HomeUncategorizedಧಾರವಾಡ | 186 ಯುವಕರಿಗೆ ಬಂದೂಕು ತರಬೇತಿ ಕೊಟ್ಟ ಶ್ರೀರಾಮಸೇನೆ

ಧಾರವಾಡ | 186 ಯುವಕರಿಗೆ ಬಂದೂಕು ತರಬೇತಿ ಕೊಟ್ಟ ಶ್ರೀರಾಮಸೇನೆ

- Advertisement -
- Advertisement -

ಬಲಪಂಥೀಯ ಸಂಘಟನೆ ಶ್ರೀರಾಮಸೇನೆ ರಾಜ್ಯದ ಧಾರವಾಡದಲ್ಲಿ ಆರು ದಿನಗಳ ಬಂದೂಕು ಮತ್ತು ಯುದ್ಧಕಲೆ ತರಬೇತಿ ಶಿಬಿರವನ್ನು ನಡೆಸಿದ್ದು, ರಾಜ್ಯದಾದ್ಯಂತ 186 ಯುವಕರಿಗೆ ತರಬೇತಿ ನೀಡಿದೆ ಎಂದು ಸೌತ್‌ಫಸ್ಟ್‌ ವರದಿ ಮಾಡಿದೆ. ಶ್ರೀರಾಮ ಸೇನೆಯು ತರಬೇತಿಯನ್ನು ಸಮರ್ಥಿಸಿಕೊಂಡಿದ್ದು, ಇದು ಭವಿಷ್ಯದ ಸವಾಲುಗಳಿಗೆ ಸಿದ್ಧರಾಗಲು ಆಯ್ದ ಕಾರ್ಯಕರ್ತರಿಗೆ ವಾರ್ಷಿಕವಾಗಿ ನಡೆಸಲಾಗುವ ಆತ್ಮರಕ್ಷಣೆಯ ಕಾರ್ಯಕ್ರಮವಾಗಿದೆ ಎಂದು ಹೇಳಿಕೊಂಡಿದೆ. ಧಾರವಾಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆರು ದಿನಗಳ ಶಿಬಿರದಲ್ಲಿ ಯುವಕರಿಗೆ ಲಾಠಿ ನಿರ್ವಹಣೆ, ಕತ್ತಿವರಸೆ, ಕರಾಟೆ, ದೃಗ್ವಿಜ್ಞಾನ, ಮತ್ತು ಏರ್ ಗನ್ ಬಳಕೆ ಸೇರಿದಂತೆ ಹಲವು ಯುದ್ಧ ಕಲೆಗಳ ತರಬೇತಿ ನೀಡಲಾಗಿದೆ ಎಂದು ವರದಿ ಹೇಳಿದೆ. ಬಲಪಂಥೀಯ ಸಂಘಟನೆಯ ಈ ಚಟುವಟಿಕೆಯು ಕೋಮು ಉದ್ವಿಗ್ನತೆಯನ್ನು ಹೆಚ್ಚಿಸುವ ಬಗ್ಗೆ ಆತಂಕ ಹುಟ್ಟುಹಾಕಿದೆ.

ಶಿಬಿರವನ್ನು ಸಮರ್ಥಿಸಿಕೊಂಡಿರುವ ಸಂಘಟನೆಯ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, “ಹಿಂದೂ ಕಾರ್ಯಕರ್ತರು ಮತ್ತು ಸಮಾಜದ ಮೇಲಿನ ದಾಳಿಗಳಿಗೆ ಪ್ರತಿಕ್ರಿಯಿಸಲು ಸಿದ್ದತೆ ಇದಾಗಿದೆ” ಎಂದು ಹೇಳಿದ್ದಾರೆ. ಧಾರವಾಡ

“ಏರ್‌ಗನ್ ಮೂಲಕ ಸ್ವ-ರಕ್ಷಣೆ ತರಬೇತಿ ನೀಡಿದ್ದೇವೆ. ಪ್ರತಿವರ್ಷ ಆಯ್ದ ಕಾರ್ಯಕರ್ತರಿಗೆ ತರಬೇತಿ ನೀಡಲಾಗುತ್ತದೆ. ಮುಂದಿನ ಸವಾಲು ಎದುರಿಸಲು ಯುವಕರನ್ನು ಸಜ್ಜು ಮಾಡಿದ್ದೇವೆ. ಸ್ವ-ಸುರಕ್ಷೆಗಾಗಿ ವಿವಿಧ ರಕ್ಷಾ ತರಬೇತಿ ನೀಡಲಾಗಿದೆ” ಎಂದು ಕುಲಕರ್ಣಿ ಹೇಳಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ. ಅದಾಗ್ಯೂ, ಈದಿನ.ಕಾಂ ಶ್ರೀರಾಮ ಸೇನೆಯ ತರಬೇತಿ ಶಿಬಿರ ಬಾಗಲಕೋಟೆಯಲ್ಲಿ ನಡೆದಿದೆ ಎಂದು ವರದಿ ಮಾಡಿದೆ.

‘‘ಭಾರತದಲ್ಲಿ ಹಿಂದುತ್ವವಾದಿ, ಕೋಮುವಾದಿ ಭಯೋತ್ಪಾದಕತೆ ಹೆಚ್ಚುತ್ತಿದೆ. ಸಂಘಪರಿವಾರವು ಹಿಂದುತ್ವದ ಹೆಸರಿಲ್ಲಿ ಕೋಮುವಾದಿ ಹಿಂಸಾಚಾರವನ್ನು ಪ್ರಚೋದಿಸುತ್ತಿದೆ. ವಿಚಾರವಾದಿಗಳಾದ ದಾಬೋಲ್ಕರ್, ಪನ್ಸಾರ್, ಎಂ.ಎಂ ಕಲ್ಬುರ್ಗಿ, ಗೌರಿ ಲಂಕೇಶ್ ಸೇರಿದಂತೆ ಹಲವಾರು ಚಿಂತಕರ ಹತ್ಯೆಯ ಹಿಂದೆ ಸಂಘಪರಿವಾರದ ಸಂಚು ಇದೆ ಎಂಬ ಆರೋಪಗಳಿವೆ. ಇಂತಹ ಆರೋಪಗಳಿಗೆ ಪುಷ್ಠಿಕೊಡುವಂತಹ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ” ಎಂದು ಈದಿನ.ಕಾಂ ವರದಿ ಹೇಳಿದೆ.

ಇದನ್ನೂ ಓದಿ: ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಪತ್ರ ಬರೆದ ಕೇಜ್ರಿವಾಲ್

ಇದನ್ನೂ ಓದಿ: ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಪತ್ರ ಬರೆದ ಕೇಜ್ರಿವಾಲ್

ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಪತ್ರ ಬರೆದ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...