Homeಮುಖಪುಟ'ಕೊಂದವರು ಯಾರು?': ಧರ್ಮಸ್ಥಳ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹ, ಅ.2 ರಂದು ವಿಚಾರ ಸಂಕಿರಣ

‘ಕೊಂದವರು ಯಾರು?’: ಧರ್ಮಸ್ಥಳ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹ, ಅ.2 ರಂದು ವಿಚಾರ ಸಂಕಿರಣ

- Advertisement -
- Advertisement -

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ ಎನ್ನಲಾದ ಮಹಿಳೆಯರ ಮೇಲಿನ ವ್ಯವಸ್ಥಿತ ಲೈಂಗಿಕ ದೌರ್ಜನ್ಯ, ನಿಗೂಢ ಕೊಲೆಗಳು ಹಾಗೂ ಸಂತ್ರಸ್ತ ಕುಟುಂಬಗಳ ಸುದೀರ್ಘ ನ್ಯಾಯದ ಹೋರಾಟಕ್ಕೆ ಬೆಂಬಲವಾಗಿ ‘ಕೊಂದವರು ಯಾರು?’ ಆಂದೋಲನವು ತನ್ನ ಹೋರಾಟವನ್ನು ತೀವ್ರಗೊಳಿಸಿದೆ. ಪ್ರಕರಣಗಳ ಮರುತನಿಖೆಗೆ ರಚನೆಯಾಗಿರುವ ವಿಶೇಷ ತನಿಖಾ ತಂಡದಲ್ಲಿ (SIT) ವಿವಾದಾಸ್ಪದ ಅಧಿಕಾರಿಗಳನ್ನು ಕೈಬಿಟ್ಟು, ದಕ್ಷ ಅಧಿಕಾರಿಗಳನ್ನು ಒಳಗೊಂಡ ಎಸ್‌ಐಟಿ ಪುನರ್‌ರಚಿಸಬೇಕು ಎಂದು ಆಗ್ರಹಿಸಿ ಶುಕ್ರವಾರ(ದಿನಾಂಕ.25) ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಇದರ ಬೆನ್ನಲ್ಲೇ, ವಿಷಯದ ಆಳವಾದ ಚರ್ಚೆಗಾಗಿ ಅಕ್ಟೋಬರ್ 2ರಂದು ನಗರದಲ್ಲಿ ಬೃಹತ್ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.

ದಕ್ಷ ಅಧಿಕಾರಿಗಳ ಎಸ್‌ಐಟಿ ಪುನರ್‌ರಚನೆಗೆ ಧರಣಿ

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಡಿಜಿ ಅಥವಾ ಎಡಿಜಿಪಿ ಶ್ರೇಣಿಯ ಹಿರಿಯ ಅಧಿಕಾರಿಯ ನೇತೃತ್ವದಲ್ಲಿ, ತಾಂತ್ರಿಕ ಹಾಗೂ ವಿಧಿವಿಜ್ಞಾನ ತಜ್ಞರನ್ನು ಒಳಗೊಂಡ ಹೊಸ ಎಸ್‌ಐಟಿ ರಚನೆಯಾಗಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದರು. ಭ್ರಷ್ಟಾಚಾರ, ಕರ್ತವ್ಯಲೋಪ, ಮಹಿಳೆಯರ ವಿಚಾರದಲ್ಲಿ ಅಸೂಕ್ಷ್ಮ ನಡವಳಿಕೆ ಹಾಗೂ ಕೋಮುವಾದಿ ಶಕ್ತಿಗಳೊಂದಿಗೆ ನಂಟಿನ ಆರೋಪ ಎದುರಿಸುತ್ತಿರುವ ಯಾವುದೇ ಅಧಿಕಾರಿಯನ್ನು ತನಿಖೆಯಿಂದ ಹೊರಗಿಡಬೇಕು ಎಂದು ಆಗ್ರಹಿಸಲಾಯಿತು.

ಪ್ರಕರಣದ ಆರಂಭದಿಂದಲೂ ತಪ್ಪು ಮಾಹಿತಿ ನೀಡಿ ತನಿಖೆಯನ್ನು ಹಾದಿತಪ್ಪಿಸಿದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ವೈದ್ಯರು ಸೇರಿದಂತೆ ಎಲ್ಲರನ್ನೂ ತನಿಖೆಗೆ ಒಳಪಡಿಸಬೇಕು ಹಾಗೂ ಅಪರಾಧಿಗಳನ್ನು ರಕ್ಷಿಸಲು ಸಾಕ್ಷ್ಯ ನಾಶಪಡಿಸಿದ ಪ್ರಭಾವಿಗಳನ್ನು ಪತ್ತೆಹಚ್ಚಬೇಕು ಎಂದು ಪಟ್ಟು ಹಿಡಿದರು. ಸತ್ಯಕ್ಕಾಗಿ ಹೋರಾಡುತ್ತಿರುವ ಸೌಜನ್ಯಾ ಕುಟುಂಬಕ್ಕೆ ಮತ್ತು ಸಾಕ್ಷಿಗಳಿಗೆ ಸಂಪೂರ್ಣ ಭದ್ರತೆ ಒದಗಿಸಬೇಕು ಹಾಗೂ ಹೊಸ ಸಾಕ್ಷಿಗಳು ಎಸ್‌ಐಟಿ ಸಂಪರ್ಕಿಸಲು ಉಚಿತ ಸಹಾಯವಾಣಿ ಆರಂಭಿಸಬೇಕು ಎಂದು ಒತ್ತಾಯಿಸಲಾಯಿತು. ಪ್ರತಿಭಟನೆಯಲ್ಲಿ ಮಧು ಭೂಷಣ್, ಕೆ.ಎಸ್. ವಿಮಲಾ, ಗೌರಮ್ಮ, ಮಮತಾ ಯಜಮಾನ್, ಜ್ಯೋತಿ ಅನಂತಸುಬ್ಬರಾವ್, ಮೀನಾಕ್ಷಿ, ಶಶಿಕಲಾ, ಅಮ್ಮುಲು ಹಾಗೂ ಮಲ್ಲಿಗೆ ಸಿರಿಮನೆ ಭಾಗವಹಿಸಿದ್ದರು.

ಅಕ್ಟೋಬರ್ 2 ರಂದು ‘ಕೊಂದವರು ಯಾರು?’ ವಿಚಾರ ಸಂಕಿರಣ

ಧರ್ಮಸ್ಥಳ ಪ್ರಕರಣಗಳ ನಿಗೂಢತೆಯನ್ನು ಭೇದಿಸುವ ಮತ್ತು ನೊಂದ ಕುಟುಂಬಗಳಿಗೆ ಧ್ವನಿಯಾಗುವ ನಿಟ್ಟಿನಲ್ಲಿ ‘ನಾವೆದ್ದು ನಿಲ್ಲದಿದ್ದರೆ?’ ವೇದಿಕೆಯು ಅಕ್ಟೋಬರ್ 2ರಂದು (ಶುಕ್ರವಾರ) ಬೆಳಿಗ್ಗೆ 10:00 ರಿಂದ ಸಂಜೆ 6:30 ರವರೆಗೆ ಬೆಂಗಳೂರಿನ ಶಿವಾಜಿನಗರದ ಕಾಮರಾಜ ರಸ್ತೆಯಲ್ಲಿರುವ ‘ಸಭಾ’ ಸಭಾಂಗಣದಲ್ಲಿ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದೆ.

“ಶ್ರದ್ಧೆ-ನಂಬಿಕೆಯೊಂದಿಗೆ ಅನುಸಂಧಾನ: ಅಧಿಕಾರ, ಪಿತೃಪ್ರಧಾನತೆ, ಧರ್ಮ ಮತ್ತು ಹೊಣೆಗಾರಿಕೆ” ಎಂಬ ಕೇಂದ್ರ ವಸ್ತುವಿಷಯದಡಿ ನಡೆಯಲಿರುವ ಈ ವಿಚಾರ ಸಂಕಿರಣದಲ್ಲಿ ದೇಶ ಹಾಗೂ ರಾಜ್ಯದ ಪ್ರಮುಖ ಹೋರಾಟಗಾರರು, ವಕೀಲರು, ಮಾಧ್ಯಮ ಪ್ರತಿನಿಧಿಗಳು ಮತ್ತು ಲೇಖಕರು ಭಾಗವಹಿಸಲಿದ್ದು, ಒಟ್ಟು ನಾಲ್ಕು ವಿಷಯಾಧಾರಿತ ಗೋಷ್ಠಿಗಳಲ್ಲಿ ಸುದೀರ್ಘ ಚರ್ಚೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾರ್ವಜನಿಕರ ಆಕ್ರೋಶಕ್ಕೆ ಮಣಿದು RTI ವಿನಾಯಿತಿ ಆದೇಶ ರದ್ದು ಮಾಡಿದ ತಮಿಳುನಾಡು ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಸರ್ಕಾರವು ಸಾರ್ವಜನಿಕರ ಹಾಗೂ ವಿರೋಧ ಪಕ್ಷಗಳ ತೀವ್ರ ಆಕ್ರೋಶದ ಬೆನ್ನಲ್ಲೇ ತನ್ನ ವಿವಾದಾತ್ಮಕ ನಿರ್ಧಾರವೊಂದನ್ನು ಹಿಂಪಡೆದುಕೊಂಡಿದೆ. ಸಾರ್ವಜನಿಕ (ಕಾನೂನು...

2016ರಲ್ಲೇ ತಮ್ಮನ್ನು ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ IAS ಜಿಜಿ ಥಾಮ್ಸನ್

ದೇಶದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗಲೇ ಬಿಜೆಪಿ ಪರವಾಗಿ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದರು ಎಂಬ ಕಟು ಸತ್ಯವೊಂದು ಈಗ ಬಹಿರಂಗವಾಗಿದೆ. ಅವರು ನನಗೆ...

ಚಿಕ್ಕಮಗಳೂರು : ಚುನಾವಣಾ ಆಯೋಗದ ವಿರುದ್ಧ ಜನಾಂದೋಲನಕ್ಕೆ ಪ್ರಕಾಶ್ ರಾಜ್ ಕರೆ

ನ್ಯಾಯಾಂಗದ ಮೂಲಕ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಕೆಳಗಿಳಿಸುವುದು ಸಾಧ್ಯವಾಗದಿರಬಹುದು, ಆದರೆ ಜನರ ಹಕ್ಕುಗಳಿಗಾಗಿ ಬೀದಿ ಚಳವಳಿ ನಡೆಯಬೇಕು ಎಂದು ಪ್ರಕಾಶ್ ರಾಜ್ ಕರೆ ನೀಡಿದರು. ಎಸ್‌ಐಆರ್ ಪರಿಶೋಧನೆ ಮತ್ತು...

ಬೆಳಗಾವಿ| ಕೂಲಿ ನೇಕಾರರಿಗೆ ಕಾರ್ಮಿಕ ಇಲಾಖೆ ನೀಡುವ ‘ಸ್ಮಾರ್ಟ್ ಕಾರ್ಡ್’ನಲ್ಲಿ ಲೋಪ, ಅನ್ಯಾಯ ಸರಿಪಡಿಸಲು ಆಗ್ರಹ

ಹಗಲಿರುಳೆನ್ನದೆ ಮಗ್ಗಗಳ ಮುಂದೆ ಕುಳಿತು ಬಟ್ಟೆ ನೇಯುವ ಬೆಳಗಾವಿ ಭಾಗದ ಲಕ್ಷಾಂತರ ಕೂಲಿ ನೇಕಾರರ ಬದುಕು ಇಂದು ಭರವಸೆಯಿಲ್ಲದ ತೂಗುಯ್ಯಾಲೆಯಲ್ಲಿದೆ. ಒಂದೆಡೆ ಕಳೆದ ಒಂದು ದಶಕದಿಂದ (10 ವರ್ಷ) ಮಾಲೀಕರಿಂದ ಶ್ರಮಕ್ಕೆ ತಕ್ಕಂತೆ...

ಅಧಿಕಾರಿಯ ಡೆತ್‌ ನೋಟ್‌ನಲ್ಲಿ ಗ್ಯಾನೇಶ್ ಕುಮಾರ್ ಹೆಸರು!: ಮತ್ತೆ ಮುನ್ನೆಲೆಗೆ ಬಂದ ಹಳೆ ಕೇಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ವಿರುದ್ಧ ದೇಶದಾದ್ಯಂತ ಆಕ್ರೋಶದ ಅಲೆ ಎದ್ದಿರುವ ಈ ಸಂದರ್ಭದಲ್ಲಿ, ಸುಮಾರು ಎರಡು ದಶಕಗಳ ಹಿಂದೆ, ಮಲೇಷ್ಯಾದ ಯೋಜನಾ ಅಧಿಕಾರಿಯೊಬ್ಬರ ಆತ್ಮಹತ್ಯೆ ಪತ್ರದಲ್ಲಿ ಗ್ಯಾನೇಶ್ ಕುಮಾರ್...

ಹಾಸನ| SIR ಅಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ತನಿಖೆಗೆ ನಟ ಪ್ರಕಾಶ್ ರಾಜ್ ಪಟ್ಟು

ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯ ನೆಪದಲ್ಲಿ ಲಕ್ಷಾಂತರ ನಾಗರಿಕರ ಮೂಲಭೂತ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಕೇವಲ ಮತದಾರರ ವೈಯಕ್ತಿಕ ಸಮಸ್ಯೆಯಲ್ಲ, ಬದಲಿಗೆ ದೇಶದ ಸಂವಿಧಾನ...

SIR ರದ್ದುಗೊಳಿಸಿ, ಗ್ಯಾನೇಶ್ ಕುಮಾರ್‌ನನ್ನು ವಜಾಗೊಳಿಸುವಂತೆ ಆಗ್ರಹಿಸಿ ಎಡಪಕ್ಷಗಳಿಂದ ಪ್ರತಿಭಟನೆ

ದೇಶಾದ್ಯಂತ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಸಂಪೂರ್ಣ ಅಪ್ರಜಾಸತ್ತಾತ್ಮಕವಾಗಿದ್ದು, ಲಕ್ಷಾಂತರ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಮೂಲಕ ಅವರ ಸಂವಿಧಾನಾತ್ಮಕ ಹಕ್ಕುಗಳನ್ನು ಕಸಿಯಲಾಗುತ್ತಿದೆ ಎಂದು ಎಡಪಕ್ಷಗಳು ಆರೋಪಿಸಿವೆ. ಈ ಪ್ರಕ್ರಿಯೆಯನ್ನು...

ಗುವಾಹಟಿಯಲ್ಲಿ ಸಿಜೆಪಿ ಸಭೆಗೆ ಪೊಲೀಸರಿಂದ ಅಡ್ಡಿ; ಅಶುತೋಷ್ ರಾಂಕಾ ಮತ್ತು ತಂಡ ವಶಕ್ಕೆ

ಅಸ್ಸಾಂ ಪೊಲೀಸರು ಭಾನುವಾರ (ಸೆ.27) ಬೆಳಿಗ್ಗೆ ಗುವಾಹಟಿಯಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ'ಯ (ಸಿಜೆಪಿ) ಸಹ-ಸಂಯೋಜಕ ಅಶುತೋಷ್ ರಾಂಕಾ ಮತ್ತು ಸಂಘಟನೆಯ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಅಸ್ಸಾಂ ಸಚಿವಾಲಯದ ಸಮೀಪದಲ್ಲಿ...

ಬಿಜೆಪಿಯಿಂದ ಸ್ಪರ್ಧಿಸುವಂತೆ ಗ್ಯಾನೇಶ್ ಕುಮಾರ್ ಈ ಹಿಂದೆ ನನಗೆ ಆಫರ್ ನೀಡಿದ್ದರು! — ಕೇರಳದ ಮಾಜಿ ಚೀಫ್ ಸೆಕ್ರೆಟರಿ ಜಿಜಿ ತೋಮ್ಸನ್ ಸ್ಪೋಟಕ ಹೇಳಿಕೆ!

ಚುನಾವಣಾ ಆಯೋಗದಲ್ಲಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಹೆಸರಿನಲ್ಲಿ ನಡೆಯುತ್ತಿರುವ ಬೃಹತ್ ಮತ ಕಡಿತ ಹಾಗೂ ಏಕಪಕ್ಷೀಯ ನಿರ್ಧಾರಗಳ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿರುವ ಬೆನ್ನಲ್ಲೇ, ಹಾಲಿ ಮುಖ್ಯ ಚುನಾವಣಾ ಆಯುಕ್ತ...

ಕರ್ನಾಟಕ ಎಸ್ಐಆರ್: ಅಳಿಸುವಿಕೆಗೆ ಸಂಬಂಧಿಸಿದ ದತ್ತಾಂಶದಿಂದ ಸುಮಾರು 6000 ಮತದಾರರು ನಾಪತ್ತೆ: ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ ಅಂಕಿಅಂಶಗಳ ವ್ಯತ್ಯಾಸ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆ, ಚುನಾವಣಾ ಆಯೋಗದ ಅಂಕಿಅಂಶಗಳಲ್ಲೇ ಸುಮಾರು 6 ಸಾವಿರ ಮತದಾರರ ಅಳಿಸುವಿಕೆಗೆ ಸಂಬಂಧಿಸಿದ ವ್ಯತ್ಯಾಸ ಬೆಳಕಿಗೆ ಬಂದಿದೆ. ಮತದಾರರ...