Homeಮುಖಪುಟಮೋದಿ ಸಾಕ್ಷ್ಯಚಿತ್ರ ನಿಷೇಧಿಸುವವರಿಗೆ ಗಾಂಧಿ ಗೋಡ್ಸೆ ಚಿತ್ರ ಕಾಣಿಸಲಿಲ್ಲವೇ?: ಅಸಾದುದ್ದೀನ್ ಓವೈಸಿ

ಮೋದಿ ಸಾಕ್ಷ್ಯಚಿತ್ರ ನಿಷೇಧಿಸುವವರಿಗೆ ಗಾಂಧಿ ಗೋಡ್ಸೆ ಚಿತ್ರ ಕಾಣಿಸಲಿಲ್ಲವೇ?: ಅಸಾದುದ್ದೀನ್ ಓವೈಸಿ

- Advertisement -
- Advertisement -

ಸುಮಾರು ಎರಡು ದಶಕಗಳ ಹಿಂದೆ ಗುಜರಾತ್‌ನಲ್ಲಿ ನಡೆದ ಗಲಭೆಗಳ ಕುರಿತು ಬಿಬಿಸಿಯ ಎರಡು ಭಾಗಗಳ ಸಾಕ್ಷ್ಯಚಿತ್ರ ಸಿದ್ದಗೊಳಿಸಿದೆ. ಇದು ಅಂದಿನ ನರೇಂದ್ರ ಮೋದಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಕ್ರಮವನ್ನು ಟೀಕಿಸಿದೆ. ಹಾಗಾಗಿ ಇದೀಗ ಕೇಂದ್ರ ಸರ್ಕಾರ ಈ ಸಾಕ್ಷ್ಯ ಚಿತ್ರವನ್ನು ನಿರ್ಭಂಧಿಸಿದೆ. ಸರ್ಕಾರದ ಈ ಕ್ರಮವನ್ನು ಖಂಡಿಸಿರುವ ವಿರೋಧ ಪಕ್ಷದ ನಾಯಕರೊಂದಿಗೆ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಸೇರಿಕೊಂಡಿದ್ದಾರೆ.

ಭಾನುವಾರ ನಡೆದ  ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಗಣರಾಜ್ಯೋತ್ಸವದಂದು ಬಿಡುಗಡೆಯಾಗಲಿರುವ “ಗಾಂಧಿ ಗೋಡ್ಸೆ: ಏಕ್ ಯುದ್ಧ್” ಚಲನಚಿತ್ರವನ್ನು ನಿಷೇಧಿಸುವಂತೆ ಕೋರಿದರು. ಇದೇ ವೇಳೆ, “ಕಳೆದ ವಾರ ಯೂಟ್ಯೂಬ್ ಮತ್ತು ಟ್ವಿಟ್ಟರ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ “ಇಂಡಿಯಾ: ದಿ ಮೋದಿ ಕ್ವೆಶ್ಶನ್”  ಎನ್ನುವ ಬಿಬಿಸಿಯವರು ತಯಾರಿಸಿದ ಸಾಕ್ಷ್ಯಚಿತ್ರ ಬಗ್ಗೆ ಚರ್ಚೆಯಾಗತ್ತಿದೆ. ಸಾಕ್ಷ್ಯಚಿತ್ರದ ಮೊದಲ ಭಾಗವು ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಬೆನ್ನಲ್ಲೇ ಈ ಸಾಕ್ಷ್ಯಚಿತ್ರವನ್ನು ಕೇಂದ್ರ ಸರ್ಕಾರ ನಿರ್ಬಂಧಿಸುವ ಕ್ರಮಕ್ಕೆ ಪ್ರಯತ್ನಿಸಿದರು” ಎಂದರು.

ಇದನ್ನೂ ಓದಿ: ಆಳವಾದ ಸಂಶೋಧನೆ ನಡೆಸಿದ್ದೇವೆ: ಮೋದಿ ಕುರಿತು ಸಾಕ್ಷ್ಯಚಿತ್ರ ಸಮರ್ಥಿಸಿಕೊಂಡ ಬಿಬಿಸಿ

“ಗುಜರಾತ್ ಗಲಭೆ ನಡೆದಾಗ ಮುಖ್ಯಮಂತ್ರಿಯಾಗಿದ್ದ ಪ್ರಧಾನಿ ಮೋದಿಯವರ ಕುರಿತು ಬಿಬಿಸಿ ಸಾಕ್ಷ್ಯಚಿತ್ರದಲ್ಲಿ ಏನೇನು ಚರ್ಚೆಗಳು ನಡೆದಿವೆ ಎನ್ನುವ ಬಗ್ಗೆ ನೀವು ನೋಡುತ್ತಿದ್ದೀರಿ. ಮೋದಿ ಸರ್ಕಾರವು ವಸಾಹತುಶಾಹಿ ಕಾಲಕ್ಕೆ ಸಂಬಂಧಿಸಿದ ಕಾನೂನಿನ ಆಧಾರದ ಮೇಲೆ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದೆ” ಎಂದು ಲೋಕಸಭಾ ಸಂಸದರು ಕಾರ್ಯಕ್ರಮವೊಂದರಲ್ಲಿ ಹೇಳುತ್ತಿರುವುದು ಕೇಳಿಬರುತ್ತಿದೆ. ”ಗಲಭೆ ನಡೆದಾಗ ನೀವು ಮುಖ್ಯಮಂತ್ರಿಯಾಗಿರಲಿಲ್ಲವೇ..? ಬಿಲ್ಕಿಸ್ ಬಾನೋ ಮೇಲೆ ಸಾಮೂಹಿಕ ಅತ್ಯಾಚಾರ… ಕಾಂಗ್ರೆಸ್ ಸಂಸದರ ಹತ್ಯೆ” ಎಂದು ಎಹ್ಸಾನ್ ಜಾಫ್ರಿಯನ್ನು ಉಲ್ಲೇಖಿಸಿ ಓವೈಸಿ ಹೇಳಿದ್ದಾರೆ.

“ಇದೀಗ ಮಹಾತ್ಮ ಗಾಂಧಿಯನ್ನು ಕೊಂದ ಗೋಡ್ಸೆಯ ಮೇಲೆ ಚಲನಚಿತ್ರವನ್ನು ನಿರ್ಮಿಸಲಾಗುತ್ತಿದೆ. ಭಾರತದ ಪ್ರಧಾನಿ ಆ ಚಲನಚಿತ್ರವನ್ನು ನಿಷೇಧಿಸುತ್ತಾರೆಯೇ? ಚಿತ್ರದಲ್ಲಿ ಗಾಂಧಿಯನ್ನು ಏಕೆ ಕೊಲ್ಲಲಾಯಿತು  ಎಂಬುದರ ಕುರಿತು ಮಾತನಾಡುತ್ತದೆ. ಮತ್ತೊಂದೆಡೆ ಬಿಬಿಸಿ ಪಿಎಂ ಮೋದಿ ಬಗ್ಗೆ ತೋರಿಸಿದಾಗ ಅದು ಸಮಸ್ಯೆಯಾಗಿ ಕಾಣುತ್ತದೆ. ಮೋದಿ ಸಾಕ್ಷ್ಯಚಿತ್ರ ನಿಷೇಧಿಸುವವರಿಗೆ ಗಾಂಧಿ ಗೋಡ್ಸೆ ಚಿತ್ರ ಕಾಣಿಸಲಿಲ್ಲವೇ?: ಅಸಾದುದ್ದೀನ್ ಓವೈಸಿ ಗಾಂಧಿಗಿಂತ ನರೇಂದ್ರ ಮೋದಿ ದೊಡ್ಡವನಲ್ಲ” ಎಂದು ಓವೈಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದರು.

“ಏಕೆ ಈ ಪಕ್ಷಪಾತ? ಬಿಜೆಪಿ ಸಂಸದರು ಗಾಂಧಿಯನ್ನು ಕೊಂದ ಗೋಡ್ಸೆಯನ್ನು ಹೊಗಳಲಿಲ್ಲವೇ? ಯಾವ ರೀತಿಯ ಭಾರತವನ್ನು ರಚಿಸಲಾಗುತ್ತಿದೆ. ಜಿ-20 ಪೋಸ್ಟರ್‌ಗಳಲ್ಲಿ  ಭಾರತವನ್ನು ಪ್ರಜಾಪ್ರಭುತ್ವ ಎಂದು ಅನುಮೋದಿಸಲಾಗುತ್ತಿದೆ ಆದರೆ ಯೂಟ್ಯೂಬ್‌ನಲ್ಲಿ ಚಿತ್ರಗಳನ್ನು ನಿಷೇಧಿಸುವ ಕ್ರಮ ಅನುಸರಿಸುತ್ತಿದೆ. ಇದೆಂತಹ ಪ್ರಜಾಪ್ರಭುತ್ವ” ಎಂದು ಅವರು ಮತ್ತಷ್ಟು ಒತ್ತಿ ಹೇಳಿದರು.

ಸಾಕ್ಷ್ಯಚಿತ್ರವನ್ನು ಕೇಂದ್ರ ಸರ್ಕಾರವು “ಪ್ರಚಾರದ ತುಣುಕು” ಎಂದು ತಳ್ಳಿಹಾಕಿದ್ದರೂ ಸಹ, ಈ ಹಿಂದೆ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ನಾಯಕರು ಸಾಕ್ಷ್ಯಚಿತ್ರದ ನಡೆಯನ್ನು ಪ್ರಶ್ನಿಸಿದ್ದರು. ಕಾನೂನು ಸಚಿವ ಕಿರಣ್ ರಿಜಿಜು ಭಾನುವಾರ ಇದನ್ನು “ದುರುದ್ದೇಶಪೂರಿತ” ಎಂದು ಟ್ಯಾಗ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....