Homeಮುಖಪುಟತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ನಮೂನೆ 17ಸಿ ಅಡಿ ಮತದಾನದ ಅಂಕಿ ಅಂಶ ಪ್ರಕಟಿಸಲು 'ಸಮಯ ಬೇಕು' ಎಂದು ಚುನಾವಣಾ ಆಯೋಗ ನ್ಯಾಯಾಲಯಕ್ಕೆ ತಿಳಿಸಿದೆ. ಅದರೆ, ಅದರ ಕೈಪಿಡಿ ಮತ್ತು ಮಾಜಿ ಚು. ಆಯುಕ್ತರ ಹೇಳಿಕೆಗಳು ಮತದಾನದ ಮಾಹಿತಿ ತಕ್ಷಣವೇ ಲಭ್ಯವಾಗುತ್ತದೆ ಎಂಬುವುದನ್ನು ಸೂಚಿಸುತ್ತದೆ.

- Advertisement -
- Advertisement -

ನಮೂನೆ 17ಸಿ ಅಡಿ ಮತಗಟ್ಟೆಗಳಲ್ಲಿ ಚಲಾವಣೆಯಾದ ಮತಗಳ ಅಂಕಿ ಅಂಶಗಳನ್ನು ಒದಗಿಸುವುದು ಕಷ್ಟವೇನಲ್ಲ. ಆದರೆ, ಅದನ್ನು ಮಾಡಲು ಸಮಯ ಹಿಡಿಯುತ್ತದೆ ಎಂದು ಭಾರತೀಯ ಚುನಾವಣಾ ಆಯೋಗವು ಮೇ 17ರಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

‘ಸಮಯ ಹಿಡಿಯುತ್ತದೆ’ ಎಂಬ ಚುನಾವಣಾ ಆಯೋಗದ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಏಕೆಂದರೆ, ಆಯೋಗ, “ಮತದಾನದ ಕೊನೆಯಲ್ಲಿ ಮತಗಟ್ಟೆಯ ಚುನಾವಣಾಧಿಕಾರಿ ‘ಕ್ಲೋಸ್ ಬಟನ್’ ಒತ್ತಿದ ತಕ್ಷಣ, ಇವಿಎಂನ ನಿಯಂತ್ರಣ ಘಟಕವು ಒಟ್ಟು ಚಲಾವಣೆಯಾದ ಮತಗಳ ಸಂಖ್ಯೆಯನ್ನು ತೋರಿಸುತ್ತದೆ. ಈ ಅಂಕಿ ಅಂಶವನ್ನು ನಮೂನೆ 17ಸಿ ಯ ಭಾಗ 1ರ ಐಟಂ 6ರಲ್ಲಿ ತಕ್ಷಣ ದಾಖಲಿಸಬೇಕು” ಎಂದು ಪ್ರತಿ ಮತಗಟ್ಟೆಯ ಚುನಾವಣಾಧಿಕಾರಿ ಅಥವಾ ಕ್ಷೇತ್ರದ ಚುನಾವಣಾ ಉಸ್ತುವಾರಿ ನೋಡಿಕೊಳ್ಳುವ ಅಧಿಕಾರಿಗಾಗಿ ನೀಡಿರುವ ಕೈಪಿಡಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.

ಈ ನಿರ್ದೇಶನವು “ಒಂದು ಮತಗಟ್ಟೆಯಲ್ಲಿ ಮತದಾನ ಕೊನೆಗೊಂಡ ಬಳಿಕ, ಒಂದು ಬಟನ್ ಒತ್ತಿದ್ದರೆ ಚಲಾವಣೆಯಾದ ಒಟ್ಟು ಮತಗಳ ಮಾಹಿತಿ ಲಭ್ಯವಾಗುತ್ತದೆ ಎಂದು ತಿಳಿಸುತ್ತದೆ. ಹೀಗಿರುವಾಗ ಅಂಕಿ ಅಂಶಗಳನ್ನು ನೀಡಲು ಚುನಾವಣಾ ಆಯೋಗ ಏಕೆ ವಿಳಂಬ ಮಾಡುತ್ತಿದೆ? ಅಂಕಿ ಅಂಶ ಒದಗಿಸಲು ಸಮಯ ಬೇಕು ಎಂದು ಸುಪ್ರಿಂ ಕೋರ್ಟ್‌ಗೆ ಏಕೆ ಸುಳ್ಳು ಹೇಳಿದೆ? ಎಂಬ ಪ್ರಶ್ನೆ ಉದ್ಬವಿಸಿದೆ.

ಚುನಾವಣಾ ಆಯೋಗ ಮತದಾನದ ಅಂಕಿ ಅಂಶಗಳನ್ನು ವಿಳಂಬವಾಗಿ ಪ್ರಕಟಿಸುತ್ತಿರುವುದರ ಬಗ್ಗೆ ಇತ್ತೀಚೆಗೆ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ ಖುರೈಶಿಯವರು ಅಸಮಧಾನ ವ್ಯಕ್ತಪಡಿಸಿದ್ದರು.

ಮತದಾನದ ಮಾಹಿತಿ ವಿಳಂಬಕ್ಕೆ ಯಾವುದೇ ಕಾರಣಗಳಿಲ್ಲ. ಡೇಟಾವು ನೈಜ ಸಮಯದಲ್ಲಿ ಸಿಸ್ಟಮ್‌ನಲ್ಲಿ ಲಭ್ಯವಾಗುತ್ತದೆ. ಮತದಾನ ಮುಗಿದ ಐದು ನಿಮಿಷಗಳಲ್ಲಿ ಎಲ್ಲಾ ಮಾಹಿತಿ ದೊರೆಯುತ್ತದೆ. ಈಗಿನ ಪರಿಸ್ಥಿತಿಯಲ್ಲಿ ಡೇಟಾವನ್ನು ಅಂತಿಮಗೊಳಿಸಲು ಏಕೆ ಹೆಚ್ಚು ಸಮಯ ತೆಗೆದುಕೊಳ್ಳಲಾಗುತ್ತಿದೆ ಎಂಬುವುದಕ್ಕೆ ಚುನಾವಣಾ ಆಯೋಗ ಉತ್ತರ ನೀಡಬೇಕು ಎಂದು ಖುರೈಶಿ ಆಗ್ರಹಿಸಿದ್ದರು.

“ಚುನಾವಣಾ ಆಯೋಗವು ಈ ಅಂತರ ಅಥವಾ ಸಮನ್ವಯದ ಕೊರತೆ ಏಕೆ ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು. ಏಕೆ ಈ ರೀತಿ ನಡೆಯುತ್ತಿದೆ ಎಂದು ಆಯೋಗವು ವಿವರಿಸಬೇಕು. ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಗಾಗಿ ಜನರ ಮನಸ್ಸಿನಲ್ಲಿ ಉದ್ಭವಿಸುವ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ” ಎಂದು ಖುರೈಶಿ ದೈನಿಕ್ ಭಾಸ್ಕರ್‌ಗೆ ಹೇಳಿದ್ದರು.

ಬುಧವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, ನಮೂನೆ 17ಸಿ ಅಡಿಯಲ್ಲಿ ಮಾಹಿತಿಯನ್ನು ಬಹಿರಂಗಪಡಿಸಲು ನಮಗೆ ಯಾವುದೇ ಕಾನೂನು ಆದೇಶವಿಲ್ಲ ಎಂದು ಚುನಾವಣಾ ಆಯೋಗ ಹೇಳಿಕೊಂಡಿದೆ. ಆಯೋಗವು ಮತದಾನದ ಅಂಕಿ ಅಂಶಗಳ ಮಾಹಿತಿಯನ್ನು ಅಪ್ಲಿಕೇಶನ್, ವೆಬ್‌ಸೈಟ್ ಮತ್ತು ಪತ್ರಿಕಾಗೋಷ್ಠಿಗಳ ಮೂಲಕ ಬಿಡುಗಡೆ ಮಾಡುತ್ತಿರುವುದು “ಸ್ವಯಂಪ್ರೇರಿತ” ಎಂದಿದೆ.

ಆದರೆ, “1961ರ ಚುನಾವಣಾ ನಡವಳಿಕೆಯ ನಿಯಮಗಳ ಸೆಕ್ಷನ್ 93ರ ಪ್ರಕಾರ ಆಯೋಗವು ಮುಚ್ಚಿಡಬೇಕಾದ ಚುನಾವಣಾ ಸಂಬಂಧಿತ ದಾಖಲೆಗಳಲ್ಲಿ ನಮೂನೆ 17 ಸಿ ಒಳಗೊಂಡಿಲ್ಲ” ಎಂದು ಪಾರದರ್ಶಕ ಹಕ್ಕುಗಳ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ತಿಳಿಸಿದ್ದಾರೆ.

“1961ರ ಚುನಾವಣಾ ನಡವಳಿಕೆಯ ನಿಯಮಗಳ ಪ್ರಕಾರ, ಮತಪತ್ರಗಳು (ಬಳಸಿದ ಅಥವಾ ಬಳಸದ), ಬಳಸಿದ ಮತಪತ್ರಗಳ ಕೌಂಟರ್‌ಫಾಯಿಲ್‌ಗಳು, ಮುದ್ರಿತ ಪೇಪರ್‌ ಸ್ಲಿಪ್‌ಗಳು (ನಿಯಮ 57 ಸಿ), ಮತದಾರರ ಪಟ್ಟಿಯ ಗುರುತು ಮಾಡಿದ ನಕಲು ಮತ್ತು ಕೆಲವು ಇತರ ದಾಖಲೆಗಳನ್ನು ಯಾವುದೇ ಪ್ರಾಧಿಕಾರದ ಮುಂದೆ ತೆರೆಯಬಾರದು, ಪರಿಶೀಲಿಸಬಾರದು ಮತ್ತು ಸಲ್ಲಿಸಬಾರದು ಎಂದಿದೆ. ಆದರೆ, ಈ ಪೈಕಿ ನಮೂನೆ 17ಸಿ ಒಳಗೊಂಡಿಲ್ಲ. ಆದ್ದರಿಂದ ನಮೂನೆ 17 ಸಿ ಅಡಿ ಮತದಾನದ ಅಂಕಿ ಅಂಶಗಳನ್ನು ಬಹಿರಂಗೊಳಿಸಬಹುದು”  ಎಂದಿದ್ದಾರೆ.

“ಇನ್ನು ಇವೆಲ್ಲದರ ಹೊರತಾಗಿ, ನಮ್ಮ ದೇಶದಲ್ಲಿ ಜನರಿಗೆ ‘ಮಾಹಿತಿಯ ಹಕ್ಕಿದೆ’ ಎಂಬುವುದನ್ನು ಚುನಾವಣಾ ಆಯೋಗ ಮರೆತಂತಿದೆ. ವಾಸ್ತವವಾಗಿ ಚುನಾವಣಾ ನಿಯಮಗಳ ನಡವಳಿಕೆಯ ನಿಯಮ 93 ಜನರು ನಮೂನೆ 17ಸಿ ಸೇರಿದಂತೆ ಚುನಾವಣಾ ದಾಖಲೆಗಳ ಪ್ರತಿಗಳನ್ನು ಪರಿಶೀಲಿಸಲು ಮತ್ತು ಪಡೆಯಲು ಅನುಮತಿಸುತ್ತದೆ. ಬಹುಶಃ ನಾವು ಆರ್‌ಟಿಐ ಕಾಯ್ದೆಯ ಪ್ರತಿಗಳನ್ನು ಚುನಾವಣಾ ಆಯೋಗಕ್ಕೆ ಕಳುಹಿಸುವ ಅಭಿಯಾನ ನಡೆಸುವ ಅಗತ್ಯವಿದೆ” ಎಂದು ಭಾರದ್ವಾಜ್ ಹೇಳಿದ್ದಾರೆ.

Courtesy : thewire.in

ಇದನ್ನೂ ಓದಿ : ಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...