Homeಕರ್ನಾಟಕಧರ್ಮಸ್ಥಳ ಸೌಜನ್ಯ ಪರ ಧ್ವನಿಯೆತ್ತಿದ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ಎಫ್‌ಐಆರ್‌!

ಧರ್ಮಸ್ಥಳ ಸೌಜನ್ಯ ಪರ ಧ್ವನಿಯೆತ್ತಿದ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ಎಫ್‌ಐಆರ್‌!

ಧಾರ್ಮಿಕ ಭಾವನೆಗೆ ಧಕ್ಕೆ ಎಂದು ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿದ ಪೊಲೀಸರು

- Advertisement -
- Advertisement -

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಪ್ರಕರಣದ ಕುರಿತು ಯುಟ್ಯೂಬ್ ವಿಡಿಯೊ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂಡಿ ಅವರು ವಿರುದ್ಧ ಬಳ್ಳಾರಿ ಜಿಲ್ಲೆಯ ಕೌಲ್‌ಬಝಾರ್ ಪೊಲೀಸ್ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಸಮೀರ್ ಅವರ ವೀಡಿಯೋದಿಂದ ಧರ್ಮಸ್ಥಳ ಮತ್ತು ಧರ್ಮಸ್ಥಳದ ಧರ್ಮಾಧಿಕಾರಿ ಮೇಲೆ ಧಾರ್ಮಿಕ ಭಾವನೆ ಹೊಂದಿದ ಸಾರ್ವಜನಿಕರ ಧಾರ್ಮಿಕ ಭಾವನೆಗೆ ದಕ್ಕೆಯಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಸಮೀರ್ ಅವರು ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಇತ್ತೀಚೆಎ ಮಾಡಿದ್ದ ವೀಡಿಯೊವೊಂದು ವ್ಯಾಪಕ ಗಮನ ಸೆಳೆದಿದ್ದು, ರಾಜ್ಯದಾದ್ಯಂತ ಮತ್ತೆ ಸೌಜನ್ಯ ಪ್ರಕರಣ ಮುನ್ನಲೆಗೆ ಬಂದಿದೆ. ಈ ನಡುವೆ ಅವರ ಧರ್ಮವನ್ನು ಮುನ್ನಲೆಗೆ ತಂದು ಅವರನ್ನು ಅವಮಾನಿಸುತ್ತಿದ್ದಾರೆ ಎಂಬ ಆರೋಪಗಳಿಗೆ ಅವರು ಪ್ರತಿಕ್ರಿಯೆ ನೀಡಿದ್ದು, ಜನರು ಜಾತಿ ಮತ್ತು ಧರ್ಮವನ್ನು ಈ ವಿಷಯಕ್ಕೆ ಏಕೆ ಎಳೆದು ತರುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಸಮೀರ್ ವಿರುದ್ಧ ಪೊಲೀಸರು ಬುಧವಾರ ಎಫ್‌ಐಆರ್‌ ದಾಖಲಿಸಿದ್ದು, ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ -299 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಧರ್ಮಸ್ಥಳ ಸೌಜನ್ಯ

ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆದ ನಂತರ ಸಮೀರ್ ಅವರ ಮನೆಗೆ ಬುಧವಾರ ತಡ ರಾತ್ರಿ ಪೊಲೀಸರು ಪ್ರವೇಶಿಸಿದ್ದು, ಅವರನ್ನು ಬಂಧಿಸಲು ಪ್ರಯತ್ನಿಸಿದ್ದಾಗಿ ಅವರು ಆರೋಪಿಸಿದ್ದಾರೆ. ಈ ಕುರಿತು ಸಮೀರ್ ರಾತ್ರಿ 1 ಗಂಟೆಗೆ ಫೇಸ್‌ಬುಕ್ ಲೈವ್‌ನಲ್ಲಿ ಖಚಿತಪಡಿಸಿದ್ದಾರೆ.

ಈ ನಡುವೆ ಎಡಿಜಿಪಿ ( ಕಾನೂನು ಮತ್ತು ಸುವ್ಯವಸ್ಥೆ) ಅವರು ಹೊರಡಿಸಿದ್ದಾರೆ ಎನ್ನಲಾದ ಆದೇಶದ ಪ್ರತಿಯೊಂದು ಬುಧವಾರ ಸಂಜೆಯಿಂದ ವೈರಲ್ ಆಗಿದೆ. ಈ ಆದೇಶದಲ್ಲಿ “ಸಮೀರ್ ವೀಡಿಯೊದಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದ್ದು, ಸಾಮಾಜಿಕ ಮಾಧ್ಯಮ ಮಾನಿಟರಿಂಗ್ ಸೆಲ್ ಚುರುಕುಗೊಳಿಸಿ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದು, ಈ ಆದೇಶವು ಸಾಕಷ್ಟು ಆಕ್ರೋಶಕ್ಕೆ ಗುರಿಯಾಗಿದೆ.

ಎಡಿಜಿಪಿ ಹೊರಡಿಸಿದ್ದಾರೆ ಎನ್ನಲಾದ ಈ ಆದೇಶದಲ್ಲಿ, “ಇತ್ತೀಚಿಗೆ ಸಮೀರ್ ಎಂಬಾತನು ಸಾಮಾಜಿಕ ಜಾಲತಾಣದಲ್ಲಿ ಈ ಹಿಂದೆ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋವನ್ನು ಹರಿಬಿಟ್ಟದ್ದು, ಘಟಕಾಧಿಕಾರಿಗಳು ಈ ವಿಷಯವನ್ನು ತಮ್ಮ ಘಟಕಗಳಲ್ಲಿರುವ Social Media Monitoring Cell ಮುಖೇನ ಮೇಲಾಧಿಕಾರಿಗಳ ಗಮನಕ್ಕೆ ತರುವಲ್ಲಿ ವಿಫಲರಾಗಿರುತ್ತೀರಿ. ಈ ವಿಷಯ ಕುರಿತಂತೆ ಸಾರ್ವಜನಿಕರಲ್ಲಿ ಪರ/ವಿರೋಧ ಅನಿಸಿಕೆಗಳು ಉದ್ಭವಿಸಿ ಸಾಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿರುತ್ತದೆ. ಆದ್ದರಿಂದ, Social Media Monitoring Cell ಚುರುಕುಗೊಳಿಸುವುದು ಹಾಗೂ ಈ ಕುರಿತಂತೆ ಕೈಗೊಂಡ ಕ್ರಮದ ಬಗ್ಗೆ ಮಾನ್ಯ ಎಡಿಜಿಪಿ, ಕಾನೂನು ಮತ್ತು ಸುವ್ಯವಸ್ಥೆ ರವರಿಗೆ ಮಾಹಿತಿ ನೀಡುವುದು” ಎಂದು ಹೇಳಿದೆ.

ಮಾಜಿ ಪೊಲೀಸ್ ಅಧಿಕಾರಿ, ಸೌಜನ್ಯ ಪರ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದ ಗಿರೀಶ್ ಮಟ್ಟಣ್ಣನವರ್ ಅವರ ಜೊತೆಗೆ ಸಮೀರ್ ಅವರು ಬುಧವಾರ ತಡರಾತ್ರಿ ಫೇಸ್‌ಬುಕ್ ಲೈವ್‌ನಲ್ಲಿ ತನಗೆ ವ್ಯಾಪಕ ಜೀವ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಹೇಳಿದ್ದಾರೆ.

ಲೈವ್‌ನಲ್ಲಿ ಮಾತನಾಡಿದ ಸಮೀರ್, “ಪ್ರಸ್ತುತ ನನ್ನ ಪರಿಸ್ಥತಿ ತುಂಬಾ ಕೆಟ್ಟದಾಗಿದ್ದು, ಈಗಾಗಲೆ ಪೊಲೀಸ್ ನೋಟಿಸ್ ಬಂದಿದೆ. ಸುಮಾರು ರಾತ್ರಿ 10;45ರ ಹೊತ್ತಿಗೆ ಪೊಲೀಸರು ಬಂದು ನೋಟಿಸ್ ಕೊಟ್ಟು ಹೋಗಿದ್ದಾರೆ. ಅದಾಗ್ಯೂ ನನಗೆ ಯಾವುದೇ ಭಯವಿಲ್ಲ. ನಾನು ವಿಡಿಯೊದಲ್ಲಿ ಹೇಳಿರುವ ಎಲ್ಲಾ ವಿಚಾರಗಳಿಗೂ ಸಾಕ್ಷಿಯಿದೆ. ನನಗೆ ಕಾನೂನಿನ ಮೇಲೆ ನಂಬಿಕೆಯಿದ್ದು, ಕೋರ್ಟ್‌ನ ಮುಂದೆ ಮತ್ತಷ್ಟು ವಿಸೃತವಾಗಿ ಮಂಡಿಸುತ್ತೇನೆ. ಈ ಬಗ್ಗೆ ಯಾವುದೇ ತೊಂದರೆಯಿಲ್ಲ” ಎಂದು ಹೇಳಿದ್ದಾರೆ.

ಪ್ರಸ್ತತ ತನಗೆ ತೊಂದರೆ ಆಗುತ್ತಿರುವುದು, ಮುಸ್ಲಿಮನೊಬ್ಬ ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಮಾತನಾಡಿದ್ದೆ ತಪ್ಪು ಹಾಗೂ ಹಿಂದೂ ವಿರೋಧಿ ಎಂದು ಬಿಂಬಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ತಾನು ಅನ್ಯಾಯದ ವಿರುದ್ಧ ಧ್ವನಿಯೆತ್ತಿದ್ದು, ಅದು ನನ್ನ ಧರ್ಮ, ಅದನ್ನು ನಾನು ಪಾಲಿಸುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

“ಒಂದು ವೇಳೆ ನಾನು ಹಿಂದೂ ವಿರೋಧಿ ಆಗಿದ್ದರೆ, ಒಬ್ಬ ಹಿಂದೂ ಹುಡುಗಿಗೆ ಆಗಿರುವ ಅನ್ಯಾಯದ ಬಗ್ಗೆ ನಾನು ಯಾಕೆ ಧ್ವನಿ ಎತ್ತಬೇಕು? ನ್ಯಾಯದ ಬಗ್ಗೆ ಮಾತನಾಡೋಣ. ಅದುವೇ ಧರ್ಮ” ಎಂದು ಸಮೀರ್ ಅವರು ಫೇಸ್‌ಬುಕ್ ಲೈವ್‌ನಲ್ಲಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಹಮಾಸ್‌ಗೆ ಕೊನೆಯ ಎಚ್ಚರಿಕೆ ನೀಡಿದ ಟ್ರಂಪ್

ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಹಮಾಸ್‌ಗೆ ಕೊನೆಯ ಎಚ್ಚರಿಕೆ ನೀಡಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...