Homeಕರ್ನಾಟಕ‘ರಾತ್ರಿ ಹೊತ್ತು ರಸ್ತೆಯಲ್ಲಿ ಬ್ಯಾಟ್‌ ಹಿಡಿದು ತಿರುಗುವವರಿಗೆ ಪೊಲೀಸರ ಅನುಮತಿ ಇತ್ತೇ?': ಇದ್ರೀಶ್ ಹತ್ಯೆಗೆ ಎಚ್‌ಡಿಕೆ...

‘ರಾತ್ರಿ ಹೊತ್ತು ರಸ್ತೆಯಲ್ಲಿ ಬ್ಯಾಟ್‌ ಹಿಡಿದು ತಿರುಗುವವರಿಗೆ ಪೊಲೀಸರ ಅನುಮತಿ ಇತ್ತೇ?’: ಇದ್ರೀಶ್ ಹತ್ಯೆಗೆ ಎಚ್‌ಡಿಕೆ ಖಂಡನೆ

- Advertisement -
- Advertisement -

ಕನಕಪುರ ತಾಲೂಕಿನ ಸಾತನೂರು ಬಳಿ ಜಾನುವಾರು ಸಾಗಣೆ ಮಾಡುತ್ತಿದ್ದ ಕಾರಣಕ್ಕೆ ಯುವಕನೊಬ್ಬ ಹತ್ಯೆಗೀಡಾಗಿರುವುದು ಸರ್ವಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಕಳೆದ ಮೂರೂವರೆ ವರ್ಷದಲ್ಲಿ ಬಿಜೆಪಿ ಸರಕಾರ ವ್ಯವಸ್ಥಿತವಾಗಿ ಬೆಳೆಸಿ ಪೋಷಿಸಿರುವ ಅಸಹನೆ, ಅಸಹಿಷ್ಣುತೆಯೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಪುನೀತ್‌ ಕೆರೆಹಳ್ಳಿ ಮತ್ತು ಆತನ ಸಹಚರರು ನಡೆಸಿದ್ದಾರೆ ಎನ್ನಲಾದ ಇದ್ರೀಶ್‌ ಪಾಷ ಅವರ ಹತ್ಯೆಯನ್ನು ಖಂಡಿಸಿ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, “ಜಾನುವಾರು ಸಾಗಿಸುತ್ತಿದ್ದಾನೆ ಎಂದರೆ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಬಹುದಿತ್ತು ಅಥವಾ ಮಾಹಿತಿ ನೀಡಬಹುದಿತ್ತು. ಅದರ ಹೊರತಾಗಿ ಹತ್ಯೆ ಮಾಡುವುದು ಎಂದರೆ ಅರ್ಥವೇನು? ಚುನಾವಣೆ ಹೊತ್ತಿನಲ್ಲಿ ಇದರ ಹಿಂದಿರುವ ಷಡ್ಯಂತ್ರ ಎಂಥದ್ದು ಎಂದು ಯಾರಿಗಾದರೂ ಅರ್ಥ ಆಗುವಂತದ್ದೇ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಎಲ್ಲಿಗೆ ಬಂದು ನಿಂತಿದೆ?” ಎಂದು ಪ್ರಶ್ನಿಸಿದ್ದಾರೆ.

“ಯುವಕನ ಕೊಲೆಯಾದ ರಾತ್ರಿ ಆರೋಪಿ ಮತ್ತವನ ಸಹಚರರು ರಸ್ತೆಯಲ್ಲಿ ಕ್ರಿಕೆಟ್ ಬ್ಯಾಟುಗಳನ್ನು ಹಿಡಿದು ಗೋ ರಕ್ಷಕನ ಸೋಗು ಹಾಕಿಕೊಂಡು ಪಹರೆ ಕಾಯುವ ನಾಟಕದ ವಿಡಿಯೋ ಮಾಡಿ ತನ್ನ ಜಾಲತಾಣದಲ್ಲಿಯೇ ಹಾಕಿಕೊಂಡಿದ್ದಾನೆ. ಅವರ ಉದ್ದೇಶವೇ ಬೇರೆ ಇತ್ತು ಎನ್ನುವುದು ಸ್ಪಷ್ಟ. ಇದಕ್ಕಿಂತ ಸಾಕ್ಷಿ ಬೇಕೆ? ಕೂಡಲೇ ಪೊಲೀಸರು ಆರೋಪಿಗಳನ್ನು ಬಂಧಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಪುನೀತ್ ಕೆರೆಹಳ್ಳಿ ಮಾಡಿದ ಅವಾಂತರಗಳಿವು; ಕಡಿವಾಣ ಹಾಕದೆ ಸುಮ್ಮನೆ ಬಿಟ್ಟಿದ್ದೇಕೆ?

“ರಾತ್ರಿ ಹೊತ್ತು ಇವರು ರಸ್ತೆಯಲ್ಲಿ ಕ್ರಿಕೆಟ್ ಬ್ಯಾಟುಗಳನ್ನಿಡಿದುಕೊಂಡು ಗಸ್ತು ತಿರುಗುತ್ತಿದ್ದರು ಎಂದರೆ, ಇವರಿಗೆ ಪೊಲೀಸರ ಮೌನ ಅನುಮತಿ ಇತ್ತಾ? ಇಲ್ಲವೇ, ಇವರೇನು ಮಫ್ತಿ ಪೊಲೀಸರಾ? ಅಥವಾ ಗೋ ರಕ್ಷಣೆ ನೆಪದಲ್ಲಿ ದರೋಡೆಗೆ ಹೊಂಚು ಹಾಕಿ ಕೂತಿದ್ದರಾ? ಈ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ” ಎಂದು ಒತ್ತಾಯಿಸಿದ್ದಾರೆ.

“ನಿಜಕ್ಕಾದರೆ, ಗೋ ಸಂಕ್ಷಣೆಯ ಸೋಗಿನ ಈ ಸೋಗಲಾಡಿಗಳಿಗೆ ಆಶ್ರಯ, ಮೇವು ಇಲ್ಲದೆ ಬೀದಿಪಾಲಾಗಿರುವ ಅನಾಥ ಗೋವುಗಳ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಆದರೆ, ಜಾತಿ ಧರ್ಮಗಳ ನಡುವೆ ಬೆಂಕಿ ಇಟ್ಟು ಚಳಿ ಕಾಯಿಸಿಕೊಳ್ಳುವುದೇ ಇವರ ಜಾಯಮಾನ. ಪೊಲೀಸ್ ವ್ಯವಸ್ಥೆ ಗಾಢ ನಿದ್ದೆಯಲ್ಲಿದೆಯಾ?” ಎಂದು ಕೇಳಿದ್ದಾರೆ.

“ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಈ ಘಟನೆ ನಡೆದಿದೆ. ರಾಜ್ಯದಲ್ಲಿ ಕೋಮು ಸೌಹಾರ್ದ ಕದಡಿ ಹಿಂಸಾಚಾರ ಸೃಷ್ಟಿಸುವುದು ಮತ್ತು ಚುನಾವಣೆ ಹೊತ್ತಿನಲ್ಲಿ ಕರ್ನಾಟಕವನ್ನು ಕದಡುವುದೇ ಇವರ ದುರುದ್ದೇಶ ಆಗಿರುವಂತಿದೆ. ನನಗೆ ಈ ಹತ್ಯೆ ಆಘಾತ ಉಂಟು ಮಾಡಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...