Homeಕರ್ನಾಟಕಧರ್ಮಸ್ಥಳ ಪ್ರಕರಣ | ಪೊಲೀಸ್ ರಕ್ಷಣೆಯೊಂದಿಗೆ ಬೆಳ್ತಂಗಡಿ ಕೋರ್ಟ್‌ಗೆ ಹಾಜರಾದ ದೂರುದಾರ

ಧರ್ಮಸ್ಥಳ ಪ್ರಕರಣ | ಪೊಲೀಸ್ ರಕ್ಷಣೆಯೊಂದಿಗೆ ಬೆಳ್ತಂಗಡಿ ಕೋರ್ಟ್‌ಗೆ ಹಾಜರಾದ ದೂರುದಾರ

- Advertisement -
- Advertisement -

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಕ್ಕೂ ಅಧಿಕ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದ ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.

ಧರ್ಮಸ್ಥಳದಲ್ಲಿ ಹಲವು ಮೃತದೇಹಗಳನ್ನು ಹೂತುಹಾಕಿದ್ದೆ. ಈ ಹಿಂದೆ ಜೀವ ಬೆದರಿಕೆಯಿಂದ ಈ ಕೃತ್ಯ ಎಸಗಿದ್ದೆ. ಆದರೆ ಈಗ ಪಾಪಪ್ರಜ್ಞೆ ಕಾಡಿದೆ. ಆದ್ದರಿಂದ ಸಾಕ್ಷಿ ನೀಡಲು ಮುಂದಾಗಿದ್ದೇನೆ ಎಂದು ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕ ಆಗಿದ್ದ ವ್ಯಕ್ತಿಯೊಬ್ಬರು ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿಯವರಿಗೆ ದೂರನ್ನು ಸಲ್ಲಿಸಿದ್ದರು.

ಈ ಹಿಂದೆಯೇ ಹಲವು ಅಪರಾಧ ಕೃತ್ಯಗಳು ನಡೆದಿದೆ. ಜೀವ ಬೆದರಿಕೆಯಿಂದ ತಾನು ಮೃತದೇಹಗಳ ವಿಲೇವಾರಿ ಮಾಡಿದ್ದೆ. ಆದರೆ ಈಗ ಪಾಪಪ್ರಜ್ಞೆ ಕಾಡುತ್ತಿದೆ. ಕಾನೂನು ರಕ್ಷಣೆ ದೊರೆತರೆ ವಿಲೇವಾರಿ ಮಾಡಿದ ಮೃತದೇಹಗಳನ್ನು ತೋರಿಸುವುದಾಗಿ ವ್ಯಕ್ತಿ ಹೇಳಿದ್ದರು.

ಈ ಸಂಬಂಧ ಎಫ್‌ಐಆರ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಇಂದು(ಜುಲೈ 11) ದೂರುದಾರ ವ್ಯಕ್ತಿ ಬೆಳ್ತಂಗಡಿ ಕೋರ್ಟ್‌ಗೆ ಹಾಜರಾಗಿದ್ದಾರೆ. ದೂರುದಾರರ ಮನವಿಯಂತೆ ಪೊಲೀಸ್ ರಕ್ಷಣೆಯನ್ನು ಒದಗಿಸಲಾಗಿದೆ. ಇನ್ನು ಅನಾಮಧೇಯ ದೂರುದಾರರ ಕೈಯಲ್ಲಿ ಕಪ್ಪು ಬ್ಯಾಗ್ ಕಾಣಿಸಿಕೊಂಡಿದ್ದು, ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 4ರಂದು ವಕೀಲರ ಮೂಲಕ ದೂರು ನೀಡಿದ್ದ ಈ ವ್ಯಕ್ತಿ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಅವರ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ರಾಜಸ್ಥಾನ ಪಠ್ಯಪುಸ್ತಕ ವಿವಾದ: ‘ಕಾಂಗ್ರೆಸ್ ವೈಭವೀಕರಣ’, ‘ಮೋದಿ ಕಡೆಗಣನೆ’ ಆರೋಪದಡಿ 12ನೇ ತರಗತಿ ಪುಸ್ತಕ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...