Homeಮುಖಪುಟಧನ್‌ಬಾದ್‌ ನ್ಯಾಯಾಧೀಶರ ಕೊಲೆ: ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಧನ್‌ಬಾದ್‌ ನ್ಯಾಯಾಧೀಶರ ಕೊಲೆ: ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ಧನ್‌ಬಾದ್‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಅವರನ್ನು ಹತ್ಯೆಗೈದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಧನ್‌ಬಾದ್‌ನ ಸೆಷನ್ಸ್ ನ್ಯಾಯಾಲಯವು ಲಖನ್ ವರ್ಮಾ ಮತ್ತು ರಾಹುಲ್ ವರ್ಮಾ ಅವರನ್ನು ತಪ್ಪಿತಸ್ಥರೆಂದು ಘೋಷಿಸಿದ ಒಂದು ತಿಂಗಳ ನಂತರ ಈ ನಿರ್ಧಾರ ಹೊರಬಿದ್ದಿದೆ. ಇಬ್ಬರು ಅಪರಾಧಿಗಳಿಗೆ 30,000 ರೂಪಾಯಿ ದಂಡವನ್ನೂ ವಿಧಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

49 ವರ್ಷದ ಜಿಲ್ಲಾ ನ್ಯಾಯಾಧೀಶರು ಕಳೆದ ವರ್ಷ ಜುಲೈ 28ರಂದು ಬೆಳಿಗ್ಗೆ ಧನ್‌ಬಾದ್‌ನ ರಣಧೀರ್ ವರ್ಮಾ ಚೌಕ್ ಬಳಿ ಜಾಗಿಂಗ್ ಹೋಗುತ್ತಿದ್ದಾಗ ಆಟೋ ರಿಕ್ಷಾದಲ್ಲಿ ಬಂದು ಗುದ್ದಿ ಕೊಲ್ಲಲಾಗಿತ್ತು.

ವಿಚಾರಣೆಯ ಸಮಯದಲ್ಲಿ ಇದು ಪೂರ್ವಯೋಜಿತ ಕೃತ್ಯ ಎಂದು ನಿರೂಪಿಸಲಾಗಿತ್ತು. ಮತ್ತೊಂದೆಡೆ, ಇದು ‘ಉದ್ದೇಶಪೂರ್ವಕವಾದ ಕೃತ್ಯವಲ್ಲ’ ಎಂದು ಆರೋಪಿಸಲಾಗಿತ್ತು.

ಜಾರ್ಖಂಡ್ ಪೊಲೀಸರು ಧನ್‌ಬಾದ್‌ನ ದಿಗ್ವಾಡಿಹ್ ನಿವಾಸಿಗಳಾದ ಲಖನ್ ವರ್ಮಾ ಮತ್ತು ರಾಹುಲ್ ವರ್ಮಾ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ), 201 (ಅಪರಾಧದ ಸಾಕ್ಷ್ಯಾಧಾರಗಳು ಕಣ್ಮರೆಯಾಗಲು ಕಾರಣ) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಆರೋಪ ಹೊರಿಸಿದ್ದರು. ಘಟನೆಯು ಪೂರ್ವ ನಿಯೋಜಿತವಾಗಿದ್ದು, ಹಿಟ್ ಅಂಡ್ ರನ್ ಇದಾಗಿದೆ ಎಂದು ಪೊಲೀಸರು ಶಂಕಿಸಿದ್ದರು.

“ನ್ಯಾಯಾಧೀಶರು ಇಬ್ಬರೂ ಆರೋಪಿಗಳನ್ನು ಕೊಲೆಯ ಅಪರಾಧಿಗಳು ಎಂದು ಘೋಷಿಸಿದ್ದಾರೆ. ಉದ್ದೇಶಪೂರ್ವಕವಾಗಿಯೇ ಆಟೊ ನ್ಯಾಯಾಧೀಶರತ್ತ ಹರಿದು ಬಂದು ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿ ಶರವಣಕುಮಾರ್ ಹೇಳಿದ್ದನ್ನು ನ್ಯಾಯಾಲಯ ಗಣನೆಗೆ ತೆಗೆದುಕೊಂಡಿದೆ. ನ್ಯಾಯಾಲಯವು ಸಿಎಫ್‌ಎಸ್‌ಎಲ್‌‌ (ಸೆಂಟ್ರಲ್ ಫೋರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿ) ವರದಿಯನ್ನು ಗಮನಿಸಿದೆ. ಕೃತ್ಯದ ಸಮಯದಲ್ಲಿ ಇಬ್ಬರೂ ಆರೋಪಿಗಳು ಕುಡಿದಿರಲಿಲ್ಲ ಎಂಬುದು ತಿಳಿದುಬಂದಿದೆ” ಎಂದು ಪ್ರತಿವಾದಿ ವಕೀಲ ಕುಮಾರ್ ಬಿಮ್ಲೇಂದು ಹೇಳಿದ್ದಾರೆ.

ಧನಬಾದ್‌ನ ಜಿಲ್ಲಾ ಮತ್ತು ಹೆಚ್ಚುವರಿ ನ್ಯಾಯಾಧೀಶರಾದ ಉತ್ತಮ್ ಆನಂದ್‌ರವರು ಬುಧವಾರ ಬೆಳಿಗ್ಗೆ 5 ಗಂಟೆಯ ಸಮಯದಲ್ಲಿ ಜಾಗಿಂಗ್ ಮಾಡುತ್ತಿದ್ದರು. ಅವರ ಮನೆಯಿಂದ ಕೇವಲ ಅರ್ಧ ಕಿ.ಮೀ ಅಂತರದಲ್ಲಿ ಅವರು ರಸ್ತೆ ಬದಿಯಲ್ಲಿ ಜಾಗ್ ಮಾಡುತ್ತಿರುವಾಗ ಹಿಂದಿನಿಂದ ಬಂದ ಆಟೋವೊಂದು ಅವರನ್ನೇ ಗುರಿಯಾಗಿಸಿಕೊಂಡು ಗುದ್ದಿತ್ತು. ಇದರ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದ್ದವು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ನಂತರ ಆಸ್ಪತ್ರೆಗೆ ಸೇರಿಸಿದರೂ ಉಳಿಸಲು ಸಾಧ್ಯವಾಗಿರಲಿಲ್ಲ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...