Homeಮುಖಪುಟಅಧಿಕಾರಕ್ಕೆ ಬಂದರೆ ಅದಾನಿಗೆ ನೀಡಿರುವ ಧಾರಾವಿ ಅಭಿವೃದ್ದಿ ಟೆಂಡರ್ ರದ್ದು : ಉದ್ದವ್ ಠಾಕ್ರೆ

ಅಧಿಕಾರಕ್ಕೆ ಬಂದರೆ ಅದಾನಿಗೆ ನೀಡಿರುವ ಧಾರಾವಿ ಅಭಿವೃದ್ದಿ ಟೆಂಡರ್ ರದ್ದು : ಉದ್ದವ್ ಠಾಕ್ರೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಅಧಿಕಾರಕ್ಕೆ ಬಂದರೆ ಧಾರಾವಿ ಪುನರಾಭಿವೃದ್ಧಿ ಯೋಜನೆಗಾಗಿ ಅದಾನಿ ಗ್ರೂಪ್‌ಗೆ ನೀಡಲಾದ ಟೆಂಡರ್ ಅನ್ನು ರದ್ದುಗೊಳಿಸಲಾಗುವುದು ಎಂದು ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಶನಿವಾರ ಹೇಳಿದ್ದಾರೆ ಎಂದು ವರದಿಯಾಗಿದೆ.

ಅಕ್ಟೋಬರ್‌ನಲ್ಲಿ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯುವ ನಿರೀಕ್ಷೆ ಇದೆ.

ಮುಂಬೈನ ಧಾರಾವಿ ಕೊಳಗೇರಿ ಪ್ರದೇಶದ ಪುನರಾಭಿವೃದ್ಧಿ ಯೋಜನೆಯ ಟೆಂಡರ್ 2022ರಲ್ಲಿ ಅದಾನಿ ಗ್ರೂಪ್ ಪಾಲಾಗಿದೆ. ಈ ಯೋಜನೆಯು ಪ್ರಸ್ತುತ 2.5 ಚದರ ಕಿಲೋ ಮೀಟರ್ ಪ್ರದೇಶದಲ್ಲಿ ವಾಸಿಸುತ್ತಿರುವ 6.5 ಲಕ್ಷ ಕೊಳೆಗೇರಿ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸುವ ಉದ್ದೇಶ ಹೊಂದಿದೆ.

ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಉದ್ದವ್ ಠಾಕ್ರೆ, “ಧಾರಾವಿ ನಿವಾಸಿಗಳು ಮತ್ತು ಸ್ಥಳೀಯ ವ್ಯಾಪಾರಗಳನ್ನು ಬೇರು ಸಹಿತ ಕಿತ್ತು ಹಾಕದಂತೆ ನಮ್ಮ ಸರ್ಕಾರವು ರಕ್ಷಣೆ ನೀಡಲಿದೆ ಎಂದಿದ್ದಾರೆ.

ಉದ್ಧವ್ ಠಾಕ್ರೆ ನೇತೃತ್ವದ ಶಿವ ಸೇನೆಯು ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿಯ ಭಾಗವಾಗಿದೆ. ಇದರಲ್ಲಿ ಕಾಂಗ್ರೆಸ್ ಮತ್ತು ಶರದ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷವೂ ಸೇರಿದೆ.

ಧಾರಾವಿ ಕೊಳಗೇರಿ ನಿವಾಸಿಗಳಿಗೆ 500 ಚದರ ಅಡಿಯ ಮನೆಗಳನ್ನು ಒದಗಿಸಬೇಕು ಎಂದು ಆಗ್ರಹಿಸಿರುವ ಠಾಕ್ರೆ, ಗುತ್ತಿಗೆಯಲ್ಲಿ ನಿರ್ದಿಷ್ಟಪಡಿಸದ ಹೆಚ್ಚುವರಿ ರಿಯಾಯಿತಿಗಳನ್ನು ಯೋಜನೆಗಾಗಿ ಅದಾನಿ ಗ್ರೂಪ್‌ಗೆ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.

ನಾವು ಯಾವುದೇ ಹೆಚ್ಚುವರಿ ನೀಡುವುದಿಲ್ಲ. ಧಾರಾವಿ ನಿವಾಸಿಗಳಿಗೆ ಯಾವುದು ಒಳ್ಳೆಯದು ಎಂಬುದನ್ನು ನೋಡುತ್ತೇವೆ. ಅಗತ್ಯವಿದ್ದರೆ ಹೊಸದಾಗಿ ಟೆಂಡರ್ ನೀಡುತ್ತೇವೆ. ಮುಂಬೈಯನ್ನು ಅದಾನಿ ನಗರವನ್ನಾಗಿ ಮಾಡಲು ನಾವು ಬಿಡುವುದಿಲ್ಲ ಎಂದು ಠಾಕ್ರೆ ಹೇಳಿದ್ದಾರೆ.

ಧಾರಾವಿ ಪುನರಾಭಿವೃದ್ಧಿ ಯೋಜನೆಯನ್ನು ವಿಶೇಷವಾಗಿ ನಡೆಸಲಾಗುತ್ತಿದೆ. ಇದರಲ್ಲಿ ಅದಾನಿ ಗ್ರೂಪ್ 80% ಪಾಲನ್ನು ಹೊಂದಿದೆ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಉಳಿದ 20% ಪಾಲು ಹೊಂದಿದೆ.

ಯೋಜನೆಯಡಿ ಕೊಳೆಗೇರಿ ನಿವಾಸಿಗಳ ಪುನರ್ವಸತಿ ಜೊತೆಗೆ, ಕಟ್ಟಡಗಳು ಮತ್ತು ಅನೌಪಚಾರಿಕ ವಠಾರಗಳನ್ನು ಪುನರಾಭಿವೃದ್ಧಿ ಮಾಡಲಾಗುತ್ತದೆ. ಪ್ರಪಂಚದ ಅತಿದೊಡ್ಡ ಕೊಳೆಗೇರಿಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ಧಾರಾವಿಯಲ್ಲಿ ನೀರು ಸರಬರಾಜು ಮತ್ತು ಒಳಚರಂಡಿಗಳಂತಹ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ.

ಇದನ್ನೂ ಓದಿ : ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನೀಟ್ ಫಲಿತಾಂಶ ಪ್ರಕಟಿಸಿದ ಎನ್‌ಟಿಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...