Homeಕರ್ನಾಟಕಧಾರವಾಡ: ಯುವತಿಗೆ ಲೈಂಗಿಕ ಕಿರುಕುಳ ಆರೋಪ; ಕಾಂಗ್ರೆಸ್ ಮುಖಂಡ ಅರೆಸ್ಟ್‌

ಧಾರವಾಡ: ಯುವತಿಗೆ ಲೈಂಗಿಕ ಕಿರುಕುಳ ಆರೋಪ; ಕಾಂಗ್ರೆಸ್ ಮುಖಂಡ ಅರೆಸ್ಟ್‌

- Advertisement -
- Advertisement -

ಕರ್ನಾಟಕ ಕಾಂಗ್ರೆಸ್‌ನ ಮುಖಂಡರೊಬ್ಬರು ತಮ್ಮ ಒಡೆತನದ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಧಾರವಾಡ ಪೊಲೀಸರು ಬಂಧಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಮನೋಜ್ ಕರ್ಜಗಿ ಅವರ ಯುನಿಸೆಕ್ಸ್ ಸಲೂನ್‌ನಲ್ಲಿ ಕೆಲಸ ಮಾಡುವ 19 ವರ್ಷದ ಬ್ಯೂಟಿಷಿಯನ್‌ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸುವ ಮುನ್ನ, ಸಂತ್ರಸ್ತೆಯ ಗೆಳೆಯ ಮತ್ತು ಇತರ ಇಬ್ಬರು ಸ್ನೇಹಿತರು ಸ್ಥಳೀಯ ಮುಖಂಡನಿಗೆ ಥಳಿಸಿದ್ದಾರೆ ಎನ್ನಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೆಪ್ಟೆಂಬರ್ 17ರಂದು ಘಟನೆ ನಡೆದಿದೆ. ಯುನಿಸೆಕ್ಸ್ ಸಲೂನ್ ಮತ್ತು ಸ್ಪಾ ಮಾಲೀಕರಾದ ಮನೋಜ್ ಕರ್ಜಗಿ ಸಂತ್ರಸ್ತೆಯ ಮೇಲೆ ಕೋಪಗೊಂಡಿದ್ದರು. ಸ್ಥಳವನ್ನು ಅಚ್ಚುಕಟ್ಟಾಗಿ ಇಡಲಿಲ್ಲ ಎಂದು ಹರಿಹಾಯ್ದರು. ಸಂತ್ರಸ್ತೆಯು ವ್ಯಾಕ್ಸಿಂಗ್ ಕೋಣೆಯಲ್ಲಿ ಸ್ವಚ್ಛಗೊಳಿಸುತ್ತಿದ್ದಾಗ, ಮನೋಜ್‌ ಕರ್ಜಗಿ ಬಲವಂತವಾಗಿ ಯುವತಿಗೆ ಚುಂಬಿಸಲು ಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿರಿ: ಕುನೋ: ಚೀತಾಗಳು ಒಳಗೆ, ಆದಿವಾಸಿಗಳು ಹೊರಕ್ಕೆ- ‘ಪರಿ’ ವರದಿ

ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಎ) ಅಡಿಯಲ್ಲಿ ಮುಖಂಡನನ್ನು ಬಂಧಿಸಿದ್ದಾರೆ. ಆತನ ವಿರುದ್ಧ ಲೈಂಗಿಕ ಕಿರುಕುಳದ ಪ್ರಕರಣವನ್ನು ದಾಖಲಿಸಿದ್ದಾರೆ.

ಸದ್ಯ ಮನೋಜ್ ಕರ್ಜಗಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಸೋಮವಾರ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುತ್ತದೆ.

ಇದರ ನಡುವೆ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, ಮನೋಜ್ ಕರ್ಜಗಿ ಪಕ್ಷದ ಸದಸ್ಯ ಎಂದು ಖಚಿತಪಡಿಸಿದೆ. ಕರ್ಜಗಿಯವರು ರಾಜ್ಯದ ವಾಯುವ್ಯ ಪ್ರದೇಶದಲ್ಲಿ ಸಾರಿಗೆ ನಿಗಮದ ನಿರ್ದೇಶಕರಾಗಿದ್ದರು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಆಪ್ತರಾಗಿದ್ದರು ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...