Homeಕರ್ನಾಟಕಧರ್ಮಸ್ಥಳ ಪ್ರಕರಣ: ಮಾಧ್ಯಮ ನಿರ್ಬಂಧ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ಧರ್ಮಸ್ಥಳ ಪ್ರಕರಣ: ಮಾಧ್ಯಮ ನಿರ್ಬಂಧ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

- Advertisement -
- Advertisement -

ನೂರಾರು ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬರು ನೀಡಿರುವ ದೂರಿಗೆ ಸಂಬಂಧಿಸಿದಂತೆ, ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನ ಮತ್ತು ಅದನ್ನು ನಡೆಸುತ್ತಿರುವ ಕುಟುಂಬದ ವಿರುದ್ಧ ಯಾವುದೇ ‘ಮಾನಹಾನಿಕರ ವಿಷಯ’ ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಬುಧವಾರ (ಜುಲೈ 23) ನಿರಾಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠದ ಮುಂದೆ ಅರ್ಜಿದಾರರಾದ ‘ಥರ್ಡ್ ಐ ಯೂಟ್ಯೂಬ್ ಚಾನೆಲ್’ ಪರ ವಕೀಲರು ವಿಷಯ ಪ್ರಸ್ತಾಪಿಸಿದ್ದರು.

“ಸುಮಾರು 390 ಮಾಧ್ಯಮ ಸಂಸ್ಥೆಗಳ ವಿರುದ್ದ ಗ್ಯಾಗ್ ಆರ್ಡರ್ ನೀಡಲಾಗಿದೆ. ಅರ್ಜಿ ಸಲ್ಲಿಸಿದ ಮೂರು ಗಂಟೆಗಳಲ್ಲಿ ಅದನ್ನು ಪರಿಗಣಿಸಿ ಆದೇಶ ಮಾಡಲಾಗಿದೆ. ಸುಮಾರು 9 ಸಾವಿರ ಯುಆರ್‌ಎಲ್‌ಗಳನ್ನು ತೆಗೆದು ಹಾಕುವಂತೆ ಸೂಚಿಸಲಾಗಿದೆ. ಇದರಿಂದ ಕರ್ನಾಟಕ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಗೆ ಹಿನ್ನೆಡೆಯಲಾಗಲಿದೆ” ಎಂದು ವಕೀಲರು ತಿಳಿಸಿದ್ದರು.

ಆದರೆ, ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ ವಿನೋದ್ ಚಂದ್ರನ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು ಈ ವಿಷಯವನ್ನು ನೇರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಪರಿಗಣಿಸಲು ನಿರಾಕರಿಸಿದೆ ಎಂದು livelaw.in ವರದಿ ಮಾಡಿದೆ.

“ನಾವು ಹೈಕೋರ್ಟ್‌ಗಳನ್ನು ನಿರುತ್ಸಾಹಗೊಳಿಸಲು ಸಾಧ್ಯವಿಲ್ಲ” ಎಂದು ಹೇಳಿದ ಪೀಠ, ಮೊದಲು ಹೈಕೋರ್ಟ್‌ಗೆ ಹೋಗಿ ಎಂದು ಅರ್ಜಿದಾರರ ಪರ ವಕೀಲರಿಗೆ ಸೂಚಿಸಿದೆ. 

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಬೆಂಗಳೂರಿನ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜುಲೈ 18ರಂದು ಆದೇಶ ನೀಡಿದ್ದು, ಹರ್ಷೇಂದ್ರ ಕುಮಾರ್, ಅವರ ಕುಟುಂಬ ಸದಸ್ಯರು, ಹರ್ಷೇಂದ್ರ ಕುಮಾರ್ ಅವರ ಕುಟುಂಬ ನಡೆಸುತ್ತಿರುವ ಸಂಸ್ಥೆಗಳು ಮತ್ತು ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದ ವಿರುದ್ಧ ಯಾವುದೇ ಮಾನನಷ್ಟಕರ ವಿಷಯ ಮತ್ತು ಮಾಹಿತಿಯನ್ನು ಯೂಟ್ಯೂಬ್ ಚಾನೆಲ್‌ಗಳು ಸೇರಿದಂತೆ ಡಿಜಿಟಲ್ ಮಾಧ್ಯಮ, ಎಲ್ಲಾ ಸಾಮಾಜಿಕ ಮಾಧ್ಯಮ ಅಥವಾ ಯಾವುದೇ ರೀತಿಯ ಮುದ್ರಣ ಮಾಧ್ಯಮಗಳಲ್ಲಿ ಪ್ರಕಟಿಸುವುದು, ಪ್ರಸಾರ ಮಾಡುವುದು, ಫಾರ್ವರ್ಡ್ ಮಾಡುವುದು, ಅಪ್‌ಲೋಡ್ ಮಾಡುವುದು, ರವಾನಿಸುವುದು ಮತ್ತು ಪ್ರಸಾರ ಮಾಡುವುದನ್ನು ಮುಂದಿನ ವಿಚಾರಣೆಯವರೆಗೆ ನಿರ್ಬಂಧಿಸಿ ತಡೆಯಾಜ್ಞೆ ಹೊರಡಿಸಿದೆ.

Courtesy : livelaw.in

ಧರ್ಮಸ್ಥಳ ಪ್ರಕರಣ: ಎಸ್‌ಐಟಿಗೆ 20 ಅಧಿಕಾರಿಗಳ ನಿಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...