂತವು ಮೇಲುಗೈ ಸಾಧಿಸಲು ನಾವು ಬಿಡಬಾರದು. ಈ ದೇಶವನ್ನು, ಸಂವಿಧಾನವನ್ನು ಹಾಗೂ ದೇಶದ ಜನರನ್ನೂ ಬಿಜೆಪಿಯ ಮುಷ್ಟಿಯಿಂದ ಬಿಡುಗಡೆಗೊಳಿಸಲು ಸ್ಮಾನಮಾನಕರೆಲ್ಲರೂ ಒಟ್ಟುಗೂಡಿ ಕೆಲಸ ಮಾಡಬೇಕಿದೆ.

ಈ ಜಾಗೃತಿ ಜಾಥಾ ಮುಂತಾದವುಗಳಿಂದ ನೀರ ನುಕೂಲ್ ಪಡೆದುಕೊಳ್ಳುವ ಕಾಂಗ್ರೆಸ್ ಪಕ್ಷವು ಬೀದಿಗಿಳಿದು SIR ದುಷ್ಕೃತ್ಯವನ್ನು ಎದುರಿಸಬೇಕಿದೆ. ಆದರೆ ಕಾಂಗ್ರೆಸ್ ಪಕ್ಷ ಇನ್ನೂ ನಿದ್ರಾವಸ್ತೆಯಲ್ಲಿದೆ. ಇದು ಈ ದೇಶದ ದುರಂತ.

ಈ ಜಾಥಾ ಕೇವಲ ಆರಂಭ ಮಾತ್ರವೇ. ಮುಂದಿನ ದಿನಗಳಲ್ಲಿ SIR ಕುರಿತು ಬಹಳ ದೊಡ್ಡ ಸಂಘರ್ಷಕ್ಕೆ ಕರುನಾಡು ಸಾಕ್ಷಿಯಾಗಲಿದೆ. ಎಂದು ವಿವರಿಸಿದರು.

ಜಮಾತ್ ಎ ಇಸ್ಲಾಂ ಹಿಂದ್ ನ ಟಿ ಹುಸೇನ್ ಸಾಬ್ ಮಾತನಾಡುತ್ತಾ, SIR ಪ್ರಕ್ರಿಯೆಯಿಂದ ಈ ದೇಶದಲ್ಲಿನ ಎಲ್ಲ ಜಾತಿಗಳ ಜನರಿಗೂ ಸಮಸ್ಯೆಯಾಗುತ್ತದೆ, ಈ ಹಿಂದೆ CAA- NRC ತಂದಿದ್ದರು. ಆಗ ಅದನ್ನು ಎಲ್ಲರೂ ಪ್ರತಿಭಟಿಸಿ ಹಿಮ್ಮೆಟ್ಟಿಸಿದೆವು. ಆದರೆ ಈಗ ಬೇರೊಂದು ರೂಪದಲ್ಲಿ ಮತ್ತೆ ತರುತ್ತಿದ್ದಾರೆ. ಇದನ್ನೂ ಪ್ರಬಲವಾಗಿ ಪ್ರತಿಭಟಿಸಿ ಹಿಮ್ಮೆಟ್ಟಿಸೋಣ ಎಂದರು.

ಸಭೆಯಲ್ಲಿ ಬಸವರಾಜ್ ಬಾದರ್ಲಿ, ಶರಣಪ್ಪ ಟೆಂಗಿನಕಾಯಿ, ಖಾಜಿ ಮಲ್ಲಿಖ್ ಅದ್ಯಕ್ಷರು ಬ್ಲಾಕ್ ಕಾಂಗ್ರೆಸ್, ಮಂಜುನಾಥ್ ಗಾಂಧಿನಗರ, ಬಿ.ಎನ್ ಯರದಿಹಾಳ, ಬೀಮಣ್ಣ ನಗನೂರು, ಡಾ.ವಸಿಂ ಅಹ್ಮದ್ ಅನೀಲ್ ಕುಮಾರ್ ಕಾಂಗ್ರೆಸ್ ಮುಖಂಡರು ಅಭಿಲೇಶ್ ನಾಯ್ಕ ಹಾಜರಿದ್ದರು.

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...