Homeಮುಖಪುಟಧರ್ಮಸ್ಥಳ ಪ್ರಕರಣ: ಎಸ್‌ಐಟಿ ರಚಿಸುವಂತೆ ಸಿಎಂ ಸಿದ್ದರಾಮಯ್ಯಗೆ ನಟ ಪ್ರಕಾಶ್‌ ರಾಜ್‌ ಆಗ್ರಹ

ಧರ್ಮಸ್ಥಳ ಪ್ರಕರಣ: ಎಸ್‌ಐಟಿ ರಚಿಸುವಂತೆ ಸಿಎಂ ಸಿದ್ದರಾಮಯ್ಯಗೆ ನಟ ಪ್ರಕಾಶ್‌ ರಾಜ್‌ ಆಗ್ರಹ

- Advertisement -
- Advertisement -

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ, ಸರಣಿ ಹತ್ಯೆ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಬಹುಭಾಷಾ ನಟ ಪ್ರಕಾಶ್ ರಾಜ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ.

ಸದ್ಯಕ್ಕೆ ಎಸ್‌ಐಟಿ ರಚಿಸುವುದಿಲ್ಲ. ಪೊಲೀಸರು ಕೊಡುವ ವರದಿ ಮೇಲೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದರು. ಇದೇ ಹೇಳಿಕೆಯನ್ನು ಸಿಎಂ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಸಿಎಂ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ಪ್ರಕಾಶ್ ರಾಜ್ “ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನಿಮ್ಮ ಮಾತಿನ ಮೇಲೆ ಭರವಸೆಯಿದೆ. ಆದರೆ, ಈ ದಾರುಣ ಹಂತಕರನ್ನು, ಅವರನ್ನು ಕಾಪಾಡುತ್ತಿರುವ ಹೀನ ರಾಕ್ಷಸರನ್ನು ನಂಬುವ ಹಾಗಿಲ್ಲ. ದಯವಿಟ್ಟು ತನಿಖೆ ವಿಳಂಬವಾಗಿ ಸಾಕ್ಷಾಧಾರಗಳು ನಾಶವಾಗದಂತೆ ತುರ್ತು ಕ್ರಮ ತೆಗೆದುಕೊಳ್ಳಿ. ಎಸ್‌ಐಟಿ ರಚಿಸಿ ಮತ್ತು ಈವರೆಗೆ ದಾರಿ ತಪ್ಪಿಸಿದ ಅಧಿಕಾರಿಗಳ ಮೇಲೆ ತೀವ್ರ ಕ್ರಮ ಕೈಗೊಳ್ಳಿ” ಎಂದು ಎಂದಿದ್ದಾರೆ.

ಧರ್ಮಸ್ಥಳ ಗ್ರಾಮದಲ್ಲಿ ಸರಣಿ ಅತ್ಯಾಚಾರ, ಹತ್ಯೆಗಳು ನಡೆದಿದ್ದು, ಅವುಗಳಿಗೆ ಸಂಬಂಧಿಸಿದ ಶವಗಳನ್ನು ನಾನೇ ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ, ಈ ಬಗ್ಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ನ್ಯಾಯಾಧೀಶರ ಮುಂದೆ ಹೇಳಿಕೆಯನ್ನೂ ದಾಖಲಿಸಿದ್ದಾರೆ.

ಹಾಗಾಗಿ, ಪೊಲೀಸರು ತಕ್ಷಣ ಆ ವ್ಯಕ್ತಿ ಹೇಳುವ ಜಾಗದಲ್ಲಿ ಪರಿಶೀಲನೆ ನಡೆಸಿ ಹೆಣಗಳನ್ನು ಹೂತು ಹಾಕಿದ್ದರೆ ಅಸ್ತಿಪಂಜರಗಳನ್ನು ಹೊರತೆಗೆದು ಪರೀಕ್ಷೆಗೊಳಪಡಿಸಬೇಕು. ಪ್ರಕರಣ ಹಳ್ಳ ಹಿಡಿಯುವ ಸಾಧ್ಯತೆ ಇರುವ ಹಿನ್ನೆಲೆ, ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಬೇಕು ಎಂದು ದೇಶದಾದ್ಯಂತ ಆಗ್ರಹಗಳು ವ್ಯಕ್ತವಾಗಿದೆ.

ಧರ್ಮಸ್ಥಳ ಪ್ರಕರಣ: ನ್ಯಾಯಕ್ಕಾಗಿ ಹೋರಾಟ, ಸವಾಲುಗಳು ಮತ್ತು ನಿರೀಕ್ಷೆಗಳು – ಸಮಗ್ರ ವಿಶ್ಲೇಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...