Homeಕರ್ನಾಟಕಧಾರವಾಡ ರಂಗಾಯಣ ನಿರ್ದೇಶಕ ಸ್ಥಾನ; ನಟ-ರಂಗಕರ್ಮಿ ಜಹಾಂಗೀರ್ ಹೆಸರು ಮುನ್ನೆಲೆಗೆ

ಧಾರವಾಡ ರಂಗಾಯಣ ನಿರ್ದೇಶಕ ಸ್ಥಾನ; ನಟ-ರಂಗಕರ್ಮಿ ಜಹಾಂಗೀರ್ ಹೆಸರು ಮುನ್ನೆಲೆಗೆ

- Advertisement -
- Advertisement -

ಹಿರಿಯ ರಂಗಭೂಮಿ ಕಲಾವಿದ ಮತ್ತು ಹಾಸ್ಯ ಚಿತ್ರನಟ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ಕಳೆದ ನಿಧನರಾಗಿದ್ದು, ಇದೀಗ ಧಾರವಾಡ ರಂಗಾಯಣ ನಿರ್ದೇಶಕ ಸ್ಥಾನ ಖಾಲಿ ಉಳಿಸಿದೆ. ಆ ಜಾಗಕ್ಕೆ ಹಿರಿಯ ನಟ, ರಂಗಕರ್ಮಿ ಜಹಾಂಗೀರ್ ಎಂಎಸ್‌ ಅವರ ಹೆಸರು ಕೇಳಿಬರುತ್ತಿದೆ.

ನೀನಾಸಂ ರಂಗಶಿಕ್ಷಣಕೇಂದ್ರದಲ್ಲಿ ನಟನಾ ಡಿಪ್ಲೊಮ ಪದವಿ ಪಡೆದಿರುವ ಅವರು, ಹಲವು ಕನ್ನಡ ಧಾರಾವಾಹಿ, ಚಲನಚಿತ್ರ ಮತ್ತು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ನೀನಾಸಂ ತಿರುಗಾಟದಲ್ಲಿ ಅವರು ಚೋರಚರಣದಾಸ, ಸಂಸಾರದಲ್ಲಿಸನಿದಪ, ಜುಜಬಿ ದೇವರ ಜುಗಾರಿ ಆಟ, ಮಹಾತ್ಮ, ಚೂರಿಕಟ್ಟೆ, ಧರ್ಮ ದುರಂತ, ಜತೆಗಿರುವನು ಚಂದಿರ, ಸಹ್ಯಾದ್ರಿಕಾಂಡ, ಕೆಂಪುಕಣಗಿಲೆ ಸೇರಿದಂತೆ ಹಲವು ನಾಟಕಗಳಲ್ಲಿ ಅಭಿನಯಿಸಿದ್ದಾರೆ.

ಮೈಸೂರು ರಂಗಾಯಣಕ್ಕಾಗಿ ದೊರೆ ಈಡೀಪಸ್, ರಂಗಶಂಕರದ ಸಂಕೇತ್ ಗಾಗಿ
ನೀನಾನಾದ್ರೆ ನಾ ನೀನೇನ ನಾಟಕಗಳನ್ನು ನಿರ್ದೇಶನ ಮಾಡಿದ್ದಾರೆ.

ಅಮೇರಿಕದ ‘ಬ್ರೆಡ್ ಆಂಡ್ ಪೋಪೆಟ್’ ಥಿಯಟರ್ ನಲ್ಲಿ ಕೆಲಸ ಮಾಡಿದ ಅನುಭವ ಇದ್ದು, ಕರ್ನಾಟಕದ ಹಲವಾರು ಜಿಲ್ಲೆಯಾದ್ಯಂತ ಹವ್ಯಾಸಿ ರಂಗಭೂಮಿ ತಂಡಗಳೂಂದಿಗೆ ನಟ ತಂತ್ರಜ್ಞನಾಗಿ ಕೆಲಸ ಮಾಡಿದ್ದಾರೆ.

ಕನ್ನಡ ದೂರದರ್ಶನದ ಮೂಲಕ ಕರ್ನಾಟಕದಲ್ಲಿ ಮನೆಮಾತಾಗಿದ್ದಾರೆ. ಪಾಪಾ ಪಾಂಡು, ಪಾಂಡುರಂಗ ವಿಠಲ, ಪಾತು ಸಾತು ಹಲವಾರು ಧಾರವಾಹಿಗಳಲ್ಲಿ ನಟನೆ ಮಾಡಿದ್ದಾರೆ.

ಕಾನ್ಸ್ ಪ್ರಶಸ್ತಿ ವಿಜೇತ, ಆಸ್ಕರ್ ನಾಮನಿದೇ೯ಶಿತವಾದ ಸೂರ್ಯ ಕಾಂತಿ ಹೊಗಳಿಗೆ ಮದಲೇಗೊತ್ತಿತ್ತು ಸೇರಿದಂತೆ ಪೋಟೋ, ಯಜಮಾನ, ಬಹದ್ದೂರ್, ವಾಘಚಿಪಾಣಿ, ಸದ್ದು ವಿಚಾರಣೆ ನೆಡೆಯುತ್ತಿದೆ, ಅಭಿಮನ್ಯೂ ಸೇರಿದಂತೆ ಇನ್ನೂ ಹಲವಾರು ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಅಮೇರಿಕಾದ ಬೆಡ್ಅಂಡ್ ಪಪೆಟ್ ಥಿಯೇಟರ್, ಕರ್ನಾಟಕದ ನೀನಾಸಮ್, ಪುಣೆಯ ಎಫ್‌ಟಿಐಐ, ರಂಗಾಯಣ, ರಂಗಶಂಕರ ಸಂಕೇತ್ ಸೇರಿದಂತೆ ಹಲವಾರು ತಂಡಗಳ ಜೊತೆಗೆ ನಟನೆ, ನಿರ್ದೇಶನದ ಜೊತೆಗೆ ತಂತ್ರಜ್ಞರಾಗಿಯೂ ಕೆಲಸ ಮಾಡಿದ ಅನುಭವ ಇದೆ. ಕಳೆದ 15 ವರ್ಷ ದಿಂದ ಹುಬ್ಬಳಿಯಲ್ಲಿ ವಾಸ ಮಾಡುತ್ತಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ನಟ ಎಂ.ಎಸ್‌. ಜಹಾಂಗೀರ್, “ಜಾತ್ಯತೀತ ಸರ್ಕಾರಗಳು ಅಧಿಕಾರಕ್ಕೆ ಬಂದಾಗ ಅವಕಾಶ ವಂಚಿತ ಸಮುದಾಯಗಳಿಗೆ ಆದ್ಯತೆ ನೀಡುವ ಪದ್ಧತಿ ಹಿಂದಿನಿಂದಲೂ ಚಾಲ್ತಿಯಲ್ಲಿದೆ. ನಾವು ಇಂಥ ಸರ್ಕಾರಗಳಿಂದ ಮಾತ್ರವೇ ಸಾಮಾಜಿಕ ನ್ಯಾಯ ನಿರೀಕ್ಷೆ ಮಾಡಬಹುದು. ಈ ಹಿಂದೆ ಧಾರವಾಡ ರಂಗಾಯಣ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆ ಅವರು, ಅಲ್ಪಸಂಖ್ಯಾತ ಸಮುದಾಯದಲ್ಲೇ ಸಣ್ಣ ಗುಂಪಾದ ಪಿಂಜಾರ ಸಮುದಾಯಕ್ಕೆ ಸೇರಿದ್ದವರಾಗಿದ್ದರು. ಈವರೆಗೆ ಆ ಸಮುದಾಯಗಳಿಗೆ ಸಿಕ್ಕ ಅವಕಾಶ ಬಹಳ ಕಡಿಮೆ. ಈ ರೀತಿಯ ಅತಿ ಸೂಕ್ಷ್ಮ ಸಮುದಾಯದ ವ್ಯಕ್ತಿಗೆ ಸರ್ಕಾರ ಅವಕಾಶ ನೀಡಿತ್ತು. ಆದರೆ, ದುರಾದೃಷ್ಟವಶಾತ್ ರಾಜು ತಾಳಿಕೋಟೆ ನಮ್ಮನ್ನು ಅಗಲಿದ್ದಾರೆ. ಅಪರೂಪಕ್ಕೆ ಈ ಸಮುದಾಯಕ್ಕೆ ಅವಕಾಶ ಸಿಕ್ಕಿದ್ದು, ಸರ್ಕಾರ ಪ್ರಾದೇಶಿಕ ಮತ್ತು ಪ್ರಾತಿನಿಧ್ಯ ಆಧಾರದಲ್ಲಿ ಇದೇ ಸಮುದಾಕ್ಕೆ ಮತ್ತೊಮ್ಮೆ ಅವಕಾಶ ನೀಡಿದರೆ ಉತ್ತಮವಾಗಿರುತ್ತದೆ” ಎಂದರು.

“ಧಾರವಾಡ ರಂಗಾಯಣ ನಿರ್ದೇಶಕ ಸ್ಥಾನಕ್ಕೆ ನನ್ನ ಹೆಸರು ಮಾತ್ರವಲ್ಲ, ಇದೇ ಸಮುದಾಯದ ಸಹನಾ ಪಿಂಜಾರ ಅವರು ರಾಷ್ಟ್ರೀಯ ನಾಟಕ ಶಾಲೆಯಲ್ಲಿ ಪದವಿ ಪಡೆದಿದ್ದಾರೆ. ಶಕೀಲ್‌ ಅಹಮದ್‌ ಎನ್ನುವವರು ಹಲವು ರಂಗ ತಂಡಗಳೊಂದಿಗೆ ಕೆಲಸ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತ ಸಮುದಾಯದವರನ್ನೇ ನಿರ್ದೇಶಕರನ್ನಾಗಿ ಮಾಡುತ್ತೇವೆ ಎಂದು ಬೇರೆ ಯಾರನ್ನೋ ಆಯ್ಕೆ ಮಾಡುವ ಬದಲಿಗೆ ಸೂಕ್ಷ್ಮ ಗುಂಪುಗಳಾದ ನದಾಫ್‌ ಮತ್ತು ಪಿಂಜಾರ ಸಮುದಾಯದ ಕಲಾವಿದರಿಗೆ ಅವಕಾಶ ನಿಡಬೇಕು. ಕಳೆದ ಮೂವತ್ತು ವರ್ಷಗಳಿಂದ ನಾನು ರಂಗಭೂಮಿಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದೇನೆ. ಅವಕಾಶ ಸಿಕ್ಕರೆ ಉತ್ತಮವಾಗಿ ಕೆಲಸ ಮಾಡಿಕೊಂಡು ಹೋಗಬಹುದು” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...