Homeಕರ್ನಾಟಕಧರ್ಮಸ್ಥಳ ಶವ ಶೋಧ: ಬಾಹುಬಲಿ ಬೆಟ್ಟದಲ್ಲಿ ಹೊಸ ಪಾಯಿಂಟ್ ತೋರಿಸಿದ ದೂರುದಾರ

ಧರ್ಮಸ್ಥಳ ಶವ ಶೋಧ: ಬಾಹುಬಲಿ ಬೆಟ್ಟದಲ್ಲಿ ಹೊಸ ಪಾಯಿಂಟ್ ತೋರಿಸಿದ ದೂರುದಾರ

- Advertisement -
- Advertisement -

ಧರ್ಮಸ್ಥಳದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಕೈಗೊಂಡಿರುವ ಶವ ಶೋಧ ಕಾರ್ಯಾಚರಣೆಯಲ್ಲಿ ಶನಿವಾರ (ಆ.9) ಹೊಸ ಬೆಳವಣಿಗೆಯೊಂದು ನಡೆದಿದೆ.

ಸಾಕ್ಷಿ ದೂರುದಾರ ಬಾಹುಬಲಿ ಬೆಟ್ಟದಲ್ಲಿ ಹೊಸ ಜಾಗವೊಂದನ್ನು ತೋರಿಸಿದ್ದಾರೆ. ಈ ಜಾಗವನ್ನು ಎಸ್‌ಐಟಿ ತಂಡ ಪಾಯಿಂಟ್ ನಂಬರ್ 16 ಎಂದು ಗುರುತಿಸಿದೆ. ಬಾಹುಬಲಿ ಬೆಟ್ಟದ ತುದಿಗೆ ತೆರಳುವ ರಸ್ತೆ ಬದಿಯೇ ಈ ಜಾಗವಿದ್ದು, ಅಲ್ಲಿ ಅಧಿಕಾರಿಗಳು ಶೋಧ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.

ವಿಶೇಷವಾಗಿ, ಎಸ್‌ಐಟಿ ತಂಡ ದೂರುದಾರನನ್ನು ಕರೆದುಕೊಂಡು ಧರ್ಮಸ್ಥಳ ದೇವಸ್ಥಾನದ ಮುಖ್ಯ ದ್ವಾರದ ಮೂಲಕವೇ ಒಳ ಪ್ರವೇಶಿಸಿ ಬೆಟ್ಟದ ತುದಿಗೆ ತೆರಳಿದೆ. ಅಲ್ಲಿ ಆತ ತೋರಿಸಿರುವ ಜಾಗವನ್ನು ಅಧಿಕಾರಿಗಳು ಟೇಪ್ ಕಟ್ಟಿ ಗುರುತು ಮಾಡಿದ್ದಾರೆ. ಅಲ್ಲದೆ, ಹಸಿರು ನೆಟ್ ಕಟ್ಟಿ ಮಣ್ಣು ಅಗೆಯಲು ಸಿದ್ದತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಸಾಕ್ಷಿ ದೂರುದಾರ ಆರಂಭದಲ್ಲಿ 13 ಜಾಗಗಳನ್ನು ಪಾಯಿಂಟ್‌ಗಳನ್ನು ಗುರುತಿಸಿದ್ದರು. ಬಳಿಕ ಅದು 15ರಕ್ಕೇರಿತ್ತು. ಈ ಪೈಕಿ ಪಾಯಿಂಟ್‌ 13 ಹೊರತುಪಡಿಸಿ ಉಳಿದೆಡೆ ಶೋಧ ನಡೆಸಲಾಗಿದೆ. ಪಾಯಿಂಟ್ ನಂಬರ್ 6 ಮತ್ತು 11ರ ಸಮೀಪ ಮನುಷ್ಯರ ಅಸ್ಥಿಪಂಜರದ ಅವಶೇಷಗಳು ಸಿಕ್ಕಿದೆ ಎನ್ನಲಾಗಿದೆ.

ಈಗಾಗಲೇ ಎಲ್ಲೆಡೆ ಸುದ್ದಿಯಾಗಿರುವಂತೆ ದೂರುದಾರ ಧರ್ಮಸ್ಥಳ ಸಮೀಪದ ಕಲ್ಲೇರಿ ಮತ್ತು ಬೋಳಿಯಾರ್ ಎಂಬ ಜಾಗಗಳಲ್ಲಿ ಶವ ಹೂತಿರುವ ಬಗ್ಗೆ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಆ ಜಾಗಗಳಲ್ಲಿ ಎಸ್‌ಐಟಿ ಶನಿವಾರ ಶೋಧ ನಡೆಸಲಿದೆ ಎಂದು ನಿರೀಕ್ಷಿಸಲಾಗಿತ್ತು. ಈ ನಡುವೆ ದೂರುದಾರ ಬಾಹುಬಲಿ ಬೆಟ್ಟದಲ್ಲಿ ಹೊಸ ಪಾಯಿಂಟ್ ತೋರಿಸಿದ್ದಾರೆ.

ಇಬ್ಬರು ಸಾಕ್ಷಿಗಳು ಪ್ರತ್ಯಕ್ಷ

ಎಸ್‌ಐಟಿ ಶವ ಶೋಧ ನಡೆಸುತ್ತಿರುವ ಪ್ರಕರಣದ ದೂರುದಾರ ಶವ ಹೂತಿರುವುದನ್ನು ನಾವು ನೋಡಿದ್ದೇವೆ ಎಂದು ಇಬ್ಬರು ಎಸ್‌ಐಟಿ ತಂಡ ಮುಂದೆ ಹಾಜರಾಗಿದ್ದಾರೆ ಎಂದು ಶುಕ್ರವಾರ ವರದಿಯಾಗಿತ್ತು. ಅವರಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡುವಂತೆ ಎಸ್‌ಐಟಿ ಅಧಿಕಾರಿಗಳು ಸಲಹೆ ನೀಡಿದ್ದರು. ಅದರಂತೆ ಅವರು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಜಯಂತ ಶೆಟ್ಟಿಯಿಂದ ಎರಡೇ ದೂರು

ಮೊದಲ ಅನಾಮಿಕ ವ್ಯಕ್ತಿಯ ದೂರಿನಂತೆ ಪ್ರಸ್ತುತ ಧರ್ಮಸ್ಥಳದಲ್ಲಿ ಶವ ಶೋಧ ನಡೆಯುತ್ತಿದೆ. ಈ ನಡುವೆ ಆಗಸ್ಟ್ 2ರಂದು ಜಯಂತ ಶೆಟ್ಟಿ ಎಂಬವರು ವರ್ಷಗಳ ಬಾಲಕಿಯೊಬ್ಬಳ ಶವ ಹೂತು ಹಾಕಿರುವುದನ್ನು ನಾನು ನೋಡಿದ್ದೇನೆ. ತನ್ನ ಆರೋಪಕ್ಕೆ ಜೀವಂತ ಸಾಕ್ಷಿಗಳಿದ್ದಾರೆ. ಅಗತ್ಯ ಬಂದರೆ ಅವರನ್ನು ಕರೆತಂದು ನಿಲ್ಲಿಸುತ್ತೇನೆ ಎಂದು ಎಸ್‌ಐಟಿಗೆ ದೂರು ನೀಡಿದ್ದರು. ತಾನು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ ಪದ್ಮಲತಾ ಅವರ ಸಂಬಂಧಿ ಎಂದು ಜಯಂತ ಶೆಟ್ಟಿ ಹೇಳಿಕೊಂಡಿದ್ದಾರೆ.
ಜಯಂತ ಶೆಟ್ಟಿ ದೂರು ನೀಡಿದ ಮರುದಿನವೇ 5 ಮಂದಿ ಸಾಕ್ಷಿಗಳು ತಾವು ಶವ ಹೂತಿರುವುದನ್ನು ನೋಡಿರುವುದಾಗಿ ಎಸ್‌ಐಟಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಯೂಟ್ಯೂಬರ್‌ಗಳ ಮೇಲೆ ಹಲ್ಲೆ

ಆಗಸ್ಟ್ 6ರಂದು ಸೌಜನ್ಯ ಮನೆಗೆ ತೆರಳುವ ಪಾಂಗಳ ಕ್ರಾಸ್ ಬಳಿ ನಾಲ್ವರು ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ, ನಂತರದ ಘಟನೆಗಳಿಗೆ ಸಂಬಂಧಪಟ್ಟಂತೆ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ಒಟ್ಟು ಎಫ್‌ಐಆರ್‌ಗಳು ದಾಖಲಾಗಿವೆ.

ಮತಗಳ್ಳತನ| ಕಾನೂನು ಇಲಾಖೆ ಶಿಫಾರಸಿನಂತೆ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...