Homeಮುಖಪುಟಧರಮ್‌ ಸಂಸದ್ ದ್ವೇಷ ಭಾಷಣ ಪ್ರಕರಣ ವಿಳಂಬ: ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಛಡಿಯೇಟು

ಧರಮ್‌ ಸಂಸದ್ ದ್ವೇಷ ಭಾಷಣ ಪ್ರಕರಣ ವಿಳಂಬ: ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಛಡಿಯೇಟು

- Advertisement -
- Advertisement -

2021ರ ಡಿಸೆಂಬರ್‌ನಲ್ಲಿ ದೆಹಲಿಯಲ್ಲಿ ನಡೆದ ಧರಮ್ ಸಂಸದ್ ಕಾರ್ಯಕ್ರಮದಲ್ಲಿ ಮಾಡಲಾದ ಪ್ರಚೋದನಕಾರಿ ಭಾಷಣಗಳ ಸಂಬಂಧ ತನಿಖೆಯನ್ನು ಮುಂದುವರಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ತನಿಖಾಧಿಕಾರಿಗೆ ಸೂಚಿಸಿದೆ.

“ಡಿಸೆಂಬರ್ 19, 2021ರಂದು ಘಟನೆ ನಡೆದಾಗಿನಿಂದ ತನಿಖೆಯನ್ನು ಮುಂದುವರಿಸಲು ತೆಗೆದುಕೊಂಡ ಕ್ರಮಗಳನ್ನು ತನಿಖಾಧಿಕಾರಿ (ಐಒ) ತನ್ನ ದಾಖಲೆಯಲ್ಲಿ ಇಡುವುದು ಅವಶ್ಯಕ ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ” ಎಂದು ಸಿಜೆಐ  ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಅವರಿದ್ದ ಪೀಠವು ಹೇಳಿದೆ. ಎರಡು ವಾರಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ತನಿಖಾಧಿಕಾರಿಗೆ ನ್ಯಾಯಾಲಯ ನಿರ್ದೇಶಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತೆಹ್ಸೀನ್ ಪೂನಾವಾಲಾ ಪ್ರಕರಣದಲ್ಲಿ ನ್ಯಾಯಾಲಯ ನೀಡಿದ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ, ಘಟನೆಯ ಬಗ್ಗೆ ನಿಷ್ಕ್ರಿಯತೆ ತೋರಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಶದನ್ ಫರಾಸತ್, “ಘಟನೆ ನಡೆದ ಐದು ತಿಂಗಳ ನಂತರ 2022ರ ಮೇ ತಿಂಗಳಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಇದು ಒಂದು ನಿರ್ದಿಷ್ಟ ರೀತಿಯ ಹಿಂಸಾಚಾರಕ್ಕೆ ನೀಡಿದ ಕರೆಯಾಗಿದೆ. ಪ್ರಕರಣ ಸಾಕಷ್ಟು ಗಂಭೀರವಾಗಿದೆ. ಇದು ಒಬ್ಬ ವ್ಯಕ್ತಿಗೆ ಸಂಬಂಧಿಸಿದ ವಿಚಾರವಲ್ಲ, ಆತನೊಂದಿಗೆ ಅನೇಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಅಂತಹ ಹೇಳಿಕೆಗಳನ್ನು ನೀಡುವ ಜನರನ್ನು ಗುರುತಿಸುವುದು ಮತ್ತು ಅಂಥವರು ಸಾರ್ವಜನಿಕ ವೇದಿಕೆಗಳನ್ನು ಬಳಸದಿರುವಂತೆ ಖಚಿತಪಡಿಸಿಕೊಳ್ಳುವುದು ಸುಪ್ರೀಂ ಕೋರ್ಟ್ ಮಾರ್ಗಸೂಚಿಯಾಗಿರುತ್ತದೆ ಎಂದು ಅರ್ಜಿದಾರರು ಉಲ್ಲೇಖಿಸಿದ್ದಾರೆ.

“ಶೀಘ್ರ ಎಫ್‌ಐಆರ್‌ ದಾಖಲಿಸಿ ಚಾರ್ಜ್‌ಶೀಟ್‌ ಸಲ್ಲಿಸುವ ಅಗತ್ಯವಿದ್ದರೂ ಐದು ತಿಂಗಳಾದರೂ ಎಫ್‌ಐಆರ್‌ ದಾಖಲಿಸಲಿಲ್ಲ. ಇನ್ನೂ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ಅವರು ಯಾರನ್ನಾದರೂ ವಿಚಾರಣೆಗೆ ಕರೆದಿದ್ದಾರೆಯೇ- ಅದನ್ನೂ ಹೇಳುವುದಿಲ್ಲ. ಅವರು ಯಾರನ್ನೂ ಬಂಧಿಸಿಲ್ಲ. ಯಾವುದೇ ಆರೋಪಪಟ್ಟಿ ಸಲ್ಲಿಕೆಯಾಗಿಲ್ಲ” ಎಂದು ವಾದಿಸಿರುವ ಅರ್ಜಿದಾರರ ಪರ ವಕೀಲರು, ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಲಾಗಿದೆ ಎಂದಿದ್ದಾರೆ.

ದೆಹಲಿ ಪೊಲೀಸರ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆಎಂ ನಟರಾಜ್, “ಸುಪ್ರೀಂ ಕೋರ್ಟ್ ನೀಡಿದ ಯಾವುದೇ ನಿರ್ದೇಶನವನ್ನು ಉಲ್ಲಂಘಿಸಿಲ್ಲ. ತನಿಖೆ ಹೇಗೆ ಮುಂದುವರಿಯಬೇಕು ಎಂಬುದನ್ನು ಅರ್ಜಿದಾರರು ನಿರ್ದೇಶಿಸಲು ಸಾಧ್ಯವಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ಆಗ ಸಿಜೆಐ, “ಆದರೆ ತನಿಖೆಯ ವಿಷಯದಲ್ಲಿ ನೀವು ಏನು ಮಾಡುತ್ತಿದ್ದೀರಿ? ಘಟನೆ ಡಿಸೆಂಬರ್ 2021ರಲ್ಲಿ ನಡೆದಿದೆ. ಸುಮಾರು ಐದು ತಿಂಗಳ ನಂತರ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್ ದಾಖಲಿಸಲು ಐದು ತಿಂಗಳು ಏಕೆ ಬೇಕು?” ಎಂದು ಪ್ರಶ್ನಿಸಿದ್ದಾರೆ.

“ವಿಳಂಬ ಉದ್ದೇಶಪೂರ್ವಕವಲ್ಲ” ಎಂದು ಎಎಸ್‌ಜಿ ಉತ್ತರಿಸಿದ್ದಾರೆ. ಪೊಲೀಸರಿಗೆ ಬಂದ ಮಾಹಿತಿಯ ಆಧಾರದ ಮೇಲೆ ತನಿಖೆ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಸೇತುಸಮುದ್ರಂ ಯೋಜನೆಗೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಿದ ತಮಿಳುನಾಡು; ಬಿಜೆಪಿ ಬೆಂಬಲ

“ಮೇ 4 ರ ನಂತರ, ನೀವು ಯಾವ ಕ್ರಮಗಳನ್ನು ತೆಗೆದುಕೊಂಡಿದ್ದೀರಿ? ಎಷ್ಟು ಜನರನ್ನು ಬಂಧಿಸಿದ್ದೀರಿ? ಯಾವ ತನಿಖೆ ಮಾಡಿದ್ದೀರಿ? ಎಷ್ಟು ಜನರನ್ನು ಪರೀಕ್ಷಿಸಲಾಗಿದೆ?” ಎಂದು ಸಿಜೆಐ ಕೇಳಿದರು.

“ಐದು ತಿಂಗಳ ನಂತರ ಎಫ್‌ಐಆರ್ ದಾಖಲಿಸಿರುವಾಗ ಕೋರ್ಟ್‌ನ ಮಾರ್ಗಸೂಚಿಗಳನ್ನು ಅನುಸರಿಸಲಾಗಿದೆ ಎಂದು ಹೇಗೆ ಹೇಳಬಹುದು?” ಎಂದು ಸಿಜೆಐ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. “ನೀವು ಐದು ತಿಂಗಳ ನಂತರ ಮತ್ತು ಎಂಟು ತಿಂಗಳ ನಂತರ ಎಫ್‌ಐಆರ್ ಅನ್ನು ನೋಂದಾಯಿಸಿದ್ದು, ಯಾವುದೇ ಗಣನೀಯ ಪ್ರಗತಿಯಿಲ್ಲ. ಮಾರ್ಗಸೂಚಿಗಳನ್ನು ನೀವು ಹೇಗೆ ಅನುಸರಿಸಿದ್ದೀರಿ?”  ಎಂದು ಸಿಜೆಐ ಛಡಿಯೇಟು ನೀಡಿದ್ದಾರೆ. ಎಫ್‌ಐಆರ್ ದಾಖಲಾದ ನಂತರ ತನಿಖೆ ಯಾವ ಹಂತದಲ್ಲಿದೆ ಎಂದು ತಿಳಿಸಲು ಸೂಚಿಸಿದ್ದಾರೆ.

ಇದು ಕೇವಲ ಅರ್ಜಿದಾರರ ಆರೋಪಗಳಾಗಿದ್ದು, ತನಿಖೆಯ ಪ್ರಗತಿಯ ಬಗ್ಗೆ ಸೂಚನೆಗಳನ್ನು ಪಡೆದು ನ್ಯಾಯಾಲಯಕ್ಕೆ ತಿಳಿಸುವುದಾಗಿ ನಟರಾಜ್ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...