Homeಕರ್ನಾಟಕಧರ್ಮಸ್ಥಳ ಪ್ರಕರಣ: Fast Track ಕೋರ್ಟ್ ರಚಿಸಬೇಕು- ಸಿ.ಎಸ್ ದ್ವಾರಕಾನಾಥ್

ಧರ್ಮಸ್ಥಳ ಪ್ರಕರಣ: Fast Track ಕೋರ್ಟ್ ರಚಿಸಬೇಕು- ಸಿ.ಎಸ್ ದ್ವಾರಕಾನಾಥ್

- Advertisement -
- Advertisement -

ಬೆಂಗಳೂರು: ಧರ್ಮಸ್ಥಳದ ಸಾಮೂಹಿಕ ಅತ್ಯಾಚಾರ, ಕೊಲೆಗಳು ಮತ್ತು ನೂರಾರು ಹೆಣಗಳನ್ನು ಹೂತ ಪ್ರಕರಣವನ್ನು ತನಿಖೆ ಮಾಡಲು ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು SIT ನೇಮಕ ಮಾಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸುತ್ತೇವೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ವಿಚಾರಣೆಗಾಗಿ ರೆಗ್ಯುಲರ್ ನ್ಯಾಯಾಲಯದ ಬದಲು ‘ವಿಶೇಷ ಫಾಸ್ಟ್ ಟ್ರಾಕ್ ನ್ಯಾಯಾಲಯ’ವನ್ನು ರಚಿಸಲು ಸರಕಾರವನ್ನು ಒತ್ತಾಯಿಸಬೇಕಾಗಿದೆ ಎಂದು  ಹಿರಿಯ ವಕೀಲ ಸಿ.ಎಸ್.ದ್ವಾರಕಾನಾಥ್ ಅವರು ತಿಳಿಸಿದ್ದಾರೆ.

SIT ನೇಮಕ ಸಂಬಂಧ ಅನೇಕ ಜನಪರ ವ್ಯಕ್ತಿಗಳು, ಸಂಘಟನೆಗಳು ಮತ್ತು ಯೂಟ್ಯೂಬ್‌ ಚಾನೆಲ್‌ಗಳು  ಸರ್ಕಾರಕ್ಕೆ ನಿರಂತರವಾಗಿ ತಾಕೀತು ಮಾಡುತ್ತಲೇ ಬಂದಿದ್ದಾರೆ. ಸಮೀರ್ ಎಂ.ಡಿ., ಈದಿನ ಯೂಟ್ಯೂಬ್‌ ಚಾನೆಲ್ ನಿಂದ ಹಿಡಿದು ಗಿರೀಶ್ ಮಟ್ಟಣ್ಣನವರ್, ಡಿಟಾಕ್ ನ ದಿನೇಶ್ ಕುಮಾರ್, ಹರ್ಷಕುಮಾರ್ ಕುಗ್ವೆ , ಥರ್ಡ್ ಐ, ಲಾಯರ್ ಜಗದೀಶ್, ಬಾಲನ್, ನವೀನ್ ಸೂರಿಂಜೆ, ನ್ಯಾಯಮೂರ್ತಿ ಗೋಪಾಲಗೌಡರು, ರವಿಕೃಷ್ಣಾರೆಡ್ಡಿ, ನಟ ಚೇತನ್, ನಟ ಪ್ರಕಾಶ್ ರಾಜ್, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮುಂತಾಗಿ ಇನ್ನೂ ಅನೇಕ, ನಾನು ಮರೆತಿರಬಹುದಾದ ನಾಮಧೇಯರು ಮತ್ತು ಅನಾಮಧೇಯರು ಸರ್ಕಾರದ ಮೇಲೆ ಒತ್ತಡ ಹಾಕಿದ್ದಾರೆ ಎಂದು ಅವರು ಹೇಳಿದರು.

ದಿನೇದಿನೇ ಈ ಪ್ರಕರಣವು ಪಕ್ಕದ ರಾಜ್ಯಗಳಾದ ಕೇರಳ, ತಮಿಳುನಾಡಿಗೆ ಹರಡಿದ್ದು, ಅಲ್ಲಿನ ಮಾಧ್ಯಮಗಳೂ ವರದಿ ಮಾಡಲಾರಂಭಿಸಿವೆ. ರಾಷ್ಟ್ರೀಯ ಸುದ್ದಿ ಚಾನಲ್ ಗಳು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಸಾರ್ವಜನಿಕರೂ ಈ ಪ್ರಕರಣದ ಬಗ್ಗೆ ಹಾದಿಬೀದಿಯಲ್ಲಿ ಮಾತಾಡಲು ಆರಂಭಿಸಿದ್ದೇ ಮುಂತಾಗಿ ಅನೇಕ ನೇರ ಮತ್ತು ಪರೋಕ್ಷ ಒತ್ತಡಗಳೂ ಕೂಡ SIT ಮಾಡಲು ಕಾರಣಗಳಾಗಿವೆ ಎಂದು ಅವರು ತಿಳಿಸಿದರು.

ಈ ಮಧ್ಯೆ ನಮ್ಮ ವಕೀಲರ ನಿಯೋಗ ಮುಖ್ಯಮಂತ್ರಿ ಗಳನ್ನು ಭೇಟಿಯಾಗಿ SIT ಮಾಡಬೇಕೆಂಬ ವಿನಂತಿಯ ಜತೆಗೆ ಕೆಲವು ಮುಖ್ಯ ಸೂಚನೆಗಳನ್ನು ನಮ್ಮ ಪತ್ರದಲ್ಲಿ ನಮ್ರವಾಗಿ ನೀಡಿದ್ದೆವು. ಅದರಲ್ಲಿ SIT ತನಿಖೆಯನ್ನು ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಮೂರ್ತಿಗಳ ಮೇಲುಸ್ತುವಾರಿಯಲ್ಲಿ ನಡೆಸಬೇಕು, ಶವಗಳನ್ನು ಹೊರ ತೆಗೆಯುವಾಗ(exhume) ಇಡೀ ಪ್ರಕ್ರಿಯೆಯನ್ನು ವಿಡಿಯೋಗ್ರಾಫ್ ಮಾಡಬೇಕು, ಕಡ್ಡಾಯವಾಗಿ FSL(forensic science) ತಜ್ಞರು ಇರಬೇಕು, ಮತ್ತು ನುರಿತ ಪ್ರಾಸಿಕ್ಯೂಟರ್ ಒಬ್ಬರನ್ನು ಸಹಾಯಕರಾಗಿ ನೇಮಿಸಿಕೊಳ್ಳಬೇಕು ಎಂದು ವಿನಂತಿಸಿದ್ದೆವು. ಇದು ಅತ್ಯಂತ ಸೂಕ್ಷ್ಮ ಮತ್ತು ಪ್ರಭಾವಿಗಳಂತವರು ಒಳಗೊಂಡಿರಬಹುದಾದ ಪ್ರಕರಣ ಆಗಿರುವುದರಿಂದ ಇಷ್ಟೆಲ್ಲಾ ಕಾನೂನಾತ್ಮಕ ಮುನ್ನೆಚ್ಚರಿಕೆಗಳು ಅವಶ್ಯಕ ಎಂದಿದ್ದಾರೆ.

ಗೌರಿ ಲಂಕೇಶ್ ಹತ್ಯೆಯಾಗಿ ಹಲವು ವರ್ಷಗಳೇ ಕಳೆದರೂ ಅದರ ವಿಚಾರಣೆ ಇನ್ನೂ ಮುಗಿದಿಲ್ಲ, ಆರೋಪಿಗಳು ಜಾಮೀನು ಪಡೆದು ರಾಜಾರೋಷವಾಗಿ ಓಡಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಧರ್ಮಸ್ಥಳ ಪ್ರಕರಣವನ್ನು ಗಮನಿಸಿದಾಗ ಇದು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲೂ ಗಮನ ಸೆಳೆದ ವಿಶೇಷ ಪ್ರಕರಣವಾಗಿದೆ. ಇಲ್ಲಿನ ಅತ್ಯಾಚಾರ ಮತ್ತು ಕೊಲೆಗಳ ಸಂಖ್ಯೆ ನೂರಾರು ಇರುವುದರಿಂದ ಈ ಪ್ರಕರಣವನ್ನು ರೆಗ್ಯುಲರ್ ಕೋರ್ಟುಗಳಲ್ಲಿ ನಡೆಸಲು ಸಾಧ್ಯವೇ ಇಲ್ಲ. ನೂರು ವರ್ಷಗಳಾದರೂ ನಮ್ಮ ರೆಗ್ಯುಲರ್ ಕೋರ್ಟುಗಳಲ್ಲಿ ಈ ಪ್ರಕರಣ ಅಂತ್ಯ ಕಾಣಲಾರದು! ಹೀಗಾಗಿ ಈ ಪ್ರಕರಣಕ್ಕೆಂದೇ “ವಿಶೇಷ ಫಾಸ್ಟ್ ಟ್ರಾಕ್ ಕೋರ್ಟ”ನ್ನು ನೇಮಿಸಬೇಕೆಂಬುದನ್ನೂ ಸರ್ಕಾರದ ಗಮನಕ್ಕೆ ನಾವೆಲ್ಲ ತರಬೇಕಿದೆ ಎಂದು ಆಗ್ರಹಿಸಿದ್ದಾರೆ.

SIT ನೇಮಕ ಮಾಡಿರುವುದು ಸ್ವಾಗತಾರ್ಹ. ಆದರೆ ಇದಷ್ಟೇ ಅಂತ್ಯವಲ್ಲ, ಇದು ಆರಂಭ ಮಾತ್ರ ಎಂದು ಕೂಡ ಅವರು ತಿಳಿಸಿದ್ದಾರೆ.

ಧರ್ಮಸ್ಥಳ ಪ್ರಕರಣ: ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...