Homeಕರ್ನಾಟಕಧರ್ಮಸ್ಥಳ ಪ್ರಕರಣ: ವಿವಾದದಲ್ಲಿ ತಮ್ಮ ಪಾತ್ರ ನಿರಾಕರಿಸಿದ ಕಾಂಗ್ರೆಸ್ ಸಂಸದ ಶಶಿಕಾಂತ್ ಸೆಂಥಿಲ್

ಧರ್ಮಸ್ಥಳ ಪ್ರಕರಣ: ವಿವಾದದಲ್ಲಿ ತಮ್ಮ ಪಾತ್ರ ನಿರಾಕರಿಸಿದ ಕಾಂಗ್ರೆಸ್ ಸಂಸದ ಶಶಿಕಾಂತ್ ಸೆಂಥಿಲ್

- Advertisement -
- Advertisement -

ಕರ್ನಾಟಕ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿ ಹಾಗೂ ತಮಿಳುನಾಡು ಕಾಂಗ್ರೆಸ್ ಸಂಸದ ಶಶಿಕಾಂತ್ ಸೆಂಥಿಲ್ ಅವರು, ಧರ್ಮಸ್ಥಳ ವಿವಾದದಲ್ಲಿ ತಮ್ಮ ಮೇಲಿನ ಆರೋಪಗಳನ್ನು ಆಧಾರರಹಿತ ಎಂದು ಕರೆದಿದ್ದಾರೆ.

ಧರ್ಮಸ್ಥಳ ಧಾರ್ಮಿಕ ಕ್ಷೇತ್ರಕ್ಕೆ ಕೆಟ್ಟ ಹೆಸರು ತರುವ ಪಿತೂರಿಯ ಹಿಂದೆ ತಮ್ಮ ಕೈವಾಡವಿದೆ ಎಂದು ಆರೋಪಿಸಿದ್ದಾರೆ, ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮಾನಹಾನಿ ಮಾಡುವುದನ್ನು ಮುಂದುವರಿಸಿದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

2023 ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ‘ವಾರ್‌ ರೂಂ’ ಮುಖ್ಯಸ್ಥರಾಗಿದ್ದ ಸೆಂಥಿಲ್ ಅವರನ್ನು ಪಕ್ಷದ ಪ್ರಮುಖ ಚುನಾವಣಾ ತಂತ್ರಜ್ಞರೆಂದು ಪರಿಗಣಿಸಲಾಗಿದೆ. ಧರ್ಮಸ್ಥಳದಲ್ಲಿನ ಇತ್ತೀಚೆಗಿನ ಎಲ್ಲ ಬೆಳವಣಿಗೆಗಳ ಬಗ್ಗೆ ತನಗೆ ಸಂಪೂರ್ಣವಾಗಿ ತಿಳಿದಿಲ್ಲ. ನನ್ನ ಹೆಸರನ್ನು ಕ್ರಿಮಿನಲ್ ತನಿಖೆಗೆ ಸೇರಿಸುವುದು ‘ಮಾನಹಾನಿ ಕೃತ್ಯ’ ಎಂದು ಹೇಳಿದರು.

ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಹತ್ಯೆಗಳ ಆರೋಪಗಳ ನಿರ್ದೇಶಕ ಮತ್ತು ಚಿತ್ರಕಥೆಗಾರ ಸೆಂಥಿಲ್ ಎಂದು ಬಿಜೆಪಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಆರೋಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಸಂಸದರಿಗೆ ಹತ್ತಿರವಾಗಿದ್ದಾರೆ ಎಂದು ಹೇಳಿದ್ದಾರೆ.

“ರೆಡ್ಡಿ ಕೇವಲ ಪ್ರಚಾರಕ್ಕಾಗಿ ಈ ಆರೋಪಗಳನ್ನು ಮಾಡುತ್ತಿರಬಹುದು, ಅವರು ಬಳ್ಳಾರಿಯಲ್ಲಿ ಗಣಿಗಾರಿಕೆ ಅಕ್ರಮಗಳ ತನಿಖೆಯಲ್ಲಿ ಸಹಾಯಕ ಆಯುಕ್ತರಾಗಿ ನೇಮಕಗೊಂಡಾಗ ಭಾಗಿಯಾಗಿದ್ದರಿಂದ ನನ್ನನ್ನು ಗುರಿಯಾಗಿಸಿಕೊಂಡಿರಬಹುದು ಎಂದು ಶಶಿಕಾಂತ್ ಸೆಂಥಿಲ್ ತಿಳಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

“ಧರ್ಮಸ್ಥಳದಲ್ಲಿನ ಬೆಳವಣಿಗೆಗಳು ಮತ್ತು ನಡೆಯುತ್ತಿರುವ ತನಿಖೆ ನನಗೆ ಯಾವುದೇ ಸಂಬಂಧವಿಲ್ಲ. ಸ್ವಲ್ಪವಾದರೂ ಸಂಬಂಧವಿದ್ದರೆ ನನಗೆ ಅರ್ಥವಾಗುತ್ತಿತ್ತು. ಆದರೆ, ನಾನು ವರ್ಷಗಳ ಹಿಂದೆ ರಾಜ್ಯವನ್ನು ತೊರೆದಿದ್ದೇನೆ. ನಾನು ಈಗ ಕರ್ನಾಟಕದ ಆಡಳಿತದೊಂದಿಗೆ ಭಾಗಿಯಾಗಿಲ್ಲ” ಎಂದು ಅವರು ಹೇಳಿದರು.

“ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಹಿಂದೆ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದೇನೆ ಎಂಬ ಕಾರಣಕ್ಕಾಗಿ ನನ್ನ ಮೇಲೆ ಆರೋಪ ಮಾಡುವುದು ತಪ್ಪು. ಬಿಜೆಪಿಯನ್ನು ವಿರೋಧಿಸಿ ನಾನು ಸೇವೆಗೆ ರಾಜೀನಾಮೆ ನೀಡಿದ್ದೇನೆ ಎಂದರೆ ನೀವು ಆರೋಪಗಳನ್ನು ಮಾಡಬಹುದು ಎಂದು ಅರ್ಥವಲ್ಲ” ಎಂದು ಅವರು ಹೇಳಿದರು.

“ಅವರು (ರೆಡ್ಡಿ) ಆರೋಪ ಮುಂದುವರಿಸಿದರೆ, ನಾನು ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ನಾನು ಭಾವಿಸುತ್ತೇನೆ. ಅಂತಹ ಆರೋಪಗಳಿಗೆ ವಿಶ್ವಾಸಾರ್ಹತೆ ನೀಡುವ ಮೊದಲು ಮಾಧ್ಯಮಗಳು ಸರಿಯಾದ ಗಮನ ಹರಿಸಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಅವರು ಮನವಿ ಮಾಡಿದರು.

ಯೂಟ್ಯೂಬರ್‌ ಸಮೀರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು; ಬಂಧನದಿಂದ ಪಾರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...