ಬಲಪಂಥೀಯ ಸಂಘಟನೆ ಶ್ರೀರಾಮಸೇನೆ ರಾಜ್ಯದ ಧಾರವಾಡದಲ್ಲಿ ಆರು ದಿನಗಳ ಬಂದೂಕು ಮತ್ತು ಯುದ್ಧಕಲೆ ತರಬೇತಿ ಶಿಬಿರವನ್ನು ನಡೆಸಿದ್ದು, ರಾಜ್ಯದಾದ್ಯಂತ 186 ಯುವಕರಿಗೆ ತರಬೇತಿ ನೀಡಿದೆ ಎಂದು ಸೌತ್‌ಫಸ್ಟ್ ವರದಿ ಮಾಡಿದೆ. ಶ್ರೀರಾಮ ಸೇನೆಯು ತರಬೇತಿಯನ್ನು ಸಮರ್ಥಿಸಿಕೊಂಡಿದ್ದು, ಇದು ಭವಿಷ್ಯದ ಸವಾಲುಗಳಿಗೆ ಸಿದ್ಧರಾಗಲು ಆಯ್ದ ಕಾರ್ಯಕರ್ತರಿಗೆ ವಾರ್ಷಿಕವಾಗಿ ನಡೆಸಲಾಗುವ ಆತ್ಮರಕ್ಷಣೆಯ ಕಾರ್ಯಕ್ರಮವಾಗಿದೆ ಎಂದು ಹೇಳಿಕೊಂಡಿದೆ. ಧಾರವಾಡ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಆರು ದಿನಗಳ ಶಿಬಿರದಲ್ಲಿ ಯುವಕರಿಗೆ ಲಾಠಿ ನಿರ್ವಹಣೆ, ಕತ್ತಿವರಸೆ, ಕರಾಟೆ, ದೃಗ್ವಿಜ್ಞಾನ, ಮತ್ತು ಏರ್ ಗನ್ ಬಳಕೆ ಸೇರಿದಂತೆ ಹಲವು ಯುದ್ಧ ಕಲೆಗಳ ತರಬೇತಿ ನೀಡಲಾಗಿದೆ ಎಂದು ವರದಿ ಹೇಳಿದೆ. ಬಲಪಂಥೀಯ ಸಂಘಟನೆಯ ಈ ಚಟುವಟಿಕೆಯು ಕೋಮು ಉದ್ವಿಗ್ನತೆಯನ್ನು ಹೆಚ್ಚಿಸುವ ಬಗ್ಗೆ ಆತಂಕ ಹುಟ್ಟುಹಾಕಿದೆ.
ಶಿಬಿರವನ್ನು ಸಮರ್ಥಿಸಿಕೊಂಡಿರುವ ಸಂಘಟನೆಯ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, “ಹಿಂದೂ ಕಾರ್ಯಕರ್ತರು ಮತ್ತು ಸಮಾಜದ ಮೇಲಿನ ದಾಳಿಗಳಿಗೆ ಪ್ರತಿಕ್ರಿಯಿಸಲು ಸಿದ್ದತೆ ಇದಾಗಿದೆ” ಎಂದು ಹೇಳಿದ್ದಾರೆ. ಧಾರವಾಡ
“ಏರ್‌ಗನ್ ಮೂಲಕ ಸ್ವ-ರಕ್ಷಣೆ ತರಬೇತಿ ನೀಡಿದ್ದೇವೆ. ಪ್ರತಿವರ್ಷ ಆಯ್ದ ಕಾರ್ಯಕರ್ತರಿಗೆ ತರಬೇತಿ ನೀಡಲಾಗುತ್ತದೆ. ಮುಂದಿನ ಸವಾಲು ಎದುರಿಸಲು ಯುವಕರನ್ನು ಸಜ್ಜು ಮಾಡಿದ್ದೇವೆ. ಸ್ವ-ಸುರಕ್ಷೆಗಾಗಿ ವಿವಿಧ ರಕ್ಷಾ ತರಬೇತಿ ನೀಡಲಾಗಿದೆ” ಎಂದು ಕುಲಕರ್ಣಿ ಹೇಳಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ. ಅದಾಗ್ಯೂ, ಈದಿನ.ಕಾಂ ಶ್ರೀರಾಮ ಸೇನೆಯ ತರಬೇತಿ ಶಿಬಿರ ಬಾಗಲಕೋಟೆಯಲ್ಲಿ ನಡೆದಿದೆ ಎಂದು ವರದಿ ಮಾಡಿದೆ.
‘‘ಭಾರತದಲ್ಲಿ ಹಿಂದುತ್ವವಾದಿ, ಕೋಮುವಾದಿ ಭಯೋತ್ಪಾದಕತೆ ಹೆಚ್ಚುತ್ತಿದೆ. ಸಂಘಪರಿವಾರವು ಹಿಂದುತ್ವದ ಹೆಸರಿಲ್ಲಿ ಕೋಮುವಾದಿ ಹಿಂಸಾಚಾರವನ್ನು ಪ್ರಚೋದಿಸುತ್ತಿದೆ. ವಿಚಾರವಾದಿಗಳಾದ ದಾಬೋಲ್ಕರ್, ಪನ್ಸಾರ್, ಎಂ.ಎಂ ಕಲ್ಬುರ್ಗಿ, ಗೌರಿ ಲಂಕೇಶ್ ಸೇರಿದಂತೆ ಹಲವಾರು ಚಿಂತಕರ ಹತ್ಯೆಯ ಹಿಂದೆ ಸಂಘಪರಿವಾರದ ಸಂಚು ಇದೆ ಎಂಬ ಆರೋಪಗಳಿವೆ. ಇಂತಹ ಆರೋಪಗಳಿಗೆ ಪುಷ್ಠಿಕೊಡುವಂತಹ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ” ಎಂದು ಈದಿನ.ಕಾಂ ವರದಿ ಹೇಳಿದೆ.
ಇದನ್ನೂ ಓದಿ: ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಪತ್ರ ಬರೆದ ಕೇಜ್ರಿವಾಲ್
ಇದನ್ನೂ ಓದಿ: ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಪತ್ರ ಬರೆದ ಕೇಜ್ರಿವಾಲ್
ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಪತ್ರ ಬರೆದ ಕೇಜ್ರಿವಾಲ್


