Homeಕರ್ನಾಟಕಧಾರವಾಡ: ವೈದ್ಯಕೀಯ ಕಾಲೇಜಿನಲ್ಲಿ 182 ಕ್ಕೆ ಏರಿದ ಸೋಂಕಿತರ ಸಂಖ್ಯೆ, ಇಂದು 3000 ಮಂದಿಗೆ ಪರೀಕ್ಷೆ

ಧಾರವಾಡ: ವೈದ್ಯಕೀಯ ಕಾಲೇಜಿನಲ್ಲಿ 182 ಕ್ಕೆ ಏರಿದ ಸೋಂಕಿತರ ಸಂಖ್ಯೆ, ಇಂದು 3000 ಮಂದಿಗೆ ಪರೀಕ್ಷೆ

- Advertisement -
- Advertisement -

ಧಾರವಾಡದ ಸತ್ತೂರು ಬಡಾಣೆಯಲ್ಲಿರುವ ಎಸ್‌ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸೋಂಕಿಗೆ ಒಳಗಾದವರ ಪಟ್ಟಿ ಬೆಳೆಯುತ್ತಲೇ ಇದೆ. ಕೊರೊನಾ ಸೋಂಕಿಗೆ ಒಳಗಾದ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಸಂಖ್ಯೆ 66 ರಿಂದ 182 ಕ್ಕೆ ಏರಿಕೆಯಾಗಿದೆ.

ಧಾರವಾಡದ ವೈದ್ಯಕೀಯ ಕಾಲೇಜು ಕೋವಿಡ್ ಕ್ಲಸ್ಟರ್ ಆಗಿ ಮಾರ್ಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ಕಳೆದೆರಡು ದಿನಗಳಿಂದ ಕಾಲೇಜಿನಲ್ಲಿ ಒಟ್ಟು 939 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಸೋಂಕಿಗೆ ಒಳಗಾಗಿರುವ ಅಧಿಕ ಮಂದಿ ಕೊರೊನಾ ಲಸಿಕೆಯ ಎರಡು ಡೋಸ್‌ಗಳನ್ನು ಪಡೆದಿದ್ದರು ಎನ್ನಲಾಗಿದೆ.

ನವೆಂಬರ್ 17ರಂದು ಕಾಲೇಜಿನ ಕಲಾಕ್ಷೇತ್ರದಲ್ಲಿ ಫ್ರೆಶರ್ಸ್ ಡೇ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಅದರಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳ ಜೊತೆಗೆ ಕೆಲವು ಪೋಷಕರು ಸಹ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಭಾಗಿಯಾದವರನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಕಾಲೇಜು ಆಡಳಿತ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು…?

ಗುರುವಾರ, ಧಾರವಾಡದ ಎಸ್‌ಡಿಎಂ ವೈದ್ಯಕೀಯ ವಿಜ್ಞಾನ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇವರೆಲ್ಲರೂ ಸಂಪೂರ್ಣ ಲಸಿಕೆ ಪಡೆದಿದ್ದರು. ಬಳಿಕ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು.

“ಸೋಂಕಿತ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಮಾದರಿಗಳನ್ನು ಜೀನೋಮ್ ಸಿಕ್ವಿನ್ಸಿಂಗ್‌ಗಾಗಿ (genome sequencing) ಕಳುಹಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ಲಸಿಕೆ ನೀಡಲಾಗಿದೆ. ಇದರಲ್ಲಿ ಹೊಸ ರೂಪಾಂತರವಿದೆಯೇ ಎಂದು ಪರಿಶೀಲಿಸಲು ನಾವು ಜಿನೋಮ್ ಸಿಕ್ವಿನ್ಸಿಂಗ್‌ಗಾಗಿ ಕೆಲವು ಮಾದರಿಗಳನ್ನು ಕಳುಹಿಸುತ್ತೇವೆ” ಎಂದು ಆರೋಗ್ಯ ಆಯುಕ್ತ ಡಿ. ರಂದೀಪ್ ಹೇಳಿದ್ದಾರೆ.

ಸೋಂಕಿತರನ್ನು ಕ್ಯಾಂಪಸ್‌ನಲ್ಲಿಯೇ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಎರಡು ಹಾಸ್ಟೆಲ್‌ಗಳನ್ನು ಸೀಲ್ ಮಾಡಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯಶವಂತ್ ತಿಳಿಸಿದ್ದಾರೆ. ಕೋವಿಡ್ ಪಾಸಿಟಿವ್ ರೋಗಿಗಳು ಯಾವುದೇ ರೋಗಲಕ್ಷಣಗಳನ್ನು ಹೊಂದಿಲ್ಲ. ಎಲ್ಲರಿಗೂ ಕ್ಯಾಂಪಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ಆರೋಗ್ಯ ಇಲಾಖೆಯು ಇಂದು ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಕ್ಲಿನಿಕಲ್ ಮತ್ತು ನಾನ್ ಕ್ಲಿನಿಕಲ್) ಸುಮಾರು 3,000 ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಇಲ್ಲಿಯವರೆಗೆ ಕನಿಷ್ಠ 1,000 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.


ಇದನ್ನೂ ಓದಿ: ಅಮೆರಿಕ, ಯೂರೋಪ್ ದೇಶಗಳಲ್ಲಿ ಕೊರೊನಾ ನಾಲ್ಕನೇ ಅಲೆ; ಭಾರತ ಎಚ್ಚೆತ್ತುಕೊಳ್ಳುವ ಸಮಯ ಬಂದಿದೆಯೇ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...