Homeಕರ್ನಾಟಕಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ - ಪ್ರಕರಣ ದಾಖಲು

ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ಕೊಲೆ ಆರೋಪಿಯ ಸಹೋದರ ಬಜರಂಗದಳ ಜಿಲ್ಲಾ ಸಂಚಾಲಕನಾಗಿದ್ದು, ಹಲ್ಲೆ ಮಾಡುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಬಳಿಯ ಕನ್ಯಾಡಿ ಗ್ರಾಮದ ಪರಶಿಷ್ಟ ಜಾತಿಗೆ ಸೇರಿದ ದಿನೇಶ್ (40) ಎಂಬ ಯುವಕನನ್ನು ಅದೇ ಗ್ರಾಮದ ಕೃಷ್ಣ ಎಂಬ ಬಜರಂಗದಳ ಮುಖಂಡನೊಬ್ಬ ಜಮೀನು ವಿವಾದಕ್ಕೆ ಸಂಬಂಧಿಸಿ ಹತ್ಯೆ ಮಾಡಿದ್ದಾನೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ 45 ಸೆಕೆಂಡ್‌ಗಳ ಸಿಸಿಟಿವಿ ದೃಶ್ಯಾವಳಿ ಇರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದರಲ್ಲಿ ದಿನೇಶ್ ಎಂಬ ದಲಿತ ಯುವಕನನ್ನು ಬಜರಂಗದಳ ಮುಖಂಡ ಕೃಷ್ಣ ಎಳೆದಾಡಿ, ಥಳಿಸುವುದು ದಾಖಲಾಗಿದೆ.

ಪ್ರಕರಣದ ವಿವರ

ಫೆಬ್ರವರಿ 23 ರಂದು ಕೃಷ್ಣ ಎಂಬ ಬಜರಂಗದಳ ಮುಖಂಡನು ದಿನೇಶ್‌ಗೆ ನಿನ್ನ ಜಮೀನನ ದಾಖಲೆಗಳನ್ನು ನಾನು ಮಾಡಿಕೊಟ್ಟಿದ್ದೇನೆ. ಆದರೆ ನೀನು ಯಾವಾಗಲೂ ಕಾಂಗ್ರೆಸ್ ಕಾಂಗ್ರೆಸ್ ಎಂದು ಬೊಬ್ಬೆ ಹಾಕುತ್ತೀಯೆ ಎಂದು ಬೈದಿದ್ದಾರೆ. ಆಗ ಕೊಲೆಗೀಡಾದ ದಿನೇಶ್ ಇಲ್ಲ ನನ್ನ ಜಮೀನಿನ ದಾಖಲೆಗಳನ್ನು ಕಾಂಗ್ರೆಸ್‌ನವರು ಮಾಡಿಕೊಟ್ಟಿದ್ದಾರೆ ಸಾರ್ವಜನಿಕವಾಗಿ ಹೇಳಿದ್ದಾನೆ. ಇದರಿಂದ ರೊಚ್ಚಿಗೆದ್ದ ಕೃಷ್ಣ ದಿನೇಶ್‌ಗೆ ಮನಬಂದಂತೆ ಥಳಿಸಿದ್ದಾನೆ. ಆತನ ಹೊಟ್ಟೆ ಮೇಲೆ ಕೈಯಿಂದ ಗುದ್ದಿ, ಕಾಲಿನಿಂದ ಒದ್ದಿದ್ದಾನೆ. ಇಷ್ಟೆಲ್ಲಾ ಹೊಡೆದಾಗ ದಿನೇಶ್ ತನ್ನ ಬಳಿ ಹಣವಿಲ್ಲದ ಕಾರಣ ಹೊಟ್ಟೆ ನೋವೆಂದು ಮನೆಯಲ್ಲಿ ಅಳುತ್ತಾ, ಒದ್ದಾಡುತ್ತಿದ್ದನು. ಆಗ ಕಾರಣ ಕೇಳಿದಾಗ ಕೃಷ್ಣ ಥಳಿಸಿದ್ದನ್ನು ಮನೆಯವರಿಗೆ ತಿಳಿಸಿದ್ದಾನೆ.

ಇದರಿಂದ ಕುಪಿತಗೊಂಡ ಮನೆಯವರು ಕೃಷ್ಣನ ಬಳಿ ಜಗಳವಾಡಿ, ನೀನೆ ಆಸ್ಪತ್ರೆಗೆ ತೋರಿಸು ಎಂದು ತಾಕೀತು ಮಾಡಿದ್ದಾರೆ. ಕೃಷ್ಣ ಸಂತ್ರಸ್ತ ದಿನೇಶ್‌ ರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ, ಮೆಟ್ಟಿಲಿನಿಂದ ಬಿದ್ದು ಗಾಯಗೊಂಡಿದ್ದಾನೆ ಎಂದು ವೈದ್ಯರ ಬಳಿ ಸುಳ್ಳು ಹೇಳಿದ್ದಾನೆ. ಆದರೆ ಹೊಟ್ಟೆಯಲ್ಲಿನ ಒಳನೋವುಗಳಿಂದ ಬಳಲುತ್ತಿದ್ದ ದಿನೇಶ್ ಚಿಕಿತ್ಸೆ ಫಲಕಾರಿಯಾಗದೆ ಫೆಬ್ರವರಿ 25ರ ಬೆಳಗ್ಗಿನ ಜಾವ 2.30ರಲ್ಲಿ  ನಿಧನರಾಗಿದ್ದಾರೆ.

ಈ ಕುರಿತು ಮೃತನ ತಾಯಿ ಪದ್ಮಾವತಿಯವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪೊಲೀಸರು ದಲಿತ ದೌರ್ಜನ್ಯ ತಡೆ ಕಾಯ್ದೆ ಸೇರಿ ಇತರ ಕಾಲಂಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಚಾರಣೆ ನಡೆಯುತ್ತಿದ್ದು, ಇದುವರೆಗೂ ಆರೋಪಿಯ ಬಂಧನವಾಗಿಲ್ಲ.

ಪ್ರಕರಣದ ಆರೋಪಿ ಕೃಷ್ಣ ಎಂಬಾತನು ಭಾಸ್ಕರ್ ಧರ್ಮಸ್ಥಳ ಎಂಬ ಸ್ಥಳೀಯ ಬಜರಂಗದಳದ ಜಿಲ್ಲಾ ಸಂಚಾಲಕನ ಸಹೋದರ ಎನ್ನಲಾಗಿದೆ.

ಡಿವೈಎಫ್‌ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳರವರು ಪ್ರಕರಣದ ಕುರಿತು ಮಾತನಾಡಿ, “ದಕ್ಷಿಣ ಕನ್ನಡದಲ್ಲಿ ಸಂಘಪರಿವಾದ ಪರ್ಯಾಯ ಸರ್ಕಾರ ಅಸ್ತಿತ್ವದಲ್ಲಿದೆ. ಅವರು ಅಕ್ರಮ ಮರಳು ಮಾಫಿಯ, ಭ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ. ಅವರನ್ನು ಪ್ರಶ್ನಿಸಿದವರ ಮೇಲೆ ಹಲ್ಲೆ-ಕೊಲೆಗಳು ಸಾಮಾನ್ಯವಾಗಿವೆ. ಸ್ಥಳೀಯ ಬಿಜೆಪಿ ಶಾಸಕರು, ಸಚಿವರ ಅವರ ಬೆನ್ನಿಗಿರುವುದರಿಂದ ಅವರ ಮೇಲೆ ಯಾವುದೇ ಕ್ರಮಗಳು ಜರುಗುತ್ತಿಲ್ಲ. ಕನ್ಯಾಡಿ ಗ್ರಾಮದ ದಲಿತನ ಕೊಲೆಯೂ ಅದರ ಮುಂದುವರಿದ ಭಾಗವಾಗಿದೆ. ಆರಂಭದಲ್ಲಿ ಪೊಲೀಸರು ಪ್ರಕರಣ ದಾಖಲಿಸುವುದಕ್ಕೆ ಮೀನಾಮೇಷ ಎಣಿಸುತ್ತಿದ್ದರು. ಈಗ ನಾವು ಒತ್ತಡ ತಂದು ಪ್ರಕರಣ ದಾಖಲಿಸಿದ್ದೇವೆ. ಆದರೆ ಆರೋಪಿಗಳ ಬಂಧನವಾಗಿಲ್ಲ. ಈ ಕೂಡಲೇ ಆರೋಪಿಗಳನ್ನು ಬಂಧಿಸಿ ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಒತ್ತಾಯಿಸುತ್ತೇವೆ” ಎಂದಿದ್ದಾರೆ.


ಇದನ್ನೂ ಓದಿ: ಉಕ್ರೇನ್ ಯುದ್ಧ ಸಂದರ್ಭದಲ್ಲಿ ವಿಮಾನ ಪ್ರಯಾಣ ದರ ಏರಿಸಿದ ಕಂಪನಿಗಳು: ತೀವ್ರ ಟೀಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ನಮ್ಮದು ಪ್ರಜಾಪ್ರಭುತ್ವ; ಪ್ರಧಾನನಮಂತ್ರಿ ಏಕಚಕ್ರಾಧಿಪತಿ ಅಲ್ಲ..’; ದೇವೇಗೌಡರಿಗೆ ‘ಫೆಡರಲಿಸಂ’ ಪಾಠ ಮಾಡಿದ ಸಿಎಂ

0
'ನಮ್ಮದು ಒಕ್ಕೂಟ ವ್ಯವಸ್ಥೆಯ ಪ್ರಜಾಪ್ರಭುತ್ವ. ಇಲ್ಲಿ ಪ್ರಧಾನನಮಂತ್ರಿ ಏಕಚಕ್ರಾಧಿಪತಿಯೂ ಅಲ್ಲ, ಮುಖ್ಯಮಂತ್ರಿ ಮಾಂಡಲೀಕನೂ ಅಲ್ಲ. ಇಬ್ಬರು ಅವರವರ ಸ್ಥಾನಮಾನದಲ್ಲಿ ಸಮಾನರು' ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರಿಗೆ ಒಕ್ಕೂಟ...