Homeಕರ್ನಾಟಕಧರ್ಮಸ್ಥಳ| ಪದ್ಮಲತಾ ಕಳೇಬರ ಹೊರತೆಗೆದು ಮರು ತನಿಖೆ ನಡೆಸಿ: ಎಸ್‌ಐಟಿಗೆ ಸಹೋದರಿ ಇಂದ್ರಾವತಿ ದೂರು

ಧರ್ಮಸ್ಥಳ| ಪದ್ಮಲತಾ ಕಳೇಬರ ಹೊರತೆಗೆದು ಮರು ತನಿಖೆ ನಡೆಸಿ: ಎಸ್‌ಐಟಿಗೆ ಸಹೋದರಿ ಇಂದ್ರಾವತಿ ದೂರು

- Advertisement -
- Advertisement -

ಧರ್ಮಸ್ಥಳದಲ್ಲಿ 39 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿರುವ ಪದ್ಮಲತಾ ಅವರ ಕಳೇಬರವನ್ನು ಹೊರತೆಗೆದು ಮರು ತನಿಖೆ ಮಾಡಿ, ಅಪರಾಧಿಗಳನ್ನು ಪತ್ತೆ ಹಚ್ಚುವಂತೆ ಕೋರಿ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಪದ್ಮಲತಾ ಅವರ ಅಕ್ಕ ಇಂದ್ರಾವತಿ ದೂರು ನೀಡಿದ್ದಾರೆ.

ಸೋಮವಾರ (ಆ.11) ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಆಗಮಿಸಿದ ಇಂದ್ರಾವತಿ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಏನಿದೆ?

“ನಾನು ಪ್ರಸ್ತುತ ನೆಲ್ಯಾಡಿ ನಿವಾಸಿಯಾಗಿದ್ದು, ದಿವಂಗತ ದೇವಾನಂದ ಅವರ ಮಗಳು. ಕೊಲೆಗೀಡಾದ ಪದ್ಮಲತಾಳ ಅಕ್ಕನಾಗಿರುತ್ತೇನೆ. 38 ವರ್ಷಗಳ ಹಿಂದೆ ಎಸ್‌ಡಿಎಂ ಕಾಲೇಜು ಉಜಿರೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ನನ್ನ ತಂಗಿ ಪದ್ಮಲತಾ ದಿನಾಂಕ 22.12.1986ರಂದು ಉಜಿರೆ ಕಾಲೇಜಿಗೆ ಹೋದವಳು ಸಂಜೆ ಧರ್ಮಸ್ಥಳ ತನಕ ಬಂದು ಕಾಣೆಯಾಗಿರುತ್ತಾಳೆ. ಆಕೆಯ ಮೃತದೇಹ ದಿನಾಂಕ 17.02.1987 ರಂದು ನೆರಿಯ ಹೊಳೆಯ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಮ್ಮ ತಂದೆ ಮನೆಯು ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ಇತ್ತು” ಎಂದು ವಿವರಿಸಿದ್ದಾರೆ.

ಮುಂದುವರಿದು, “ನನ್ನ ತಂಗಿ ಅಪಹರಣ, ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿರುವ ಕಾರಣ, ಆಕೆಯ ಅಸಹಜ ಸಾವಿಗೆ ಕಾರಣರಾದ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ಆಗ್ರಹಿಸಿ ಸಿಪಿಐಎಂ ಮುಖಂಡರೂ ಆಗಿದ್ದ ನನ್ನ ತಂದೆ ದಿವಂಗತ ದೇವಾನಂದ ಅವರು ಸಿಪಿಐಎಂ ನೇತೃತ್ವದಲ್ಲಿ ಹಲವಾರು ಹೋರಾಟಗಳನ್ನು ರೂಪಿಸಿದ್ದರು. ಹೋರಾಟಕ್ಕೆ ಮಣಿದ ಸರ್ಕಾರ ಕೊನೆಗೆ ಪ್ರಕರಣದ ತನಿಖೆ ನಡೆಸಲು ಸಿಓಡಿ ತನಿಖೆಗೆ ಆದೇಶಿಸಿತು. ವಿಧಾನ ಸಭೆಯಲ್ಲಿ ಚರ್ಚೆ ಆಗಿರುವುದು ಕೂಡಾ ವಿಧಾನಸಭಾ ದಾಖಲೆಯಲ್ಲಿ ಇರಬೇಕು. ಅಂದು ಸಚಿವರಾಗಿದ್ದ ರಾಚಯ್ಯ ಅವರೂ ಧರ್ಮಸ್ಥಳ ಗ್ರಾಮದ ಬೊಳಿಯಾರಲ್ಲಿರುವ ನಮ್ಮ ಮನೆಗೆ ಬಂದು ನ್ಯಾಯ ಕೊಡಿಸುವ ಭರವಸೆ ನೀಡಿದ್ದರು. ಆದರೆ ಕೊನೆಗೆ ತನಿಖೆಯು ಪತ್ತೆಯಾಗದ ಪ್ರಕರಣ ಎಂದು ವರದಿ ನೀಡಿ ನಮಗೆ ನ್ಯಾಯ ಸಿಗದಂತಾಗಿತ್ತು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಅದು ಒಂದು ಯೋಜಿತ ಅಪಹರಣ, ಅತ್ಯಾಚಾರ, ಕೊಲೆ ಎಂಬ ನಮ್ಮ ಅನುಮಾನದಂತೆ ಮುಂದೆಯಾದರೂ ತನಿಖೆ ನಡೆಸಿ ನ್ಯಾಯ ಪಡೆಯಬೇಕೆಂದು ನನ್ನ ತಂಗಿಯ ಕಳೆಬರಹವನ್ನು ದಹನ ಮಾಡದೆ ಹೂತಿಟ್ಟಿದ್ದೇವೆ. ಅದನ್ನು ತೆಗೆದು ತನಿಖೆ ನಡೆಸಿದರೆ ಕೊಲೆಯಾದ ಖಚಿತತೆ ಸಿಗಲಿದೆ ಹಾಗೂ ನನಗೆ ತಿಳಿದ ಸಾಕ್ಷಿನುಡಿಯಲು ನಾನು ಸಿದ್ಧಳಿದ್ದೇನೆ. ಆದ್ದರಿಂದ ನನ್ನ ತಂಗಿಯ ಪ್ರಕರಣವನ್ನು ರೀ-ಓಪನ್ ಮಾಡಿ, ಹೂತಿಟ್ಟ ಕಳೆಬರವನ್ನು ತೆಗೆದು ತನಿಖೆ ನಡೆಸಿ ತಂಗಿಯ ಸಾವಿಗೆ ನ್ಯಾಯ ಒದಗಿಸಬೇಕಾಗಿ ಹಾಗೂ ಅಪರಾಧಿಗಳ ಪತ್ತೆ ಹಚ್ಚಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ವಿನಂತಿ ಮಾಡುತ್ತೇನೆ” ಎಂದಿದ್ದಾರೆ.

39 ವರ್ಷಗಳ ಹಿಂದೆ ಕೊಲೆಯಾದ ಪದ್ಮಲತಾ

ಮಾಧ್ಯಮಗಳೊಂದಿಗೆ ಮಾತನಾಡಿದ ಇಂದ್ರಾವತಿ, “ನನ್ನ ತಂಗಿ ಕೊಲೆಯಾಗಿ 39 ವರ್ಷಗಳು ಕಳೆಯಿತು. ಇದುವರೆಗೆ ನಮಗೆ ನ್ಯಾಯ ಸಿಕ್ಕಿಲ್ಲ. ಕೊಲೆಗಾರರು ಯಾರು ಅಂತ ಪತ್ತೆಯಾಗಿಲ್ಲ. ಈಗ ಎಸ್‌ಐಟಿ ತನಿಖೆ ನಡೆಯುತ್ತಿದೆ. ಅವರು ಪದ್ಮಲತಾ ಕೊಲೆಗಾರರನ್ನೂ ಪತ್ತೆ ಹಚ್ಚಬಹುದು ಎಂಬ ನಿರೀಕ್ಷೆಯಿಂದ ದೂರು ಕೊಡಲು ಬಂದಿದ್ದೇನೆ ಎಂದು ಹೇಳಿದ್ದಾರೆ.

ಈ ಹಿಂದೆ ಪದ್ಮಲತಾ ಕೊಲೆ ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ‘ಪತ್ತೆ ಹಚ್ಚಲಾಗದ ಪ್ರಕರಣ’ ಎಂದು ವರದಿ ಕೊಟ್ಟಿತ್ತು. ಈಗ ಎಸ್‌ಐಟಿ ತನಿಖೆ ನಡೆಯುತ್ತಿರುವುದರಿಂದ ನಮಗೆ ನ್ಯಾಯ ಸಿಗಬಹುದು ಎಂಬ ಭರವಸೆಯಲ್ಲಿ ದೂರು ಕೊಟ್ಟಿದ್ದೇವೆ ಎಂದಿದ್ದಾರೆ.

ಪದ್ಮಲತಾ ಕೊಲೆಗಾರರು ಯಾರು ಎಂದು ಗೊತ್ತಾಗಬೇಕು. ಅವರಿಗೆ ಸರಿಯಾಗಿ ಶಿಕ್ಷೆಯಾಗಬೇಕು ಎಂದು ಇಂದ್ರಾವತಿ ಆಗ್ರಹಿಸಿದ್ದಾರೆ.

ಸಿಪಿಐ(ಎಂ) ಪಕ್ಷದ ತಾಲೂಕು ಸಮಿತಿ ಸದಸ್ಯ ಮಾತನಾಡಿ, “ದೇವಾನಂದರ ಮಗಳು ಪದ್ಮಲತಾ ಡಿಸೆಂಬರ್ 22, 1986ರಂದು ಕಾಲೇಜಿಗೆ ತೆರಳಿದವಳು ವಾಪಸ್ ಧರ್ಮಸ್ಥಳಕ್ಕೆ ಬಸ್‌ನಲ್ಲಿ ಬಂದಿರುವುದನ್ನು ಆಕೆಯ ಸಹಪಾಠಿಗಳು ನೋಡಿದ್ದರು. ಆಮೇಲೆ ಪದ್ಮಲತಾ ಕಣ್ಮರೆಯಾಗಿದ್ದಳು. ಫೆಬ್ರವರಿ 17, 1987ರಂದು ಕೊಳೆತ ಸ್ಥಿತಿಯಲ್ಲಿ ನೆರಿಯ ಹೊಳೆಯ ಸಮೀಪ ಆಕೆಯ ಮೃತದೇಹ ಪತ್ತೆಯಾಗಿತ್ತು. ಆಕೆಯ ವಸ್ತ್ರ ಮತ್ತು ಕೈಗೆ ಕಟ್ಟಿದ್ದ ವಾಚ್‌ನಿಂದ ಅದು ಪದ್ಮಲತಾ ಮೃತದೇಹ ಎಂದು ನಾವು ಗುರುತು ಹಿಡಿದಿದ್ದೆವು ಎಂದು ತಿಳಿಸಿದ್ದಾರೆ.

ಪ್ರಕರಣವನ್ನು ಸಿಐಡಿಗೆ ಕೊಟ್ಟಿದ್ದರೂ ಸರಿಯಾದ ತನಿಖೆ ನಡೆದಿರಲಿಲ್ಲ. ಸಿಐಡಿ ಪತ್ತೆಯಾಗದ ಪ್ರಕರಣ ಎಂದು ಹಿಂಬರಹ ಕೊಟ್ಟಿತ್ತು. ಸಿಐಡಿ ಅಪರಾಧಿಗಳನ್ನು ಪತ್ತೆ ಹಚ್ಚುವ ಕೆಲಸ ಮಾಡಿರಲಿಲ್ಲ. ನಾವು ಅವತ್ತು ಪದ್ಮಲತಾಳ ಶವ ಸುಟ್ಟಿರಲಿಲ್ಲ. ಅಗತ್ಯ ಬಂದರೆ ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ಮಾಡಬಹುದು ಎಂದು ಮುಂದಾಲೋಚನೆಯಿಂದ ಹಾಗೆ ಮಾಡಿದ್ದೆವು. ಈಗ ಮತ್ತೆ ಎಸ್‌ಐಟಿ ರಚನೆಯಾಗಿದೆ. ಹಾಗಾಗಿ ಮತ್ತೊಮ್ಮೆ ದೂರು ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ದಲಿತ ಪತ್ರಕರ್ತನ ಮೇಲೆ ಹಲ್ಲೆ: ದಸಂಸ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...