Homeಮುಖಪುಟಧಾರವಾಡ: ಮೋದಿ ಬರುವ ಹಿನ್ನೆಲೆಯಲ್ಲಿ ಹಾಸ್ಟೆಲ್ ಖಾಲಿ ಮಾಡಲು ಸೂಚನೆ; ವಿದ್ಯಾರ್ಥಿಗಳ ಆಕ್ರೋಶ

ಧಾರವಾಡ: ಮೋದಿ ಬರುವ ಹಿನ್ನೆಲೆಯಲ್ಲಿ ಹಾಸ್ಟೆಲ್ ಖಾಲಿ ಮಾಡಲು ಸೂಚನೆ; ವಿದ್ಯಾರ್ಥಿಗಳ ಆಕ್ರೋಶ

- Advertisement -
- Advertisement -

ಧಾರವಾಡಕ್ಕೆ ಪ್ರಧಾನಿ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿ ವಿರೋಧಿ ನಿಲುವನ್ನು ಧಾರವಾಡ ಕರ್ನಾಟಕ ವಿಶ್ವವಿದ್ಯಾನಿಲಯ ತಾಳಿರುವುದು ಟೀಕೆಗೆ ಗುರಿಯಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿರುವ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಒಂಬತ್ತು ದಿನಗಳ ಕಾಲ ಹಾಸ್ಟೆಲ್ ಖಾಲಿ ಮಾಡುವಂತೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ (ಕೆಯುಡಿ) ವಿದ್ಯಾರ್ಥಿಗಳಿಗೆ ಸೂಚಿಸಿದೆ.

2023ರ ಜನವರಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕಾಗಿ ಆಗಮಿಸುವ ಅತಿಥಿಗಳ ವಾಸ್ತವ್ಯಕ್ಕಾಗಿ ಒಂಬತ್ತು ದಿನಗಳ ಕಾಲ ಹಾಸ್ಟೆಲ್ ಖಾಲಿ ಮಾಡುವಂತೆ ಹೇಳಿರುವ ʼಕೆಯುಡಿಯʼ ವಿರುದ್ಧ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ‘ಈದಿನ.ಕಾಂ’ ವರದಿ ಮಾಡಿದೆ.

ಐದು ದಿನಗಳ ಉತ್ಸವವನ್ನು ಜನವರಿ 12ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಾಲೇಜು ಮೈದಾನದಲ್ಲಿ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ದೇಶದ ವಿವಿಧ ಭಾಗಗಳಿಂದ ಸಾವಿರಾರು ವಿದ್ಯಾರ್ಥಿಗಳು ಧಾರವಾಡಕ್ಕೆ ಬರಲಿದ್ದಾರೆ.

ವಿಶ್ವವಿದ್ಯಾನಿಲಯದ ನಿಲುವನ್ನು ನಿರ್ಧಾರವನ್ನು ವಿರೋಧಿಸುತ್ತಿರುವ ವಿದ್ಯಾರ್ಥಿಗಳು, “ಕಾರ್ಯಕ್ರಮದ ಅತಿಥಿಗಳಿಗೆ ಕಾಲೇಜು ಕೊಠಡಿಗಳನ್ನು ಬಳಸುವಂತೆ ಹೇಳಬಹುದಿತ್ತು. ಹೋಟೆಲ್‌ಗಳನ್ನು ಕಾಯ್ದಿರಿಸಬಹುದಿತ್ತು ಅಥವಾ ಟೆಂಟ್‌ಗಳನ್ನು ಹಾಕಬಹುದಿತ್ತು. ಇದೆಲ್ಲದರ ಬದಲಿಗೆ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಖಾಲಿ ಮಾಡಿಸುವುದು ಎಷ್ಟು ಸರಿ?” ಎಂದು ಪ್ರಶ್ನಿಸಿದ್ದಾರೆ.

“ಕಾರ್ಯಕ್ರಮಕ್ಕಾಗಿ ಸರ್ಕಾರ ₹20 ಕೋಟಿ ಖರ್ಚು ಮಾಡಲಾಗುತ್ತಿದೆ. ಆದರೆ, ಕಾರ್ಯಕ್ರಮಕ್ಕೆ ಬರುವವರು ತಂಗಲು ವ್ಯವಸ್ಥೆ ಮಾಡಲು ಹಾಸ್ಟೆಲ್ ಖಾಲಿ ಮಾಡಿಸುತ್ತಿರುವುದು ಮಾತ್ರ ವಿಚಿತ್ರವಾಗಿದೆ. ಈಗಾಗಲೇ ನಮ್ಮ ತರಗತಿಗಳು ನಿಗದಿತ ಸಮಯದಲ್ಲಿ ಮುಗಿಯದೆ ಹಿಂದೆ ಉಳಿದಿದೆ. ಇಂತಹ ಸಮಯದಲ್ಲಿ ಒಂಬತ್ತು ದಿನ ಹಾಸ್ಟೆಲ್ ಖಾಲಿ ಮಾಡಿಸುವುದು ಸರಿಯಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೆಯುಡಿ ಕುಲಪತಿ ಬಿ.ಗುಡಸಿ ಪ್ರತಿಕ್ರಿಯಿಸಿದ್ದು, “ವಿದ್ಯಾರ್ಥಿಗಳನ್ನು ಬಲವಂತವಾಗಿ ಸ್ಥಳಾಂತರಿಸುವುದಿಲ್ಲ. ಕಾರ್ಯಕ್ರಮ ಮುಗಿಯುವವರೆಗೆ ಅವರ ವಸ್ತುಗಳನ್ನು ಬೇರೆ ಕಡೆ ಇಡುವುದಕ್ಕೆ ವ್ಯವಸ್ಥೆ ಮಾಡಿದ್ದೇವೆ. ಅವರಿಗೆ ರಜೆ ಘೋಷಿಸಲಾಗಿದೆ” ಎಂದು ತಿಳಿಸಿದ್ದಾರೆ.

ಅಧ್ಯಾಪಕರೊಬ್ಬರು ಪ್ರತಿಕ್ರಿಯಿಸಿದ್ದು, “ಕೋರ್ಸು ನಿಗದಿತ ಅವಧಿಗಿಂತ ಹಿಂದಿದ್ದರೂ ವಿಶ್ವವಿದ್ಯಾಲಯವು ಯಾವುದೇ ಅತಿಥಿ ಉಪನ್ಯಾಸಕರನ್ನು ನೇಮಿಸಿಲ್ಲ. ರಜಾದಿನಗಳನ್ನು ಘೋಷಿಸುವುದರಿಂದ ಪಠ್ಯಕ್ರಮವನ್ನು ಪೂರ್ಣಗೊಳಿಸಲು ಇನ್ನಷ್ಟು ವಿಳಂಬವಾಗುತ್ತದೆ. ನಾವೂ ಮನೆಗೆ ಹೋಗುವುದಕ್ಕಿಂತ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಯಸುತ್ತೇವೆ” ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಭದ್ರ ಬುನಾದಿ ಹಾಸ್ಟೆಲ್ ಗಳು ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ ನಡೆಯುತ್ತದೆ ಎಂದು ವಿದ್ಯಾರ್ಥಿಗಳಿಗೆ ತೊಂದರೆ ಕೊಡುವುದು ಸೂಕ್ತ ಎಲ್ಲಾ ……

  2. ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಭದ್ರ ಬುನಾದಿ ಹಾಸ್ಟೆಲ್ ಗಳು ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ ನಡೆಯುತ್ತದೆ ಎಂದು ವಿದ್ಯಾರ್ಥಿಗಳಿಗೆ ತೊಂದರೆ ಕೊಡುವುದು ಸೂಕ್ತ ವಲ್ಲಾ ……

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...