Homeಕರ್ನಾಟಕಧರ್ಮಸ್ಥಳ ಪ್ರಕರಣ: ಎಸ್‌ಐಟಿಗೆ ಹೈಕೋರ್ಟ್ ನೋಟಿಸ್

ಧರ್ಮಸ್ಥಳ ಪ್ರಕರಣ: ಎಸ್‌ಐಟಿಗೆ ಹೈಕೋರ್ಟ್ ನೋಟಿಸ್

- Advertisement -
- Advertisement -

ನಾವು ಗುರುತಿಸುವ ಸ್ಥಳಗಳಲ್ಲಿ ಪರಿಶೀಲನೆ ಮತ್ತು ಶವಗಳ ಉತ್ಖನನ ನಡೆಸಲು ಕಾಲಮಿತಿಯ ಕ್ರಮ ಕೈಗೊಳ್ಳುವಂತೆ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶನ ನೀಡಬೇಕು ಎಂದು ಕೋರಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಮಾಹಿತಿ ಒದಗಿಸಲು ಕರ್ನಾಟಕ ಹೈಕೋರ್ಟ್‌ ಸೋಮವಾರ (ಸೆ.15) ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಧರ್ಮಸ್ಥಳ ಗ್ರಾಮದ ಪಾಂಗಾಳ ಮನೆಯ ನಿವಾಸಿ ಪಾಂಡುರಂಗ ಗೌಡ ಮತ್ತು ತುಕಾರಾಂ ಗೌಡ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ.

ಅರ್ಜಿದಾರರ ಪರ ವಕೀಲ ದೀಪಕ್‌ ಖೋಸ್ಲಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ “ಅರ್ಜಿದಾರರು ಎಸ್‌ಐಟಿಗೆ ಕಳೆದ ತಿಂಗಳ 29ರಂದು ಅರ್ಜಿ ಸಲ್ಲಿಸಿದ್ದು, ಧರ್ಮಸ್ಥಳದಲ್ಲಿ ನೂರಾರು ಅನಾಮಧೇಯ ಶವಗಳನ್ನು ಅಕ್ರಮವಾಗಿ ದಫನ ಮಾಡಿರುವ ಬಗ್ಗೆ ಸ್ಥಳಗಳನ್ನು ಗುರುತಿಸಿದ್ದಾರೆ. ಈ ಸ್ಥಳಗಳಲ್ಲಿ ಕೂಡಲೇ ಭೂಮಿ ಅಗೆತ ಶುರುಮಾಡಲು ಎಸ್‌ಐಟಿಗೆ ನಿರ್ದೇಶನ ನೀಡಬೇಕು” ಎಂದು ಮನವಿ ಮಾಡಿದ್ದಾರೆ.

ಖೋಸ್ಲಾ ಅವರ ವಾದಕ್ಕೆ ಪ್ರತಿಯಾಗಿ ಪ್ರಾಸಿಕ್ಯೂಷನ್‌ ಪರ ಹಾಜರಿದ್ದ ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್‌ ಜಗದೀಶ್‌ ಅವರು ಅರ್ಜಿದಾರರ ಪರ ವಕಾಲತ್ತನ್ನೇ ಸಲ್ಲಿಸಿಲ್ಲ ಎಂದು ಪೀಠಕ್ಕೆ ತಿಳಿಸಿದ್ದಾರೆ.

ಇದನ್ನು ಪರಿಶೀಲಿಸಿದ ಪೀಠವು ‘ಕಚೇರಿಯ ಆಕ್ಷೇಪಣೆಗಳನ್ನು ಪೂರೈಸಿ, ಪ್ರಾಸಿಕ್ಯೂಷನ್‌ಗೆ ಅರ್ಜಿಯ ಪ್ರತಿಯನ್ನು ನೀಡಿ ಎಂದು ಅರ್ಜಿದಾರರಿಗೆ ಆದೇಶಿಸಿದೆ. ಅಂತೆಯೇ, ಪ್ರಾಸಿಕ್ಯೂಷನ್‌ ಅರ್ಜಿದಾರರ ಮನವಿಯ ಬಗ್ಗೆ ಮಾಹಿತಿ ಸಂಗ್ರಹಿಸಿ ನ್ಯಾಯಾಲಯಕ್ಕೆ ಒದಗಿಸಬೇಕು” ಎಂದು ಜಗದೀಶ್‌ ಅವರಿಗೆ ನಿರ್ದೇಶಿಸಿ ವಿಚಾರಣೆಯನ್ನು ಸೆಪ್ಟೆಂಬರ್‌ 18ಕ್ಕೆ ಮುಂದೂಡಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಎಸ್‌ಐಟಿಗೆ ಆಗಸ್ಟ್‌ 29ರಂದು ನೀಡಿರುವ ಮನವಿಯನ್ನು ಪರಿಶೀಲಿಸಿ ಈ ಕೂಡಲೇ ಕ್ರಮ ಕೈಗೊಳ್ಳಲು ನಿರ್ದೇಶಿಸಬೇಕು. ನಾವು ತೋರಿಸುವ ಸ್ಥಳಗಳಲ್ಲಿ ಭೂಮಿ ಅಗೆಯಲು ಅನುವಾಗುವಂತೆ ನ್ಯಾಯಾಂಗ ರಿಜಿಸ್ಟ್ರಾರ್‌ ಅಥವಾ ನಿವೃತ್ತ ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ಕೋರ್ಟ್‌ ಕಮಿಷನರ್‌ ನೇಮಕ ಮಾಡಬೇಕು. ಈ ಕುರಿತು ವಾಸ್ತವಿಕ ವರದಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು ಎಂದು ವರದಿ ವಿವರಿಸಿದೆ.

ಲೈವ್ ಲಾ ವರದಿಯಲ್ಲಿ, ಆಗಸ್ಟ್ 6 ಮತ್ತು 29ರಂದು ಎರಡು ಬಾರಿ ಎಸ್‌ಐಟಿಗೆ ಮನವಿ ಸಲ್ಲಿಸಲಾಗಿದೆ. ಮನವಿಯಲ್ಲಿ ನೀಡಲಾದ ಮಾಹಿತಿಯು ತಪ್ಪಾಗಿದೆ ಎಂದು ಕಂಡುಬಂದರೆ ಅರ್ಜಿದಾರರ ವಿರುದ್ಧ ಕಾನೂನು ಕ್ರಮ ಜರುಗಿಸಬಹುದು ಎಂಬ ಹೇಳಿಕೆಯನ್ನು ನೀಡಲಾಗಿದೆ ಎಂದು ಉಲ್ಲೇಖಿಸಲಾಗಿದೆ.

‘ನೊಂದವರೊಂದಿಗೆ ನಾವು ನೀವು’–ಸಾರ್ವಜನಿಕ ಸಂವಾದ ಮತ್ತು ಆಂದೋಲನಕ್ಕೆ ಇಂದು ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...