Homeಕರ್ನಾಟಕಧಾರವಾಡ ಘಟನೆ: ಶ್ರೀರಾಮ ಸೇನೆಯ ನಾಲ್ವರು ದುಷ್ಕರ್ಮಿಗಳ ಬಂಧನ

ಧಾರವಾಡ ಘಟನೆ: ಶ್ರೀರಾಮ ಸೇನೆಯ ನಾಲ್ವರು ದುಷ್ಕರ್ಮಿಗಳ ಬಂಧನ

- Advertisement -
- Advertisement -

ಧಾರವಾಡದ ನುಗ್ಗಿಕೇರಿಯಲ್ಲಿನ ಹನುಮಾಂತ ದೇವಸ್ಥಾನದ ಬಳಿ ಕಳೆದ ಹದಿನೈದು ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ನಬಿಸಾಬ್‌‌ ಅವರ ವ್ಯಾಪಾರಕ್ಕೆ ಅಡ್ಡಿಪಡಿಸಿ, ಕಲ್ಲಂಗಡಿಗಳನ್ನು ರಸ್ತೆಗೆ ಎಸೆದು ವಿಕೃತಿ ಮೆರೆದ ಶ್ರೀರಾಮಸೇನೆಯ ದುಷ್ಕರ್ಮಿಗಳಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಶ್ರೀರಾಮಸೇನೆಯ ಗೂಂಡಾಗಳು ನಬಿಸಾಬ್‌ ಅವರಿಗೆ ಸೇರಿದ ಸುಮಾರು ಐದು ಕ್ವಿಂಟಾಲ್‌ ಕಲ್ಲಂಗಡಿಯನ್ನು ಒಡೆದು ಹಾಕಿರುವ ಪ್ರಕರಣದಲ್ಲಿ ಹಲವು ದುಷ್ಕರ್ಮಿಗಳ ವಿರುದ್ದ FIR ದಾಖಲಿಸಲಾಗಿದೆ.

ಬಂಧಿತ ದುಷ್ಕರ್ಮಿಗಳನ್ನು ಮೈಲಾರಪ್ಪ ಗುಡ್ಡಪ್ಪನವರ, ಮಹಾಲಿಂಗ ಐಗಳಿ, ಚಿದಾನಂದ ಕಲಾಲ, ಕುಮಾರ ಕಟ್ಟಿಮನಿ ಎಂದು ಗುರುತಿಸಲಾಗಿದೆ. ನಬಿಸಾಬ್ ಅವರು ನೀಡಿದ ದೂರಿನ ಅನ್ವಯ ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಧಾರವಾಡದ ನುಗ್ಗಿಕೇರಿಯಲ್ಲಿನ ಹನುಮಾನ್‌ ದೇವಸ್ಥಾನದ ಬಳಿ ಕಳೆದ ಹದಿನೈದು ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ನಬಿಸಾಬ್‌‌, ಶ್ರೀರಾಮಸೇನೆಯ ಗೂಂಡಾಗಳಿಂದ ತೊಂದರೆಗೊಳಗಾಗಿದ್ದಾರೆ. ದೇವಸ್ಥಾನದ ಬಳಿ ಕಲ್ಲಂಗಡಿ ಮಾರುತ್ತಿದ್ದ ಕಾರಣಕ್ಕೆ ಗೂಂಡಾಗಳು ದಾಂಧಲೆ ನಡೆಸಿದ್ದಾರೆ. ಸುಮಾರು ಐದು ಕ್ವಿಂಟಾಲ್‌ ಕಲ್ಲಂಗಡಿಯನ್ನು ಒಡೆದು ಹಾಕಿ ವಿಕೃತಿ ಮೆರೆದಿದ್ದರು.

ಇದನ್ನೂ ಓದಿ: ಎಲ್ಲರೂ ನನ್ನ ಕೊಂದು ಬಿಡಿ: ಶ್ರೀರಾಮಸೇನೆಯ ಗೂಂಡಾಗಳಿಂದ ದಾಳಿಗೊಳಗಾದ ಮುಸ್ಲಿಂ ವ್ಯಾಪಾರಿಯ ಸಂಕಟ

ಘಟನೆ ನಡೆದ ದಿನ ಮಾಧ್ಯಮಗಳ ಮುಂದೆ ನೋವು ತೋಡಿಕೊಂಡಿದ್ದ ನಬಿಸಾಬ್‌, “ಬಂದವರು ಪಟ್‌ ಪಟ್‌ ಅಂತ ಕಲ್ಲಂಗಡಿ ಕಾಯಿಗಳನ್ನು ಒಡೆದರು. ಒಂದೆರಡು ಕಾಯಿಯಲ್ಲ, ತೆಗೆದುಕೊಳ್ಳುತ್ತೀವಿ ಸ್ವಾಮಿ ಸ್ವಲ್ಪ ನಿಲ್ಲಿಸಿ ಎಂದರೂ ಕೇಳಲಿಲ್ಲ. ಎಲ್ಲವನ್ನೂ ಒಡೆದುಹಾಕಿದರು. ನಾನೇನು ಮಾಡಬೇಕಾಗುತ್ರೀ?” ಎಂದು ಸಂಕಟ ವ್ಯಕ್ತಪಡಿಸಿದ್ದರು.

“ನಾವು ಸರಿದು ನಿಂತುಬಿಟ್ಟಿವಿ. ಅವರು ಒಡೆಯುತ್ತಿದ್ದಾಗ ನಾವೇನು ಮಾಡಲು ಆಗುತ್ರೀ? ಅವರು ಎಂಟು ಹತ್ತು ಇದ್ದರು, ನಾವೊಬ್ಬ ಇದ್ದೀನಿ. ಒಂದು ಕಾಯಿ ತೆಗೆದು ಇಡುವಷ್ಟರಲ್ಲಿ ಹತ್ತು ಕಾಯಿ ಒಡೆಯುತ್ತಿದ್ದರು. ಆರು ಕಿಂಟ್ವಾಲ್‌ ತೆಗೆದುಕೊಂಡು ಬಂದಿದ್ದೆ. ಒಂದು ಕಿಂಟ್ವಾಲ್ ಮಾತ್ರ ಮಾರಿದ್ದೆ. ಉಳಿದೆಲ್ಲವನ್ನೂ ಒಡೆದು ಹಾಕಿದ್ರು” ಎಂದು ನೋವು ತೋಡಿಕೊಂಡಿದ್ದರು.

ದುಷ್ಕರ್ಮಿಗಳ ಈ ಕೃತ್ಯಕ್ಕೆ ರಾಜ್ಯದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಹಲವಾರು ಜನರು ನಬಿಸಾಬ್ ಅವರಿಗೆ ಮಿಡಿದಿದ್ದರು.

ಸೋಮವಾರದಂದು ಧಾರವಾಡ ಜಿಲ್ಲಾ ಕಚೇರಿಯ ಮುಂದೆ ಜನಪರ ಸಂಘಟನೆಗಳ ವೇದಿಕೆಯ ವತಿಯಿಂದ ದುಷ್ಕರ್ಮಿಗಳನ್ನು ಬಂಧಿಸಬೇಕು ಮತ್ತು ಸಂತ್ರಸ್ಥರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಯಿತು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಶ್ರೀರಾಮಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಆದೇಶ ನೀಡಿ: ಸಿದ್ದರಾಮಯ್ಯ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...