Homeಕರ್ನಾಟಕ'ಯುವಜನ ಆಯೋಗ' ಜಾರಿಗಾಗಿ ಸಂವಾದ-ಯುವ ಮುನ್ನಡೆ, ಕರ್ನಾಟಕ ವೇದಿಕೆಯಿಂದ ಅಭಿಯಾನ

‘ಯುವಜನ ಆಯೋಗ’ ಜಾರಿಗಾಗಿ ಸಂವಾದ-ಯುವ ಮುನ್ನಡೆ, ಕರ್ನಾಟಕ ವೇದಿಕೆಯಿಂದ ಅಭಿಯಾನ

- Advertisement -
- Advertisement -

ಯುವಜನರ ಘನತೆಯ ಬದುಕಿಗಾಗಿ, ಯುವಜನ ಆಯೋಗ ಜಾರಿಯಾಗಬೇಕು ಎಂದು ಸಂವಾದ ಮತ್ತು ಯುವಮುನ್ನಡೆ – ಕರ್ನಾಟಕ ಇವುಗಳ ಜಂಟಿ ಆಶ್ರಯದಲ್ಲಿ ಅಭಿಯಾನ ಆರಂಭಿಸಿವೆ.

ಈ ಕುರಿತು ಯುವ ಮುನ್ನಡೆ, ಕರ್ನಾಟಕ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ”ಯುವಜನರು ಇರುವ ಸ್ಥಳಗಳಲ್ಲಿ ಅವರ ಗೌರವಕ್ಕೆ ಧಕ್ಕೆ ಬಾರದಂತೆ, ಹಕ್ಕುಗಳಿಗೆ ಚ್ಯುತಿ ಬರದಂತೆ ಶೋಷಣೆ ಮುಕ್ತ ಯುವಸಮಾಜ ಕಟ್ಟಲು ಸಂವಿಧಾನದ ಹಕ್ಕು ಮತ್ತು ಕರ್ತವ್ಯಗಳನ್ನು ಹಾಗೂ ಯುವಗೆಳೆಯ ಗೆಳತಿಯರ ಶಕ್ತಿಯ ಪಾಲ್ಗೊಳುವಿಕೆಯೊಂದಿಗೆ ಸಂವಿಧಾನ ಬದ್ಧ ಹಕ್ಕುಗಳನ್ನು ಪಡೆಯಲು ಮತ್ತೊಮ್ಮೆ ‘ಯುವಜನ ಆಯೋಗ ಜಾರಿಯಾಗಬೇಕೆಂದು ಆಭಿಯಾನ’ ನಡೆಯುತ್ತಿದೆ” ಎಂದು ಹೇಳಿದೆ.

ಅಭಿಯಾನದ ಭಾಗವಾಗಿ ದಿನಾಂಕ 27/09/2023ರಂದು ರಾಜ್ಯ ಮಟ್ಟದ ಯುವಾಂದೋಲನ ಪ್ರಕ್ರಿಯೆಯ ಭಾಗವಾಗಿ ವಿಧಾನಸೌದಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಛೇರಿ ಹಾಗೂ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ, ಹಣಕಾಸು ಹಾಗೂ ಆರ್ಥಿಕ ಮುಖ್ಯ ಕಾರ್ಯದರ್ಶಿ ಕೆ ಎಲ್‌ ಆಸೀಖ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮ, ಯವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಬಿ. ನಾಗೇಂದ್ರ, ವಿಧಾನ ಸಭೆಯ ಸಭಾಧ್ಯಕ್ಷ ಯು ಟಿ ಖಾದರ್.ವಿಧಾನ ಪರಿಷತ್ ನ ಸಭಾಪತಿ ಬಸವರಾಜ ಹೊರಟ್ಟಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಭೇಟಿ ಮಾಡಿ, ಯುವಜನ ಆಯೋಗ ಜಾರಿಗೆ ಒತ್ತಾಯಿಸಿದೆ.

ಪ್ರಸ್ತುತ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು, ಸಂವಾದ, ಯುವ ಮುನ್ನಡೆ ಮತ್ತು ಹಲವು ಯುವ ಸಂಘಟನೆಗಳ ಬೇಡಿಕೆಯನ್ನು ಮನ್ನಿಸಿ, ಯುವಜನ ಆಯೋಗ ಸ್ಥಾಪಿಸುವುದು, “ಯುವನಿಧಿ ನಿರುದ್ಯೋಗ ಭತ್ಯೆ ನೀಡುವುದು ಹಾಗೂ 17 ಕಾರ್ಮಿಕರ ಹಿತಕಾಯುವುದನ್ನು ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿತ್ತು. ಅಧಿಕಾರಕ್ಕೆ ಬಂದ ಬಳಿಕ ಯುವನಿಧಿ ಮತ್ತು ಗಿಗ್: ಕಾರ್ಮಿಕರ ಹಿತರಕ್ಷಣೆಯನ್ನು ಈಡೇರಿಸಿದ್ದಕ್ಕಾಗಿ ಯುವಮುನ್ನಡೆಯು ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸುತ್ತೇವೆ. ಅದರಂತೆ ‘ಯುವಜನ ಆಯೋಗ’ದ ಜಾರಿಗಾಗಿ ಮನವಿ ಪತ್ರಗಳನ್ನು ಸಲ್ಲಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಅಭಿಯಾನದಲ್ಲಿ ಸಂವಾದ-ಯುವಮುನ್ನಡೆ ಪ್ರತಿನಿಧಿಗಳಾದ ನೀಲಾ ಸೋಮಶೇಖರ್ (ಬೆಂಗಳೂರು), ಈರಮ್ಮ (ಬೆಂಗಳೂರು), ಮಧನ್‌ಕುಮಾರ್ (ಚಿತ್ರದುರ್ಗ), ಅರ್ಪಿತ (ಬೆಂಗಳೂರು), ಕೃತಿಕ್ (ಬೆಂಗಳೂರು) ಇನ್ನೂ ಅನೇಕರು ಭಾಗಿಯಾಗಿದ್ದರು.

ಹಕ್ಕೊತ್ತಾಯ:

  • ಕರ್ನಾಟಕ ರಾಜ್ಯ ಯುವಜನ ಆಯೋಗ ಸ್ಥಾಪನೆಯಾಗಲಿ
  • ಕರ್ನಾಟಕ ಯುವನೀತಿ ಪರಿಷ್ಕರಣೆಯಾಗಲಿ
  • ಸರ್ಕಾರಿ ಪಿಯುಸಿ ಮತ್ತು ಡಿಗ್ರಿ ಕಾಲೇಜುಗಳಿಗೂ ಇಂದಿರಾ ಕ್ಯಾಂಟೀನ್ ಮಾದರಿಯಲ್ಲಿ ಮಧ್ಯಾಹ್ನದ ಪೌಷ್ಠಿಕ ಆಹಾರ ಸಿಗಲಿ
  • ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದೆ ಉಳಿಸಲ್ಪಟ್ಟ ಎಲ್ಲರಿಗೂ ಶಿಕ್ಷಣ ಸಿಗಲಿ, ಯಾವುದೇ ವಿದ್ಯಾರ್ಥಿ ವೇತನ ಮೊಟಕುಗೊಳಿಸದೆ ಸರಿಯಾದ ಸಮಯಕ್ಕೆ ತಲುಪಲಿ.
  •  ವಿದ್ಯಾರ್ಥಿ ಸ್ನೇಹಿ ಸಾರಿಗೆ ವ್ಯವಸ್ಥೆ ಬರಲಿ, ಪೀಕ್ ಅವರ್‌ಗಳಲ್ಲಿ ಹೆಚ್ಚಿನ ಬಸ್‌ಗಳ ವ್ಯವಸ್ಥೆಯಾಗಬೇಕು.

ಈ ಅಭಿಯಾನದ ಚಟುವಟಿಕೆಗಾಗಿ ಬೆಂಗಳೂರು ನಗರ ಮತ್ತು ಚಿತ್ರದುರ್ಗ, ಮಂಗಳೂರು, ಕೋಲಾರಕುರ್ಗಿ ಜಿಲ್ಲೆಗಳ ಕಾಲೇಜುಗಳಲ್ಲಿ ಮತ್ತು ಹಳ್ಳಿಗಳಲ್ಲಿ ಯುವಜನರ ಸಶಕ್ತತೆಗಾಗಿ ಅರಿವು ಹಾಗೂ ಯುವಜನ ಆಯೋಗದ ಜಾರಿಗಾಗಿ ರಾಜ್ಯಮಟ್ಟದ ಯುವಾಂದೋಲನವು ಈಗಾಗಲೇ ನಡೆಸುತ್ತಿದ್ದೇವೆ ಎಂದು ಸಂವಾದ – ಯುವ ಮುನ್ನಡ, ಕರ್ನಾಟಕ ವೇದಿಕೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಯುವಜನ ಆಯೋಗ ಎಂದರೇನು? ಯುವಜನರ ಹಕ್ಕುಗಳ ರಕ್ಷಣೆಗಾಗಿ ಮತ್ತು ಯುವಜನರ ಶಿಕ್ಷಣ ಮತ್ತು ಸುಲೀಕರಣ ಕಾರ್ಯಕ್ರಮಗಳನ್ನು ರೂಪಿಸುವುದರ ಜೊತೆಗೆ ಅನುಷ್ಠಾನಗೊಳ್ಳುವಂತೆ ನೋಡಿಕೊಳ್ಳುವುದೇ ಯುವಜನ ಆಯೋಗದ ಗುರಿ ಉದ್ದೇಶ.

ಆಯೋಗದ ಸ್ಥಾಪನೆ ಹೇಗೆ?

ರಾಜ್ಯ ಯುವಜನ ಆಯೋಗವನ್ನು ಸ್ಥಾಪಿಸಬೇಕಾದರೆ ಸರಕಾರವು ”ಯುವಜನ ಆಯೋಗ ಕಾಯಿದೆ” ಕರಡು ರೂಪಿಸಿ ಅದನ್ನು ಉಭಯ ಸದನಗಳಲ್ಲಿ ಮಂಡಿಸಬೇಕು. ವಿಧಾನಸಭೆ ಮತ್ತು ವಿಧಾನ ಪರಿಷತ್‌ ಎರಡರಲ್ಲಿಯೂ ಮೂರನೇ ಎರಡು ಬಹುಮತ ಸಿಕ್ಕು, ರಾಜ್ಯಪಾಲರಿಂದ ಅಂಕಿತಗೊಂಡರೆ ಕಾಯಿದೆಯಾಗಿ ರೂಪು ಪಡೆಯುತ್ತದೆ. ನಂತರ ಸೂಕ್ತ ನಿಯಮಗಳನ್ನು ರೂಪಿಸಿ ಅದನ್ನು ಜಾರಿಗೆ ತರಬಹುದಾಗಿದೆ.

ಇದನ್ನೂ ಓದಿ: ನಾಳೆ ಕರ್ನಾಟಕ ಬಂದ್: ಜನಜೀವನ ಅಸ್ತವ್ಯಸ್ತ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...