Homeಕರ್ನಾಟಕಧರ್ಮಸ್ಥಳ ಪ್ರಕರಣ: ಸರಣಿ ಅಪರಾಧಗಳ ತನಿಖೆಗೆ ಎಸ್‌ಐಟಿ ಅಖಾಡಕ್ಕೆ; ದೂರುದಾರರ ವಿಚಾರಣೆ ಆರಂಭ

ಧರ್ಮಸ್ಥಳ ಪ್ರಕರಣ: ಸರಣಿ ಅಪರಾಧಗಳ ತನಿಖೆಗೆ ಎಸ್‌ಐಟಿ ಅಖಾಡಕ್ಕೆ; ದೂರುದಾರರ ವಿಚಾರಣೆ ಆರಂಭ

- Advertisement -
- Advertisement -

ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸರಣಿ ಕೊಲೆಗಳು ಮತ್ತು ಅತ್ಯಾಚಾರ ಕೃತ್ಯಗಳ ತನಿಖೆಯನ್ನು ಆರಂಭಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದೆ. ಪ್ರಕರಣದ ನಿರ್ಣಾಯಕ ಹಂತವಾಗಿ, ಶನಿವಾರ ದೂರುದಾರರು ಎಸ್‌ಐಟಿ ಅಧಿಕಾರಿಗಳ ಎದುರು ಹಾಜರಾಗಿದ್ದು, ತನಿಖೆಗೆ ಹೊಸ ಆಯಾಮ ದೊರಕಿದೆ.

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ “ಸಾವಿರಕ್ಕೂ ಹೆಚ್ಚು ಮಂದಿಯನ್ನು, ಅದರಲ್ಲೂ ಹೆಣ್ಣುಮಕ್ಕಳು ಮತ್ತು ಮಹಿಳೆಯರನ್ನು ಅತ್ಯಾಚಾರಗೈದು ಕೊಲೆ ಮಾಡಲಾಗಿದೆ” ಎಂದು ಗುರುತು ಬಯಸದ ದೂರುದಾರರೊಬ್ಬರು ಗಂಭೀರ ಆರೋಪಗಳನ್ನು ಮಾಡಿದ್ದರು. ತಾವೇ ಹಲವಾರು ಮೃತದೇಹಗಳನ್ನು ಹೂತಿದ್ದು, ಅವುಗಳನ್ನು ಹೊರತೆಗೆಯಲು ಸಿದ್ಧವಿರುವುದಾಗಿಯೂ ಅವರು ಹೇಳಿಕೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ, ಇಂದು ಮಂಗಳೂರಿನ ಕದ್ರಿಯಲ್ಲಿರುವ ಐಬಿ ಕಚೇರಿಯಲ್ಲಿ ಎಸ್‌ಐಟಿ ತಂಡದ ಎದುರು ದೂರುದಾರರು ಹಾಜರಾಗಿದ್ದಾರೆ. ಧರ್ಮಸ್ಥಳದಲ್ಲಿ ನಡೆದಿರುವ ಕೃತ್ಯಗಳ ಬಗ್ಗೆ ಅವರು ಎಸ್‌ಐಟಿ ಅಧಿಕಾರಿಗಳಿಗೆ ಸಮಗ್ರ ವಿವರಣೆ ನೀಡುವ ನಿರೀಕ್ಷೆಯಿದೆ. ಡಿಐಜಿ ಎಂ.ಎನ್. ಅನುಚೇತ್ ಅವರ ಸಮ್ಮುಖದಲ್ಲಿ ಈ ಮಹತ್ವದ ವಿಚಾರಣೆ ನಡೆಯಲಿದ್ದು, ಎಸ್‌ಐಟಿ ಅಧಿಕಾರಿಗಳು ದೂರುದಾರರ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಮತ್ತು ಮುಂದಿನ ತನಿಖೆಯ ರೂಪುರೇಷೆಯನ್ನು ಸಿದ್ಧಪಡಿಸಿಕೊಳ್ಳಲು ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ವಿಚಾರಣೆಯು ಪ್ರಕರಣದ ದಿಕ್ಕನ್ನೇ ಬದಲಿಸುವ ಸಾಧ್ಯತೆ ಇದೆ.

ಪೊಲೀಸ್ ಮಹಾ ನಿರ್ದೇಶಕ ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ಎಸ್‌ಐಟಿ ತಂಡವನ್ನು ರಚಿಸಲಾಗಿದೆ. ಈ ತಂಡದಲ್ಲಿ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್. ಅನುಚೇತ್, ಸಿಎಆರ್ ಕೇಂದ್ರದ ಡಿಸಿಪಿ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಅವರಂತಹ ಅನುಭವಿ ಅಧಿಕಾರಿಗಳು ಇದ್ದು, ಪ್ರಕರಣದ ಸೂಕ್ಷ್ಮತೆ ಮತ್ತು ಗಂಭೀರತೆಯನ್ನು ಪರಿಗಣಿಸಿ ಈ ತಂಡವನ್ನು ನಿಯೋಜಿಸಲಾಗಿದೆ.

ಪ್ರಕರಣದ ಹಿನ್ನೆಲೆ

ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಪ್ರದೇಶವು ಕಳೆದ ಕೆಲವು ವರ್ಷಗಳಿಂದ  ವಿವಾದಗಳು ಮತ್ತು ಗಂಭೀರ ಆರೋಪಗಳು ಸುತ್ತುವರಿದಿದೆ. ನಿರ್ದಿಷ್ಟವಾಗಿ ಹೇಳುವುದಾದರೆ, 2012ರಲ್ಲಿ ನಡೆದ ಬೆಳ್ತಂಗಡಿಯ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ರಾಜ್ಯಾದ್ಯಂತ ದೊಡ್ಡ ಮಟ್ಟದ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಪ್ರಕರಣದ ತನಿಖೆಯಲ್ಲಿನ ಲೋಪಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇತ್ತೀಚೆಗೆ, ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಕೆಲವು ಡಿಜಿಟಲ್ ವೇದಿಕೆಗಳಲ್ಲಿ “ಧರ್ಮಸ್ಥಳದಲ್ಲಿ ಸರಣಿ ಕೊಲೆಗಳು ಮತ್ತು ಅತ್ಯಾಚಾರ ಕೃತ್ಯಗಳು ನಡೆದಿದ್ದು, ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ” ಎಂಬ ಗಂಭೀರ ಆರೋಪಗಳು ದೊಡ್ಡ ಪ್ರಮಾಣದಲ್ಲಿ ಹರಿದಾಡಲು ಶುರುವಾಗಿವೆ. ಈ ಆರೋಪಗಳ ಪ್ರಸಾರವನ್ನು ತಡೆಯಲು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು.

ವಿಚಾರಣಾಧೀನ ನ್ಯಾಯಾಲಯವು ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿ ಆದೇಶ ಹೊರಡಿಸಿತ್ತು. ಆದರೆ, ಈ ಆದೇಶವನ್ನು ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದ್ದು, ನ್ಯಾಯಾಲಯವು “ನಿರ್ಲಜ್ಜವಾಗಿ ಎಲ್ಲರನ್ನು ನಿರ್ಬಂಧಿಸುವ ಇದೆಂಥಾ ಆದೇಶ” ಎಂದು ಪ್ರಶ್ನಿಸಿ, ಮಾಧ್ಯಮ ಸ್ವಾತಂತ್ರ್ಯದ ಪರವಾಗಿ ನಿಂತಿತ್ತು. ಈ ಬೆಳವಣಿಗೆಗಳ ನಡುವೆಯೇ, ರಾಜ್ಯ ಸರ್ಕಾರವು ಇಂತಹ ಗಂಭೀರ ಆರೋಪಗಳ ಸತ್ಯಾಸತ್ಯತೆಯನ್ನು ಹೊರತರಲು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲು ನಿರ್ಧರಿಸಿತ್ತು. ಈ ಪ್ರಕರಣದ ಸೂಕ್ಷ್ಮತೆ ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನು ಪರಿಗಣಿಸಿ, ಎಸ್ಐಟಿ ತನಿಖೆ ಆರಂಭಿಸಿದೆ. ಇದೀಗ ಹೈಕೋರ್ಟ್ ಕೂಡ ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ಪ್ರಶ್ನಿಸಿದೆ.

ಧರ್ಮಸ್ಥಳ ಪ್ರಕರಣ: ಮಾಧ್ಯಮಗಳ ನಿರ್ಬಂಧ ಪ್ರಶ್ನಿಸಿದ ಹೈಕೋರ್ಟ್; ಆದೇಶದ ಸಿಂಧುತ್ವದ ಬಗ್ಗೆ ಗಂಭೀರ ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...