Homeಮುಖಪುಟಸಾಮಾಜಿಕ ನ್ಯಾಯ: ತಮಿಳುನಾಡು ಸಾಗಬೇಕಾದ ದೂರವೆಷ್ಟು?

ಸಾಮಾಜಿಕ ನ್ಯಾಯ: ತಮಿಳುನಾಡು ಸಾಗಬೇಕಾದ ದೂರವೆಷ್ಟು?

ಸಮಾನತೆಯ ಹರಿಕಾರ ಪೆರಿಯಾರ್‌ ಅವರ ಜನ್ಮದಿನವನ್ನು (ಸೆ.17) ‘ಸಾಮಾಜಿಕ ನ್ಯಾಯದಿನ’ ಎಂದು ತಮಿಳು ನಾಡು ಸರ್ಕಾರ ಆಚರಿಸಿದೆ. ಆದರೆ ತಮಿಳುನಾಡು ನಿಜಕ್ಕೂ ಸಾಮಾಜಿಕ ನ್ಯಾಯವನ್ನು ಸಾಧಿಸಿದೆಯೇ?

- Advertisement -
- Advertisement -

ಸಮಾನತೆಯ ಹರಿಕಾರ, ದ್ರಾವಿಡ ಚಳವಳಿಯ ನೇತಾರ ಪೆರಿಯಾರ್‌ ರಾಮಸ್ವಾಮಿ ನಾಯ್ಕರ್ ಅವರ ಜನ್ಮದಿನವನ್ನು (ಸೆ.17) ‘ಸಾಮಾಜಿಕ ನ್ಯಾಯದಿನ’ ಎಂದು ತಮಿಳು ನಾಡು ಸರ್ಕಾರ ಘೋಷಿಸಿದೆ. ಅದರಂತೆ ಅವರ ಜನ್ಮದಿನವನ್ನು ಈ ಬಾರಿ ಆಚರಿಸಲಾಗಿದೆ.

ಎಂ.ಕೆ.ಸ್ಟಾಲಿನ್‌ ನಾಯಕತ್ವದಲ್ಲಿ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಹಲವು ಸುಧಾರಣೆಗಳನ್ನು ತರುತ್ತಿರುವುದು ಆಶಾದಾಯ ಬೆಳೆವಣಿಗೆ. ಆದರೆ ತಮಿಳುನಾಡಿನಲ್ಲಿ ಬೇರು ಬಿಟ್ಟಿರುವ ಮೌಢ್ಯ, ಜಾತಿ ವ್ಯವಸ್ಥೆ, ಲಿಂಗ ತಾರತಮ್ಯ ಮೊದಲಾದ ಸಾಮಾಜಿಕ ಸಂಗತಿಗಳನ್ನು ಅಲ್ಲಗಳೆಯಲು ಸಾಧ್ಯವಿಲ್ಲ.

ಸಾಮಾಜಿಕ ನ್ಯಾಯದಿನದ ಹಿನ್ನೆಲೆಯಲ್ಲಿ ‘ದಿ ಕ್ವಿಂಟ್’ ಸುದ್ದಿ ಜಾಲತಾಣದಲ್ಲಿ ಪ್ರಕಟವಾಗಿರುವ ಸ್ಮಿತಾ ಟಿ.ಕೆ. ಅವರ ಲೇಖನವು, ತಮಿಳುನಾಡು ಎದುರಿಸುತ್ತಿರುವ ಸಾಮಾಜಿಕ ಅಸಮಾನತೆಗಳತ್ತ ಬೊಟ್ಟು ಮಾಡಿದೆ.

ಇದನ್ನೂ ಓದಿ: ಹೋರಾಟಗಾರರ ಮೇಲೆ ದಾಖಲಾಗಿದ್ದ 5,570 ಪ್ರಕರಣ ಹಿಂಪಡೆದ ತಮಿಳುನಾಡು ಸರ್ಕಾರ

ಜಾತಿ ಪ್ರೇರಿತ ಕೊಲೆಗಳ ಕುರಿತು ಕೆಲಸ ಮಾಡುತ್ತಿರುವ ಕಾತಿರ್ ಆಫ್ ಎವಿಡೆನ್ಸ್ ಸಂಘಟನೆಯ ಪ್ರಕಾರ, 2013ರಿಂದ 2017ರ ಅವಧಿಯಲ್ಲಿ ಒಟ್ಟು 187 ಮರ್ಯಾದೆ ಹೆಸರಲ್ಲಿ ಹತ್ಯೆಗಳು ನಡೆದಿವೆ. ಅದರಲ್ಲಿ ಸಾವಿಗೀಡಾದವರು ಶೇ. 80 ಮಂದಿ ಮಹಿಳೆಯರಾಗಿದ್ದಾರೆ. ಇದು ಅಧಿಕೃತವಾಗಿ ದಾಖಲಾಗಿರುವ ವರದಿಯಷ್ಟೇ. ಬಹುತೇಕ ಕೊಲೆಗಳು ಆತ್ಮಹತ್ಯೆ ಎಂದೋ, ಸಹಜ ಸಾವೆಂದೋ ವರದಿಯಾಗುತ್ತಿವೆ ಎನ್ನಲಾಗಿದೆ.

ನ್ಯಾಷನಲ್ ಕ್ರೈಮ್ ರೆಕಾರ್ಡ್ ಬ್ಯೂರೋ (ಎನ್ಸಿಆರ್ಬಿ) ನೀಡಿದ 2020ರ ವರದಿಯ ಪ್ರಕಾರ ತಮಿಳುನಾಡಿನಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. 2019ರಲ್ಲಿ 15.6ರಷ್ಟಿದ್ದ ಈ ಪ್ರಮಾಣ 2020ರಲ್ಲಿ 17.4ರಷ್ಟಾಗಿದೆ. ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ 2019ರಲ್ಲಿ 4,139 ಇದ್ದದ್ದು, 2020ರಲ್ಲಿ 4,338ರಷ್ಟಾಗಿದೆ.

“ಶೇ. 50ರಷ್ಟು ಮಹಿಳಾ ಪ್ರಾತಿನಿಧ್ಯ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಇರಬೇಕೆಂದು ಪೆರಿಯಾರ್ ಪ್ರತಿಪಾದಿಸಿದ್ದರು. ಮಹಿಳೆಯರನ್ನು ಅಡುಗೆ ಮನೆಯಿಂದ ಹೊರತಂದು ಸ್ವಾತಂತ್ರ್ಯ ನೀಡಬೇಕು ಎನ್ನುತ್ತಿದ್ದರು. ಆದರೆ ಅದು ಸಾಧ್ಯವಾಗಿಲ್ಲ. ಡಿಎಂಕೆ ನೇತೃತ್ವದ ಈಗಿನ ಸರ್ಕಾರದಲ್ಲಿನ 33 ಸಚಿವರಲ್ಲಿ ಇಬ್ಬರು ಮಾತ್ರ ಮಹಿಳೆಯರಿದ್ದಾರೆ” ಎಂದು ಸ್ಮಿತಾ ಉಲ್ಲೇಖಿಸಿದ್ದಾರೆ.

ಜಾತಿ ನಿರ್ಮೂಲನೆ ಮಾಡಬೇಕೆಂದು ಸರ್ಕಾರವೇನೋ ಹೆಜ್ಜೆ ಇರಿಸಿದೆ. ಆದರೆ ತಮಿಳುನಾಡಿನ ಜಾತಿ ವ್ಯವಸ್ಥೆ ಆತಂಕಕಾರಿಯಾದದ್ದು. ಎನ್‌‌ಸಿಆರ್‌ಬಿ ವರದಿಯ ಪ್ರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಜನಾಂಗಗಳ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ. 2019ರಲ್ಲಿ 1,144 ಪ್ರಕರಣಗಳಿದ್ದವು, 2020ರಲ್ಲಿ 1,274 ಪ್ರಕರಣಗಳು ವರದಿಯಾಗಿವೆ.

ವಣ್ಣಿಯಾರ್ಸ್ ಮೇಲ್ವರ್ಗಕ್ಕೆ ಸೇರಿದ 20 ಜನರ ಗುಂಪು ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರು ದಲಿತ ಯುವಕರನ್ನು ಕೊಂದಿರುವ ಘಟನೆ ಕಳೆದ ಅಂಬೇಡ್ಕರ್ ಜಯಂತಿಯಂದು ನಡೆದುಹೋಯಿತು. ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನಿರ್ಮೂಲನೆಗೆ ಸರಿಯಾದ ಕ್ರಮ ಜರುಗಿಸದ ಕಾರಣ ಕಳೆದ ಒಂದು ದಶಕದಲ್ಲಿ ಅತಿ ಹೆಚ್ಚು ಸಫಾಯಿಗಳು ತಮಿಳುನಾಡಿನಲ್ಲೇ ಸಾವನ್ನಪ್ಪಿದ್ದಾರೆ ಎನ್ನುತ್ತದೆ ವರದಿ.

1993ರಿಂದ 2019ರವರೆಗೆ ದೇಶದ 18 ರಾಜ್ಯಗಳಲ್ಲಿ ಎಷ್ಟು ಸಫಾಯಿಗಳು ಸಾವನ್ನಪ್ಪಿದ್ದಾರೆಂದು ಸರ್ಕಾರ ಸಮೀಕ್ಷೆ ನಡೆಸಿದಾಗ 206 ಮಂದಿ ಸಫಾಯಿಗಳು ತಮಿಳುನಾಡಿನಲ್ಲಿ ಸಾವನ್ನಪ್ಪಿರುವುದು ತಿಳಿದುಬಂದಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ತಮಿಳುನಾಡು ಮೊದಲನೇ ಸ್ಥಾನದಲ್ಲಿದೆ ಎನ್ನಲಾಗಿದೆ.

ಜನಪರ ಕೆಲಸಗಳನ್ನು ಮಾಡುತ್ತಿರುವ ತಮಿಳುನಾಡು ಸರ್ಕಾರ, ಇಂತಹ ಅನಿಷ್ಟ ಪದ್ಧತಿಗಳನ್ನು ನಿರ್ಮೂಲನೆ ಮಾಡಬೇಕು. ಪೆರಿಯಾರ್ ಥರದ ಮಹನೀಯರು ನೆಡೆದಾಡಿದ ನೆಲದಲ್ಲಿ ಮೌಢ್ಯಗಳು ತೊಗಲಬೇಕು. ಮಹಿಳೆಯರಿಗೆ ಎಲ್ಲ ಕ್ಷೇತ್ರಗಳಲ್ಲೂ ಸಮಾನ ಅವಕಾಶ ದೊರಕುವಂತಾಗಬೇಕು. ಡಿಎಂಕೆ, ಎಐಡಿಎಂಕೆ ಯಾವುದೇ ಪಕ್ಷ ಅಧಿಕಾರದಲ್ಲಿರಲಿ ಅಥವಾ ವಿರೋಧ ಪಕ್ಷ ಸ್ಥಾನದಲ್ಲಿರಲಿ ರಾಜ್ಯವನ್ನು ಅಭಿವೃದ್ಧಿಪಡಿಸುವ ಜವಾಬ್ದಾರಿ ಎಲ್ಲರಿಗೂ ಇರುತ್ತದೆ. ಹೀಗಾಗಿ ಇಲ್ಲಿನ ಬಹುತೇಕ ಅಂಕಿ-ಅಂಶಗಳು ಎಐಎಡಿಎಂ ಅವಧಿಗೆ ಸಂಬಂಧಿಸಿವೆ ಎಂದು ಸುಮ್ಮನಾಗಲು ಸಾಧ್ಯವಿಲ್ಲ.

ಈಗ ಅಧಿಕಾರ ಹಿಡಿದಿರುವ ಡಿಎಂಕೆ ಹೊಸ ಭರವಸೆಗಳನ್ನು ಹುಟ್ಟು ಹಾಕಿದೆ. ಜನಪ್ರಿಯ ಕಾರ್ಯಕ್ರಮಗಳ ಮೂಲಕ ಸದ್ಯಕ್ಕೆ ಜನಮಾನಸಕ್ಕೆ ಲಗ್ಗೆ ಇಡುತ್ತಿರುವ ಸ್ಟಾಲಿನ್, ತಮಿಳುನಾಡನ್ನು ಮಾದರಿ ರಾಜ್ಯವನ್ನಾಗಿ ಮಾಡಲು ಬೇಕಾದ ಎಲ್ಲ ಕ್ರಮಗಳನ್ನು ತಮ್ಮ ಕೈಲಾದ ಮಟ್ಟಿಗೆ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ಕ್ರಾಂತಿ ರಾತ್ರಿ ಬೆಳಗಾಗುವುದರೊಳಗೆ ಆಗುವುದು ಅಸಾಧ್ಯ. ಈ ಪೋಸ್ಟ್ ಟ್ರೂತ್ ಕಾಲದಲ್ಲಂತೂ ಬದಲಾವಣೆಗೆ ಹೆಚ್ಚಿನ ಶ್ರಮವಂತೂ ಅಗತ್ಯ ಎನ್ನುತ್ತಾರೆ ಪ್ರಜ್ಞಾವಂತರು.

(ಮಾಹಿತಿ ಕೃಪೆ: ಸ್ಮಿತಾ ಕೆ.ಎಸ್., ದಿ ಕ್ವಿಂಟ್‌‌)


ಇದನ್ನೂ ಓದಿ: ತಮಿಳುನಾಡು: ಸ್ಟಾಲಿನ್ ಸಂಪುಟದಲ್ಲಿ ಪುರುಷರದೇ ದರ್ಬಾರು – ಮಹಿಳೆಯರಿಗೆ ಕನಿಷ್ಠ ಪ್ರಾತಿನಿಧ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...