Homeಫ್ಯಾಕ್ಟ್‌ಚೆಕ್FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು “ಒಂದು ವರ್ಷ ಚಿನ್ನ ಖರೀದಿಸಬೇಡಿ” ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಕೂಡ ಇಂತಹುದೇ ಮನವಿ ಮಾಡಿದ್ದರು ಎಂಬರ್ಥದ ‘ದಿ ಹಿಂದೂ’ ಪತ್ರಿಕೆಯ ಮುಖಪುಟವೊಂದು ವೈರಲ್ ಆಗುತ್ತಿದೆ. ಬಿಜೆಪಿ ನಾಯಕರು ಮತ್ತು ಕೆಲವು ಮಾಧ್ಯಮಗಳು ಮೋದಿಯವರ ನಡೆಯನ್ನು ಸಮರ್ಥಿಸಿಕೊಳ್ಳಲು ಇದನ್ನು ಬಳಸುತ್ತಿವೆ.

ಪ್ರಧಾನಿ ಮೋದಿಯವರ ಇತ್ತೀಚಿನ ಮನವಿಯ ಬೆನ್ನಲ್ಲೇ, 1967ರ ಜೂನ್ 6ರ ‘ದಿ ಹಿಂದೂ’ ಪತ್ರಿಕೆಯ ತುಣುಕೊಂದು ವೈರಲ್ ಆಗುತ್ತಿದೆ. ಅದರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ದೇಶದ ವಿದೇಶಿ ವಿನಿಮಯದ ಬಿಕ್ಕಟ್ಟಿನ ಕಾರಣದಿಂದ ಜನರಲ್ಲಿ “ಚಿನ್ನ ಖರೀದಿಸಬೇಡಿ” ಎಂದು ಮನವಿ ಮಾಡಿದ್ದರು ಎಂಬ ಸುದ್ದಿಯ ತುಣುಕನ್ನು ಕಾಣಬಹುದು.

ಚಿಕ್ಕಬಳ್ಳಾಪುರದ ಸಂಸದ ಡಾ. ಕೆ ಸುಧಾಕರ್ ತಮ್ಮ ಎಕ್ಸ್‌ ಖಾತೆಯ ಮೂಲಕ ಪೋಸ್ಟ್‌ಅನ್ನು ಹಂಚಿಕೊಂಡಿದ್ದು ಪ್ರಧಾನಿ ಮೋದಿ ಮಾಡಿರುವ ಮನವಿಯನ್ನು ಸಮರ್ಥಿಸಿಕೊಂಡಿದ್ದಾರೆ.

“1967ರಲ್ಲಿ ಅಂದಿನ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರು ನಮ್ಮ ವಿದೇಶಿ ವಿನಿಮಯ ಮೀಸಲನ್ನು ರಕ್ಷಿಸಲು ಚಿನ್ನ ಖರೀದಿಸುವುದನ್ನು ನಿಲ್ಲಿಸುವಂತೆ ಭಾರತೀಯರಲ್ಲಿ ‘ರಾಷ್ಟ್ರೀಯ ಶಿಸ್ತಿಗಾಗಿ’ (National Discipline) ಕಳಕಳಿಯ ಮನವಿ ಮಾಡಿದ್ದರು.

2013ರಲ್ಲಿ ಅಂದಿನ ಹಣಕಾಸು ಸಚಿವ ಶ್ರೀ ಪಿ. ಚಿದಂಬರಂ ಅವರು ಹೆಚ್ಚಾಗುತ್ತಿರುವ ಚಾಲ್ತಿ ಖಾತೆ ಕೊರತೆಯನ್ನು (Current Account Deficit) ತಡೆಯಲು “ಚಿನ್ನ ಖರೀದಿಸುವ ಆಸೆಯನ್ನು ತಡೆಹಿಡಿಯಿರಿ” ಎಂದು ನಾಗರಿಕರಲ್ಲಿ ಪದೇ ಪದೇ ವಿನಂತಿಸಿದ್ದರು.

ಇಂದು ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಅದೇ ಆರ್ಥಿಕ ತರ್ಕದ ಅಡಿಯಲ್ಲಿ ಅಂತಹದ್ದೇ ಮನವಿಯನ್ನು ಮಾಡಿದಾಗ, ಕಾಂಗ್ರೆಸ್ ಪಕ್ಷವು ಅದನ್ನು ಅಣಕಿಸಲು ಧಾವಿಸುತ್ತಿದೆ.

ಇದು ವಿರೋಧವಲ್ಲ, ಇದು ಅವಕಾಶವಾದ. ಇತಿಹಾಸ ಅಥವಾ ಆರ್ಥಿಕ ತಾರ್ಕಿಕತೆಯ ತಿಳುವಳಿಕೆಯಿಲ್ಲದೆ, ಕೇವಲ ವಿರೋಧಿಸಬೇಕೆಂಬ ಕಾರಣಕ್ಕಾಗಿ ವಿರೋಧಿಸುವುದು ಕೇವಲ ಕೆಟ್ಟ ರಾಜಕಾರಣವಲ್ಲ, ಇದು ರಾಷ್ಟ್ರಕ್ಕೆ ಮಾಡುವ ದ್ರೋಹವಾಗಿದೆ.

ಪಕ್ಷದ ಹಿತಕ್ಕಿಂತ ರಾಷ್ಟ್ರದ ಹಿತಾಸಕ್ತಿ ಮುಖ್ಯವಾಗಿರುವ ಇಂತಹ ಸಮಯದಲ್ಲಿ, ಕಾಂಗ್ರೆಸ್ ನಾಯಕರು ಕ್ಷುಲ್ಲಕ ರಾಜಕಾರಣದಿಂದ ಮೇಲೆದ್ದು ರಾಷ್ಟ್ರದ ಬಗ್ಗೆ ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಾರೆ ಎಂದು ನಿರೀಕ್ಷಿಸುವುದು ತಪ್ಪೇ?”

Don’t buy gold said Indira Gandhi while asking for “national discipline” in 1967 pic.twitter.com/LslKCJUADQ

— Shashank Shekhar Jha (@shashank_ssj) May 12, 2026

ಬಿಜೆಪಿ ಹಲವು ಬೆಂಬಲಿಗರು ಇದೇ ಪೋಸ್ಟ್‌ಅನ್ನು ಪ್ರಧಾನಿ ಮೋದಿಯವರ ಮನವಿಯನ್ನು ಸಮರ್ಥಿಸಿ, ಕಾಂಗ್ರೆಸ್‌ ಪಕ್ಷ ಪ್ರಧಾನಿ ಮೋದಿಯ ಮಾತುಗಳನ್ನು ಅಣಕಿಸುತ್ತಿದ್ದು, ಹಿಂದೆ ಪ್ರಧಾನಿಯಾಗಿದ್ದ ಇಂದಿರಾ ಅವರೂ ದೇಶದ ಹಿತ ದೃಷ್ಟಿಯಿಂದ ಇಂತಹದ್ದೆ ಮನವಿ ಮಾಡಿದ್ದರು ಎಂದು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ.

 ವಿರೋಧ ಪಕ್ಷದ ನಾಯಕ ಆರ್. ಅಶೋಕ ಸೇರಿದಂತೆ BJP ಬೆಂಬಲಿಗರು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಹಲವು ಪೋಸ್ಟ್‌ಗಳನ್ನ ನೀವು ಇಲ್ಲಿ ನೋಡಬಹುದು.

ಹಾಗಿದ್ದರೆ ಇಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ಗಳಲ್ಲಿ ಇರುವ ಪತ್ರಿಕಾ ತಣುಕು ಮತ್ತು ಬಿಜೆಪಿ ಬೆಂಬಲಿಗರು ಇಂದಿರಾ ಗಾಂಧಿ ಮೇಲೆ ಮಾಡಲಾಗುತ್ತಿರುವ ಪ್ರತಿಪಾದನೆಯಲ್ಲಿ ಸತ್ಯಾಂಶ ಇದೆಯೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ಗಳನ್ನು ಪರಿಶೀಲಿಸಲು ಸರ್ಚ್ ಮಾಡಿದಾಗ, ಇಂದಿರಾ ಗಾಂಧಿ 1967ರಲ್ಲಿ ಹೇಳಿದ್ದಾರೆ ಎಂಬಂತೆ ಹಂಚಿಕೊಳ್ಳಲಾಗುತ್ತಿರುವ ಪತ್ರಿಕಾ ತುಣುಕು  ಸಂಪೂರ್ಣ ಸುಳ್ಳು ಮತ್ತು ಎಡಿಟ್ ಮಾಡಲಾದ (Fabricated) ಚಿತ್ರವಾಗಿದೆ.

ದಿ ಹಿಂದೂ’ ಪತ್ರಿಕೆಯ ಸ್ಪಷ್ಟನೆ:

ವೈರಲ್ ಚಿತ್ರದ ಬಗ್ಗೆ ಅಧಿಕೃತವಾಗಿ ಪ್ರತಿಕ್ರಿಯಿಸಿರುವ ‘ದಿ ಹಿಂದೂ’ ಸಂಸ್ಥೆ, “ಜೂನ್ 6, 1967ರ ಮುಖಪುಟ ಎಂದು ಹರಿದಾಡುತ್ತಿರುವ ಚಿತ್ರವು ಡಿಜಿಟಲ್ ಆಗಿ ಎಡಿಟ್ ಮಾಡಲಾಗಿದೆ. ಇದು ನಮ್ಮ ಪತ್ರಿಕೆಯ ಇತಿಹಾಸದಲ್ಲಿ ಪ್ರಕಟವಾಗಿಲ್ಲ. ಓದುಗರು ಇಂತಹ ಸುಳ್ಳು ಸುದ್ದಿಗಳ ಬಗ್ಗೆ ಎಚ್ಚರದಿಂದಿರಿ” ಎಂದು ‘X‘ (ಟ್ವಿಟರ್) ಮೂಲಕ ಸ್ಪಷ್ಟಪಡಿಸಿದೆ.

ಅಸಲಿ ಮುಖಪುಟದ ಪರಿಶೀಲನೆ:

ಪತ್ರಿಕೆಯ ಹಳೆಯ ದಾಖಲೆಗಳನ್ನು (Archives) ಪರಿಶೀಲಿಸಿದಾಗ, ಜೂನ್ 6, 1967ರ ಅಸಲಿ ಮುಖಪುಟದಲ್ಲಿ ಇಂತಹ ಯಾವುದೇ ಸುದ್ದಿ ಇರಲಿಲ್ಲ ಎಂಬುದು ಸಾಬೀತಾಗಿದೆ. ಪತ್ರಕರ್ತ ಬಿ. ಕೋಲಪ್ಪನ್ ಅವರು ಅಂದಿನ ಅಸಲಿ ಮುಖಪುಟವನ್ನು ಹಂಚಿಕೊಂಡಿದ್ದಾರೆ.

1968ರಲ್ಲಿ ಇಂದಿರಾ ಗಾಂಧಿಯವರ ಸರ್ಕಾರದ ಅವಧಿಯಲ್ಲಿ, ಅಂದಿನ ಹಣಕಾಸು ಸಚಿವ ಮೊರಾರ್ಜಿ ದೇಸಾಯಿ ಅವರು ‘ಗೋಲ್ಡ್ ಕಂಟ್ರೋಲ್ ಆಕ್ಟ್’ (ಚಿನ್ನದ ನಿಯಂತ್ರಣ ಕಾಯ್ದೆ) ಅನ್ನು ಜಾರಿಗೆ ತಂದರು. ಈ ಕಾನೂನಿನ ಪ್ರಕಾರ ನಾಗರಿಕರು ಚಿನ್ನದ ಗಟ್ಟಿ ಅಥವಾ ನಾಣ್ಯಗಳನ್ನು ಹೊಂದುವುದನ್ನು ನಿಷೇಧಿಸಲಾಗಿತ್ತು. ಈ ಕಾಯ್ದೆಯನ್ನು 1990ರಲ್ಲಿ ರದ್ದುಗೊಳಿಸಲಾಯಿತು.

ಇಂದಿರಾ ಗಾಂಧಿಯವರು 1967ರಲ್ಲಿ ಜನರಲ್ಲಿ ಚಿನ್ನ ಖರೀದಿಸಬೇಡಿ ಎಂದು ಮನವಿ ಮಾಡಿದ್ದರು ಎನ್ನಲಾದ ಪತ್ರಿಕಾ ತುಣುಕು ನಕಲಿ. ಬಿಜೆಪಿಯ ಐಟಿ ಸೆಲ್ ಮತ್ತು ಕೆಲವು ಮಾಧ್ಯಮಗಳು ಹಳೆಯ ಇತಿಹಾಸವನ್ನು ತಿರುಚಿದ ಚಿತ್ರದ ಮೂಲಕ ಜನರ ಮುಂದೆ ಇಡುತ್ತಿವೆ.

ಇಂದಿರಾ ಗಾಂಧಿ ವಿದೇಶಿ ವಿನಿಮಯ ಬಿಕ್ಕಟ್ಟು ಎದುರಿಸಲು ‘ಕಾನೂನು’ ಜಾರಿ ಮಾಡಿದ್ದರು. ಆದರೆ ನರೇಂದ್ರ ಮೋದಿ ಸಾರ್ವಜನಿಕ ಸಭೆಯಲ್ಲಿ ‘ಮನವಿ’ ಮಾಡುತ್ತಿದ್ದಾರೆ. ಮೋದಿಯವರ ಇಂದಿನ ನಡೆಯನ್ನು ಸಮರ್ಥಿಸಲು ಹಳೆಯ ಪತ್ರಿಕೆಯ ಹೆಸರಿನಲ್ಲಿ ಸುಳ್ಳು ಚಿತ್ರವನ್ನು ಸೃಷ್ಟಿಸಲಾಗಿದೆ.

ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ದೇಶದ ಆರ್ಥಿಕತೆಯನ್ನು ಕಾಪಾಡುವ ದೃಷ್ಟಿಯಿಂದ ಜನತೆ “ರೂಪಾಯಿಯ ರಕ್ಷಕರು” (Guardians of the Rupee) ಆಗಬೇಕು ಎಂದು ಕರೆ ನೀಡಿದ್ದರು. ಈ ನಿಟ್ಟಿನಲ್ಲಿ ಸಾಧ್ಯವಾದಷ್ಟು ‘ವರ್ಕ್ ಫ್ರಮ್ ಹೋಮ್’ಗೆ ಆದ್ಯತೆ ನೀಡಿ, ಮುಂದಿನ ಒಂದು ವರ್ಷದವರೆಗೆ ಚಿನ್ನ ಖರೀದಿಸುವುದನ್ನು ತಡೆಯಿರಿ, ಪೆಟ್ರೋಲ್, ಡೀಸೆಲ್ ಬಳಕೆ ತಗ್ಗಿಸಲು ಮೆಟ್ರೋ ಮತ್ತು ಸಾರ್ವಜನಿಕ ಸಾರಿಗೆ ಬಳಸಿ, ಅಡುಗೆ ಎಣ್ಣೆ ಬಳಕೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ರಾಸಾಯನಿಕ ಗೊಬ್ಬರ ಅವಲಂಬನೆ ತಗ್ಗಿಸಿ, ನೈಸರ್ಗಿಕ ಕೃಷಿಯತ್ತ ಮುಖಮಾಡಿ, ವಿದೇಶಿ ಬ್ರ್ಯಾಂಡ್ ವಸ್ತುಗಳ ಬಳಕೆ ಕಡಿಮೆ ಮಾಡಿ, ‘ಸ್ವದೇಶಿ’ ಅಳವಡಿಸಿಕೊಳ್ಳಿ, ಒಂದು ವರ್ಷದವರೆಗೆ ಅನಗತ್ಯ ವಿದೇಶಿ ಪ್ರಯಾಣವನ್ನು ಕೈಬಿಡಿ ಎಂದು ಏಳು ಸಲಹೆಗಳನ್ನು ನೀಡಿದ್ದರು.

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಧಾನಿ ಮೋದಿ ಹೇಳಿಕೆಗೆ ದೇಶದೆಲ್ಲಡೆ ಪರ ವಿರೋಧದ ಚರ್ಚೆಯಾಗುತ್ತಿರುವ ಹೊತ್ತಲ್ಲಿ ಅದನ್ನು ಸಮರ್ಥಿಸಲು ಬಿಜೆಪಿ ನಾಯಕರು ಮತ್ತು ಬೆಂಬಲಿಗರು ಇಂದಿರಾ ಗಾಂಧಿ 1967ರಲ್ಲಿ ಇದನ್ನೆ ಹೇಳಿದ್ದರು ಎಂಬ ಫೇಕ್ ನೆರೇಷನ್ ರೂಪಿಸಲು ಸುಳ್ಳು ಪೋಸ್ಟ್‌ ಹಂಚಿಕೊಂಡಿರುವುದು ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...